ಪಿಡಬ್ಲ್ಯೂಡಿಯಲ್ಲಿ ಉದ್ಯೋಗ ಅವಕಾಶ ಅಪಾರ
Team Udayavani, Mar 20, 2019, 7:51 AM IST
ಸರಕಾರಿ ಇಲಾಖೆಯಲ್ಲಿ ಉದ್ಯೋಗ ಪಡೆದುಕೊಳ್ಳಬೇಕು ಎಂಬುದು ಪ್ರತಿಯೊಬ್ಬರ ಕನಸಾಗಿರುತ್ತದೆ. ಅದಕ್ಕಾಗಿ ವಿವಿಧ ಇಲಾಖೆಯು ಅರ್ಜಿ ಆಹ್ವಾನಿಸಿದಾಗ ಬಹುತೇಕ ಮಂದಿ ಅರ್ಜಿ ಸಲ್ಲಿಸಿ ಪರೀಕ್ಷೆ ಎದುರಿಸುತ್ತಾರೆ. ಆದರೆ ಬಹುತೇಕ ಮಂದಿ ಉತ್ತೀರ್ಣರಾಗುವುದಿಲ್ಲ. ಪರೀಕ್ಷೆಗೆ ಯಾವ ರೀತಿ ಸಿದ್ಧತೆ ಮಾಡಿಕೊಳ್ಳಬೇಕು ಎಂಬುದನ್ನು ಮೊದಲೇ ತಿಳಿದುಕೊಂಡಿದ್ದರೆ ಪರೀಕ್ಷೆ ಎದುರಿಸುವುದು ಸುಲಭವಾಗುತ್ತದೆ.
ಲೋಕೋಪಯೋಗಿ ಇಲಾಖೆಯಲ್ಲಿ ವಿವಿಧ ಹುದ್ದೆಗಳಿವೆ. ಇದರಲ್ಲಿ ಎಂಜಿನಿಯರ್‌ಗಳು ಮುಖ್ಯವಾಗಿರುತ್ತಾರೆ. ಇಲಾಖೆಯ ವಿವಿಧ ವಿಭಾಗಗಳಲ್ಲಿ ಕರ್ತವ್ಯ ನಿರ್ವಹಿಸಲು ಎಂಜಿನಿಯರ್ ಗಳು ಅವಶ್ಯಕತೆ ಇರುವುದರಿಂದ ಎಂಜಿನಿಯರಿಂಗ್ ಆದ ವಿದ್ಯಾರ್ಥಿಗಳಿಗೆ ಹೆಚ್ಚು ಆದ್ಯತೆ ಇರುತ್ತದೆ. ಆ ಬಳಿಕ ಲೆಕ್ಕ ವಿಭಾಗ, ಆಡಳಿತ ವಿಭಾಗ, ಯೋಜನಾ ವಿಭಾಗ ಸಹಿತ ಹಲವು ವಿಭಾಗಗಳಿವೆ. ಆ ಹಿನ್ನೆಲೆಯಲ್ಲಿ ಲೋಕೋಪಯೋಗಿ ಇಲಾಖೆಯಲ್ಲಿ ಉದ್ಯೋಗವಾಕಾಶ ಹೆಚ್ಚಿದೆ. ಆದರೆ ಅದನ್ನು ಸೂಕ್ಷ್ಮವಾಗಿ ಗಮನಿಸುವ ಗೋಜಿಗೆ ಯುವಜನತೆ ಹೋಗುವುದಿಲ್ಲ,
ಲಿಖಿತ ಪರೀಕ್ಷೆ, ಸಂದರ್ಶನ
ಲೋಕೋಪಯೋಗಿ ಇಲಾಖೆಯ ವಿವಿಧ ವಿಭಾಗದ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಸಾಮಾನ್ಯವಾಗಿ ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ಪರೀಕ್ಷೆ ನಡೆಯುತ್ತದೆ. ಆದರೆ ಕಳೆದ ಕೆಲವು ವರ್ಷಗಳಿಂದ ವಿಶೇಷ ನಿಯಮ ರೂಪಿಸಿ ಇಲಾಖೆಯೇ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದೆ. ಇದರಂತೆ ಇಲಾಖೆಯ ವೆಬ್‌ಸೈಟ್‌ನಲ್ಲಿ ಯಾವ ಹುದ್ದೆ, ಎಷ್ಟು ಖಾಲಿ ಇದೆ ಎಂಬುದಾಗಿ ಅಧಿಸೂಚನೆ ಹೊರಡಿಸುತ್ತದೆ. ಬಳಿಕ ನಿಗದಿತ ಸಮಯದಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ ಕಳುಹಿಸಲು ಸೂಚಿಸಿರುತ್ತದೆ.
