ಅಸ್ತಮಾ ನಿವಾರಣೆಗೆ ನೈಸರ್ಗಿಕ ವಿಧಾನ
Team Udayavani, Jul 16, 2019, 5:05 AM IST
ಉಸಿರಾಟದ ತೊಂದರೆ ಇಂದಿನ ಸಾಮಾನ್ಯ ಸಮಸ್ಯೆ. ಅಸ್ತಮಾ ಅಥವ ಉಬ್ಬಸ ಎಂದು ಕರೆಯಲ್ಪಡುವ ಈ ಉಸಿರಾಟದ ಸಮಸ್ಯೆಗಳು ಆರೋಗ್ಯಕ್ಕೆ ಮಾರಕವಾಗಿ ಪರಿಣಮಿಸುತ್ತವೆ.
ಆರೋಗ್ಯ ಸಮಸ್ಯೆ ಕಂಡು ಬರುವಾಗ ಪ್ರತಿಯೊಬ್ಬರೂ ಇಂಗ್ಲೀಷ್ ಮದ್ದನ್ನು ಅಧಿಕವಾಗಿ ಅವಲಂಬಿಸುತ್ತಾರೆ. ಆದರೆ ಕೆಲವೊಂದು ಬಾರಿ ನೈಸರ್ಗಿಕ ಮದ್ದುಗಳಿಂದ ರೋಗಗಳಿಗೆ ಪರಿಹಾರ ಸಿಗುತ್ತವೆ.
· ಸಾಸಿವೆ ಎಣ್ಣೆಯಿಂದ ಅಸ್ತಮಾ ಉಂಟಾದಾಗ ಪರಿಹಾರ ಲಭಿಸುತ್ತವೆ. ಎದೆ ಭಾಗಕ್ಕೆ ಸಾಸಿವೆ ಎಣ್ಣೆಯನ್ನು ಹಚ್ಚಿ ಮಸಾಜ್ ಮಾಡುವುದರಿಂದ ಸ್ವಲ್ಪ ಉಸಿರಾಟದ ಸಮಸ್ಯೆ ಕಡಿಮೆಯಾಗುತ್ತದೆ.
· ಒಣ ಅಂಜೂರದ ಹಣ್ಣನ್ನು ರಾತ್ರಿ ನೀರಿನಲ್ಲಿ ನೆನೆಸಿಟ್ಟು ಬೆಳಗ್ಗೆ ಎದ್ದು ಸೇವಿಸುವುದರಿಂದ ಹಾಗೂ ನೆನೆಸಿಟ್ಟ ನೀರನ್ನು ಕುಡಿಯುವುದರಿಂದ ಅಸ್ತಮಾ ರೋಗ ಕ್ರಮೇಣ ನಿವಾರಣೆಯಾಗುತ್ತದೆ.
· ಚಾ ವನ್ನು ಸೇವಿಸುವುದು ಆರೋಗ್ಯಕ್ಕೆ ಉತ್ತಮವಲ್ಲ. ಅದರ ಬದಲಿಗೆ ಕಾಫಿ, ಅಥವಾ ಬ್ಲ್ಯಾಕ್ ಟೀ ಸೇವಿಸುವುದು ಉತ್ತಮ. ಇವುಗಳು ಸುಲಭ ಉಸಿರಾಟಕ್ಕೆ ಸಹಕಾರಿ.
· ಯಾವುದೇ ಔಷಧಗಳ ಸಹಾಯವಿಲ್ಲದೆ ರೋಗ ಗುಣಪಡಿಸುವ ಸಾಮರ್ಥ್ಯವಿರುವ ಆಕ್ಯುಪಂಕ್ಚರ್ ಚಿಕಿತ್ಸೆಯನ್ನು ಅಸ್ತಮಾ ರೋಗಗಳಿಗೆ ಬಳಸಬಹುದು.
· ಯೋಗ ಅಥವಾ ವ್ಯಾಯಾಮ ಮಾಡುವುದರಿಂದ ಅಸ್ತಮಾವನ್ನು ನಿಯಂತ್ರಿಸಬಹುದು. ಉಸಿರಾಟಕ್ಕೆ ಸಂಬಂಧಿಸಿದ ವ್ಯಾಯಾಮವನ್ನು ಮಾಡುವುದು ಹೆಚ್ಚು ಸೂಕ್ತ.
· ನಿಧಾನವಾಗಿ ಉಸಿರಾಡುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು.
ಅಸ್ತಮಾ ರೋಗವು ಕೇವಲ ಉಸಿರಾಟಕ್ಕೆ ಸಂಬಂಧಿಸಿದ್ದಾಗಿದೆ. ಆಹಾರ ಹಾಗೂ ದೇಹದ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಿದರೆ ಈ ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳಬಹುದು.
- ಸುಶ್ಮಿತಾ ಶೆಟ್ಟಿ ಸಿರಿಬಾಗಿಲು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
State Budget Meeting: ಇಂದಿನಿಂದ ಸಿಎಂ ಬಜೆಟ್ ಪೂರ್ವಭಾವಿ ಸರಣಿ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.