ಬೊಮ್ಮಾಯಿ ಬಜೆಟ್ ನಲ್ಲಿ ಕರಾವಳಿ ಜಿಲ್ಲೆಗಳಿಗೆ ಸಿಕ್ಕಿದ್ದೇನು?: ಇಲ್ಲಿದೆ ಸಂಪೂರ್ಣ ಮಾಹಿತಿ

Team Udayavani, Mar 4, 2022, 3:59 PM IST

ಬೊಮ್ಮಾಯಿ ಬಜೆಟ್ ನಲ್ಲಿ ಕರಾವಳಿ ಜಿಲ್ಲೆಗಳಿಗೆ ಸಿಕ್ಕಿದ್ದೇನು?: ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಚೊಚ್ಚಲ ಬಜೆಟ್ ಮಂಡಿಸಿದ್ದಾರೆ. ಸುಮಾರು ಎರಡು ಗಂಟೆಗಳ ಕಾಲ ವಿಧಾನಸಭೆಯಲ್ಲಿ ಬಜೆಟ್ ಮಂಡಿಸಿದ ಸಿಎಂ ಬೊಮ್ಮಾಯಿ ಹಲವು ಕ್ಷೇತ್ರಗಳಿಗೆ ಅನುದಾನ ಘೋಷಣೆ ಮಾಡಿದ್ದಾರೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ರಾಜ್ಯ ಅಯವ್ಯಯ ಪತ್ರದಲ್ಲಿ ಏನು ಸಿಕ್ಕಿದೆ ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.

100 ಆಳ ಸಮುದ್ರ ಮೀನುಗಾರಿಕಾ ದೋಣಿಗಳಿಗೆ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯೊಂದಿಗೆ ಸಂಯೋಜಿಸಿ ಮತ್ಯ್ಸ ಸಿರಿ ಎಂಬ ಯೋಜನೆಯನ್ನು ಮೊದಲ ಬಾರಿಗೆ ರೂಪಿಸಲಾಗುವುದು.

ಪ್ರಸಕ್ತ ಸಾಲಿನಲ್ಲಿ 5000 ವಸತಿರಹಿತ ಮೀನುಗಾರರಿಗೆ ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ಆದ್ಯತೆ ಮೇರೆಗೆ ಮನೆಗಳನ್ನು ನಿರ್ಮಿಸಲಾಗುವುದು.

ರಾಜ್ಯದ 8 ಮೀನುಗಾರಿಕೆ ಬಂದರುಗಳಲ್ಲಿ ಮೀನುಗಾರಿಕಾ ದೋಣಿಗಳು ಸುಗಮವಾಗಿ ಮತ್ತು ವೇಗವಾಗಿ ಚಲಿಸಲು ಅನುಕೂಲವಾಗಿಸಲು ನ್ಯಾವಿಗೇಶನ್ ಚಾನಲ್ ಗಳಲ್ಲಿ ಹಂತ ಹಂತವಾಗಿ ಹೂಳೆತ್ತಲಾಗುವುದು.

ಇದನ್ನೂ ಓದಿ:ಕರ್ನಾಟಕ ಬಜೆಟ್ 2022: ಸಿಎಂ ಬೊಮ್ಮಾಯಿ ಚೊಚ್ಚಲ ಬಜೆಟ್- ಜಾತಿವಾರು ಅನುದಾನ ಘೋಷಣೆ

ಸದ್ಯ ಪ್ರಗತಿಯಲ್ಲಿರುವ ಸೌಕೂರು, ಎಣ್ಣೆಹೊಳೆ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಿ ಬಾಕಿಯಿರುವ ನೀರಾವರಿ ಸೌಲಭ್ಯ ಕಲ್ಪಿಸಲಾಗುವುದು.

ಕರಾವಳಿ ಪ್ರದೇಶಗಳಲ್ಲಿ ನದಿಗಳ ಪ್ರವಾಹ ಉಂಟಾದಾಗ ಮತ್ತು ಭಾರೀ ಅಲೆಗಳಿಂದ ಹಿಮ್ಮುಖವಾಗಿ ನುಗ್ಗುವ ಉಪ್ಪು ನೀರನ್ನು ತಡೆಗಟ್ಟಲು ಉದ್ದೇಶಿಸಿರುವ ಖಾರ್ ಲ್ಯಾಂಡ್ ಯೋಜನೆಯಡಿ 1500 ಕೋಟಿ ರೂ ಅಂದಾಜು ಮೊತ್ತದ ಮಾಸ್ಟರ್ ಪ್ಲಾನ್ ಗೆ ಒಪ್ಪಿಗೆ, ಪ್ರಸ್ತುತ ಯೋಜನೆಯಡಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾಮಗಾರಿ ಅನುಷ್ಠಾನ. ಪ್ರಸಕ್ತ ಸಾಲಿನಲ್ಲಿ ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಅನುಷ್ಠಾನ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಮಧ್ಯಪ್ರದೇಶ ಮಾದರಿಯಲ್ಲಿ ಮೆನ್ಸ್ಟ್ರಯಲ್ ಕಪ್ (ಮುಟ್ಟಿನ ಕಪ್) ವಿತರಿಸಲಾಗುವುದು.

