ವರುಣನ ಅವಕೃಪೆ: ನಿರೀಕ್ಷೆಯಲ್ಲಿದ್ದ ಜನತೆಗೆ ತೀವ್ರ ಹತಾಶೆ

ಹೆಚ್ಚಿದ ಬೇಸಗೆ ಬಿಸಿಲು, ಸೆಕೆ: ಬಹುತೇಕ ಎಲ್ಲ ಜಲಮೂಲಗಳು ಬರಿದು, ಬೆಳೆ ಕುಂಠಿತ

Team Udayavani, May 15, 2019, 4:14 PM IST

15-May-24

ನೀರಿಲ್ಲದೆ ಸಂಪೂರ್ಣ ಬತ್ತಿರುವ ನಾಗಬನದ ಕೆರೆ.

ಪುತ್ತೂರು :ಈ ಬಾರಿ ಮುಂಗಾರು ಪೂರ್ವ ಮಳೆ ಸುರಿಯದೇ ಇರುವುದು ಜನತೆಯ ನಿರೀಕ್ಷೆಯನ್ನು ಹುಸಿಗೊಳಿಸಿ ಹತಾಶೆಗೆ ತಳ್ಳಿದೆ. ಬೇಸಗೆ ಬಿರು ಬಿಸಿಲಿನ ಝಳಕ್ಕೆ ಜನತೆ ತತ್ತರಿಸಿದೆ.

ಕಳೆದ ವರ್ಷ ಯುಗಾದಿಯ ಅವಧಿ ಯಲ್ಲಿ ಅಂದರೆ ಮಾರ್ಚ್‌ ತಿಂಗಳ ಮಧ್ಯ ಭಾಗದಲ್ಲಿ ಆರಂಭಗೊಂಡ ಮಳೆ ನಿರಂತರತೆಯನ್ನು ಕಾಯ್ದುಕೊಂಡು ಜನತೆಯಲ್ಲಿ ಒಂದಷ್ಟು ನಿರಾಳತೆಯನ್ನು ಮೂಡಿಸಿತ್ತು. ಆದರೆ ಈ ಬಾರಿ ಮೇ ತಿಂಗಳ ಎರಡನೇ ವಾರಕ್ಕೆ ಕಾಲಿಟ್ಟರೂ ಪುತ್ತೂರು ತಾಲೂಕು ವ್ಯಾಪ್ತಿಯಲ್ಲಿ ಒಂದೇ ಒಂದು ಸಾಮಾನ್ಯ ಪ್ರಮಾಣದ ಮಳೆಯೂ ಸುರಿದಿಲ್ಲ.

ಜಿಲ್ಲೆಯ ಜೀವನದಿಗಳಾದ ನೇತ್ರಾವತಿ ಮತ್ತು ಕುಮಾರಧಾರಾ ಬರಿದಾಗಿದೆ. ಮತ್ತೂಂದು ಭಾಗದ ಸೀರೆ ಹೊಳೆಯೂ ಜಲಮುಕ್ತಗೊಂಡಿದೆ. ಈ ಭಾಗದ ಕೃಷಿಕರು ತಮ್ಮ ಬದುಕಿನ ಬೆಳೆಗಳು ಬಿಸಿಲಿನ ತೀಕ್ಷ್ಣತೆಯಿಂದ ಸಾಯುತ್ತಿರು ವುದನ್ನು ನೋಡಲಾರದೆ ಕಣ್ಣುಮುಚ್ಚಿ ಕುಳಿತುಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ. ಗ್ರಾಮೀಣ ಮತ್ತು ನಗರದ ಭಾಗದ ಜನತೆ ಕುಡಿಯುವ ನೀರಿಗಾಗಿ ಪರದಾಡು ವಂತಾಗಿದೆ.

ಜಿಲ್ಲೆಯ ಕೃಷಿಕರಲ್ಲಿ ಕೊಳವೆ ಬಾವಿಗಳಿದ್ದರೂ ಬಹುತೇಕ ಕೊಳವೆ ಬಾವಿಗಳಲ್ಲಿ ನೀರಿನ ಪ್ರಮಾಣ ಕಡಿಮೆ ಯಾಗಿದೆ. ಮತ್ತೂಂದು ಕಡೆ ವಿದ್ಯುತ್‌ ಸಮಸ್ಯೆಯೂ ಕೃಷಿಕರಿಗೆ ಇರುವ ನೀರನ್ನೂ ಸಮರ್ಪಕವಾಗಿ ಬಳಸಿಕೊಳ್ಳಲು ಬಿಡುತ್ತಿಲ್ಲ. ಹಳ್ಳಿಯ ಭಾಗಗಳಲ್ಲಿ ಕುಡಿಯುವ ನೀರಿನ ಬಾವಿಗಳು ಸದಾ ಜನತೆಯನ್ನು ಕಾಪಾಡುತ್ತಿದ್ದವು. ಆದರೆ ಈಗ ಕುಡಿಯುವ ನೀರಿನ ಬಾವಿಗಳು ಕಣ್ಮರೆಯಾಗಿವೆ. ಕೊಳವೆಬಾವಿಗಳನ್ನೇ ನಂಬಿರುವ ಹಳ್ಳಿಯ ಜನತೆಗೂ ನೀರಿನ ಬಿಸಿ ಉಂಟಾಗಿದೆ.

