ಕೋಸ್ಟಲ್‌ವುಡ್‌ನ‌ಲ್ಲೂ ಗಬ್ಬರ್‌ ಸಿಂಗ್‌

Team Udayavani, Dec 12, 2019, 4:24 AM IST

sx-27

ಹಿಂದಿ ಚಿತ್ರರಂಗದಲ್ಲಿ ದಾಖಲೆ ಬರೆದ “ಶೋಲೆ’ ಸಿನೆಮಾದ “ಗಬ್ಬರ್‌ ಸಿಂಗ್‌’ ಪಾತ್ರ ಎಲ್ಲರಿಗೂ ನೆನಪಿದೆ. ಆ ಹೆಸರು ಮುಂದಿನ ದಿನದಲ್ಲಿ ಬಹಳಷ್ಟು ಜನಪ್ರಿಯ ಕೂಡ ಆಗಿತ್ತು. ಜತೆಗೆ, ತೆಲುಗು ಸಿನೆಮಾ ಕೂಡ ಇದೇ ಹೆಸರಿನಲ್ಲಿ ಸುದ್ದಿ ಮಾಡಿತ್ತು. ವಿಶೇಷವೆಂದರೆ ಇದೇ ಹೆಸರು ಇದೀಗ ಕೋಸ್ಟಲ್‌ವುಡ್‌ನ‌ಲ್ಲಿ ಕೇಳಿಬರುತ್ತಿದೆ.

ವಿಶೇಷ ಟೈಟಲ್‌ಗ‌ಳ ಮೂಲಕ ಕೋಸ್ಟಲ್‌ವುಡ್‌ನ‌ಲ್ಲಿ ಹೊಸ ಹೊಸ ಸಿನೆಮಾಗಳು ಬರುತ್ತಿರುವ ಈ ಕಾಲದಲ್ಲಿ ಇದೀಗ “ಗಬ್ಬರ್‌ ಸಿಂಗ್‌’ ಟೈಟಲ್‌ ಕೂಡ ಸದ್ದು ಮಾಡುತ್ತಿದೆ. ಅದೇ ಹೆಸರಿನಲ್ಲೇ ಸಿನೆಮಾ ಮಾಡಬೇಕು ಎಂದು ನಿರ್ಧರಿಸಿರುವ ಚಿತ್ರತಂಡ ಕೆಲವೇ ದಿನದೊಳಗೆ ಶೂಟಿಂಗ್‌ ಕೂಡ ಆರಂಭಿಸಲಿದೆ.

“ಅಂಬರ್‌ ಕ್ಯಾಟರರ್’ ಎಂಬ ತುಳು ಸಿನೆಮಾದ ಮೂಲಕ ಕೋಸ್ಟಲ್‌ವುಡ್‌ಗೆ ಭರ್ಜರಿಯಾಗಿ ಎಂಟ್ರಿ ಪಡೆದಿದ್ದ ಉದ್ಯಮಿ ಕಡಂದಲೆ ಸುರೇಶ್‌ ಭಂಡಾರಿ ಅವರ ಪುತ್ರ ಸೌರಭ ಭಂಡಾರಿ “ಗಬ್ಬರ್‌ ಸಿಂಗ್‌’ ಎಂಬ ತುಳು ಸಿನೆಮಾ ಮಾಡಲು ರೆಡಿಯಾಗಿದ್ದಾರೆ. ಪೊಲೀಸ್‌ ಅಧಿಕಾರಿಯ ಪಾತ್ರದಲ್ಲಿ ಸೌರಭ್‌ ಅವರೇ ಕಾಣಿಸಿಕೊಳ್ಳಲಿದ್ದಾರೆ.

