ಸಿಎಂ ತವರು ಜಿಲ್ಲೆಗೆ ವಿಶೇಷ ಪ್ಯಾಕೇಜ್‌ ಘೋಷಿಸಿ

ನೀರಾವರಿ ಯೋಜನೆಗೆ ಕನಿಷ್ಟ 1000 ಕೋಟಿ ರೂ. ಅನುದಾನ ಬಜೆಟ್‌ನಲ್ಲಿ ಮೀಸಲಿಡಬೇಕು.

Team Udayavani, Mar 2, 2022, 6:28 PM IST

Udayavani Kannada Newspaper

ಹಾವೇರಿ: ಜಿಲ್ಲೆಯಲ್ಲಿ ಬೃಹತ್‌ ಕೈಗಾರಿಕೆ ಸ್ಥಾಪನೆ, ಪ್ರತ್ಯೇಕ ಡಿಸಿಸಿ ಬ್ಯಾಂಕ್‌, ಸರ್ವಜ್ಞ ಪ್ರಾಧಿಕಾರಕ್ಕೆ ಅನುದಾನ ಹಾಗೂ ಸಿಎಂ ತವರು ಜಿಲ್ಲೆಗೆ ವಿಶೇಷ ಪ್ಯಾಕೇಜ್‌ ಘೋಷಿಸುವುದು ಸೇರಿದಂತೆ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜೆಡಿಎಸ್‌ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಬಳಿಕ ಮಾತನಾಡಿದ ಜೆಡಿಎಸ್‌ ಜಿಲ್ಲಾಧ್ಯಕ್ಷ ಜಯಾನಂದ ಜಾವಣ್ಣನವರ, ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ಕೈಗಾರಿಕೆ ಸ್ಥಾಪನೆ ಅತ್ಯಗತ್ಯವಾಗಿದೆ. ಉತ್ತರ ಕರ್ನಾಟಕದ ಹೃದಯ ಭಾಗವಾಗಿರುವ ಹಾವೇರಿ ಜಿಲ್ಲೆ ಶೈಕ್ಷಣಿಕ, ವಾಣಿಜ್ಯ, ಸಾಂಸ್ಕೃತಿಕವಾಗಿ ಬೆಳವಣಿಗೆ ಕಂಡಿದೆ. ಸುತ್ತಲಿನ ಜಿಲ್ಲೆಗಳ ಜನರೊಂದಿಗೆ ವ್ಯಾಪಾರ ಉದ್ಯೋಗದಿಂದ ಸಂಚಾರ ಸಂಪರ್ಕ ಹೊಂದಿದೆ. ಆದರೆ ಜನಸಂಖ್ಯೆಗೆ ಅನುಗುಣವಾಗಿ ಹಾವೇರಿ ನಗರದಲ್ಲಿ ಉದ್ಯೋಗ ಸೃಷ್ಟಿಯಾಗಬೇಕಿದೆ
ಎಂದರು.

ಇಲ್ಲಿನ ಯುವ ಸಮೂಹ ಕೆಲಸಕ್ಕಾಗಿ ಬೇರೆ ಬೇರೆ ರಾಜ್ಯ, ಜಿಲ್ಲೆಗಳಿಗೆ ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ನಿರುದ್ಯೋಗಿ ಪದವೀಧರರು ಕೆಲಸವಿಲ್ಲದೇ ಆತಂಕದಲ್ಲಿದ್ದಾರೆ. ಈ ಎಲ್ಲ ಯುವ ಸಮೂಹಕ್ಕೆ ಕೆಲಸ ದೊರೆಯಬೇಕಾಗಿದೆ. ಹಾವೇರಿಯಲ್ಲಿ ಬೃಹತ್‌ ಕೈಗಾರಿಕೆಗಳು ಹಾಗೂ ಕೃಷಿಗೆ ಪೂರಕವಾಗಿರುವ ಕೈಗಾರಿಕಾ ಘಟಕಗಳು ಹಾಗೂ ಸರ್ಕಾರದ ಉದ್ಯಮಗಳು ಸ್ಥಾಪನೆಗೊಳ್ಳಬೇಕೆಂದು ಒತ್ತಾಯಿಸಿದರು.

