ಎಂಜಿನಿಯರ್ ಗಳಲ್ಲೂ ಗ್ರಾಮೀಣ ಸೇವೆಯ ಆಸಕ್ತಿ ಹುಟ್ಟಲಿ
Team Udayavani, Aug 15, 2018, 2:32 PM IST
ಸಿವಿಲ್ ಎಂಜಿನಿಯರಿಂಗ್ ಕಲಿತವರಿಗೆ ಉದ್ಯೋಗವಕಾಶಗಳು ಈಗ ಹೇಗಿವೆ?
ಸಿವಿಲ್ ಎಂಜಿನಿಯರಿಂಗ್ ಕ್ಷೇತ್ರದಲ್ಲಿ ಅವಕಾಶಗಳು ಕಡಿಮೆ ಎಂಬುವುದಾಗಿ ಈ ಹಿಂದೆ ಭ್ರಮೆ ಹುಟ್ಟಿಸಲಾಗಿತ್ತು. ಸದ್ಯ ಕಾಲ ಬದಲಾಗಿದ್ದು, ಹೆಚ್ಚಿನ ಅವಕಾಶಗಳಿವೆ. ದೇಶದಲ್ಲಿ ಅನೇಕ ರಸ್ತೆ, ಕಟ್ಟಡ ನಿರ್ಮಾಣಗಳು ನಡೆಯುತ್ತಿದೆ. ಸರ್ವೆ, ಡ್ರಾಯಿಂಗ್, ಕ್ಯಾಡ್, ಪಬ್ಲಿಕ್ ಹೆಲ್ತ್ ಎಂಜಿನಿಯರಿಂಗ್ ಸಹಿತ ಇನ್ನಿತರ ಕ್ಷೇತ್ರಗಳಲ್ಲಿ ಹಲವಾರು ಅವಕಾಶಗಳು ತೆರೆದುಕೊಳ್ಳುತ್ತಿವೆ.
.ಮಕ್ಕಳು ಡಾಕ್ಟರ್, ಎಂಜಿನಿಯರೇ ಆಗಿರಬೇಕು ಎಂದು ಬಯಸುವ ಹೆತ್ತವರಿಗೆ ನಿಮ್ಮ ಕಿವಿ ಮಾತು ಏನು?
ತಮ್ಮ ಮಕ್ಕಳು ಎಂಜಿನಿಯರ್ ಅಥವಾ ಡಾಕ್ಟರ್ ಆಗಬೇಕೆಂಬ ಕ್ರೇಜ್ ಹೆತ್ತವರಲ್ಲಿ ಇತ್ತೀಚೆಗೆ ಪ್ರಾರಂಭವಾಗಿದೆ. ಕಳೆದ ಕೆಲವು ವರ್ಷಗಳ ಹಿಂದೆ ಡಾಕ್ಟರ್, ಎಂಜಿನಿಯರ್ ಕಲಿತ ವಿದ್ಯಾರ್ಥಿಗಳಿಗೆ ಉದ್ಯೋಗದಲ್ಲಿ ಹೆಚ್ಚಿನ ಅವಕಾಶವಿತ್ತು. ಆದರೆ ಈಗ ಕಾಲ ಬದಲಾಗಿದ್ದು, ಈ ಕ್ಷೇತ್ರ ಬಿಟ್ಟು ಉಳಿದ ಕ್ಷೇತ್ರಗಳಲ್ಲೂ ಸಾಕಷ್ಟು ಉದ್ಯೋಗವಕಾಶಗಳಿವೆ. ಅಷ್ಟೇ ಅಲ್ಲದೆ, ಇತ್ತೀಚಿನ ದಿನಗಳಲ್ಲಿ ಶಿಕ್ಷಣದ ಗುಣಮಟ್ಟ ಕುಸಿದಿದ್ದು, ವಿದ್ಯಾರ್ಥಿಗಳಿಗೆ ಪ್ರಾಥಮಿಕ ಜ್ಞಾನ ಕಡಿಮೆಯಾಗುತ್ತಿದೆ.
