ಮೊಳಕೆ ಬಂದ ಹೆಸರು ಕಾಳು ಸೇವಿಸಿ ಆರೋಗ್ಯ ವೃದ್ಧಿಸಿ
Team Udayavani, Feb 18, 2020, 5:07 AM IST
ಆಧುನಿಕ ಜೀವನ ಶೈಲಿಯ ಮಧ್ಯೆ ಆರೋಗ್ಯಕರ ಆಹಾರಗಳನ್ನು ಜನ ಮರೆತಿದ್ದಾರೆ. ಅದರಲ್ಲೂ ಇತ್ತೀಚಿನ ಕಾಲಘಟ್ಟದಲ್ಲಿ ಆರೋಗ್ಯಕರ ಆಹಾರಕ್ಕಿಂತ ಫಾಸ್ಟ್ ಫುಡ್‌ಗಳ ಹಾವಳಿಯೇ ಹೆಚ್ಚಾಗಿದೆ. ಪರಿಣಾಮ ಆರೋಗ್ಯ ವೃದ್ಧಿಸುವ ಸೊಪ್ಪು ತರಕಾರಿ, ಕಾಳುಗಳು ಮೂಲೆ ಸರಿದಿವೆ. ಅದರಲ್ಲೂ ಮೊಳಕೆ ಬಂದ ಕಾಳುಗಳ ಸೇವನೆಯಿಂದ ಆರೋಗ್ಯದ ದೃಷ್ಟಿಯಿಂದ ಎಷ್ಟು ಲಾಭವಿದೆ ಎಂದು ಹಲವರಿಗೆ ತಿಳಿದಿಲ್ಲ. ಮೊಳಕೆ ಕಾಳಲ್ಲಿ ಪ್ರೋಟಿನ್, ಫೈಬರ್, ವಿಟಮಿನ್ ಕಬ್ಬಿಣದ ಅಂಶ, ಕ್ಯಾಲ್ಸಿಯಂ ಹೀಗೆ ದೇಹಕ್ಕೆ ಬೇಕಾದ ಪೌಷ್ಟಿಕತೆ ಇರುತ್ತವೆ. ಆದ್ದರಿಂದ ಮೊಳಕೆ ಬಂದ ಕಾಳು ದೇಹಕ್ಕೆ ಒಳ್ಳೆಯದು. ಹೀಗೆ ಅನೇಕ ಆರೋಗ್ಯಕಾರಿ ಅಂಶಗಳಿರುವ ಮೊಳಕೆ ಕಾಳುಗಳಲ್ಲಿ ಹೆಸರು ಕಾಳು ಒಂದು. ಈ ಮೊಳಕೆ ಒಡೆದ ಹೆಸರು ಕಾಳು ಆರೋಗ್ಯಕ್ಕೆ ಎಷ್ಟು ಉಪಯುಕ್ತ? ಅದರ ಲಾಭಗಳೇನು? ಅದನ್ನು ಯಾಕೆ ಸೇವಿಸಬೇಕು ಅನ್ನೋದರ ಸಂಪೂರ್ಣ ಮಾಹಿತಿ ಇಲ್ಲಿದೆ.
ಜೀರ್ಣಶಕ್ತಿ ವೃದ್ಧಿಸುತ್ತೆ
ಹೆಸರು ಕಾಳನ್ನು ನೀರಿನಲ್ಲಿ ನೆನಸಿಟ್ಟು, ಬಳಿಕ ಮೊಳಕೆ ಬಂದ ಮೇಲೆ ಸೇವಿಸುವುದರಿಂದ ಜೀರ್ಣಶಕ್ತಿ ಉತ್ತಮವಾಗುತ್ತೆ. ಇದರಲ್ಲಿರೋ ಪೌಷ್ಟಿಕಾಂಶ ಜೀರ್ಣಕ್ರಿಯೆಯನ್ನು ಸರಾಗ ಮಾಡುತ್ತದೆ. ಅಲ್ಲದೆ ಫೈಬರ್ ಅಂಶವು ದೇಹದಲ್ಲಿ ಆಹಾರದ ಸಂಚಾರ ಸರಿಯಾಗಿ ಆಗುವಂತೆ ನೋಡಿಕೊಂಡು ಮಲಬದ್ಧತೆ ತೊಂದರೆಯನ್ನು ನಿವಾರಿಸುತ್ತದೆ.
ಹೃದಯದ ಆರೋಗ್ಯ ಕಾಪಾಡುತ್ತೆ
ಮೊಳಕೆ ಬಂದ ಹೆಸರು ಕಾಳು ತಿನ್ನುವುದರಿಂದ ಹೃದಯದ ಆರೋಗ್ಯ ಉತ್ತಮವಾಗುತ್ತದೆ. ಇದರಲ್ಲಿರೋ ಒಮೇಗಾ ಫ್ಯಾಟೀ ಆ್ಯಸಿಡ್ ದೇಹಕ್ಕೆ ಬೇಕಾದ ಕೊಬ್ಬಿನ ಅಂಶ ನೀಡಿ ರಕ್ತನಾಳದ ಆರೋಗ್ಯ ಕಾಪಾಡುತ್ತೆ. ಇದ ರಲ್ಲಿನ ಆ್ಯಂಟಿ ಇನ್ಪ$Éಮೇಟರಿ ಗುಣ ರಕ್ತನಾಳಗಳ ಮೇಲಿರೋ ಒತ್ತಡವನ್ನು ಕಡಿಮೆ ಮಾಡುತ್ತದೆ. ರಕ್ತ ಸಂಚಾರ ಹೆಚ್ಚಿಸಿ ದೇಹಕ್ಕೆ ಹೆಚ್ಚು ಆಕ್ಸಿಜನ್ ಸಿಗುವ ಹಾಗೆ ಮಾಡಿ ಸ್ಟ್ರೋಕ್, ಹೃದಯಾಘಾತ ಆಗದಂತೆ ನೋಡಿಕೊಳ್ಳು ತ್ತದೆ.
ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ
ಇದರಲ್ಲಿರುವ ವಿಟಮಿನ್ ಸಿ ದೇಹಕ್ಕೆ ಸೋಂಕು ಆಗದಂತೆ ತಡೆಯುತ್ತದೆ. ಇದರ ಜತೆ ವಿಟಮಿನ್ ಎ ಅಂಶ ಕೂಡ ಹೆಚ್ಚಾಗಿ ಇರುವುದರಿಂದ ದೇಹಕ್ಕೆ ಹೆಚ್ಚಿನ ಆ್ಯಂಟಿ ಆಕ್ಸಿಡೆಂಟ್ಸ್ ಸಿಗುವ ರೀತಿ ನಿಗಾವಹಿಸಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
ಕ್ಯಾನ್ಸರ್ ಬಾರದ ಹಾಗೆ ನೋಡಿಕೊಳ್ಳುತ್ತದೆ ವಿಟಮಿನ್ ಎ, ಸಿ, ಅಮಿನೋ ಆಸಿಡ್ಸ್ ಹಾಗೂ ಪ್ರೋಟಿನ್ ಅಂಶ ದೇಹದಲ್ಲಿ ಫ್ರೀ ರಾಡಿಕಲ್ಸ್ ಸೇರದ ಹಾಗೆ ನೋಡಿಕೊಳ್ಳುತ್ತದೆ. ದೇಹದಲ್ಲಿ ಆಗುವ ಹಲವು ಕ್ರಿಯೆಗಳ ಪರಿಣಾಮ ಫ್ರೀ ರಾಡಿಕಲ್ಸ್ ಉತ್ಪತ್ತಿ ಆಗುತ್ತದೆ. ಇದರಿಂದ ದೇಹಕ್ಕೆ ಕ್ಯಾನ್ಸರ್ ಸೆಲ್ಸ… ಸೇರುತ್ತದೆ. ಅಷ್ಟೇ ಅಲ್ಲದೆ ಸಾಕಷ್ಟು ಕಾಯಿಲೆ ಬರೋದಕ್ಕೆ ಇದು ಕಾರಣವಾಗುತ್ತದೆ. ಬೇಗ ಸುಸ್ತಾಗೋದು, ಕಣ್ಣು ಮಂಜಾಗು ವುದು, ಹೃದಯ ಸಂಬಂಧಿ ತೊಂದರೆ ಕಾಣಿಸಿಕೊಳ್ಳುತ್ತದೆ. ಆದ್ದರಿಂದ ಇಂಥ ತೊಂದರೆಗಳಿಂದ ದೂರವಿರಲು ಮೊಳಕೆ ಬಂದ ಹೆಸರು ಕಾಳನ್ನು ಸೇವಿಸಬೇಕು.
ಕಡಿಮೆ ತೂಕ
ಮೊಳಕೆ ಬಂದ ಹೆಸರು ಕಾಳಿನಲ್ಲಿ ಕ್ಯಾಲೋರೀಸ್ ಇಲ್ಲದ ಕಾರಣ ಇದನ್ನು ಎಷ್ಟು ತಿಂದರೂ ತೂಕ ಹೆಚ್ಚಾಗಲ್ಲ. ಬದಲಾಗಿ ತೂಕ ಕಡಿಮೆ ಆಗುತ್ತೆ. ಮೊಳಕೆ ಬಂದ ಹೆಸರು ಕಾಳನ್ನು ತಿನ್ನುವುದರಿಂದ ಇದರಲ್ಲಿ ಇರುವ ಫೈಬರ್ ದೇಹಕ್ಕೆ ಸೇರಿ ಹೊಟ್ಟೆ ತುಂಬುವ ಹಾಗೆ ಮಾಡುತ್ತೆ.
ಆದರ ಜತೆ ಪದೇ ಪದೆ ಹಸಿವಾಗದ ರೀತಿ ನೋಡಿಕೊಳ್ಳುತ್ತದೆ. ಹಾಗೆಯೇ ಸ್ಥೂಲಕಾಯ ಮತ್ತು ಮಧುಮೇಹ ಕಾಯಿಲೆ ಬಾರದಂತೆ ನೋಡಿಕೊಳ್ಳುತ್ತದೆ. ಪ್ರತಿನಿತ್ಯ ಹೆಸರು ಕಾಳನ್ನು ತಿನ್ನುವುದರಿಂದ ತ್ವಚೆಯ ಆರೋಗ್ಯ ಕೂಡ ಚೆನ್ನಾಗಿರುತ್ತದೆ. ಅಲ್ಲದೆ ತ್ವಚೆಗೆ ಕಾಂತಿಯನ್ನು ನೀಡುತ್ತದೆ. ಇದರಿಂದ ಆಕರ್ಷಕ ಸೌಂದರ್ಯವನ್ನು ಕೂಡ ನೀವು ಪಡೆಯಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.