ಏಕೀಕೃತ ಬ್ರ್ಯಾಂಡಿಂಗ್ ವ್ಯವಸ್ಥೆ, ಸಾಲ ಮೊತ್ತ ಹೆಚ್ಚಳ; ಕೃಷಿ ಕ್ಷೇತ್ರಕ್ಕೆ ಸಿಕ್ಕಿದ್ದೇನು?
Team Udayavani, Jul 7, 2023, 2:09 PM IST
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ 14ನೇ ರಾಜ್ಯ ಬಜೆಟ್ ಮಂಡಿಸಿದರು. ಮೂರು 27 ಸಾವಿರ ಕೋಟಿ ರೂ ಗಾತ್ರ ಬಜೆಟ್ ಮಂಡಿಸಿರುವ ಸಿದ್ದರಾಮಯ್ಯ ಅವರು ಕೃಷಿ ಕ್ಷೇತ್ರಕ್ಕೆ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರ ಮಾಹಿತಿ ಇಲ್ಲಿದೆ
1 ನಮ್ಮ ಸರ್ಕಾರ ಹಿಂದೆ ಜಾರಿಗೊಳಿಸಿದ್ದ ಕೃಷಿ ಭಾಗ್ಯ ಯೋಜನೆಯು ಅತ್ಯಂತ ಜನಪ್ರಿಯ ಹಾಗೂ ಉಪಯುಕ್ತವಾಗಿತ್ತು. ಈ ಯೋಜನೆಯನ್ನು ಮಹಾತ್ಮಾ ಗಾಂಧಿ ಉದ್ಯೋಗ ಖಾತರಿ ಯೋಜನೆಯೊಂದಿಗೆ ಸಂಯೋಜಿಸಿ 100 ಕೋಟಿ ರೂ. ವೆಚ್ಚದಲ್ಲಿ ಮರು ಜಾರಿಗೊಳಿಸಲಾಗುವುದು.
2 ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮತ್ತು ಕೃಷಿ ಮಾರುಕಟ್ಟೆಗೆ ಸಂಬಂಧಿಸಿದ ವಲಯಗಳಲ್ಲಿ ನಾವೀನ್ಯತೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೃಷಿ ಉದ್ಯಮಗಳಿಗೆ ಉತ್ತೇಜನ ನೀಡಲು ʻನವೋದ್ಯಮʼ ಎಂಬ ಹೊಸ ಯೋಜನೆಯಡಿ 10 ಕೋಟಿ ರೂ. ಒದಗಿಸಲಾಗುವುದು.
3 ರೈತರು ಬೆಳೆದ ಉತ್ಪನ್ನಗಳನ್ನು ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಅನುಕೂಲವಾಗುವಂತೆ ʻನಂದಿನಿʼ ಮಾದರಿಯಲ್ಲಿ ರೈತ ಉತ್ಪನ್ನಗಳಿಗೆ ಏಕೀಕೃತ ಬ್ರಾಂಡಿಂಗ್ ವ್ಯವಸ್ಥೆ ರೂಪಿಸಲು 10 ಕೋಟಿ ರೂ. ಒದಗಿಸಲಾಗುವುದು.
ಇದನ್ನೂ ಓದಿ:Budget: ಆಶಾಕಿರಣ ಯೋಜನೆ, ಸಿ.ಟಿ ಸ್ಕ್ಯಾನ್ ಸೆಂಟರ್; ಆರೋಗ್ಯ ಕ್ಷೇತ್ರಕ್ಕೆ ಸಿಕ್ಕಿದ್ದೇನು?
4 ರೈತ ಉತ್ಪಾದಕ ಸಂಸ್ಥೆಗಳನ್ನು ಬಲಪಡಿಸಲು ಹಿಂದುಳಿದ ತಾಲ್ಲೂಕುಗಳ 100 ರೈತ ಉತ್ಪಾದಕ ಸಂಸ್ಥೆಗಳಿಗೆ ಸಹಕಾರಿ ಮತ್ತು ವಾಣಿಜ್ಯ ಬ್ಯಾಂಕುಗಳು ನೀಡುವ ತಲಾ 20 ಲಕ್ಷ ರೂ. ವರೆಗಿನ ಸಾಲಕ್ಕೆ ಶೇ.4 ರ ಬಡ್ಡಿ ಸಹಾಯಧನ ನೀಡಲಾಗುವುದು.
