ಮುಪ್ಪಿನ ಸ್ಥಿರ ಆರೋಗ್ಯಕ್ಕಾಗಿ

Team Udayavani, Mar 10, 2020, 5:40 AM IST

ಮುಪ್ಪಿನ ಸ್ಥಿರ ಆರೋಗ್ಯಕ್ಕಾಗಿ

ಮುಪ್ಪು ಯಾರನ್ನೂ ಬಿಡುವುದಿಲ್ಲ. ವಯಸ್ಸಾಗುತ್ತಿದ್ದಂತೆ ಅನೇಕ ಕಾಯಿಲೆಗಳು ನಮ್ಮನ್ನು ಬೆನ್ನಟ್ಟಿ ಬರುತ್ತವೆ. ಸಕ್ಕರೆ ಕಾಯಿಲೆ, ರಕ್ತದೊತ್ತಡ, ಹೃದಯ ಸಂಬಂಧಿ ಕಾಯಿಲೆಗಳು, ಮೂಳೆ ಸವೆತ, ದೇಹದ ವಿವಿಧ ಭಾಗಗಳು ಸವೆಯುತ್ತಾ ಕಾರ್ಯವೈಖರಿ ಕ್ಷೀಣಿಸತೊಡಗಿದಂತೆ ಕಾಣಿಸಿಕೊಳ್ಳುವ ಕಾಯಿಲೆಗಳ ಜತೆಗೆ ಬೊಜ್ಜಿನ ಸಮಸ್ಯೆಯೂ ಬರುತ್ತದೆ. ಹಾಗಿದ್ದರೆ ವಯಸ್ಸಾದವರು ಎಂತಹ ಆಹಾರ ಸೇವಿಸಬೇಕು, ಮುಪ್ಪಿನಲ್ಲಿ ಆರೋಗ್ಯವನ್ನು ಸ್ಥಿರವಾಗಿ ಕಾಪಾಡಿಕೊಳ್ಳಲು ಏನು ಮಾಡಬೇಕು ಇಲ್ಲಿದೆ ಮಾಹಿತಿ.

ಜೀವಸತ್ವ ಮತ್ತು ಖನಿಜಾಂಶ ಆಹಾರ
ವಯಸ್ಸಾದಂತೆ, ದೇಹಕ್ಕೆ ಶಕ್ತಿಯ ಆವಶ್ಯಕತೆ ಕಡಿಮೆಯಾಗುವುದಂತೂ ನಿಜ. ಅದಕ್ಕಾಗಿ ಅವರ ಆಹಾರ ಸೇವನೆಯೂ ಕಡಿಮೆ ಇರಬೇಕಾಗುತ್ತದೆ. ಆಹಾರದ ಆವಶ್ಯಕತೆ ಕಡಿಮೆಯಾದರೂ ಯಥೇತ್ಛವಾದ ತರಕಾರಿ, ಸೊಪ್ಪು, ಹಣ್ಣುಗಳ ಸೇವನೆ ಒಳಿತು.

ಕರಿದ ಪದಾರ್ಥಗಳಿಗೆ ವಿದಾಯ ಹೇಳಿ
ಕರಿದ ಪದಾರ್ಥಗಳು, ಅತೀ ಖಾರದ ಪದಾರ್ಥ, ಜಿಡ್ಡು ಭರಿತ ಆಹಾರ ಸೇವನೆ ಮಿತಿಯಾಗಿರಬೇಕು. ಹೊಟ್ಟೆಭಾರ, ಆ್ಯಸಿಡಿಟಿ, ತುಂಬಾ ಊಟ ಮಾಡುವುದು ಕಷ್ಟ ಎಂಬಂಥ ತೊಂದರೆಗಳನ್ನು ವಯಸ್ಸಾದವರು ಹೇಳುತ್ತಿರುತ್ತಾರೆ. ಟೀ, ಕಾಫಿ ಸೇವನೆ ಮಿತಿಯಾಗಿರಬೇಕು. ನೀರು, ಮಜ್ಜಿಗೆ, ಹಾಲು, ಸಕ್ಕರೆಯಿಲ್ಲದ ಹಣ್ಣಿನ ರಸ ಆಹಾರವನ್ನು ಹೆಚ್ಚು ಸೇವಿಸಬಹುದು.

ದುಶ್ಚಟಗಳಿಂದ ಅಂತರ
ಈ ವಯಸ್ಸಿನಲ್ಲಿ ಮದ್ಯಪಾನ ಹಾಗೂ ಯಾವುದೇ ರೀತಿಯ ತಂಬಾಕಿನ ಸೇವನೆಗೆ ವಿದಾಯ ಹೇಳಬೇಕು. ದಿನದಲ್ಲಿ 3-4 ಬಾರಿ ಸಣ್ಣ ಪ್ರಮಾಣದ ಆಹಾರ ಸೇವನೆ ಒಳಿತು. ಉಪಾ ಹಾರ, ಮಧ್ಯಾಹ್ನ ಊಟ, ಸಂಜೆ ಉಪಾಹಾರ, ರಾತ್ರಿ ಊಟ ಎಂಬಂತೆ 4 ಗಂಟೆಗಳಿಗೊಮ್ಮೆ ಸ್ವಲ್ಪ ಸ್ವಲ್ಪವೇ ಆಹಾರ ಸೇವಿಸಬೇಕು.

ಮೆತ್ತಗಿನ ಆಹಾರ ಸೇವನೆ ಒಳ್ಳೆಯದು
ವಯಸ್ಸಾದವರಿಗೆ ಹಲ್ಲಿನ ಸಮಸ್ಯೆಯೂ ಸಾಮಾನ್ಯ. ಅಲುಗಾಡುವ ಹಲ್ಲುಗಳು, ಹಲ್ಲುಗಳಿಲ್ಲದ ದವಡೆ, ಕಟ್ಟಿಸಿಕೊಂಡ ಕೃತಕ ದಂತ ಪಂಕ್ತಿ ಇವೆಲ್ಲವೂ ಪಚನ ಕ್ರಿಯೆಗೆ ತೊಡಕುಂಟು ಮಾಡಬಹುದು. ಸರಿಯಾಗಿ ಆಹಾರವನ್ನು ಜಗಿಯಲಾಗದೇ ಇರುವುದರಿಂದ ಮೆತ್ತಗಿನ ಆಹಾರ ಸೇವನೆ ಒಳ್ಳೆಯದು. ಗಟ್ಟಿಯಾದ ತರಕಾರಿಯನ್ನು ತುರಿದು ಸೇವಿಸಬೇಕು. ಕಿಚಡಿ, ಹಣ್ಣಿನ ರಸ, ಗಂಜಿ ಮುಂತಾದವು ಸೇವನೆಗೆ ಉತ್ತಮ.

- ಸುಶ್ಮಿತಾ ಜೈನ್‌

ಟಾಪ್ ನ್ಯೂಸ್

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Trump–Kamala

US Election 2024, Kamala Vs Trump: ಅಮೆರಿಕ ಅಧ್ಯಕ್ಷರ ಚುನಾವಣೆ ಹೇಗೆ? ಏನು? ಎತ್ತ?

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UV Fusion: “ಜಗವ ಪರಿಚಯಿಸಿದವರ ಜರಿದು ದೂರವಿರಿಸದಿರಿ”

UV Fusion: “ಜಗವ ಪರಿಚಯಿಸಿದವರ ಜರಿದು ದೂರವಿರಿಸದಿರಿ”

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.