ಭಕ್ತಿಪೂರ್ವಕ ಮಹಾಶಿವರಾತ್ರಿ ಆಚರಣೆ
Team Udayavani, Mar 5, 2019, 4:37 AM IST
ಮಹಾನಗರ : ನಗರಾದ್ಯಂತ ಭಕ್ತಿಪೂರ್ವಕ ಮಹಾ ಶಿವರಾತ್ರಿ ಆಚರಣೆ ಸೋಮವಾರ ಜರಗಿತು. ನಗರದ ವಿವಿಧ ದೇವಸ್ಥಾನಗಳಲ್ಲಿ ಬೆಳಗ್ಗೆಯಿಂದಲೇ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದೇವರ ದರ್ಶನ ಪಡೆದುಕೊಂಡರು. ಶಿವರಾತ್ರಿ ಅಂಗವಾಗಿ ಸೋಮವಾರ ನಸುಕಿನ ವೇಳೆಯಿಂದಲೇ ಶ್ರೀ ದೇವರಿಗೆ ವಿಶೇಷ ಪೂಜೆಗಳು ಜರಗಿದವು. ಕದ್ರಿ ಮಂಜುನಾಥ ದೇವಸ್ಥಾನ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ, ಶರವು ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಭಕ್ತರ ಸಂಖ್ಯೆ ಬೆಳಗ್ಗೆಯಿಂದಲೇ ಹೆಚ್ಚಿತ್ತು. ಮಧ್ಯಾಹ್ನ ದವರೆಗೂ ಈ ದೇವಸ್ಥಾನಗಳಲ್ಲಿ ಸಾವಿರಾರು ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು.
ಕದ್ರಿ ಶ್ರೀ ಮಂಜುನಾಥ ದೇವರ ಸನ್ನಿಧಿಯಲ್ಲಿ ಶಿವಲಿಂಗಕ್ಕೆ ಭಕ್ತರು ಅಭಿಷೇಕ ಸಲ್ಲಿಸಿದರು. ರುದ್ರಾಭಿಷೇಕ, ಶಿವಪೂಜೆ, ರಾತ್ರಿ ರಂಗಪೂಜೆ, ಉತ್ಸವ ಕಾರ್ಯ ಕ್ರಮಗಳು ಜರಗಿದವು. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಶಿವನಿಗೆ ವಿಶೇಷ ಪೂಜೆ, ಸೀಯಾಳ ಅಭಿಷೇಕ, ಶರವು ಶ್ರೀ ಮಹಾಗಣಪತಿ ದೇವಳದಲ್ಲಿ ರುದ್ರಾಭಿಷೇಕ, ಪಂಚಾಮೃತ ಅಭಿಷೇಕ ನಡೆಯಿತು. ಪಾಂಡೇಶ್ವರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ, ಸಾಮೂಹಿಕ ಶತರುದ್ರಾಭಿಷೇಕ ಜರಗಿತು.
ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನ, ಭಗವಾನ್ ಶ್ರೀ ಬಬ್ಬುಸ್ವಾಮಿ ಕ್ಷೇತ್ರ ಸಹಿತ ನಗರದ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಪುನಸ್ಕಾರಾದಿಗಳು ವಿಜೃಂಭಣೆಯಿಂದ ನಡೆದವು. ವಿವಿಧ ದೇಗುಲಗಳಲ್ಲಿ ಭಕ್ತರಿಗೆ ವಿಶೇಷ ಅನ್ನಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ಶಿವರಾತ್ರಿ ಪ್ರಯುಕ್ತ ದೇವಸ್ಥಾನಗಳಲ್ಲಿ ಭಜನೆ, ಶಿವ ಸ್ತೋತ್ರ ಪಠನ ಜರಗಿತು.
ಬಿರುಸಿನ ವ್ಯಾಪಾರ
ಕದ್ರಿ ದೇವಸ್ಥಾನ, ಶರವು ಮಹಾಗಣಪತಿ ದೇವಸ್ಥಾನ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಸಹಿತ ಈಶ್ವರ ದೇವಸ್ಥಾನಗಳ ಮುಂಭಾಗದಲ್ಲಿ ಶಿವನಿಗೆ ಪ್ರಿಯವಾದ ಬಿಲ್ವಪತ್ರೆ, ಎಕ್ಕದ ಹೂವು, ಎಳನೀರು, ತುಳಸಿ ಮಾಲೆ, ಹಣ್ಣು-ಕಾಯಿ ಮೊದಲಾದ ಪೂಜಾ ಸಾಮಗ್ರಿಗಳ ಅಂಗಡಿಯವರು ಬಿರುಸಿನ ವ್ಯಾಪಾರದಲ್ಲಿ ತೊಡಗಿದ್ದರು.
ಮನೆಗಳಲ್ಲಿ ಶಿವರಾತ್ರಿ
ಮಹಾ ಶಿವರಾತ್ರಿ ಅಂಗವಾಗಿ ನಗರದ ದೇವಸ್ಥಾನಗಳಲ್ಲಿ ಮಾತ್ರವಲ್ಲದೆ, ಕೆಲವು ಮನೆಗಳಲ್ಲಿಯೂ ಆಚರಣೆ ಬಿರುಸಾಗಿತ್ತು. ಮನೆಮಂದಿ ಸೇರಿ ಶಿವ ದೇವರ ಪೂಜಾ ಕಾರ್ಯದಲ್ಲಿ ತೊಡಗಿದರು. ರಾತ್ರಿಯಿಡೀ ಶಿವರಾತ್ರಿ ಜಾಗರಣೆ ವಿಶೇಷವಾಗಿತ್ತು. ಭಜನೆ, ಶಿವನಾಮ ಜಪದ ಮೂಲಕ ಮನೆಮಂದಿ ಶ್ರದ್ಧಾಭಕ್ತಿಯಿಂದ ಶಿವರಾತ್ರಿ ಆಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.