ಸಂಚಾರ ಸಮಸ್ಯೆ ನಿರ್ವಹಣೆ ಹೈಡೆನ್ಸಿಟಿ ರಸ್ತೆಗಳ ಸಮೀಕ್ಷೆ


Team Udayavani, Jan 26, 2020, 5:14 AM IST

ras-14

ದೇಶದಲ್ಲಿ ಪ್ರಮುಖ ನಗರಗಳಲ್ಲಿ ಸಂಚಾರ ದಟ್ಟಣೆ ಸಮಸ್ಯೆ ಸಾಮಾನ್ಯವಾಗಿದೆ. ಇದಕ್ಕೆ ಪರಿಹಾರ ಕಂಡುಕೊಳ್ಳಲು ಹೈಡೆನ್ಸಿಟಿ ರಸ್ತೆಗಳ ಸಮೀಕ್ಷೆ ಪೂರಕವಾಗಬಲ್ಲದು. ಈ ನಿಟ್ಟಿನಲ್ಲಿ ಈ ಯೋಜನೆಯ ಲಾಭಗಳು ಏನು? ಇದು ಹೇಗೆ ಸಂಚಾರ ನಿರ್ವಹಣೆಗೆ ಪೂರಕವಾಗಬಲ್ಲದು ಎಂಬ ಕುತೂಹಲ ಅಂಶಗಳನ್ನು ಇಲ್ಲಿ ತಿಳಿಯಬಹುದಾಗಿದೆ.

ಮಂಗಳೂರು ನಗರ ವಿಸ್ತಾರಗೊಳ್ಳುತ್ತಿದೆ. ಅಷ್ಟೇ ವೇಗದಲ್ಲಿ ಸಂಚಾರ ದಟ್ಟಣೆ ಪ್ರಮಾಣ ಕೂಡ ಏರಿಕೆಯಾಗುತ್ತಿದೆ. ಸಂಚಾರ ದಟ್ಟಣೆ ಮಂಗಳೂರು ನಗರವನ್ನು ಇತ್ತೀಚೆಗೆ ಕಾಡುತ್ತಿರುವ ಪ್ರಮುಖ ಸಮಸ್ಯೆಯಾಗಿ ಗುರುತಿಸಿಕೊಂಡಿದೆ. ಈ ನಿಟ್ಟಿನಲ್ಲಿ ನಗರದಲ್ಲಿ ಅತೀ ಹೆಚ್ಚು ಸಂಚಾರ ದಟ್ಟಣೆ (ಹೈಡೆನ್ಸಿಟಿ) ರಸ್ತೆಗಳ ಸಮೀಕ್ಷೆ ನಡೆಸಿ ಅದರ ನಿರ್ವಹಣೆಗೆ ಪೂರಕ ಯೋಜನೆಗಳನ್ನು ರೂಪಿಸುವುದು ಸಮಸ್ಯೆ ಪರಿಹಾರದ ನಿಟ್ಟಿನಲ್ಲಿ ಪೂರಕವಾಗಬಹುದು.

