ಶಿವನ ವಿಶ್ರಾಂತಿಯ ಕಾಲವೆ ಮಹಾಶಿವರಾತ್ರಿ
Team Udayavani, Mar 4, 2019, 7:09 AM IST
ಶಿವನ ವಿಶ್ರಾಂತಿಯ ಕಾಲವೆಂದರೆ ಮಹಾಶಿವರಾತ್ರಿ. ಆ ಕಾಲದಲ್ಲಿ ಶಿವತತ್ತ್ವದ ಕಾರ್ಯ ನಿಂತುಹೋಗುತ್ತದೆ ಅಂದರೆ ಆ ಸಮಯದಲ್ಲಿ ಶಿವನು ಧ್ಯಾನಾವಸ್ಥೆಯಿಂದ ಸಮಾಧಿ ಅವಸ್ಥೆಗೆ ಹೋಗುತ್ತಾನೆ.
ಮಹಾಶಿವರಾತ್ರಿಯ ಮಹತ್ವ
ಮಹಾಶಿವರಾತ್ರಿಯ ದಿನ ಶಿವತತ್ತ್ವವು ಎಂದಿಗಿಂತ 1,000 ಪಟ್ಟು ಹೆಚ್ಚು ಕಾರ್ಯನಿರತವಾಗಿರುತ್ತದೆ. ಶಿವತತ್ತ್ವದ ಲಾಭವು ಹೆಚ್ಚು ಪ್ರಮಾಣದಲ್ಲಿ ಲಭಿಸಲು ಮಹಾಶಿವರಾತ್ರಿಯ ದಿನ ಭಾವಪೂರ್ಣವಾಗಿ ಶಿವನ ಪೂಜೆ-ಅರ್ಚನೆ ಮಾಡಬೇಕು; ಅದರೊಂದಿಗೆ ‘ಓಂ ನಮಃ ಶಿವಾಯ|’ ನಾಮಜಪವನ್ನು ಆದಷ್ಟು ಹೆಚ್ಚು ಮಾಡಬೇಕು. ಈ ದಿನದಂದು ‘ಓಂ ನಮಃ ಶಿವಾಯ|’ ಈ ನಾಮಜಪವನ್ನು ಮಾಡುವ ಜೀವಕ್ಕೆ ಶಿವನ ಸೂಕ್ಷ್ಮ-ಶಕ್ತಿ ಸಿಗುತ್ತದೆ. ಶಿವನ ಜನ್ಮವು ಸ್ಥೂಲ ಮತ್ತು ಸೂಕ್ಷ್ಮ ರೂಪದ ಕೆಟ್ಟ ಶಕ್ತಿಗಳನ್ನು ನಾಶ ಮಾಡಲು ಮತ್ತು ಮಾನವನ ಕಲ್ಯಾಣಕ್ಕಾಗಿ ಆಗಿದೆ.
ಮಹಾಶಿವರಾತ್ರಿಯ ವ್ರತದ ವಿಧಿ
ಮಾಘ ಕೃಷ್ಣ ಚತುರ್ದಶಿಯಂದು ಏಕಭುಕ್ತರಾಗಿರಬೇಕು (ಒಂದು ಹೊತ್ತು ಊಟ ಮಾಡುವುದು). ಚತುರ್ದಶಿಯಂದು ಬೆಳಗ್ಗೆ ವ್ರತದ ಸಂಕಲ್ಪವನ್ನು ಮಾಡಿ ಸಾಯಂಕಾಲ ನದಿಯಲ್ಲಿ ಅಥವಾ ಕೆರೆಯಲ್ಲಿ ಶಾಸ್ತ್ರೋಕ್ತವಾಗಿ ಸ್ನಾನ ಮಾಡಬೇಕು. ಭಸ್ಮ ಮತ್ತು ರುದ್ರಾಕ್ಷಿಗಳನ್ನು ಧರಿಸಬೇಕು. ಪ್ರದೋಷಕಾಲದಲ್ಲಿ ಶಿವನ ದೇವಸ್ಥಾನಕ್ಕೆ ಹೋಗಬೇಕು. ಶಿವನ ಧ್ಯಾನವನ್ನು ಮಾಡಬೇಕು, ಆಮೇಲೆ ಶೋಡಷೋಪಚಾರ ಪೂಜೆಯನ್ನು ಮಾಡಿ ಭವ ಭಾವಿನಿ ಪ್ರೀತ್ಯರ್ಥ ತರ್ಪಣವನ್ನು ನೀಡಬೇಕು. ಶಿವನಿಗೆ 108 ಕಮಲಗಳನ್ನು ಅಥವಾ ಬಿಲ್ವಪತ್ರೆಗಳನ್ನು ನಾಮಮಂತ್ರ ಸಹಿತ ಅರ್ಪಿಸಬೇಕು. ಆಮೇಲೆ ಪುಷ್ಪಾಂಜಲಿಯನ್ನು ಅರ್ಪಿಸಿ ಅರ್ಘ್ಯ ನೀಡಬೇಕು. ಪೂಜೆ, ಸ್ತೋತ್ರಪಠಣ ಮತ್ತು ಮೂಲಮಂತ್ರ ಜಪದ ಅನಂತರ ಶಿವನ ಮಸ್ತಕದ ಮೇಲಿನ ಒಂದು ಹೂವನ್ನು ತಮ್ಮ ತಲೆಯ ಮೇಲಿಟ್ಟು ಕ್ಷಮಾಯಾಚನೆ ಮಾಡಬೇಕು.
