‘ಕಂದಾಯ-ಪಿಂಚಣಿ ಅದಾಲತ್ ಅವಶ್ಯ’
Team Udayavani, Jul 28, 2018, 1:24 PM IST
ಬಂಟ್ವಾಳ : ಆಧುನಿಕ ಗಣಕೀಕರಣ ವ್ಯವಸ್ಥೆಯಲ್ಲಿ ಅನೇಕ ವ್ಯತ್ಯಾಸಗಳು ಆಗುತ್ತವೆ. ಇಂತಹ ತೊಂದರೆಗಳನ್ನು ನಿವಾರಿಸಿಕೊಳ್ಳಲು ಕಂದಾಯ ಅದಾಲತ್ ಅವಶ್ಯ ಎಂದು ಶಾಸಕ ರಾಜೇಶ್ ನಾೖಕ್ ಉಳಿಪ್ಪಾಡಿಗುತ್ತು ಹೇಳಿದರು. ಅವರು ಜು. 27ರಂದು ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ನಡೆದ ಪಾಣೆಮಂಗಳೂರು ಫಿರ್ಕಾ ವ್ಯಾಪ್ತಿಯ ಕಂದಾಯ ಮತ್ತು ಪಿಂಚಣಿ ಅದಾಲತ್ ಉದ್ಘಾಟಿಸಿ ಮಾತನಾಡಿದರು.
ಎಲ್ಲರಿಗೂ ಅದಾಲತ್‌ನ ಪ್ರಯೋಜನ ಮುಟ್ಟಬೇಕು. ಸರಕಾರದ ಯೋಜನೆಗಳು ಜನ ಸಾಮಾನ್ಯರಿಗೆ ಅದಾಲತ್ ವ್ಯವಸ್ಥೆಯಲ್ಲಿ ಸಮರ್ಪಕವಾಗಿ ತಲುಪಲು ಸಾಧ್ಯ. ಸರಕಾರದ ಪ್ರತಿ ಯೋಜನೆಯೂ ಜನಸಾಮಾನ್ಯನಿಗೆ ಮುಟ್ಟುವಲ್ಲಿ ಕೆಲಸ ಮಾಡುತ್ತೇನೆ. ಜನರ ಸಮಸ್ಯೆಗೆ ಸ್ಪಂದಿಸಿ, ಕಾನೂನು ಚೌಕಟ್ಟಿನಲ್ಲಿ ಉಪಯೋಗ ಆಗುವ ಕೆಲಸ ನಡೆಯಲಿ ಎಂದರು.ತಾ| ಕಚೇರಿ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿವೆ. ದೂರುಗಳು ಬಾರದಂತೆ ಕೆಲಸಗಳು ಆಗಬೇಕು. ಜನರಿಗೆ ಸವಲತ್ತುಗಳು ಅರ್ಹವಾಗಿ ಮುಟ್ಟಿಸಲು ಸರಕಾರಿ ಅಧಿಕಾರಿಗಳಿಂದ ಮಾತ್ರ ಸಾಧ್ಯ ಎಂದು ವಿವರಿಸಿದರು. ಪುರಸಭಾ ಅಧ್ಯಕ್ಷ ಪಿ. ರಾಮಕೃಷ್ಣ ಆಳ್ವ, ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಟಾಸ್ ಅಲಿ, ಜಿ.ಪಂ. ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ಮೊದಲಾದವರು ಮಾತನಾಡಿದರು.
ಜಿಲ್ಲಾ ಪಂಚಾಯತ್ ಸದಸ್ಯರಾದ ಕಮಲಾಕ್ಷಿ ಕೆ. ಪೂಜಾರಿ, ರವೀಂದ್ರ ಕಂಬಳಿ, ಬುಡಾ ಅಧ್ಯಕ್ಷ ಸದಾಶಿವ ಬಂಗೇರ, ತಾಲೂಕು ಪಂಚಾಯತ್ ಸದಸ್ಯರಾದ ಗಣೇಶ ಸುವರ್ಣ, ಯಶವಂತ ಪೊಳಲಿ, ಮಾಜಿ ಶಾಸಕ ಕೆ. ಪದ್ಮನಾಭ ಕೊಟ್ಟಾರಿ, ಕಳ್ಳಿಗೆ ಗ್ರಾ.ಪಂ. ಉಪಾಧ್ಯಕ್ಷ ಪುರುಷ ಎನ್. ಸಾಲ್ಯಾನ್, ಪುರಸಭಾ ಸದಸ್ಯರು, ವಿವಿಧ ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು ಉಪಸ್ಥಿತರಿದ್ದರು.
ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಸ್ವಾಗತಿಸಿ, ಪ್ರಭಾರ ಉಪತಹಶೀಲ್ದಾರ್ ಗ್ರೆಟ್ಟಾ ಮಸ್ಕರೇನಸ್, ಕಂದಾಯ ನಿರೀಕ್ಷಕ ಪಿ. ರಾಮ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಸದಾಶಿವ ಕೈಕಂಬ, ಸುಂದರ ಮತ್ತಿತರರು ಸಹಕರಿಸಿದರು.
ಸವಲತ್ತು ವಿತರಣೆ
ಅದಾಲತ್‌ನಲ್ಲಿ ರಾಷ್ಟ್ರೀಯ ಕುಟುಂಬ ಸಹಾಯಧನ-20 ಮಂದಿಗೆ 3.40 ಲಕ್ಷ ರೂ. ಚೆಕ್ ವಿತರಣೆ, ಅಂತ್ಯ ಸಂಸ್ಕಾರ ಪರಿಹಾರ-20 ಮಂದಿಗೆ 1 ಲಕ್ಷ ರೂ. ಚೆಕ್ ವಿತರಣೆ, ಪ್ರಾಕೃತಿಕ ವಿಕೋಪ ಪರಿಹಾರ-33 ಮಂದಿಗೆ 2.05 ಲಕ್ಷರೂ. ಚೆಕ್ ವಿತರಣೆ, ವಿಧವಾ ವೇತನ ಆದೇಶ ಪತ್ರ-19 ಮಂದಿಗೆ, ಅಂಗವಿಕಲ ವೇತನ-12 ಮಂದಿಗೆ, ಸಂಧ್ಯಾ ಸುರಕ್ಷಾ-22 ಮಂದಿಗೆ , ಮನಸ್ವಿನಿ-ಒಬ್ಬರಿಗೆ ವಿತರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Waqf Report: ಅಮಿತ್ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್ ರಿಜಿಜು ಮೂಲಕ ಸಲ್ಲಿಕೆ
Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ
ಮಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ
Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ
Train; ಗೋಮಟೇಶ್ವರ ಎಕ್ಸ್‌ಪ್ರೆಸ್ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.