ಬಿಜೆಪಿಯ ಕಿರಣ್ ಕೊಡ್ಗಿ ಅವರನ್ನು ಗೆಲ್ಲಿಸಿಕೊಡಿ; ಹಾಲಾಡಿ ಶ್ರೀನಿವಾಸ ಶೆಟ್ಟಿ
ಅಧಿಕಾರ ಜನಸೇವೆಗೆ ದೊರೆತ ಅಮೃತ ಘಳಿಗೆ
Team Udayavani, May 8, 2023, 1:39 PM IST
ಕುಂದಾಪುರ: ರಾಜಕಾರಣ ಕೇವಲ ಚುನಾವಣೆಗೆ ಮಾತ್ರ ಸೀಮಿತ. ಜನಪ್ರತಿನಿಧಿಗಳಾಗಿ ಆಯ್ಕೆಯಾದ ಬಳಿಕ ಕ್ಷೇತ್ರದ ಸಮಗ್ರ ಅಭಿವೃದ್ಧಿ ಅವರ ಗುರಿಯಾಗಿರಬೇಕು ಎನ್ನುವ ತತ್ವದಲ್ಲಿ ದೃಢವಾದ ನಂಬಿಕೆ ಇಟ್ಟುಕೊಂಡಿರುವ ನಾನು, ನನ್ನ ಶಾಸಕತ್ವದ ಅವಧಿಯಲ್ಲಿ ಸ್ವಜನ ಪಕ್ಷಪಾತ, ಕ್ಷುಲ್ಲಕ ರಾಜಕೀಯ ಮಾಡದೇ ರಾಜನೀತಿ, ರಾಜಧರ್ಮ ಪಾಲಿಸಿದ್ದೇನೆ ಎನ್ನುವ ತೃಪ್ತಿ ಇದೆ. ದ್ವೇಷ ರಾಜಕಾರಣ, ಕೋಮು ಭಾವನೆಯ ವಿಷ ಬೀಜ ಬಿತ್ತುವ ಮನಸ್ಥಿತಿ, ಅನಗತ್ಯ ಅಪಪ್ರಚಾರಗಳಿಂದ ಅಂತರ ಪಾಲಿಸಿಕೊಂಡು ಬಂದಿದ್ದೇನೆ. ಅಧಿಕಾರ ರಾಜತ್ವದ ಕೊಡುಗೆ ಅಲ್ಲ, ಜನಸೇವೆ ಮಾಡಲು ದೊರಕಿದ ಅಮೃತ ಘಳಿಗೆ ಎನ್ನುವ ಸಿದ್ಧಾಂತಗಳಲ್ಲಿ ನಂಬಿಕೆಯನ್ನು ಇರಿಸಿ ಅದರಂತೆ ನಡೆದು ಬಂದಿದ್ದೇನೆ. ಇದರ ಮುಂದುವರಿಕೆಗಾಗಿ ಕಿರಣ್ ಕುಮಾರ್ ಕೊಡ್ಗಿ ಅವರನ್ನು ಗೆಲ್ಲಿಸಿಕೊಡಿ ಎಂದು ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಹೇಳಿದರು.
ಅವರು ಕುಂಭಾಶಿಯಲ್ಲಿ ಕಿರಣ್ ಕುಮಾರ್ ಕೊಡ್ಗಿ ಪರ ಪ್ರಚಾರ ನಡೆಸಿ, ಕಾಂಗ್ರೆಸ್‌ನವರು ಮನೆ ಮನೆಗೆ ಗ್ಯಾರಂಟಿ ಕಾರ್ಡ್ ಎಂದು ಹಂಚುತ್ತಾ ಮನೆಯವರ ದಾಖಲೆಗಳನ್ನೂ ಸಂಗ್ರಹಿಸುತ್ತಾ ಬಂದಿದ್ದಾರೆ. ಗ್ಯಾರಂಟಿಯನ್ನು ನೀಡಲು ಸ್ಥಳೀಯವಾಗಿ ಕಾರ್ಡ್ ಹಂಚಿದವರು ಸಿದ್ಧರಿದ್ದಾರೆಯೇ, ಅವರು ಕೊಡುವ ಗ್ಯಾರಂಟಿ ಏನು, ಇದರಲ್ಲಿ ಸರಕಾರದ ಅಥವಾ ಅಧಿಕಾರಸ್ಥರ ಸಹಿ, ಸೀಲು ಇದೆಯೇ? ಜನರನ್ನು ಹೀಗೆ ಮೋಸ ಮಾಡಬಾರದು ಎಂದರು.
