ಮೌಲ್ಯಗಳು ಬದುಕಿನ ಆಸ್ತಿ
Team Udayavani, Sep 23, 2019, 5:46 AM IST
ವ್ಯಕ್ತಿಯ ಜೀವನ, ಸಮಾಜ, ಅರ್ಥವ್ಯವಸ್ಥೆ, ರಾಜಕಾರಣಗಳೆಲ್ಲವೂ ಮೌಲ್ಯಾ ಧಾರಿತ ವಾಗಿ ರಬೇಕು. ಮೌಲ್ಯಗಳ ಅಳವಡಿಕೆಯಿಂದ ವ್ಯಕ್ತಿಯ ಗೌರವ, ಘನತೆ ವೃದ್ಧಿಸಿ, ಚಿನ್ನದಂತೆ ಪರಿಶುದ್ಧಗೊಂಡು “ಬದುಕು ಬಂಗಾರ’ವಾಗುವುದು. ಹಾಗೆ ವ್ಯಕ್ತಿತ್ವ ಸಂಪೂರ್ಣವಾಗಿ ವಿಕಾಸಗೊಳ್ಳುವುದು.
ಮೌಲ್ಯಗಳು ನಮ್ಮ ಬದುಕಿನಲ್ಲಿ ಆಸ್ತಿ ಇದ್ದಂತೆ. ಸಂಸ್ಕಾರ ಮತ್ತು ಸಂಸ್ಕೃತಿಗಳು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಮಹತ್ವದ ಮೌಲ್ಯಗಳು. ಉತ್ತಮ ಜೀವನ ನಡೆಸಲು ಇವೆರಡೂ ಅತೀ ಅಗತ್ಯ.
ನ್ಯಾಯ ಮತ್ತು ಪ್ರಾಮಾಣಿಕತನಕ್ಕಿರುವ ಪ್ರಾಧಾನ್ಯ ಹಾಗೂ ವ್ಯವಹಾರದಲ್ಲಿ ಅವುಗಳ ಬಳಕೆ ನಮ್ಮ ವ್ಯಕ್ತಿತ್ವವನ್ನು ಸೂಚಿಸುತ್ತವೆ. ಮೌಲ್ಯಗಳು ಎಲ್ಲ ಜೀವಿಗಳಲ್ಲಿ ಅಂತರ್ಗತವಾಗಿದ್ದು, ಅವರ ನೈಜ ಸ್ವಭಾವವೇ ಆಗಿರುತ್ತದೆ.
ವ್ಯಕ್ತಿಯ ಜೀವನ, ಸಮಾಜ, ಅರ್ಥವ್ಯವಸ್ಥೆ, ರಾಜಕಾರಣಗಳೆಲ್ಲವೂ ಮೌಲ್ಯಾ ಧಾರಿತ ವಾಗಿ ರಬೇಕು. ಮೌಲ್ಯಗಳ ಅಳವಡಿಕೆಯಿಂದ ವ್ಯಕ್ತಿಯ ಗೌರವ, ಘನತೆ ವೃದ್ಧಿಸಿ, ಚಿನ್ನದಂತೆ ಪರಿಶುದ್ಧಗೊಂಡು “ಬದುಕು ಬಂಗಾರ’ವಾಗುವುದು. ಹಾಗೆ ವ್ಯಕ್ತಿತ್ವ ಸಂಪೂರ್ಣವಾಗಿ ವಿಕಾಸಗೊಳ್ಳುವುದು.
ಮೌಲ್ಯವರ್ಧನೆ ಎಂದರೆ, ವ್ಯಕ್ತಿಗಳಲ್ಲಿ ನೈತಿಕ ಸದ್ಗುಣಗಳಾದ ಶ್ರದ್ಧೆ, ನಿಷ್ಠೆ, ಪ್ರಾಮಾಣಿಕತೆ, ಸಹನೆ, ಅನುಕಂಪ, ಸತ್ಯ, ನ್ಯಾಯ, ಸಚ್ಚಾರಿತ್ರ್ಯ, ಅಹಿಂಸೆ, ಸಹಕಾರ, ಸಹೋದರತ್ವ, ಸಹಿಷ್ಣುತಾಭಾವ ಇವೇ ಮೊದಲಾದ ಗುಣಗಳನ್ನು ಬೆಳೆಸುವುದಾಗಿದೆ.