ಕೃಷಿ ಪ್ರಧಾನವಾದ ಹಾವೇರಿ ಜಿಲ್ಲೆಯಾಗಿ 25ನೇ ವರ್ಷದ ಹೊಸ್ತಿಲಲ್ಲಿದ್ದರೂ ಜಿಲ್ಲೆಯಲ್ಲಿ ಡಿಸಿಸಿ ಬ್ಯಾಂಕ್‌ ಸ್ಥಾಪನೆಯಾಗಿಲ್ಲ. ಧಾರವಾಡ ಡಿಸಿಸಿ ಬ್ಯಾಂಕ್‌ನಲ್ಲಿ 3 ಜಿಲ್ಲೆಗಳಿಂದ ಒಟ್ಟು 540 ಕಷಿ ಪತ್ತಿನ ಸಹಕಾರ ಸಂಘಗಳಿದ್ದು, ಜಿಲ್ಲೆಯಲ್ಲಿ 228ಸಂಘಗಳಿವೆ. ಜಿಲ್ಲೆಗೆ ಹೆಚ್ಚಿನ ರೈತರು ಈ ಬ್ಯಾಂಕಿಗೆ ಅವಲಂಬಿತರಾಗಿದ್ದಾರೆ. ರೈತರ ಬೇಡಿಕೆಗೆ ಅನುಗುಣವಾಗಿ ಸಾಲ ಸೌಲಭ್ಯ ಸಿಗುತ್ತಿಲ್ಲ. ಆದ್ದರಿಂದ ಧಾರವಾಡ ಜಿಲ್ಲೆಯಿಂದ ಡಿಸಿಸಿ ಬ್ಯಾಂಕ್‌ ಹಾವೇರಿ ಜಿಲ್ಲೆಗೆ ಪ್ರತ್ಯೇಕವಾಗಬೇಕು
ಎಂದರು.

ತ್ರಿಪದಿ ಕವಿ ಸರ್ವಜ್ಞ ಜನ್ಮಸ್ಥಳ ಹಿರೇಕೆರೂರ ತಾಲೂಕು ಅಬಲೂರ ಹಾಗೂ ಮಾಸೂರನ್ನು ಅಭಿವೃದ್ಧಿಪಡಿಸಲು ಸರ್ವಜ್ಞ ಪ್ರಾಧಿಕಾರ ರಚನೆಯಾಗಿದೆ. ಪ್ರಾ ಧಿಕಾರಕ್ಕೆ ಕನಿಷ್ಟ 100ಕೋಟಿ ಅನುದಾನವನ್ನು ಆಯವ್ಯಯದಲ್ಲಿ ಘೋಷಣೆ ಮಾಡಬೇಕೆಂದು ಒತ್ತಾಯಿಸಿದರು.

ಜಿಲ್ಲೆಯಲ್ಲಿ ತುಂಗಭದ್ರಾ, ವರದಾ, ಕುಮದ್ವತಿ, ಧರ್ಮ, ನದಿಗಳ ನೀರನ್ನು ರೈತರಿಗೆ ಹಾಗೂ ಜಿಲ್ಲೆಯ ಸಾರ್ವಜನಿಕರಿಗೆ ಕುಡಿಯುವ ನೀರನ್ನು ಸದ್ಬಳಕೆ ಮಾಡಲು ನೀರಾವರಿ ಯೋಜನೆಗೆ ಕನಿಷ್ಟ 1000 ಕೋಟಿ ರೂ. ಅನುದಾನ ಬಜೆಟ್‌ನಲ್ಲಿ ಮೀಸಲಿಡಬೇಕು. ಜಿಲ್ಲೆಯ 8 ತಾಲೂಕುಗಳ ಗ್ರಾಮೀಣ ಹಾಗೂ ನಗರ ಪ್ರದೇಶಗಳ ಸರ್ವಾಂಗೀಣ ಅಭಿವೃದ್ಧಿಗಾಗಿ 500ಕೋಟಿ ಅನುದಾನವನ್ನು ಬಜೆಟ್‌ನಲ್ಲಿ ಮೀಸಲಿಡಬೇಕೆಂದು ಮನವಿ ಮಾಡಿದರು.