1,500 ಕೋ.ರೂ. ಅನುದಾನ
ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ, ಕುಂದಾಪುರ ಕ್ಷೇತ್ರದ ಅಭಿವೃದ್ಧಿಗೆ ಬಿಜೆಪಿ ಶಾಸಕ ಹಾಲಾಡಿಯವರ ಕೊಡುಗೆ ದೊಡ್ಡದು. 1,500ಕೋ.ರೂ.ಗಳಿಗೂ ಅಧಿಕ ಅನುದಾನ ತಂದಿದ್ದಾರೆ. ರಸ್ತೆ, ಒಳಚರಂಡಿ, ರಸ್ತೆ ಅಗಲೀಕರಣ, ಕಾಲು ಸೇತುವೆ ಸೇರಿದಂತೆ ಅನೇಕ ಯೋಜನೆಗಳನ್ನು ತಂದು ಕ್ಷೇತ್ರವನ್ನು ಸರ್ವಾಂಗೀಣ ಅಭಿವೃದ್ಧಿ ಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸರಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಕ್ಷೇತ್ರದ ಜನರಿಗೆ ಸಮಾನವಾಗಿ ದೊರಕುವಂತೆ ಮಾಡಿದಲ್ಲದೇ, ಶಾಸಕರ ನಿಧಿ, ಸಂಸದರ ನಿಧಿಯಿಂದಲೂ ಕ್ಷೇತ್ರಕ್ಕೆ ಅನುದಾನ ತಂದಿದ್ದಾರೆ. ಕೇಂದ್ರ ಸರಕಾರದ ಯೋಜನೆಗಳನ್ನು ಅನುಷ್ಠಾನಗೊಳಿಸಿ, ಸಾರ್ವಜನಿಕರು ಅದರ ಉಪಯೋಗ ಪಡೆಯುವಂತೆ ಮಾಡಿದ್ದಾರೆ ಎಂದರು.
ಎಲ್ಲೆಡೆ ಸ್ಪಂದನೆ
ಗ್ರಾಮಾಂತರ, ನಗರ ಪ್ರದೇಶ ಸೇರಿದಂತೆ ಎಲ್ಲೆಡೆ ಪ್ರಚಾರ ಕಾರ್ಯ ಮಾಡಲಾಗಿದೆ. ಬಿಜೆಪಿ ಪರವಾಗಿ ಜನ ಅಪಾರ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಚುನಾವಣ ಸಭೆಗಳಿಗೆ ಹಿಂದೆಂದಿಗಿಂತ ಈ ಬಾರಿ ಅತಿಹೆಚ್ಚಿನ ಸಂಖ್ಯೆಯಲ್ಲಿ ಜನ ಆಗಮಿಸಿ ಧೈರ್ಯ ತುಂಬುತ್ತಿದ್ದಾರೆ. ಇದು ಕೇಂದ್ರ ಸರಕಾರವನ್ನು ಸಮರ್ಥವಾಗಿ ಮುನ್ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಸಾರಥ್ಯದ ಲಕ್ಷಣ. ಜನ ಅದರ ಮೇಲೆ ನಂಬಿಕೆ ಇಟ್ಟಿದ್ದಾರೆ ಎಂದರು.
ಬಿಜೆಪಿ ಅಧ್ಯಕ್ಷ ಶಂಕರ ಅಂಕದಕಟ್ಟೆ, ಪ್ರಧಾನ ಕಾರ್ಯದರ್ಶಿಗಳಾದ ಸುರೇಶ್ ಶೆಟ್ಟಿ ಗೋಪಾಡಿ, ಸತೀಶ್ ಪೂಜಾರಿ ವಕ್ವಾಡಿ, ಮಾಜಿ ಅಧ್ಯಕ್ಷ ಕಾಡೂರು ಸುರೇಶ್ ಶೆಟ್ಟಿ , ಪಂಚಾಯತ್ ಅಧ್ಯಕ್ಷೆ ಶ್ವೇತಾ, ಶ್ರೀನಿಧಿ ಹೆಬ್ಟಾರ್, ಶಕ್ತಿಕೇಂದ್ರ ಅಧ್ಯಕ್ಷ ಮಂಜುನಾಥ ಕಾಮತ್, ಮಹೇಶ್ ಶೆಣೈ ಮೊದಲಾದವರು ಇದ್ದರು.
ಹಾಲಾಡಿಯವರ ಮಾರ್ಗದರ್ಶನ
ರಾಜ್ಯ ಮತ್ತು ದೇಶದಲ್ಲಿ ಕಾಂಗ್ರೆಸ್ ಪ್ರಾಬಲ್ಯವಿದ್ದ ಕಾಲದಲ್ಲಿ ಬಿಜೆಪಿಯಿಂದ ಗೆದ್ದ ಹಾಲಾಡಿ, ಅಂದಿನ ಹಿರಿಯರೊಡನೆ ಸೇರಿಕೊಂಡು ಬಿತ್ತಿದ ಬೀಜವು ಇಂದು ಹೆಮ್ಮರವಾಗಿದೆ. ಆಡಂಬರವನ್ನು ಮೆಚ್ಚದೆ, ಬಳಿ ಬಂದವರ ಸಮಸ್ಯೆಗೆ ಪರಿಹಾರ ಕೊಡಿಸುತ್ತಾ ಕೈಲಾದ ಸಹಾಯ ಮಾಡುತ್ತಾ ಬಂದಿದ್ದಾರೆ. ಬಿಜೆಪಿ ಗೆಲುವಿಗಾಗಿ ಪಣತೊಟ್ಟು ಕ್ಷೇತ್ರದಾದ್ಯಂತ ಪ್ರಚಾರಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.
ಕಿರಣ್ ಕುಮಾರ್ ಕೊಡ್ಗಿ ಅಭ್ಯರ್ಥಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ
Manipal: ಕೇಂದ್ರ ಸರಕಾರದ ಯೋಜನೆ ಫಲಾನುಭವಿಗಳಿಗೆ ಸಾಲ ನೀಡಲು ಸತಾಯಿಸಬೇಡಿ: ಸಂಸದ ಕೋಟ
Udupi; ಗೀತಾರ್ಥ ಚಿಂತನೆ 132: ತಣ್ತೀವಿರುವುದು ಉಪದೇಶಕ್ಕಲ್ಲ, ಅಭ್ಯಾಸಕ್ಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.