ಮುತ್ತು ಗೋಪಾಲ ಫಿಲಂಸ್‌ ಅವರ ಕಡಂದಲೆ ಸುರೇಶ್‌ ಭಂಡಾರಿ ಅರ್ಪಿಸುವ ಬಾಕೂìರು ಸತೀಶ್‌ ಪೂಜಾರಿ ನಿರ್ಮಾಣದ “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ಶ್ರೀ ಕ್ಷೇತ್ರ ಕಟೀಲಿನಲ್ಲಿ ನಾಡಿದ್ದು ರವಿವಾರ ಮುಹೂರ್ತ ಕಾಣಲಿದೆ. ಆ ಬಳಿಕ ಸಿನೆಮಾ ಶೂಟಿಂಗ್‌ ನಡೆಯಲಿದೆ. ಅಂದಹಾಗೆ, ಸಿನೆಮಾಕ್ಕೆ ಕತೆ, ಚಿತ್ರಕತೆ, ನಿರ್ದೇಶನದ ಜವಾಬ್ದಾರಿಯನ್ನು ಪ್ರದೀಪ್‌ ಬೈಕಾಡಿ ವಹಿಸಿದ್ದಾರೆ. ಮಧು ಸುರತ್ಕಲ್‌ ಸಂಭಾಷಣೆ ಇದೆ. ನವ್ಯ ಪೂಜಾರಿ, ಶಿಲ್ಪಾ ಶೆಟ್ಟಿ ನಾಯಕಿಯರಾಗಿ ಕಾಣಿಸಿಕೊಳ್ಳಲಿದ್ದಾರೆ. ಮಂಗಳೂರು, ಸುರತ್ಕಲ್‌ ಸುತ್ತಮುತ್ತ ಒಂದೇ ಹಂತದಲ್ಲಿ ಚಿತ್ರೀಕರಣ ನಡೆಯಲಿದೆ. ಖ್ಯಾತ ಕಲಾವಿದರೊಂದಿಗೆ ಹೊಸಮುಖಗಳಿಗೂ ಅವಕಾಶ ನೀಡಲಾಗಿದೆ.

ಮುಖ್ಯ ಪಾತ್ರದಲ್ಲಿ ನವೀನ್‌ ಡಿ. ಪಡೀಲ್‌, ಭೋಜರಾಜ ವಾಮಂಜೂರು, ಅರವಿಂದ ಬೋಳಾರ್‌, ಪ್ರಸನ್ನ ಶೆಟ್ಟಿ ಬೈಲೂರು, ಉಮೇಶ್‌ ಮಿಜಾರ್‌, ಸತೀಶ್‌ ಬಂದಲೆ, ಗಿರೀಶ್‌ ಶೆಟ್ಟಿ ಕಟೀಲ್‌, ಪ್ರಜ್ವಲ್‌, ಶಶಿ ಬೆಳ್ಳಾಯರು, ನರೇಶ್‌ ಕುಮಾರ್‌ ಸಸಿಹಿತ್ಲು, ಉದಯ ಆಳ್ವ ಸುರತ್ಕಲ್‌, ಸುನಿಲ್‌ ಕೃಷ್ಣಾಪುರ, ಯಶವಂತ ಶೆಟ್ಟಿ ಕೃಷ್ಣಾಪುರ ಸಿನೆಮಾದಲ್ಲಿದ್ದಾರೆ. ಚಿತ್ರದ ಸಹನಿರ್ದೇಶನ: ರೀಶನ್‌ ಮೈಸೂರು, ಛಾಯಾಗ್ರಹಣ: ರವಿ ಸುವರ್ಣ, ಸಂಕಲನ ಹರೀಶ್‌ ಕೊಟ್ಪಾಡಿ, ಸಂಗೀತ: ಡೋಲ್ಫಿನ್‌. ನರೇಶ್‌ ಕುಮಾರ್‌ ಸಸಿಹಿತ್ಲು, ಆರ್‌.ಎನ್‌. ಶೆಟ್ಟಿ ಕಳವಾರು ಸಾಹಿತ್ಯ ಬರೆದಿದ್ದಾರೆ.

-ದಿನೇಶ್‌ ಇರಾ

ಟಾಪ್ ನ್ಯೂಸ್

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

1

540 ಅಡಿ ಆಳದ ಬೋರ್​ವೆಲ್​ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-

UV Fusion: ಆತ್ಮಹತ್ಯೆಗೂ ಆಯಸ್ಸು ಮುಗಿದಿರಬೇಕು

7-

UV Fusion: ಧರೆಯ ಮೇಲೊಂದು ಅಚ್ಚರಿ ಧಾರಾವಿ

6-uv-fusion

UV Fusion: ಪುಟ್ಟ ಕಂಗಳ ಕುತೂಹಲ

5-photography

Photography: ಎಲ್ಲೆಲ್ಲೂ ಫೋಟೋಗ್ರಫಿ

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

1

540 ಅಡಿ ಆಳದ ಬೋರ್​ವೆಲ್​ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.