ಬಿಲ್ವಪತ್ರೆಯನ್ನು ಕೆಳಮುಖವಾಗಿ ಏಕೆ ಅರ್ಪಿಸಬೇಕು?
ಬಿಲ್ವಪತ್ರೆಯನ್ನು ಶಿವಲಿಂಗದ ಮೇಲೆ ಕೆಳಮುಖವಾಗಿ ಅರ್ಪಿಸಿದರೆ ಅದರಿಂದ ನಿರ್ಗುಣ ಸ್ತರದಲ್ಲಿನ ಸ್ಪಂದನಗಳು ಹೆಚ್ಚಿನ ಪ್ರಮಾಣದಲ್ಲಿ ಪ್ರಕ್ಷೇಪಿತವಾಗಿ ಭಕ್ತರಿಗೆ ಹೆಚ್ಚು ಲಾಭವಾಗುತ್ತದೆ. ಶಿವನಿಗೆ ತಾಜಾ ಬಿಲ್ವಪತ್ರೆ ಸಿಗದಿದ್ದರೆ ಹಿಂದಿನ ದಿನ ತೆಗೆದಿಟ್ಟ ಬಿಲ್ವಪತ್ರೆಯನ್ನು ಬಳಸಬಹುದು. ಆದರೆ ಸೋಮವಾರದ ಬಿಲ್ವಪತ್ರೆ ಮರುದಿನಕ್ಕೆ ಬಳಸುಂತಿಲ್ಲ.
ಭಸ್ಮವನ್ನು ಎಲ್ಲಿ ಹಚ್ಚಿಕೊಳ್ಳಬೇಕು
‘ಓಂ ನಮಃ ಶಿವಾಯ’ ಎಂಬ ಮಂತ್ರವನ್ನು ಹೇಳುತ್ತಾ ಭಸ್ಮವನ್ನು ಬಲಗೈಯ ಮಧ್ಯದ ಮೂರು ಬೆರಳುಗಳಿಂದ ಹಣೆ, ಹೃದಯ (ಎದೆ), ನಾಭಿ ಮತ್ತು ಕಂಠದ ಮೇಲೆ ಅಡ್ಡವಾಗಿ ಹಚ್ಚಬೇಕು.
ಶಿವಲಿಂಗಕ್ಕೆ ಅರ್ಧಪ್ರದಕ್ಷಿಣೆ
ಪ್ರದಕ್ಷಿಣೆ ಹಾಕುವಾಗ ಹರಿನಾಳದಿಂದ ಆರಂಭಿಸಿ ತಮ್ಮ ಎಡಬದಿಯಿಂದ ಹರಿನಾಳದ ಇನ್ನೊಂದು ಬದಿಯವರೆಗೆ ಹೋಗಬೇಕು. ಅನಂತರ ಹರಿನಾಳವನ್ನು ದಾಟದೇ ಪುನಃ ಹರಿನಾಳದ ಮೊದಲ ಬದಿಯವರೆಗೆ ಬಂದು ಪ್ರದಕ್ಷಿಣೆ ಪೂರ್ಣಗೊಳಿಸಬೇಕು.
ಪಾಣಿಪೀಠದಿಂದ ಹರಿದು ಹೋಗುವ (ಹರಿನಾಳದ) ನೀರಿನಲ್ಲಿ ಶಕ್ತಿಯ ಪ್ರವಾಹವಿರುವುದರಿಂದ ಅದನ್ನು ದಾಟಬಾರದು. ಅದನ್ನು ದಾಟುವಾಗ ಕಾಲುಗಳು ಅಗಲವಾಗುವುದರಿಂದ ವೀರ್ಯನಿರ್ಮಿತಿಯ ಮೇಲೆ, 5 ವಾಯುಗಳ ಮೇಲೆ ವಿಪರೀತ ಪರಿಣಾಮವಾಗುತ್ತದೆ. ದೇವದತ್ತ ಮತ್ತು ಧನಂಜಯ ವಾಯುಗಳು ಕುಗ್ಗುತ್ತವೆ. ಆದರೆ ಅದನ್ನು ದಾಟುವಾಗ ವ್ಯಕ್ತಿಯು ತನ್ನನ್ನು ತಾನು ಬಿಗಿಹಿಡಿದುಕೊಂಡರೆ ನರಗಳು ಬಿಗಿಯಾಗಿ ಅದರ ಪರಿಣಾಮವಾಗುವುದಿಲ್ಲ.
(ಸಂಗ್ರಹ : ಮೋಹನ ಗೌಡ)
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.