ಜೀವನದ ಗುರಿ ನಿರ್ಧರಿಸಲು ಪೂರಕ
ಮೌಲ್ಯಗಳಲ್ಲಿ ಮಾನವೀಯ, ಸಾಮಾಜಿಕ, ಕೌಟುಂಬಿಕ, ಶೈಕ್ಷಣಿಕ, ವ್ಯಕ್ತಿಗತ, ಆರ್ಥಿಕ, ಧಾರ್ಮಿಕ, ಐತಿಹಾಸಿಕ, ಬೌದ್ಧಿಕ, ಆಧ್ಯಾತ್ಮಿಕ, ನೈತಿಕ ಇತ್ಯಾದಿ ಹಲವು ವಿಧಗಳಿವೆ. ವರ್ತನೆಯ ನೈತಿಕತೆಗೆ ಸಂಬಂಧಿಸಿದಂತೆ ಯಾವುದು ಸರಿ; ಯಾವುದು ತಪ್ಪು, ಯಾವುದಕ್ಕೆ ಎಷ್ಟು ಪ್ರಾಮುಖ್ಯ ನೀಡಬೇಕು, ಜೀವನದ ಗುರಿ ಏನಾಗಿರಬೇಕು ಮುಂತಾದವನ್ನು ನಿರ್ಧರಿಸುವುದರಲ್ಲಿ ಮೌಲ್ಯಗಳು ನಿರ್ಣಾಯಕ ಪಾತ್ರ ವಹಿಸುತ್ತವೆ.
ಭಾಂದವ್ಯ ವೃದ್ಧಿ: ಮೌಲ್ಯಗಳು ನಮ್ಮ ಬದುಕಿಗೆ ಒಂದು ಸುಂದರ ರೂಪು ಕೊಡುವಲ್ಲಿ ಬಹಳ ಮುಖ್ಯ ಪಾತ್ರ ವಹಿಸುತ್ತವೆ. ಜೀವನದಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲು ಮೌಲ್ಯಗಳು ಸಹಕಾರಿ. ಮೌಲ್ಯಗಳ ಅಳವಡಿಕೆಯಿಂದ ಕುಟುಂಬ, ಸಮಾಜದಲ್ಲಿ ಭಾಂದವ್ಯ ವೃದ್ಧಿಯಾಗುತ್ತದೆ. ಆದ್ದರಿಂದಲೇ ಮೌಲ್ಯಗಳನ್ನು ಬದುಕಿನ ಆಧಾರ ಸ್ತಂಭಗಳಿದ್ದಂತೆ ಎನ್ನುತ್ತೇವೆ. ಹಾಗೇ ನಮ್ಮ ಸಂಸ್ಕೃತಿಯ ಅವಿಭಾಜ್ಯ ಅಂಗ ಕೂಡ ಹೌದು. ಮೌಲ್ಯಗಳಿಲ್ಲದ ಜೀವನ ವ್ಯರ್ಥ. ನಾವು ಜೀವನದಲ್ಲಿ ಅಳವಡಿಸಿಕೊಳ್ಳುವ ನೀತಿ-ನಿಯಮ, ಆದರ್ಶ, ಶಿಸ್ತು, ಸಂಸ್ಕಾರ, ಮಾನವೀಯ ಗುಣ, ಸದಾಚಾರ, ಉತ್ತಮ ನಡವಳಿಕೆಗಳೇ ಮೌಲ್ಯಗಳಾಗಿವೆ. ಆದರೆ ಜೀವನದಲ್ಲಿ ಈ ಮೌಲ್ಯಗಳನ್ನು ಎಷ್ಟರ ಮಟ್ಟಿಗೆ ಅನುಸರಿಸುತ್ತೇವೆ ಎನ್ನುವುದು ಮುಖ್ಯ.
ನೆಮ್ಮದಿಯ ಮೂಲ ಸೂತ್ರ
ಐಶ್ವರ್ಯ ಸುಖವನ್ನು ನೀಡಬಹುದೇ ವಿನಾ ನೆಮ್ಮದಿಯನ್ನಲ್ಲ ಎನ್ನುವ ಮಾತಿದೆ. ಬೇಕಾದಷ್ಟು ಹಣ, ಶ್ರೀಮಂತಿಕೆ ಇದ್ದರೆ ನಮ್ಮ ಬಯಕೆಗಳನ್ನು ಸುಲಭವಾಗಿ ಈಡೇರಿಸಿಕೊಳ್ಳಬಹುದು. ಅವುಗಳಿಂದ ನಮಗೆ ನೆಮ್ಮದಿ ಅಥವಾ ಮನಃಶಾಂತಿ ಲಭಿಸಲಾರದು. ಆದರೆ ನೈತಿಕ ಮೌಲ್ಯಗಳನ್ನು ಅಳವಡಿಸಿಕೊಂಡರೆ ಅವುಗಳು ನಾವು ದಿಕ್ಕುತಪ್ಪದಂತೆ ಕಾಯುತ್ತವೆ. ಇದು ನೆಮ್ಮದಿ ಲಭಿಸಲು ಪೂರಕ. ಅದಕ್ಕಾಗಿಯೇ ಹಿರಿಯರು ನೈತಿಕ ಮೌಲ್ಯಗಳೇ ಬದುಕಿನ ನೆಮ್ಮದಿಯ ಮೂಲ ಸೂತ್ರಗಳು ಎಂದಿದ್ದಾರೆ.