5 ರೈತ ಉತ್ಪಾದಕ ಸಂಸ್ಥೆಗಳ ಉತ್ಪನ್ನಗಳನ್ನು ರಫ್ತು ಮಾಡಲು ಅನುಕೂಲವಾಗುವಂತೆ ಗೋದಾಮು, ಶೀತಲಗೃಹ ನಿರ್ಮಾಣ ಮತ್ತು ಇತರ ಮೂಲಸೌಕರ್ಯ ಸೃಜನೆಗೆ ಯೋಜನಾ ವೆಚ್ಚದ ಗರಿಷ್ಠ ಶೇ. 20ರಷ್ಟು, ಒಂದು ಕೋಟಿ ರೂ. ಮೀರದಂತೆ Seed Capital ಒದಗಿಸಲಾಗುವುದು.
6 ರಾಜ್ಯದಲ್ಲಿ ಬೆಳೆದ ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ರಫ್ತನ್ನು ಉತ್ತೇಜಿಸಲು ಕೆಪೆಕ್ ಸಂಸ್ಥೆಯ ಮೂಲಕ ರೈತ ಉತ್ಪಾದಕ ಸಂಸ್ಥೆಗಳು, ನವೋದ್ಯಮಿಗಳು (Startups) ಮತ್ತು ಕಿರು ಆಹಾರ ಸಂಸ್ಕರಣಾ ಉದ್ದಿಮೆದಾರರಿಗೆ ಬೆಂಬಲ ನೀಡಲು ಐದು ಕೋಟಿ ರೂ. ಒದಗಿಸಲಾಗುವುದು.
7 ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಕೃಷಿ ಯಂತ್ರೋಪಕರಣಗಳನ್ನು ಬಾಡಿಗೆ ಆಧಾರದಲ್ಲಿ ಒದಗಿಸುವ ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಸ್ಥಾಪಿಸಲಾಗಿತ್ತು. ಈ ಕೇಂದ್ರಗಳನ್ನು ಇನ್ನಷ್ಟು ಬಲಪಡಿಸಿ, ಇವುಗಳಲ್ಲಿ 300 ಹೈಟೆಕ್ ಹಾರ್ವೆಸ್ಟರ್ ಹಬ್‌ಗಳನ್ನು ಹಂತಹಂತವಾಗಿ ಸ್ಥಾಪಿಸಲು ಉದ್ದೇಶಿಸಲಾಗಿದ್ದು, 2023-24ನೇ ಸಾಲಿನಲ್ಲಿ 100 ಹಬ್‌ಗಳನ್ನು ಸ್ಥಾಪಿಸಲು 50 ಕೋಟಿ ರೂ. ಒದಗಿಸಲಾಗುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದರ್ಶನ್
New Bill: ಇನ್ನು ಪಂಚಾಯತ್‌ರಾಜ್ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿ ಕುಲಾಧಿಪತಿ
BYV vs Yatnal: ರಾಜ್ಯ ಬಿಜೆಪಿಯಲ್ಲಿ ಬಣ ಕದನ ಮತ್ತಷ್ಟು ಉಲ್ಬಣ
Grant: ರಸ್ತೆ ಅಭಿವೃದ್ಧಿಗೆ ಪಕ್ಷಾತೀತವಾಗಿ ಶಾಸಕರಿಗೆ 2 ಸಾವಿರ ಕೋ.ರೂ.: ಮುಖ್ಯಮಂತ್ರಿ
Kannada ಸಾಹಿತ್ಯ ಸಮ್ಮೇಳನ 2 – 3 ವರ್ಷಕ್ಕೊಮ್ಮೆ ನಡೆಯಲಿ
MUST WATCH
ಹೊಸ ಸೇರ್ಪಡೆ
Coastalwood: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ
Kundapura: ರಾಷ್ಟ್ರೀಯ ಹೆದ್ದಾರಿ; ಮುಗಿಯದ ಕಿರಿಕಿರಿ
Mangaluru; ಕೆಲರೈ- ವಾಮಂಜೂರು ಸಂಪರ್ಕ ರಸ್ತೆ ಅವ್ಯವಸ್ಥೆ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.