ದೇಶದ ಪ್ರಮುಖ ನಗರಗಳಲ್ಲಿ ಸಂಚಾರದಟ್ಟಣೆಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಲ್ಲಿ ಈ ರೀತಿಯ ಸಮೀಕ್ಷೆಗಳನ್ನು ನಡೆಸಲಾಗುತ್ತದೆ. ನಮ್ಮದೇ ರಾಜ್ಯದ ಉದಾಹರಣೆಯನ್ನು ತೆಗೆದುಕೊಂಡರೆ ಬೆಂಗಳೂರಿನಲ್ಲಿ ಕಳೆದ ವರ್ಷ ನಗರದ ಪ್ರಮುಖ 12 ಹೈಡೆನ್ಸಿಟಿ ರಸ್ತೆಗಳಲ್ಲಿ ಸಮೀಕ್ಷೆಗಳನ್ನು ನಡೆಸಿ ಅದರ ವರದಿಗಳನ್ನು ಆಧರಿಸಿ ಸಂಚಾರ ದಟ್ಟಣೆ ಸಮಸ್ಯೆ ನಿರ್ವಹಣೆಗೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಸಮೀಕ್ಷೆಯ ವರದಿಗಳು ಬಂದ ಅನಂತರ ಅದನ್ನು ಸಂಬಂಧಪಟ್ಟ ನಗರಾಡಳಿತ ಸಂಸ್ಥೆ ( ಪ್ರಮುಖವಾಗಿ ಮಹಾನಗರ ಪಾಲಿಕೆ), ಸಂಚಾರ ಪೊಲೀಸ್‌ ವಿಭಾಗ ಹಾಗೂ ತಜ್ಞರು ಪರಿಶೀಲಿಸುತ್ತಾರೆ. ಅದರ ಆಧಾರದಲ್ಲಿ ಮುಂದಿನ ಕಾರ್ಯಯೋಜನೆ ಸಿದ್ಧಗೊಳ್ಳುತ್ತದೆ. ಪ್ರಮುಖವಾಗಿ ನಿರ್ದಿಷ್ಟ ರಸ್ತೆಯಲ್ಲಿ ಯಾವುದೆಲ್ಲಾ ಕಡೆಗಳಲ್ಲಿ ವಾಹನ ನಿಲುಗಡೆ ನಿಷೇಧಿಸುವ ಅಗತ್ಯವಿದೆ, ಎಲ್ಲೆಲ್ಲಿ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಲು ಸಾಧ್ಯವಿದೆ, ಸೂಚನಾ ಫಲಕಗಳ ಅಳವಡಿಕೆ, ಸ್ಕೈವಾಕ್‌, ಅಂಡರ್‌ಪಾಸ್‌ ನಿರ್ಮಾಣದ ಆವಶ್ಯಕತೆ, ರಸ್ತೆ ವಿಭಾಜಕಗಳ ಅಳವಡಿಕೆ, ಸಿಗ್ನಲ್‌ ದೀಪಗಳ ಅಳವಡಿಕೆ, ಪಾದಚಾರಿಗಳ ಮಾರ್ಗ ಉನ್ನತೀಕರಣ, ಬಸ್‌ನಿಲ್ದಾಣಗಳ ನಿರ್ಮಾಣ, ಆಟೋರಿಕ್ಷಾ ಗಳ ಪಾರ್ಕಿಂಗ್‌ಗೆ ಅವಕಾಶ, ರಸ್ತೆ ಉಬ್ಬು ನಿರ್ಮಾಣ, ಯೂಟರ್ನ್ ವ್ಯವಸ್ಥೆ, ಜಂಕ್ಷನ್‌ಗಳ ವಿಸ್ತೀರ್ಣ, ವೃತ್ತಗಳ ನಿರ್ಮಾಣಕ್ಕೆ ಅವಕಾಶ ಸಹಿತ ಸುಗಮ ಸಂಚಾರಕ್ಕೆ ಪೂರಕವಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತದೆ.

ಕೆಲವೊಂದು ಸಮಸ್ಯೆಗಳು
ಮಂಗಳೂರು ನಗರದಲ್ಲಿ ಸಂಚಾರ ಸುವ್ಯವಸ್ಥೆಗೆ ಪೂರಕವಾಗಿ ಸೌಲಭ್ಯಗಳನ್ನು ಉನ್ನತೀಕರಣಗೊಳಿಸಲಾಗುತ್ತಿದೆ. ದ್ವಿಪಥ ರಸ್ತೆಗಳು ಚತುಷ್ಪಥವಾಗಿವೆ. ಡಾಮರು ರಸ್ತೆಗಳು ಕಾಂಕ್ರೀಟ್‌ ಕಾಮಗಾರಿಗೊಂಡಿವೆ. ಆದರೂ ಸಮಸ್ಯೆ ಹಾಗೆಯೇ ಉಳಿದುಕೊಂಡಿದ್ದು ಪರಿಣಾಮಕಾರಿ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುತ್ತಿಲ್ಲ. ಆದುದರಿಂದ ಸೌಲಭ್ಯಗಳ ಉನ್ನತೀಕರಣದ ಜತೆಗೆ ಸಂಚಾರ ವ್ಯವಸ್ಥೆ ನಿರ್ವಹಣೆಗೆ ವ್ಯೂಹಾತ್ಮಕ ಕಾರ್ಯಯೋಜನೆಗಳ ಬಗ್ಗೆಯೂ ಚಿಂತನೆ ನಡೆಸುವ ಆವಶ್ಯಕತೆ ಇದೆ.