ಲಿಖಿತ ಪರೀಕ್ಷೆ ಇರುತ್ತದೆ. ಇದರಲ್ಲಿ ನಿಗದಿತ ಅಂಕಗಳ ಎರಡು ಪತ್ರಿಕೆಗಳ ಪರೀಕ್ಷೆ ಇರುತ್ತದೆ. ಪರೀಕ್ಷೆಯಲ್ಲಿ ಸಾಮಾನ್ಯ ಜ್ಞಾನ ಹಾಗೂ ನಿಗದಿತ ಹುದ್ದೆಗಳಿಗೆ ಸಂಬಂಧಿಸಿದ ಪ್ರಶ್ನೆಗಳು ಇರುತ್ತವೆ. ಬಳಿಕ ನೇರ ಸಂದರ್ಶನ ಎದುರಿಸಬೇಕಾಗುತ್ತದೆ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದಲ್ಲಿ ಪಡೆದ ಅಂಕಗಳನ್ನು ಸೇರಿಸಿ ಅಂಕ ನಿರ್ಧರಿತವಾಗುತ್ತದೆ. ಇವೆಲ್ಲವನ್ನೂ ಎದುರಿಸಿ ಅರ್ಹನೆಂದು ಪರಿಗಣಿಸಲ್ಪಟ್ಟ ವ್ಯಕ್ತಿಯನ್ನು ಆಯ್ಕೆ ಮಾಡಲಾಗುತ್ತದೆ.
ಕರ್ನಾಟಕ ಪಿಡಬ್ಲ್ಯೂಡಿ ಇಲಾಖೆಯು 2019ನೇ ಸಾಲಿನ ಅಸಿಸ್ಟೆಂಟ್ ಎಂಜಿನಿಯರ್ ಮತ್ತು ಜೂನಿಯರ್ ಎಂಜಿನಿಯರ್ ವಿಭಾಗಕ್ಕೆ ಒಟ್ಟು 870 ಹುದ್ದೆಗಳಿಗೆ ಈಗಾಗಲೇ ಅರ್ಜಿ ಆಹ್ವಾನಿಸಿದೆ. ಎಪ್ರಿಲ್ 10 ಅರ್ಜಿ ಸಲ್ಲಿಸಲು ಕೊನೆಯ ದಿನ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಪಿಡಬ್ಲ್ಯೂಡಿ ಇಲಾಖೆಯ ವೆಬ್ ಸೈಟ್ ಅನ್ನು ನೋಡಬಹುದು.
ವಿವಿಧ ವಿಭಾಗಗಳಲ್ಲಿ ಉದ್ಯೋಗ
ಲೋಕೋಪಯೋಗಿ ಇಲಾಖೆಯಲ್ಲಿ ಎಂಜಿನಿಯರಿಂಗ್ ಹೊರತುಪಡಿಸಿ ವಿವಿಧ ವಿಭಾಗಗಳಿವೆ. ಹಾಗಾಗಿ ಎಂಜಿನಿಯರ್‌ಗಳಿಗೆ ಮಾತ್ರ ಉದ್ಯೋಗ ಎನ್ನುವ ಯೋಚನೆ ಬೇಡ. ಆದರೆ ವಿವಿಧ ಇಲಾಖೆಗಳಿಗೆ ಅರ್ಜಿ ಆಹ್ವಾನಿಸುವ ಸಮಯಕ್ಕಾಗಿ ಕಾಯಬೇಕು. ಸರಕಾರಿ ಇಲಾಖೆ ವೆಬ್‌ಸೈಟ್ ಗಳನ್ನು ಯಾವಾಗಲೂ ಪರೀಕ್ಷಿಸುತ್ತಿರಬೇಕು.
– ವಿನೋದ್, ಅಧಿಕಾರಿ,
ಪಿಡಬ್ಲ್ಯೂಡಿ ಇಲಾಖೆ
ಪ್ರಜ್ಞಾ ಶೆಟ್ಟಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್ ಕ್ಲಾಸ್ ಫ್ಯಾಮಿಲಿ: ರಿಲೀಸ್ ದಿನಾಂಕ ಬಂತು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.