ಮ್ಯೂಚುವಲ್‌ ಫ‌ಂಡ್‌ ಹೂಡಿಕೆದಾರರ ಗಮನಕ್ಕೆ


Team Udayavani, Mar 9, 2020, 5:25 AM IST

ಮ್ಯೂಚುವಲ್‌ ಫ‌ಂಡ್‌ ಹೂಡಿಕೆದಾರರ ಗಮನಕ್ಕೆ

ಭಾರತದಲ್ಲಿ ಬಂಡವಾಳ ಹೂಡುವ ವಿಶ್ವಸನೀಯ ಮಾರ್ಗಗಳಲ್ಲಿ ಮ್ಯೂಚುವಲ್‌ ಫ‌ಂಡ್‌ ಪ್ರಮುಖವಾದುದು. ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಮಂದಿ ಮ್ಯೂಚುವಲ್‌ ಫ‌ಂಡ್‌ನ‌ತ್ತ ಆಕರ್ಷಿತರಾಗುತ್ತಿದ್ದಾರೆ. ಮ್ಯೂಚುವಲ್‌ ಫ‌ಂಡ್‌ ಯೋಜನೆಗಳು ಅದೆಷ್ಟೇ ಸರಳ ಮತ್ತು ಲಾಭಕರವಾಗಿದ್ದರೂ ಹೂಡಿಕೆದಾರರು, ತಮ್ಮ ಬಂಡವಾಳವನ್ನು ಸೂಕ್ತವಾಗಿ ನಿರ್ವಹಣೆ ಮಾಡದಿದ್ದರೆ ನಷ್ಟವಾಗುತ್ತದೆ. ತಪ್ಪು ನಿರ್ಧಾರಗಳಿಂದ ಆರ್ಥಿಕ ಅಸ್ಥಿರತೆ ಉಂಟಾಗಬಹುದು. ಹೂಡಿಕೆ ಮಾಡಿದ ಬಂಡವಾಳ ಲಾಭ ತರಬೇಕು. ಹೀಗಾಗಿ ಕಷ್ಟಪಟ್ಟು ಗಳಿಸಿದ ಹಣವನ್ನು ವ್ಯವಸ್ಥಿತವಾಗಿ ಬಳಸಬೇಕು. ಮ್ಯೂಚುವಲ್‌ ಫ‌ಂಡ್‌ ಹೂಡಿಕೆದಾರರು ಮಾಡುವ ಸಾಮಾನ್ಯ ತಪ್ಪುಗಳನ್ನು ಇಲ್ಲಿ ನೀಡಲಾಗುವುದು.

ಲಾಭದ ಗುರಿ ಹಾಕುವುದು
ಬಂಡವಾಳ ಹೂಡಿಕೆ ಮಾಡುವುದೇ ಲಾಭಕ್ಕೋಸ್ಕರ. ಹೀಗಾಗಿ ನಿರ್ದಿಷ್ಟ ಮೊತ್ತದಷ್ಟು ಲಾಭದ ಗುರಿಯನ್ನು ಹೂಡಿಕೆದಾರ ಹಾಕಿಕೊಂಡಿರಬೇಕು. ನಮ್ಮ ಆರ್ಥಿಕ ಶಕ್ತಿಗೆ ತಕ್ಕಂತೆ, ಹೆಚ್ಚು ಪ್ರಯೋಜನಗಳನ್ನು ಒದಗಿಸುವ ಯೋಜನೆಗಳನ್ನು ಹುಡುಕಿ, ಪರಾಮರ್ಶಿಸಿ, ಬಳಿಕವೇ ಬಂಡವಾಳ ಹೂಡಬೇಕು.

ಕಡಿಮೆ ಅವಧಿಯ ಹೂಡಿಕೆ
ಮ್ಯೂಚುವಲ್‌ ಫ‌ಂಡ್‌ನ‌ಲ್ಲಿ ದೀರ್ಘಾವಧಿಗೆ ಹೂಡಿಕೆ ಮಾಡಿದಷ್ಟೂ ಹೆಚ್ಚು ಲಾಭ ದೊರೆಯುತ್ತದೆ. ಕಡೇ ಪಕ್ಷ 5 ರಿಂದ 7 ವರ್ಷಗಳ ಅವಧಿಗಾದರೂ ಹೂಡಿಕೆ ಮಾಡುವುದು ಉತ್ತಮ. ದೀರ್ಘಾವಧಿಯ ಕಾಲ ಬಂಡವಾಳ ಹೂಡಿಕೆ ಮಾಡುವುದರಿಂದ, ಒಳಹೊರಗು ತಿಳಿಯುವುದರ ಜತೆಗೆ, ಮಾರುಕಟ್ಟೆಯಲ್ಲಿ ನಿಯಂತ್ರಣ ಸಾಧಿಸಬಹುದಾಗಿದೆ.