ಇದನ್ನೂ ಓದಿ: Karnataka Budget 2022: ಸಿಎಂ ಬೊಮ್ಮಾಯಿ ಚೊಚ್ಚಲ ಬಜೆಟ್ ನಲ್ಲಿ ಬೆಂಗಳೂರಿಗೆ ಭರಪೂರ ಕೊಡುಗೆ

ನಾರಯಣ ಗುರು ಸ್ಮರಣಾರ್ಥ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ತಲಾ ಒಂದು ನಾರಾಯಣ ಗುರು ವಸತಿ ಶಾಲೆ ಪ್ರಾರಂಭಿಸಲಾಗುವುದು.

ಕರಾವಳಿ ಪ್ರದೇಶದಲ್ಲಿ 1,880 ಕೋಟಿ ರೂ ವೆಚ್ಚದ 24 ಯೋಜನೆಗಳನ್ನು ಕೇಂದ್ರ ಸರ್ಕಾರದ ಸಾಗರಮಾಲಾ ಯೋಜನೆಯಡಿ ಕೈಗೊಳ್ಳಲು ಉದ್ದೆಶಿಸಿದೆ. ಇದರಡಿಯಲ್ಲಿ ಕಾರವಾರ ಬಂದರಿನ ವಿಸ್ತರಣೆಯನ್ನು ಪ್ರಸ್ತಾಪಿಸಲಾಗಿದೆ. ಬೈಂದೂರು ಮತ್ತು ಮಲ್ಪೆ ಪ್ರದೇಶಗಳಲ್ಲಿ ವಿವಿದೋದ್ದೇಶ ಬಂದರುಗಳ ನಿರ್ಮಿಸಲು ಕಾರ್ಯಸಾಧ್ಯತಾ ವರದಿ ತಯಾರಿಸಲಾಗುತ್ತಿದೆ.

ಕೇಂದ್ರ ಸರ್ಕಾರದ ನೆರವಿನೊಂದಿಗೆ 350 ಕೋಟಿ ರೂ ಅಂದಾಜು ವೆಚ್ಚದಲ್ಲಿ ಮಂಗಳೂರು ಬಂದರನ್ನು ವಿಸ್ತರಿಸಲಾಗುವುದು. ಲಕ್ಷದ್ವೀಪ ಕೇಂದ್ರಾಡಳಿತ ಪ್ರದೇಶಕ್ಕೆ ಮೀಸಲಾದ ಜೆಟ್ಟಿ ಮತ್ತು ಇತರ ಮೂಲಸೌಕರ್ಯ ಸೌಲಭ್ಯ ಸ್ಥಾಪಿಸಲು ಪ್ರಸ್ತಾಪಿಸಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಕೇಣಿ ಬೆಳಕೇರಿಯಲ್ಲಿ ಗ್ರೀನ್ ಫೀಲ್ಡ್ ಬಂದರನ್ನು ಅಭಿವೃದ್ಧಿಪಡಿಸಲು ಪ್ರಸ್ತಾಪಿಸಲಾಗಿದೆ.

ಕೇಂದ್ರದ ಸಂಬಂಧಿತ ಸಂಸ್ಥೆಗಳ ಸಹಯೋಗದೊಂದಿಗೆ ಕಾರವರದಲ್ಲಿ ಜಲಸಾರಿಗೆ ಮತ್ತು ಮೀನುಗಾರಿಕೆ ತರಬೇತಿ ಸಂಸ್ಥೆಯನ್ನು ಸ್ಥಾಪಿಸಲು ಪ್ರಸ್ತಾಪ.

ಇದನ್ನೂ ಓದಿ: ಬೊಮ್ಮಾಯಿ ಬಜೆಟ್ 2022: ಅಲ್ಪಸಂಖ್ಯಾತ ಸಮುದಾಯಕ್ಕೆ ವಿವಿಧ ಯೋಜನೆ ಘೋಷಿಸಿದ ಸಿಎಂ

ಕಡಲು ಕೊರೆತ ತಡೆಯಲು ಹೊಸ ತಂತ್ರಜ್ಞಾನ ಬಳಸಲು ಕ್ರಮ.

