ಬರವಣಿಗೆಯಲ್ಲಿ ಗೆದ್ದರೆ ಬಾಳು ಬೆಳಗುತ್ತೆ!

Team Udayavani, Mar 30, 2017, 11:43 PM IST

HandWritting-30-3.jpg

ಬರವಣಿಗೆ ಒಂದು ಕಲೆ. ಕಾದಂಬರಿ, ಕತೆ, ಲೇಖನ, ದಿನಚರಿ ಹಾಗೂ ಇತ್ತೀಚಿನ ದಿನಗಳಲ್ಲಿ ಎಲೆಕ್ಟ್ರಾನಿಕ್‌ ಕ್ಷೇತ್ರದಲ್ಲಿನ ಬೆಳವಣಿಗೆಯಿಂದ ಹೆಚ್ಚು ಜನಪ್ರಿಯವಾಗಿರುವ ಬ್ಲಾಗಿಂಗ್‌, ವೆಬ್‌ ಲೇಖನ ಇತ್ಯಾದಿಗಳ ಶೈಲಿ ಬೇರೆಬೇರೆಯಾಗಿರುತ್ತದೆ.

ಒಬ್ಬ ವ್ಯಕ್ತಿಯ ವ್ಯಕ್ತಿತ್ವ ಬೆಳವಣಿಗೆಯಲ್ಲಿ ಬರವಣಿಗೆಯು ಬಹಳ ಮುಖ್ಯ ಪಾತ್ರವನ್ನು ವಹಿಸುತ್ತದೆ. ಓದುವುದರ ಜತೆ ಜತೆಗೆ ಜ್ಞಾನಾಭಿವೃದ್ಧಿಗೆ ಬರವಣಿಗೆ ಬಹಳ ಮಹತ್ವವನ್ನು ಪಡೆಯುತ್ತದೆ. ಕೇವಲ ಓದುವುದರಿಂದ ಜ್ಞಾನ ಹೆಚ್ಚಾಗುವುದಿಲ್ಲ. ಬದಲಿಗೆ, ಓದಿದ್ದನ್ನು ನಮ್ಮ ಸ್ವಂತ ಪದಗಳಲ್ಲಿ ಅಭಿವ್ಯಕ್ತಗೊಳಿಸುವುದರಿಂದ ಮಾತ್ರ ಆಳವಾಗಿ ಮನನ ಮಾಡಿಕೊಳ್ಳಲು ಸಾಧ್ಯವಾಗುತ್ತದೆ.

ಶಾಲಾ ಮತ್ತು ಕಾಲೇಜು ದಿನಗಳಲ್ಲಿ ನಾವು ಹಲವಾರು ಪರೀಕ್ಷೆಗಳನ್ನು ಎದುರಿಸಿರುತ್ತೇವೆ. ಈ ಪರೀಕ್ಷೆಗಳಲ್ಲಿ ಒಂದರೆಡು ವಾಕ್ಯಗಳಿಂದ ಹಿಡಿದು ಪ್ರಬಂಧ ಮಾದರಿಯ ವಿಸ್ತೃತ ಉತ್ತರಗಳನ್ನು ಬರೆಯಲು ಕೇಳುವುದು ಸಾಮಾನ್ಯ. ಇದಕ್ಕಾಗಿ ಸಾಕಷ್ಟು ಅಭ್ಯಾಸ ಮಾಡಿಕೊಳ್ಳುವುದು ಅನಿವಾರ್ಯ. ಆದರೆ ಶಾಲಾ- ಕಾಲೇಜುಗಳಲ್ಲಿ ಬರೆಯುವ ಉತ್ತರಗಳಿಗೂ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಬರೆಯುವ ಉತ್ತರಗಳಿಗೂ ಸಾಕಷ್ಟು ವ್ಯತ್ಯಾಸವಿರುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ವಿಷಯ ಒಂದೇ ಆಗಿದ್ದರೂ ಬರವಣಿಗೆಯ ಶೈಲಿ ಭಿನ್ನವಾಗಿರುತ್ತದೆ. 

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಬರವಣಿಗೆ ಕೌಶಲ
ನಾಗರಿಕ ಸೇವಾ ಪರೀಕ್ಷೆ, ಗಜೆಟೆಡ್‌ ಪ್ರೊಬೆಷನರಿ ಪರೀಕ್ಷೆ, ಫಾರೆಸ್ಟ್ ಸರ್ವಿಸ್‌ ಇತ್ಯಾದಿ ಪರೀಕ್ಷೆಗಳ ಮುಖ್ಯ ಪತ್ರಿಕೆಗಳಲ್ಲಿ ವಿಸ್ತೃತ ರೂಪದ ಪ್ರಶ್ನೆಗಳನ್ನು ಕೇಳಲಾಗಿರುತ್ತದೆ. ಈ ಪ್ರಶ್ನೆಗಳಿಗೆ ಉತ್ತರಗಳನ್ನು 50 ಪದಗಳಿಂದ ಹಿಡಿದು 250 ಪದಗಳಿಗೆ ಮೀರದಂತೆ ಬರೆಯಬೇಕಾಗುತ್ತದೆ. ಪ್ರಬಂಧ ಪತ್ರಿಕೆಯನ್ನು ಸುಮಾರು 2500- 3000 ಪದಗಳಿಗೆ ಮೀರದಂತೆ ಬರೆಯಲು ಕೇಳುವುದು ಸಹಜ. ಬರವಣಿಗೆ ಕೌಶಲ, ಸ್ಪರ್ಧಾತ್ಮಕ ಪರೀಕ್ಷೆಗಳ ಸಫ‌ಲತೆಯಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. 

