ಪರಿಶ್ರಮ, ಕ್ರಿಯಾಶೀಲ ಗುಣದಿಂದ ಮಹಿಳೆ ಸಶಕ್ತ

Team Udayavani, Nov 26, 2018, 2:25 PM IST

26-november-15.gif

ಸ್ವತಂತ್ರವಾಗಿ ಬದುಕು ರೂಪಿಸಿಕೊಳ್ಳಬೇಕು ಎನ್ನುವ ಹಂಬಲ, ಛಲ, ಧೈರ್ಯ, ಸತತ ಪರಿಶ್ರಮ, ಶ್ರದ್ಧೆಯಿಂದ ಮಹಿಳೆ ಇಂದು ಸಮಾಜದಲ್ಲಿ ಗೌರವ ಪಡೆಯುವಂತಾಗಿದೆ. ಇಂದು ಹಲವಾರು ಕ್ಷೇತ್ರಗಳಲ್ಲಿ ಮಹಿಳೆ ಪುರುಷನನ್ನೇ ಮೀರಿ ನಿಂತಿದ್ದಾಳೆ. 1991ರ ಆರ್ಥಿಕ ನೀತಿಗಳಲ್ಲಿನ ಬದಲಾವಣೆಯಿಂದಾಗಿ ಮಹಿಳೆ ಮಾಹಿತಿ ತಂತ್ರಜ್ಞಾನ ಉದ್ಯಮದಲ್ಲಿಯೂ ತನ್ನನ್ನು ಕಂಡು ಕೊಂಡಿದ್ದಾಳೆ. ಅದು ಕೇವಲ ಉದ್ಯೋಗವನ್ನಷ್ಟೇ ಸೃಷ್ಟಿಸಿಲ್ಲ, ಜತೆಗೆ ಮಹಿಳೆ ಪುರುಷನಿಗೆ ಸಮಾನವಾಗಿ ಯಾವುದೇ ಕ್ಷೇತ್ರದಲ್ಲಿ, ಯಾವುದೇ ಸಮಯದಲ್ಲಿ ಕೆಲಸ ಮಾಡಲು ಅರ್ಹಳು ಎಂಬುದನ್ನು ನಿರೂಪಿಸಿದ್ದಾಳೆ.

ಹಿಂದೆ ಮಕ್ಕಳ ಲಾಲನೆ-ಪಾಲನೆ, ಮನೆ ಕೆಲಸದಲ್ಲಿ ಮಹಿಳೆಯರ ಸಮಯ ಕಳೆದು ಹೋಗುತ್ತಿತ್ತು. ಆದರೆ ಇಂದು ಮಹಿಳೆ ಕುಟುಂಬ ನಿರ್ವಹಣೆಯ ಆದ್ಯತೆಯ ಜತೆಗೆ ಕಚೇರಿ ಕೆಲಸಗಳನ್ನೂ ನಾಜೂಕಾಗಿ ನಿಭಾಯಿಸುವ ಚಾಕಚಕ್ಯತೆ ಮೆರೆದಿದ್ದಾಳೆ. ಸಾಮಾಜಿಕ, ಧಾರ್ಮಿಕ, ರಾಜಕೀಯ ಮತ್ತು ಆರ್ಥಿಕವಾಗಿ ಮಹಿಳೆ ಸಬಲಳಾಗುತ್ತಿದ್ದಾಳೆ ಎನ್ನುವುದಕ್ಕೆ ಹಲವಾರು ಉದಾಹರಣೆಗಳು ಸಾಕ್ಷಿಯಾಗಿವೆ. ಬುದ್ಧಿವಂತಿಕೆ, ಪರಿಶ್ರಮ, ಕ್ರೀಯಾಶೀಲ ಗುಣದಿಂದ ಜೀವನದ ಪ್ರತಿಯೊಂದು ಸಮಸ್ಯೆಯನ್ನೂ ಪರಿಹರಿಸಿಕೊಳ್ಳುವ ಶಕ್ತಿ ತನ್ನಲ್ಲೂ ಇದೆ ಎಂದು ಮಹಿಳೆ ತೋರಿಸಿಕೊಟ್ಟಿದ್ದಾಳೆ. ಜತೆಗೆ ವೃತ್ತಿ, ಸಂಸಾರ, ಸಂಘಟನೆ, ನಾಯಕತ್ವ ಹೀಗೆ ಎಲ್ಲವನ್ನೂ ಸಮರ್ಥವಾಗಿ ನಿಭಾಯಿಸಬಲ್ಲೆ ಎಂದು ತೋರಿಸಿಕೊಟ್ಟಿದ್ದಾಳೆ.