ಪ್ರವಾಸೋದ್ಯಮ ಮತ್ತು ಸಾರಿಗೆ ಅಗತ್ಯ ಪೂರೈಸಲು ತದಡಿ-ಅಘನಾಶಿನಿ ಮಧ್ಯೆ ಕಡವು ದೋಣಿ ಮಾರ್ಗ ಈ ವರ್ಷದಿಂದ ಆರಂಭ

ಯಕ್ಷಗಾನ ಕಲೆಯ ಸಮಗ್ರ ಆಯಾಮಗಳ ಕುರಿತು ರಾಜ್ಯಮಟ್ಟದ ಯಕ್ಷಗಾನ ಸಮ್ಮೇಳನ ಆಯೋಜನೆ.

ಕರಾವಳಿ ಭಾಗದ ಜಲ️ಮೂಲ️ಗಳನ್ನು ಕಲುಷಿತಗೊಳಿಸುತ್ತಿರುವ ಪ್ಲಾಸ್ಟಿಕ್ ಮಾಲಿನ್ಯವನ್ನು ನಿರ್ವಹಿಸಲು ವಿಶ್ವಬ್ಯಾಂಕ್ ನೆರವಿನೊಂದಿಗೆ ವಿನೂತನವಾದ “ಬ್ಲೂ-ಪ್ಲಾಸ್ಟಿಕ್ ನಿರ್ವಹಣೆ ಯೋಜನೆ” ಯನ್ನು ಮುಂದಿನ 5 ವರ್ಷಗಳ ಅವಧಿಗೆ ಒಟ್ಟು 840 ಕೋಟಿ ರೂ.ಗಳ ವೆಚ್ಚದಲ್ಲಿ ದೇಶದಲ್ಲೇ ಮೊಟ್ಟ ಮೊದಲಿಗೆ ಜಾರಿಗೆ ತರಲಾಗುವುದು.

ಇದನ್ನೂ ಓದಿ: Karnataka Budget: ಜನಸಾಮಾನ್ಯರಿಗೆ ಸಿಹಿ ಸುದ್ದಿ- ಈ ಬಾರಿ ಯಾವುದೇ ತೆರಿಗೆ ಹೆಚ್ಚಳ ಇಲ್ಲ

ಮಂಗಳೂರು ವಿಶ್ವವಿದ್ಯಾಲಯದಲ್ಲಿ ಅರೆಭಾಷೆ ಸಂಶೋಧನಾ ಕೇಂದ್ರವನ್ನು ಸ್ಥಾಪಿಸಲಾಗುವುದು.

ನೆರೆ ರಾಜ್ಯದಲ್ಲಿ ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಅಭಿವೃದ್ಧಿಪಡಿಸು ಕಾಸರಗೋಡಿನಲ್ಲಿ ಕಯ್ಯಾರ ಕಿಂಞಣ್ಣ ರೈ ಹೆಸರಿನಲ್ಲಿ ಕನ್ನಡ ಭವನ ನಿರ್ಮಿಸಲಾಗುವುದು.

ಉತ್ತರ ಕನ್ನಡ ಜಿಲ್ಲೆಯ ಯಾಣದಲ್ಲಿ ಖಾಸಗಿ ಸಹಭಾಗಿತ್ವದೊಂದಿಗೆ ರೋಪ್ ವೇ ನಿರ್ಮಿಸಲು ಯೋಜನೆ.

ಟಾಪ್ ನ್ಯೂಸ್

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Video: ತನ್ನ ಮನೆಯ ಮುಂದೆಯೇ ಚಾಟಿಯಿಂದ ಹೊಡೆದುಕೊಂಡ ಕೆ.ಅಣ್ಣಾಮಲೈ…

Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…

Madhya Pradesh Education Minister’s substitute statement sparks political storm

Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Kundapura: ಬಾವಿಗೆ ಬಿದ್ದು ಯುವತಿ ಸಾವುKundapura: ಬಾವಿಗೆ ಬಿದ್ದು ಯುವತಿ ಸಾವು

Kundapura: ಬಾವಿಗೆ ಬಿದ್ದು ಯುವತಿ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

1(1

Puttur ನಗರಕ್ಕೂ ಬೇಕು ಟ್ರಾಫಿಕ್‌ ಸಿಗ್ನಲ್‌

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

3-ptr

Puttur: ಪೆನ್‌ ಪಾಯಿಂಟ್‌ ಕ್ರಿಕೆಟ್‌: ಸತತ 2ನೇ ಬಾರಿ ಬ್ಲೂ ಹಂಟರ್ಸ್‌ ಚಾಂಪಿಯನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.