ಎಷ್ಟೋ ಬಾರಿ ಪರೀಕ್ಷೆ ಬರೆದ ಅಭ್ಯರ್ಥಿಗಳು, ನಾನು ಎಲ್ಲ ಪ್ರಶ್ನೆಗಳಿಗೆ ಉತ್ತರಿಸಿದ್ದೆ. ಆದರೆ ಅಂಕಗಳೇ ಸಿಕ್ಕಿಲ್ಲ ಎಂದು ಕೊರಗುವುದನ್ನು ನಾವು ಕಂಡಿರುತ್ತೇವೆ. ಪರೀಕ್ಷಾ ವ್ಯವಸ್ಥೆಯನ್ನು ದೂಷಿಸುವುದಕ್ಕೂ ಮುಂಚಿತವಾಗಿ ಒಮ್ಮೆ ಆತ್ಮಾವಲೋಕನ ಮಾಡಿಕೊಳ್ಳಬೇಕು. ನಿಜವಾಗಿಯೂ ತಾನು ಪ್ರಶ್ನೆಯ ನಿರೀಕ್ಷೆಯಂತೆ ಉತ್ತರಗಳನ್ನು ಬರೆದಿದ್ದೇನೆಯೇ, ಇಲ್ಲವೆ? ಎಂಬುದನ್ನು ಕಂಡುಕೊಂಡು, ಮುಂದಿನ ಪರೀಕ್ಷೆಯಲ್ಲಿ ತಪ್ಪುಗಳು ಮರುಕಳಿಸದಂತೆ, ಯೋಚನೆ ಮಾಡಿ ಉತ್ತರಗಳನ್ನು ಬರೆಯಬೇಕು.

ಕೀ- ಪದಗಳ ಮೇಲೆ ಗಮನರಲಿ
ಪ್ರತಿಯೊಂದು ಸ್ಪರ್ಧಾತ್ಮಕ ಪರೀಕ್ಷೆಯು ನಿರ್ದಿಷ್ಟವಾದ ಕೀ- ಪದವನ್ನು ಹೊಂದಿರುತ್ತದೆ. ಅಭ್ಯರ್ಥಿಗಳು ಈ ಕೀ- ಪದಗಳನ್ನು ಗಮನಿಸಿ ಅನಂತರ ಉತ್ತರಗಳನ್ನು ಬರೆಯಬೇಕು. ಉತ್ತಮ ಬರವಣಿಗೆ ಶೈಲಿಗಾಗಿ ಮುಖ್ಯವಾಗಿ ಎರಡು ಅಂಶಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು. ಪ್ರಶ್ನೆಯನ್ನು ಸರಿಯಾಗಿ ಓದಿಕೊಂಡು ಅರ್ಥ ಮಾಡಿಕೊಳ್ಳುವುದು ಹಾಗೂ ಕೇಳಿರುವ ಪದಗಳ ಮಿತಿಯನ್ನು ಮೀರದಂತೆ, ಕೀ- ಪದಗಳನ್ನು ಆಧಾರವಾಗಿಟ್ಟುಕೊಂಡು ಉತ್ತರಗಳನ್ನು ಬರೆಯುವುದು. ಸತತ ಅಭ್ಯಾಸದಿಂದ ಮಾತ್ರ ಬರವಣಿಗೆಯನ್ನು ಉತ್ತಮಪಡಿಸಿಕೊಳ್ಳಲು ಸಾಧ್ಯ. ಸ್ಪರ್ಧೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇದೆ. ಸತತ ಪ್ರರಿಶ್ರಮ ಹಾಗೂ ಪ್ರಯತ್ನದಿಂದ ಮಾತ್ರ ಯಶಸ್ಸನ್ನು ಕಾಣಲು ಸಾಧ್ಯ. 

– ಪ್ರಶಾಂತ್‌. ಎಸ್‌.

ಟಾಪ್ ನ್ಯೂಸ್

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Education:ಶಿಕ್ಷಣ ಮಾರ್ಗದರ್ಶಿ-ಪಬ್ಲಿಕ್‌ ಪರೀಕ್ಷೆಯ ಸಿದ್ಧತೆಇಂದಿನಿಂದಲೇ ಆರಂಭಗೊಳ್ಳಲಿ…

Education:ಶಿಕ್ಷಣ ಮಾರ್ಗದರ್ಶಿ-ಪಬ್ಲಿಕ್‌ ಪರೀಕ್ಷೆಯ ಸಿದ್ಧತೆಇಂದಿನಿಂದಲೇ ಆರಂಭಗೊಳ್ಳಲಿ…

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

ದಕ್ಷ ಬೋಧಕ ವರ್ಗ ಕೋರ್ಸ್‌ಗಳು ವಿಶಿಷ್ಟ  , ಸರಳ

vydyakeeya

ವೈದ್ಯಕೀಯ ವ್ಯಾಸಂಗಕ್ಕೆ ಫ್ಲೆಕ್ಸಿಬಲ್‌ ಟಚ್‌

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

ಸಾರ್ವಜನಿಕ ಆಡಳಿತ ಆಸಕ್ತಿಯಿದ್ದರೆ ಅವಕಾಶಗಳು ಹಲವು

stand-up-comedy

ಆಧುನಿಕರ ಆಕರ್ಷಣೆ ಸ್ಟ್ಯಾಂಡಪ್‌ ಕಾಮಿಡಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

1

Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.