ನಗರಸಭಾ ವ್ಯಾಪ್ತಿಗೆ ಕುಮಾರಧಾರ ನದಿಗೆ ನಿರ್ಮಿಸಲಾದ ಕಿಂಡಿಅಣೆಕಟ್ಟಿನಿಂದ ನೀರು ಸರಬರಾಜು ನಡೆಯುತ್ತಿದ್ದರೂ ಕಿಂಡಿಅಣೆಕಟ್ಟಿನ ನೀರಿನ ಸಂಗ್ರಹ ಇಳಿಕೆ ಯಾಗತೊಡಗಿದೆ. ನಗರಸಭಾ ವ್ಯಾಪ್ತಿಯ ಪೆರಿಯತ್ತೋಡಿ, ಬೊಳ್ಳಾಣ, ಉರ್ಲಾಂಡಿ, ಬೆದ್ರಾಳ, ಕುಬಲಾಜೆ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಕಾಣಿಸಿಕೊಂಡಿದ್ದು. ಇಲ್ಲಿ ಹೊಸ ಕೊಳವೆಬಾವಿ ಕೊರೆದರೂ ನೀರೇ ಸಿಗದೆ ಯಾವುದೇ ಪ್ರಯೋಜನವಾಗಿಲ್ಲ. ತಾಲೂಕಿನ ಬಡಗನ್ನೂರು ಗ್ರಾ.ಪಂ. ವ್ಯಾಪ್ತಿಯ ನೆಕ್ರಾಜೆ, ಗಾಣಪದವು, ಒಳಮೊಗ್ರು ಗ್ರಾ.ಪಂ., ಬಲ್ನಾಡು ಗ್ರಾ.ಪಂ. ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಕಾಣಿಸಿಕೊಂಡಿದೆ.

ಗ್ರಾಮಾಂತರಕ್ಕೆ 26 ಹೊಸ ಕೊಳವೆಬಾವಿ
ತಾಲೂಕಿನ 41 ಗ್ರಾ.ಪಂ. ವ್ಯಾಪ್ತಿಗಳಲ್ಲಿ ಹೆಚ್ಚಾಗಿ ಕುಡಿಯುವ ನೀರಿನ ಸಮಸ್ಯೆ ಯನ್ನು ಎದುರಿಸುತ್ತಿರುವಲ್ಲಿಗೆ ತುರ್ತಾಗಿ ಪರಿಹರಿಸಲು 26 ಕೊಳವೆಬಾವಿಗಳನ್ನು ಹೊಸದಾಗಿ ಕೊರೆಸಲು ತಾ.ಪಂ. ಕಾರ್ಯ ನಿರ್ವಾಹಣಾಧಿಕಾರಿಯವರು ಪುತ್ತೂರು ಉಪವಿಭಾಗದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಯೋಜನೆ ಕಾರ್ಯಪಾಲಕ ಅಭಿಯಂತ ರರಿಗೆ ಸುತ್ತೋಲೆ ನೀಡಿದ್ದಾರೆ. ಕೆಲವು ಗ್ರಾ.ಪಂ.ಗಳಲ್ಲಿರುವ 18 ಕೊಳವೆ ಬಾವಿಗಳನ್ನು ಪುನಶ್ಚೇತನಗೊಳಿಸುವಂತೆ ಸೂಚಿಸಿದ್ದಾರೆ.

ನಗರದಲ್ಲಿ 6 ಹೊಸ ಕೊಳವೆಬಾವಿ
ಪುತ್ತೂರು ನಗರಸಭಾ ವ್ಯಾಪ್ತಿಯಲ್ಲೂ ನೀರಿನ ಸಮಸ್ಯೆ ತಲೆದೋರಿದ ಕಡೆಗಳಲ್ಲಿ 6 ಕೊಳವೆಬಾವಿಗಳನ್ನು ಕೊರೆಸಲು ಆಡಳಿತಾಧಿಕಾರಿಯಾಗಿರುವ ಜಿಲ್ಲಾಧಿಕಾರಿಯವರ ಅನುಮೋದನೆ ಲಭಿಸಿದೆ. ಈ ಹಿನ್ನೆಲೆಯಲ್ಲಿ ಮಚ್ಚಿಮಲೆ, ಉರ್ಲಾಂಡಿ ಪರಿಸರದಲ್ಲಿ ಈಗಾಗಲೇ ಕೊಳವೆ ಬಾವಿ ಕೊರೆಸಿದ್ದರೂ ಎರಡೂ ವಿಫಲಗೊಂಡಿವೆ. ಆದರೆ ಬೆದ್ರಾಳ ನೆಕ್ಕರೆ ಪರಿಸರದಲ್ಲಿ ಕೊರೆಸಿದ ಕೊಳವೆ ಬಾವಿಗೆ ನೀರು ಸಿಕ್ಕಿದೆ. ಪೆರಿಯತ್ತೋಡಿ, ಕುಬಲಾಜೆ ಪರಿಸರದಲ್ಲಿ ಕೊಳವೆ ಬಾವಿ ಕೊರೆಸಲು ಸಿದ್ಧತೆ ನಡೆಯುತ್ತಿದೆ.

ರಾಜೇಶ್‌ ಪಟ್ಟೆ

ಟಾಪ್ ನ್ಯೂಸ್

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

siddaramaih-Meeting

State Budget Meeting: ಇಂದಿನಿಂದ ಸಿಎಂ ಬಜೆಟ್‌ ಪೂರ್ವಭಾವಿ ಸರಣಿ ಸಭೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.