ಆಧುನಿಕರಣದ ಫ‌ಲವಾಗಿ ಇಂದು ಮಹಿಳೆ ತನ್ನ ಮನೆ ಜವಾಬ್ದಾರಿಗಳ ಜತೆಗೆ ಕಂಪ್ಯೂಟರ್‌ ಗಳ ಮೂಲಕ ಮನೆಯಲ್ಲಿ ಕುಳಿತಲ್ಲಿಂದಲೇ ವಿವಿಧ ಉದ್ಯೋಗ ನಿರ್ವಹಿಸಲು ಸಾಧ್ಯವಾಗಿದೆ. ಶಿಕ್ಷಣ ಮತ್ತು ಆರ್ಥಿಕ ಸ್ವಾವಲಂಬನೆ ಎನ್ನುವ ವಿಷಯ ಮಹಿಳೆಗೆ ರಚನಾತ್ಮಕವಾಗಿ ಬದುಕನ್ನು ಕಟ್ಟಿಕೊಳ್ಳುವ ಧೈರ್ಯ ಮತ್ತು ಆತ್ಮವಿಶ್ವಾಸದಿಂದ ಎದುರಿಸುವ ಶಕ್ತಿಯನ್ನು ನೀಡುತ್ತದೆ.

ಮನೋಸ್ಥೈರ್ಯ  ಅಗತ್ಯ
ಮಹಿಳೆಯರು ಭಯಮುಕ್ತ ಬದುಕಿಗೆ ಪಣತೊಡಬೇಕಿದೆ. ಬಟ್ಟೆಬರೆ, ಸೌಂದರ್ಯದಿಂದ ಜೀವನ ಬದಲಾಯಿಸಲಾಗದು. ಅದು ಮನೋಸ್ಥೈರ್ಯ  ಮತ್ತು ವಿಶ್ವಾಸದಿಂದ ಮಾತ್ರ ಸಾಧ್ಯ. ಹಾಗಾಗಿ ಕಾಲಕ್ಕೆ ತಕ್ಕಂತೆ ಬದಲಾಗಿ, ಆಧುನಿಕತೆ, ಸಂಪ್ರದಾಯ ಗಳನ್ನು ರೂಢಿಸಿಕೊಂಡು ಮುನ್ನಡೆದಾಗ ಬದುಕಿನಲ್ಲಿ ನೆಮ್ಮದಿಯನ್ನು ಕಾಣಬಹುದು. ಅಲ್ಲದೆ ಸಶಕ್ತ ಸ್ತ್ರೀ ಸಮಾಜ ನಿರ್ಮಾಣ ಸಾಧ್ಯ.

ಆತ್ಮವಿಶ್ವಾಸದ ಸದ್ಬಳಕೆ ಅಗತ್ಯ
ಮಹಿಳೆಯರು ಆತ್ಮವಿಶ್ವಾಸ ತಮ್ಮ ಬಳಿ ಇರುವ ಅತ್ಯಮೂಲ್ಯ ಆಸ್ತಿ ಎಂದು ತಿಳಿದು ಅದನ್ನು ರಕ್ಷಿಸುತ್ತಾ, ಪೋಷಿಸುತ್ತಾ, ಸದ್ಬಳಕೆ ಮಾಡಿದರೆ ಅದು ಅವರನ್ನು ಉತ್ತಮ ಸ್ಥಿತಿಗೆ ಕೊಂಡೊಯ್ಯುವುದರಲ್ಲಿ ಸಂಶಯವಿಲ್ಲ. ಅದಕ್ಕಾಗಿ ಸ್ತ್ರೀಯರು ಸಕಾರಾತ್ಮಕ ಗುಣ ಬೆಳೆಸಿಕೊಳ್ಳುವುದು ಪೂರಕ. ಧನಾತ್ಮಕ ಚಿಂತನೆಯುಳ್ಳವರು ಸದಾ ತನ್ನ ಗುರಿಯತ್ತ ಪ್ರಯತ್ನ ಶೀಲರಾಗಿ ರುತ್ತಾರೆ. ಇದರಿಂದ ಅಂತಹವರು ಬಹಳ ಬೇಗನೆ ಯಶಸ್ಸು ಸಾಧಿಸಬಲ್ಲರು.

ಗಣೇಶ ಕುಳಮರ್ವ

ಟಾಪ್ ನ್ಯೂಸ್

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

2-ramanagara

Ramanagara: ಬಸ್ -ಬೈಕ್ ಅಪಘಾತ; ಇಬ್ಬರು ಮಕ್ಕಳು ಮೂವರು ಸ್ಥಳದಲ್ಲೇ ಮೃತ್ಯು

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

5-hunsur

Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

4-aryabhata

ಆರ್ಯಭಟ ಗಣಿತ ಪರೀಕ್ಷೆ; ಸಾಧನೆಗೈದ ಡಿ.ಪಿ.ಎಸ್. ಶಾಲೆಯ ವಿದ್ಯಾರ್ಥಿಗಳು

3-koratagere

Koratagere: ಕಾರು-ಬೈಕ್ ಭೀಕರ ಅಪಘಾತ: ಓರ್ವ ಸವಾರ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.