ಎನ್‌ಎವಿಗೆ ಹೋಲಿಕೆ”ದಿ ಚೀಪರ್‌, ದಿ ಬೆಟರ್‌’ ಎಂಬ ಮಾತನ್ನು ನೀವು ಕೇಳಿರುತ್ತೀರಿ. ಮ್ಯೂಚುವಲ್‌ ಫ‌ಂಡ್ಸ್‌ ವಿಷಯದಲ್ಲಿ ಹಾಗನ್ನಲು ಸಾಧ್ಯವೇ ಇಲ್ಲ. ಸಾಮಾ ನ್ಯವಾಗಿ ಹೊಸ ಹೂಡಿಕೆದಾರರು ಈ ತಪ್ಪನ್ನು ಮಾಡುತ್ತಾರೆ. ಅವರು ಮ್ಯೂಚುವಲ್‌ ಫ‌ಂಡ್‌ನ‌ ನಿವ್ವಳ ಆಸ್ತಿ ಮೌಲ್ಯ (NAV Net Asset Value)ಕ್ಕೆ ತಕ್ಕಂತೆ ಬಂಡವಾಳ ಹಾಕುತ್ತಾರೆ. ಅದು ತಪ್ಪು. ಮ್ಯೂಚುವಲ್‌ ಫ‌ಂಡ್ಸ್‌ಗಳನ್ನು ಯೂನಿಟ್‌ ಲೆಕ್ಕದಲ್ಲಿ ಖರೀದಿಸಲಾಗುತ್ತದೆ. ಪ್ರತಿ ಯೂನಿಟ್‌ ಬೆಲೆ ಎಷ್ಟಿದೆ ಎಂಬುದನ್ನು ಹೂಡಿಕೆದಾರರು ತಿಳಿದಿರಬೇಕು.

ಹಲವು ಹೂಡಿಕೆ
ವಿವಿಧ ಮ್ಯೂಚುವಲ್‌ ಫ‌ಂಡ್‌ ಯೋಜನೆಗಳಲ್ಲಿ ಹೂಡಿಕೆ ಮಾಡುವುದರಿಂದ ಲಾಭ ಹೆಚ್ಚು ಎನ್ನುವುದು ತಪ್ಪು ಕಲ್ಪನೆ. ಈ ರೀತಿ ಹೂಡಿಕೆ ಮಾಡುವುದರಿಂದ ನಷ್ಟವಾಗುವ ಸಾಧ್ಯತೆ ಹೆಚ್ಚು. ಕೆಲ ಯೋಜನೆಗಳು ನಮ್ಮ ಹೂಡಿಕೆಗೆ ತಕ್ಕಂತೆ ಲಾಭ ತಂದುಕೊಡದೇ ಇರಬಹುದು. ಅಲ್ಲದೆ, ಹಲವು ಯೋಜನೆಗಳಲ್ಲಿ ಹೂಡಿಕೆ ಮಾಡಿದಾಗ ವಿವಿಧ ದಿನಾಂಕಗಳಲ್ಲಿ ಹಣ ಕಡಿತಗೊಳ್ಳುವ ಕಾರಣ ಹೂಡಿಕೆದಾರನ ಖಾತೆಯೂ ಖಾಲಿಯಾಗುತ್ತದೆ. ಅದೇ ರೀತಿ, ಎಲ್ಲ ಹಣವನ್ನೂ ಒಂದೇ ಯೋಜನೆಯಲ್ಲಿ ಹೂಡಿಕೆ ಮಾಡುವುದೂ ಆರೋಗ್ಯಕರವಲ್ಲ.

ನಷ್ಟದ ನಿರ್ಲಕ್ಷ್ಯ
ಹೂಡಿಕೆ ಏರಿಳಿತಗಳ ಗೂಳಿ ಆಟವಿದ್ದಂತೆ. ಮೂಲ ಬಂಡವಾಳವೇ ಕೈತಪ್ಪಿ ಹೋಗುವ ಅಪಾಯವೂ ಇರುತ್ತದೆ. ಈ ವೇಳೆ ನಿರ್ಲಕ್ಷ್ಯ ವಹಿಸಬಾರದು. ನಷ್ಟವಾಗುವ ಸಾಧ್ಯತೆಗಳಿದ್ದರೆ ಅದನ್ನು ಖಾತರಿ ಪಡಿಸಿಕೊಂಡು ಇನ್ನಿತರ ಯೋಜನೆ ಗಳಿಂದ ಹೂಡಿಕೆ ವಾಪಸ್‌ ಪಡೆಯುವ ಬಗ್ಗೆ ಚಿಂತಿಸಬೇಕು. ಇಲ್ಲವೇ, ಸದ್ಯಕ್ಕೆ ನಷ್ಟ ಅನುಭವಿಸಿದರೂ ಮುಂದಿನ ಆರು ತಿಂಗಳಿಗೆ ನಿಮ್ಮ ಖಾತೆಯಲ್ಲಿ ಹಣ ಇರುವಂತೆ ನೋಡಿಕೊಳ್ಳಿ.

ಟಾಪ್ ನ್ಯೂಸ್

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

ಪ್ರಹ್ಲಾದ ಜೋಶಿ

Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ

Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹತ್ಯೆ…

Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…

Belagavi; It hurts a lot, I won’t be afraid even if a hundred CT Ravi comes: Lakshmi Hebbalkar

Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

Shivanna cinema in Vallarasu director’s film

N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.