ಕೋಸ್ಟಲ್‌ ವುಡ್‌ ನಾಯಕಿಗೆ ಸ್ಯಾಂಡಲ್‌ವುಡ್‌ ಆಫರ್‌

Team Udayavani, Sep 20, 2018, 1:22 PM IST

20-sepctember-13.jpg

ಇನ್ನಷ್ಟೇ ತೆರೆ ಕಾಣಬೇಕಾಗಿರುವ ಬಲಿಪೆ ತುಳು ಚಿತ್ರದ ನಾಯಕಿಗೆ ಈ ಸ್ಯಾಂಡಲ್‌ ವುಡ್‌ ನಿಂದ ಆಫ‌ರ್‌ ಬಂದಿದೆ. ಅಮ್ಮೆರ್‌ ಪೊಲೀಸ್‌, ಅಪ್ಪೆ ಟೀಚರ್‌ ಚಲನಚಿತ್ರದ ಮೂಲಕ ಗುರುತಿಸಿಕೊಂಡ ಪುತ್ತೂರಿನ ಅಂಕಿತಾ ಪಟ್ಲ ಅವರು ಬಲಿಪೆ ಚಿತ್ರೀಕರಣವನ್ನು ಈಗಷ್ಟೇ ಮುಗಿಸಿದ್ದು, ಅಷ್ಟರಲ್ಲೇ ಸ್ಯಾಂಡಲ್‌ವುಡ್‌ ಕದ ತಟ್ಟಲು ಸಿದ್ಧರಾಗಿದ್ದಾರೆ.

ದರ್ಬೆ ಸಂತ ಫಿಲೋಮಿನಾ ಕಾಲೇಜಿನ ಪದವಿ ವಿದ್ಯಾರ್ಥಿನಿ ಆಗಿದ್ದಾಗಲೇ ಲಾಸ್ಟ್‌ ಸೆಮಿಸ್ಟರ್‌ ಆಲ್ಬಂ ಸಾಂಗ್‌ ಒಂದಕ್ಕೆ ಹೆಜ್ಜೆ ಹಾಕಿದ್ದು,ಅವರ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆಯಾಯಿತು. ಬಳಿಕ ರೂಲ್‌ 129 ಎಂಬ ಸಾಕ್ಷ್ಯಚಿತ್ರದಲ್ಲಿ ಬಣ್ಣ ಹಚ್ಚಿದರು. ಸಾಕ್ಷ್ಯಚಿತ್ರಗಳಿಂದಾಗಿ ಸಿಕ್ಕಿದ ಮನ್ನಣೆ ಸಿನೆಮಾ ರಂಗಕ್ಕೆ ಪ್ರವೇಶಿಸುವಂತೆ ಮಾಡಿತು. ಅಮ್ಮೆರ್‌ ಪೊಲೀಸ್‌ ಸಿನೆಮಾದ ನಾಲ್ಕೇ ನಾಲ್ಕು ಸೀನ್‌ ಗಳಲ್ಲಿ ಕಾಣಿಸಿಕೊಂಡರು. ಇದರಿಂದಾಗಿ ಅಪ್ಪೆ ಟೀಚರ್‌ ಸಿನೆಮಾದಲ್ಲಿ ಅವಕಾಶ ಸಿಕ್ಕಿತು. ಅಷ್ಟರಲ್ಲೇ ಅದೃಷ್ಟ ಖುಲಾಯಿಸಿದ್ದು, ಬಲಿಪೆ ಸಿನೆಮಾದ ನಾಯಕಿ ನಟಿಯಾಗಿ ಆಯ್ಕೆಯಾದರು.