ಮನವಿ ಸಲ್ಲಿಸುವ ಸಂದರ್ಭದಲ್ಲಿ ಜೆಡಿಎಸ್‌ ಮುಖಂಡರಾದ ಕೆ.ಎಸ್‌. ಸಿದ್ದಬಸಪ್ಪ ಯಾದವ, ಕತಲಸಾಬ ಬಣಕಾರ, ಶಂಶಾದಬಿ ಕುಪ್ಪೆಲೂರ, ಕೆ.ಎಂ. ಸುಂಕದ, ಎಸ್‌.ಟಿ. ಹಿರೇಮಠ, ಮೋಹನ ಬಿನ್ನಾಳ, ಎಸ್‌.ಎಸ್‌. ಹಿರೇಮಠ, ಬಸನಗೌಡ್ರ ಸಿದ್ದನಗೌಡ್ರ, ಪ್ರಕಾಶ ಬಾರ್ಕಿ, ಈರಣ್ಣ ನವಲಗುಂದ, ಲೀಲಾವತಿ ಗೌಡಗೇರಿ, ಶಂಕ್ರಮ್ಮ ತಿಮ್ಮೇನಹಳ್ಳಿ, ಕೊಟ್ರೇಶ ಅಂಗಡಿ, ಅಮೀರಜಾನ ಬೇಪಾರಿ, ಮಂಜುನಾಥ ಕನ್ನಾಯಕನವರ, ಸಂಗಪ್ಪ ಪರಶೆಟ್ಟಿ, ಮಹಾಂತೇಶ ಬೇವಿನಹಿಂಡಿ ಇತರರು ಇದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ʻಬ್ರಾಂಡ್‌ ಬೆಂಗಳೂರುʼ ಪರಿಕಲ್ಪನೆಯಡಿ ಬೆಂಗಳೂರನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಿಸುವ ಗುರಿ

ʻಬ್ರಾಂಡ್‌ ಬೆಂಗಳೂರುʼ ಪರಿಕಲ್ಪನೆಯಡಿ ಬೆಂಗಳೂರನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಿಸುವ ಗುರಿ

ಎಲ್ಲಾ ದೇವಸ್ಥಾನಗಳಿಗೆ ಸಮಾನ ಸಹಾಯ ಅನುದಾನ: ಧಾರ್ಮಿಕ ದತ್ತಿ ಕ್ಷೇತ್ರಕ್ಕೆ ಸಿಕ್ಕಿದ್ದೇನು?

ಎಲ್ಲಾ ದೇವಸ್ಥಾನಗಳಿಗೆ ಸಮಾನ ಸಹಾಯ ಅನುದಾನ: ಧಾರ್ಮಿಕ ದತ್ತಿ ಕ್ಷೇತ್ರಕ್ಕೆ ಸಿಕ್ಕಿದ್ದೇನು?

Budget: ಮಹಿಳೆಯರಿಗೆ ಶಕ್ತಿ ತುಂಬಲು: ‘ಉದ್ಯಮ ಶಕ್ತಿ’ ಯೋಜನೆಯಡಿ 100 ಪೆಟ್ರೋಲ್ ಬಂಕ್

Budget: ಮಹಿಳೆಯರಿಗೆ ಶಕ್ತಿ ತುಂಬಲು ‘ಉದ್ಯಮ ಶಕ್ತಿ’ ಯೋಜನೆಯಡಿ 100 ಪೆಟ್ರೋಲ್ ಬಂಕ್

ಮೂಲಸೌಕರ್ಯ ಅಭಿವೃದ್ಧಿ, ಬಂದರು,ಒಳನಾಡು ಜಲಸಾರಿಗೆ ಇಲಾಖೆಗೆ ಬಜೆಟ್‍ನಲ್ಲಿ ಸಿಕ್ಕಿದ್ದೇನು?

ಮೂಲಸೌಕರ್ಯ ಅಭಿವೃದ್ಧಿ, ಬಂದರು,ಒಳನಾಡು ಜಲಸಾರಿಗೆ ಇಲಾಖೆಗೆ ಬಜೆಟ್‍ನಲ್ಲಿ ಸಿಕ್ಕಿದ್ದೇನು?

Budget ಕೆರೆ ಪುನರುಜ್ಜೀವನಕ್ಕೆ ಹಲವು ಕ್ರಮ; ಜಲಸಂಪನ್ಮೂಲ & ಸಣ್ಣನೀರಾವರಿಗೆ ಸಿಕ್ಕಿದ್ದೇನು?

Budget ಕೆರೆ ಪುನರುಜ್ಜೀವನಕ್ಕೆ ಹಲವು ಕ್ರಮ; ಜಲಸಂಪನ್ಮೂಲ & ಸಣ್ಣನೀರಾವರಿಗೆ ಸಿಕ್ಕಿದ್ದೇನು?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.