ಟ್ರಾಫಿಕ್‌ ಸಮಸ್ಯೆ
ಮಂಗಳೂರಿನಲ್ಲಿ ಹೃದಯ ಭಾಗದ ಪ್ರಮುಖ ರಸ್ತೆಗಳನ್ನು ಪರಿಗಣನೆಗೆ ತೆಗೆದುಕೊಂಡರೆ 100ಕ್ಕೂ ಅಧಿಕ ಜಂಕ್ಷನ್‌ಗಳಿವೆ. 500ಕ್ಕೂ ಅಧಿಕ ಕ್ರಾಸಿಂಗ್‌ಗಳಿವೆ. ಕ್ರಾಸಿಂಗ್‌ಗಳು ವ್ಯವಸ್ಥಿತವಾಗಿಲ್ಲ. ವಾಹನ ಚಾಲಕರ ಆತುರ, ಧಾವಂತ, ನಿರ್ಲಕ್ಷ್ಯದ ಚಾಲನೆ ಒಂದೆಡೆಯಾದರೆ ರಸ್ತೆ ಪಕ್ಕದಲ್ಲಿ ವಾಹನಗಳ ಪಾರ್ಕಿಂಗ್‌ ಸಮಸ್ಯೆಯನ್ನು ಇನ್ನಷ್ಟು ಉಲ್ಬಣಗೊಳ್ಳುವಂತೆ ಮಾಡಿದೆ.

ನಗರದಲ್ಲಿ ಎಲ್ಲೆಂದರಲ್ಲಿ ವಾಹನಗಳನ್ನು ಪಾರ್ಕಿಂಗ್‌ ಮಾಡಿ ಹೋಗಲಾಗುತ್ತದೆ. ಇದರಿಂದಾಗಿ ನಗರದಲ್ಲಿ ಆಗಾಗ ಟ್ರಾಫಿಕ್‌ ಜಾಮ್‌ ಕಿರಿಕಿರಯನ್ನು ಅನುಭವಿಸುದ್ದಂಟೂ ಈ ಹಿನ್ನೆಲೆಯಲ್ಲಿ ಕಠಿನ ಕ್ರಮಕ್ಕೆ ಆದೇಶಿಸಲಾಗಿತ್ತು. ಮತ್ತು ಪೊಲೀಸ್‌ ಫೋನ್‌-ಇನ್‌ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಕಠಿನ ಕ್ರಮ ಜರಗಿಸುವಂತೆ ವಿನಂತಿಸಿಕೊಂಡಿದ್ದರು.

ಎಲ್ಲ ಕಡೆ ಪೊಲೀಸ್‌ ಸಿಬಂದಿ ನಿಯೋಜಿಸಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಹೈಡೆನ್ಸಿಟಿ ರಸ್ತೆಗಳಲ್ಲಿ ಸಮರ್ಪಕವಾದ ಸಮೀಕ್ಷೆಯೊಂದನ್ನು ನಡೆಸಿ ಸಂಚಾರದಟ್ಟಣೆಗೆ ಅವಶ್ಯವಿರುವ ಪೂರಕ ಕ್ರಮಗಳನ್ನು ಕೈಗೊಂಡರೆ ಇದು ಹೆಚ್ಚು ಪರಿಣಾಮಕಾರಿಯಾಗಬಲ್ಲದು.