ವಿದ್ಯಾರ್ಥಿ ದೆಸೆಯಲ್ಲಿಯೇ ಸಿನೆಮಾ ರಂಗದ ಕದ ತಟ್ಟಿದವರು ಅಂಕಿತಾ. ಬಿ.ಎ. ಪತ್ರಿಕೋದ್ಯಮ ಪದವಿ ಮುಗಿಸುತ್ತಿದ್ದಂತೆ ಕಿರುತೆರೆಯೂ ಕೈಬೀಸಿ ಕರೆಯಿತು. ಎಂಸಿಜೆ ಮಾಡಬೇಕು ಎಂಬ ಅಪೇಕ್ಷೆ ಇದ್ದರೂ, ಸಿನೆಮಾ ರಂಗದ ಒಲವೇ ಹೆಚ್ಚಾಯಿತು. ಇದರ ನಡುವೆ ಶಾಂತಂ ಪಾಪಂನಲ್ಲೂ ಅಭಿನಯಿಸಿ ಬಂದರು. ಅಷ್ಟರಲ್ಲಿಯೇ ಕನ್ನಡ ಸಿನೆಮಾವೊಂದರ ನಾಯಕಿ ನಟಿಯಾಗಿ ಆಯ್ಕೆ ಆಗಿದ್ದಾರೆ. ಸಿನೆಮಾದ ಹೆಸರು, ನಾಯಕ ನಟ, ನಿರ್ದೇಶಕರ ಬಗ್ಗೆ ಯಾವುದೇ ಸುಳಿವು ಬಿಟ್ಟು ಕೊಟ್ಟಿಲ್ಲ. ಸ್ಯಾಂಡಲ್‌ವುಡ್‌ ಆಫರ್‌ ಬಂದಿದೆ. ಅಂತಿಮ ಹಂತದಲ್ಲಿದೆ ಎನ್ನುತ್ತಾರೆ ನಾಯಕಿ ಅಂಕಿತಾ.

ಕೋಸ್ಟಲ್‌ವುಡ್‌ನ‌ ಬಲಿಪೆ ಈಗಾಗಲೇ ಶೂಟಿಂಗ್‌ ಮುಗಿಸಿದೆ. ಅಕ್ಟೋಬರ್‌ ಅಥವಾ ನವೆಂಬರ್‌ನಲ್ಲಿ ಬಿಡುಗಡೆ ಕಾಣುವ ನಿರೀಕ್ಷೆ ಇದೆ. ಇದರಲ್ಲಿ ಅಂಕಿತಾ ಅವರದ್ದು ವೈದ್ಯೆಯ ಪಾತ್ರ. ಆಸಕ್ತಿ ಇದ್ದರೂ, ಸ್ವಲ್ಪ ಕೀಳರಿಮೆ ಇತ್ತು. ಹೆತ್ತವರ ಪ್ರೋತ್ಸಾಹದಿಂದ ಇಲ್ಲಿವರೆಗೆ ತಲುಪಿದ್ದೇನೆ. ಒಂದು ವೇಳೆ ಸಿನೆಮಾದಲ್ಲಿ ಮುಂದುವರಿಯಲು ಸಾಧ್ಯವಾಗದಿದ್ದರೆ ಉಪನ್ಯಾಸಕಿ ಆಗಬೇಕೆಂಬ ಕನಸಿದೆ ಎನ್ನುತ್ತಾರೆ ಅಂಕಿತಾ ಪಟ್ಲ.

ಗಣೇಶ್‌ ಎನ್‌. ಕಲ್ಲರ್ಪೆ 

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-uv-fusion

UV Fusion: ಶ್ರೇಷ್ಠನಾಗುವುದಕ್ಕಿಂತ ಉತ್ತಮನಾಗುವುದೇ ಲೇಸು

11-uv-fusion

Simple Life: ಬದುಕು ನಿರಾಡಂಬರವಾಗಿರಲಿ

10-uv-fusion

Rainy Season: ಮೊಬೈಲ್‌ ಬಿಟ್ಟು ಬೇರೆ ಆಡೋಣವೇ? ಮಕ್ಕಳಿಗೆ ಹೀಗೊಂದು ಪ್ರಶ್ನೆ

9-uv-fusion

UV Fusion: ಜೀವನದಲ್ಲಿ ಕ್ಷಮಾಗುಣ ಬೆಳೆಸೋಣ

5-uv-fusion

Childhood: ಬಾಲ್ಯವೆಂಬ ನೆನೆದಷ್ಟು ಮುಗಿಯದ ಪಯಣ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.