.ಎಂಜಿನಿಯರಿಂಗ್, ವೈದ್ಯಕೀಯ ಶಿಕ್ಷಣ ಪಡೆದವರು ಗ್ರಾಮೀಣ ಭಾಗದಲ್ಲಿ ಕರ್ತವ್ಯ ನಿರ್ವಹಿಸುವುದಿಲ್ಲ. ನಗರಕ್ಕೆ ಹೋಗಿ ಸೇರುತ್ತಾರೆ ಎಂಬ ಆರೋಪವಿದೆ ಇದನ್ನು ಹೇಗೆ ಸರಿಪಡಿಸಬಹುದು?
ಈ ಬಗ್ಗೆ ಸರಕಾರವೇ ಕಾನೂನು ತರಬೇಕಿದೆ. ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿ ತಾನು ಗ್ರಾಮೀಣ ಪ್ರದೇಶದಲ್ಲಿ ಸೇವೆ ಸಲ್ಲಿಸಬೇಕು ಎಂಬ ಆಸಕ್ತಿ ಹುಟ್ಟಿಸಬೇಕು. ಆದರೆ ಸದ್ಯ ಶಿಕ್ಷಣ ಕಲಿಯಲು ಖರ್ಚಾದ ಎರಡರಷ್ಟು ಹಣ ಸಂಪಾದನೆ ಮಾಡಬೇಕೆಂಬ ಆಸೆ ಹೆಚ್ಚಾಗಿದೆ.
.ಸಿವಿಲ್ ಎಂಜಿನಿಯರ್‌ಗಳೆಂದರೆ ನಮಗೆ ಬದುಕಲು ಬೇಕಾದುದ್ದನ್ನು ತಯಾರಿಸುವುದು, ಅದನ್ನು ಉತ್ತಮಗೊಳಿಸುವುದು ಮತ್ತು ಪರಿಸರವನ್ನು ರಕ್ಷಿಸುವವರು ಎನ್ನಲಾಗುತ್ತದೆ. ಆದರೆ ಇದು ನಿಜವಾಗಿಯೂ ಪಾಲನೆಯಾಗುತ್ತಿದೆಯೇ?
ಇಲ್ಲ. ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿ ಯಾವುದೇ ಕಟ್ಟಡ ಕಟ್ಟಿದರೂ ಅದು ಪರಿಸರ ಸ್ನೇಹಿಯಾಗಬೇಕು. ಆದರೆ ಇತ್ತೀಚಿನ ದಿನಗಳಲ್ಲಿ ಕಟ್ಟಡದ ಬಾಳಿಕೆ, ಗುಣಮಟ್ಟ ಕಡಿಮೆಯಾಗುತ್ತಿದೆ. ಈ ಬಗ್ಗೆ ವಿದ್ಯಾರ್ಥಿಗಳು ಗಮನಹರಿಸಬೇಕಾಗಿದೆ.
. ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಮುಂದಿರುವ ಸವಾಲುಗಳು ಏನು?
ಸಿವಿಲ್ ಎಂಜಿನಿಯರಿಂಗ್ ಉಳಿದ ಎಂಜಿನಿಯರಿಂಗ್ ಶಿಕ್ಷಣಕ್ಕೆ ಬೇಸಿಕ್ ಆಗಿದೆ. ಸಿವಿಲ್ ಎಂಜಿನಿಯರಿಂಗ್ ಕ್ಷೇತ್ರದಲ್ಲಿ ದಿನದಿಂದ ದಿನಕ್ಕೆ ಹೊಸ ಹೊಸ ತಂತ್ರಜ್ಞಾನಗಳು ಮಾರುಕಟ್ಟೆಗೆ ಬರುತ್ತಿದೆ. ವಿದ್ಯಾರ್ಥಿಗಳಿಗೆ ಇದರ ಬಗ್ಗೆ ಜ್ಞಾನ ಅಗತ್ಯ. ಅಲ್ಲದೆ, ಉದ್ಯೋಗಾವಕಾಶ ಪಡೆದುಕೊಳ್ಳಲು ತಯಾರಿ ಮಾಡುಕೊಳ್ಳುವುದು ಕೂಡ ಸವಾಲಾಗಿದೆ.
ನವೀನ್ ಭಟ್ ಇಳಂತಿಲ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.