ಅಧ್ಯಯನ ಹೇಗಿರುತ್ತದೆ
ಸಂಚಾರ ತಜ್ಞರು, ತಾಂತ್ರಿಕ ತಜ್ಞರು, ಸಂಚಾರ ವಿಭಾಗದ ಅಧಿಕಾರಿಗಳು ಸಮೀಕ್ಷೆ ತಂಡದಲ್ಲಿರುತ್ತಾರೆ. ರಸ್ತೆಯಲ್ಲಿ ಸಂಚಾರ ನಡೆಸುವ ವಾಹನಗಳ ಸಂಖ್ಯೆ, ಸಂಚಾರ ದಟ್ಟಣೆ, ಪಾದಚಾರಿಗಳ ಸಂಚಾರ, ಆರ್ಥಿಕ ವಹಿವಾಟು ಸಹಿತ ನಿರ್ದಿಷ್ಟ ಅಂಶಗಳನ್ನು ಸಮೀಕ್ಷೆಗೆ ಪರಿಗಣಿಸಲಾಗುತ್ತದೆ. ನಗರದೊಳಗೆ ಅತಿ ಹೆಚ್ಚು ವಾಹನದಟ್ಟಣೆ ಹಾಗೂ ಸಂಚಾರ ಸಮಸ್ಯೆ ಇರುವ ರಸ್ತೆಯನ್ನು ಆಯ್ದುಕೊಳ್ಳಲಾಗುತ್ತದೆ. ರಸ್ತೆಯಲ್ಲಿ ಸಂಚರಿಸುವ ವಾಹನಗಳ ಸಂಖ್ಯೆ, ಅವುಗಳ ವೇಗ, ಪಾದಚಾರಿ ಮಾರ್ಗ, ಬೀದಿ ದೀಪಗಳು, ನೀರು ನಿಲ್ಲುವ ಸ್ಥಳ, ಸುಗಮ ಸಂಚಾರಕ್ಕೆ ತೊಡಕಾಗುವ ಅಂಶಗಳನ್ನು ಸಮೀಕ್ಷೆಯಲ್ಲಿ ಗುರುತಿಸಲಾಗುತ್ತದೆ. ಜತೆಗೆ ಈ ರಸ್ತೆಯಲ್ಲಿ ಸಂಭವಿಸುವ ಅಪಘಾತಗಳ ಸಂಖ್ಯೆ, ಪಾದಚಾರಿ ಮಾರ್ಗ ಇದ್ದರೂ ಜನರು ಯಾಕೆ ರಸ್ತೆಯನ್ನು ಬಳಸುತ್ತಾರೆ ಎಂಬ ಅಂಶವೂ ಇದರಲ್ಲಿ ಒಳಗೊಳ್ಳುತ್ತದೆ.

ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ತಂತ್ರಜ್ಞಾನ
ಸಂಚಾರ ದಟ್ಟಣೆ ನಿರ್ವಹಣೆಗೆ ಪ್ರಮುಖ ನಗರಗಳಲ್ಲಿ ಸಂಚಾರ ಪೊಲೀಸರು ಇತ್ತೀಚೆಗೆ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ (ಕೃತಕ ಬುದ್ಧಿಮತ್ತೆ) ತಂತ್ರಜ್ಞಾನದ ಮೊರೆ ಹೋಗುತ್ತಿದ್ದಾರೆ. ನಗರದ ಪ್ರಮುಖ ಸಿಗ್ನಲ್‌ಗ‌ಳಲ್ಲಿ ಈ ರೀತಿಯ ತಂತ್ರಜ್ಞಾವನ್ನು ಅಳವಡಿಸಲಾಗುತ್ತಿದೆ. ಅವುಗಳ ನೆರವಿನೊಂದಿಗೆ ಸಿಗ್ನಲ್‌ನಲ್ಲಿರುವ ಕೆಮರಾಗಳು ಸಂಚಾರದಟ್ಟಣೆಗೆ ಅನುಗುಣವಾಗಿ ಸ್ವಯಂ ನಿರ್ಧಾರ ತೆಗೆದುಕೊಳ್ಳುತ್ತವೆ. ವಾಹನ ದಟ್ಟಣೆಗೆ ಅನುಗುಣವಾಗಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡುತ್ತವೆ. ಬೆಂಗಳೂರಿನಲ್ಲಿ ಸುಮಾರು 400 ಸಿಗ್ನಲ್‌ಗ‌ಳಲ್ಲಿ ಈ ರೀತಿಯ ವ್ಯವಸ್ಥೆಯನ್ನು ಅಳವಡಿಸಲು ನಿರ್ಧರಿಸಲಾಗಿದ್ದು ಪ್ರಾಯೋಗಿಕವಾಗಿ 35 ಜಂಕ್ಷನ್‌ಗಳಲ್ಲಿ ಈಗಾಗಲೇ ಅಳವಡಿಕೆಯಾಗಿವೆ.