ಮೌಲ್ಯಗಳನ್ನು ಅಂತರ್ಗತ ಮಾಡಿ
ಉತ್ತಮ ಜ್ಞಾನ ಇದ್ದರೆ ಜೀವನ ಸಮೃದ್ಧವಾಗಬಹುದು. ಶ್ರದ್ಧೆ, ಪ್ರಾಮಾಣಿಕತೆ, ಆತ್ಮವಿಶ್ವಾಸ, ಕಠಿನ ಪರಿಶ್ರಮ ಮತ್ತು ನಿಶ್ಚಿತ ಗುರಿಯಿದ್ದಲ್ಲಿ ಮಾತ್ರವೇ ಬಾಳಿನಲ್ಲಿ ಯಶಸ್ಸು ಸಾಧಿಸಬಹುದು. ಹಾಗಾಗಿ ತೋರ್ಪಡಿಕೆಗೆ ಮೌಲ್ಯಗಳನ್ನು ಅಳವಡಿಸಿಕೊಳ್ಳುವ ಬದಲು ಅಂತರ್ಗತ ಮಾಡಿಕೊಳ್ಳಬೇಕು.
ದುರಭ್ಯಾಸಗಳಿಂದ ದೂರವಿರಲು ಸಹಕಾರಿ
ಪ್ರತಿಯೊಬ್ಬನ ವರ್ತನೆ, ವ್ಯಕ್ತಿತ್ವದಿಂದ ಆತನ ಜೀವನ ಮೌಲ್ಯ ನಿರ್ಧರಿ ಸಲಾಗು ತ್ತದೆ ಅಥವಾ ವ್ಯಕ್ತವಾಗುತ್ತದೆ. ನಾವು ಸಮಾಜದಲ್ಲಿ ಸುಖವಾಗಿದ್ದೇವೋ ಇಲ್ಲವೋ ಎನ್ನುವುದನ್ನು ನಿರ್ಧರಿಸುವುದು ನಮ್ಮ ವೈಯಕ್ತಿಕ ಮೌಲ್ಯ. ಅಷ್ಟೇ ಅಲ್ಲದೆ, ನಮ್ಮನ್ನು ಮತ್ತು ನಮ್ಮ ಸ್ನೇಹಿತರನ್ನೂ ಇತರರು ಅಳೆಯುವುದು, ನಮ್ಮ ವ್ಯಕ್ತಿತ್ವವನ್ನು ಸಮಾಜ ಗುರುತಿಸುವುದು ವೈಯಕ್ತಿಕ ಮೌಲ್ಯಗಳ ಆಧಾರದಿಂದಲೇ. ನಮ್ಮ ನೆಲೆ ಮತ್ತು ಒಲವುಗಳನ್ನು ತಿಳಿಯಪಡಿಸುವುದು ಈ ಮೌಲ್ಯಗಳು.
ಮೌಲ್ಯಗಳನ್ನು ನಾವು ಅಂತರ್ಗತ ಮಾಡಿಕೊಂಡಾಗ ಅದು ಶಕ್ತಿಯುತ ವಾಗುವುದು. ಅನುಭವವು ನಾವು ನಂಬಿದ ಮೌಲ್ಯಗಳನ್ನು ದೃಢಪಡಿ ಸುತ್ತ ಹೋಗುತ್ತವೆ. ನಾವು ಮೌಲ್ಯಗಳನ್ನು ಆಚರಣೆಗೆ ತರಬೇಕು. ಆಗ ಮಾತ್ರ ಜನರು ನಮ್ಮನ್ನು ಗುರುತಿಸುತ್ತಾರೆ ಮತ್ತು ಅನುಸರಿಸು ತ್ತಾರೆ. ಮೌಲ್ಯಗಳು ನಮ್ಮಲ್ಲಿ ಸಕಾರಾತ್ಮಕ ಶಕ್ತಿ ಬೆಳೆಯಲು ಮತ್ತು ದುರಭ್ಯಾಸಗಳಿಂದ ದೂರವಿರಲು ಸಹಕಾರಿಯಾಗಿವೆ. ವ್ಯಕ್ತಿ ಗತ ಗುಣವಾಗಿ ಮೌಲ್ಯಗಳನ್ನು ದೈನಂದಿನ ಜೀವನದಲ್ಲಿ ಅಳವಡಿಸಕೊಂಡರೆ ಅದರಿಂದ ಸಾಮಾಜಿಕ ಸ್ಥಾನ-ಮಾನ ವೃದ್ಧಿಸುವುದು.
-ಗಣೇಶ ಕುಳಮರ್ವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.