- ಕೇಶವ ಕುಂದರ್‌ 

ಟಾಪ್ ನ್ಯೂಸ್

1-jaya

Legend; ಬಹುಭಾಷಾ ಪ್ರಖ್ಯಾತ ಹಿನ್ನೆಲೆ ಗಾಯಕ ಪಿ.ಜಯಚಂದ್ರನ್ ವಿಧಿವಶ

Mangaluru ಆನ್‌ಲೈನ್‌ ವಂಚನೆ: ಕೇರಳದ ಯುವಕ ಸೆರೆ

Mangaluru ಆನ್‌ಲೈನ್‌ ವಂಚನೆ: ಕೇರಳದ ಯುವಕ ಸೆರೆ

1-bel

Nagaland; ವಾಹನ ಕಂದಕಕ್ಕೆ ಬಿದ್ದು ಬೆಳಗಾವಿ ಯೋಧ ಹುತಾತ್ಮ

Mangaluru: ಅಂಗಡಿ ಕೆಲಸಗಾರನಿಂದಲೇ ಹಣ, ಮೊಬೈಲ್‌ ಕಳವು

Mangaluru: ಅಂಗಡಿ ಕೆಲಸಗಾರನಿಂದಲೇ ಹಣ, ಮೊಬೈಲ್‌ ಕಳವು

Hiriydaka: ಬೈಕ್‌ ಮರಕ್ಕೆ ಢಿಕ್ಕಿ: ಯುವಕ ಸಾವು

Hiriydaka: ಬೈಕ್‌ ಮರಕ್ಕೆ ಢಿಕ್ಕಿ: ಯುವಕ ಸಾವು

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

1-jaya

Legend; ಬಹುಭಾಷಾ ಪ್ರಖ್ಯಾತ ಹಿನ್ನೆಲೆ ಗಾಯಕ ಪಿ.ಜಯಚಂದ್ರನ್ ವಿಧಿವಶ

Mangaluru ಆನ್‌ಲೈನ್‌ ವಂಚನೆ: ಕೇರಳದ ಯುವಕ ಸೆರೆ

Mangaluru ಆನ್‌ಲೈನ್‌ ವಂಚನೆ: ಕೇರಳದ ಯುವಕ ಸೆರೆ

1-bel

Nagaland; ವಾಹನ ಕಂದಕಕ್ಕೆ ಬಿದ್ದು ಬೆಳಗಾವಿ ಯೋಧ ಹುತಾತ್ಮ

Mangaluru: ಅಂಗಡಿ ಕೆಲಸಗಾರನಿಂದಲೇ ಹಣ, ಮೊಬೈಲ್‌ ಕಳವು

Mangaluru: ಅಂಗಡಿ ಕೆಲಸಗಾರನಿಂದಲೇ ಹಣ, ಮೊಬೈಲ್‌ ಕಳವು

Hiriydaka: ಬೈಕ್‌ ಮರಕ್ಕೆ ಢಿಕ್ಕಿ: ಯುವಕ ಸಾವು

Hiriydaka: ಬೈಕ್‌ ಮರಕ್ಕೆ ಢಿಕ್ಕಿ: ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.