ಬ್ರ್ಯಾಂಡ್  ಬೆಂಗಳೂರು ಮಾದರಿ ಮಂಗಳೂರಿಗೂ ಇರಲಿ


Team Udayavani, Jan 13, 2019, 7:06 AM IST

13-january-9.jpg

ಸಂಚಾರ ದಟ್ಟಣೆ, ಮಾಲಿನ್ಯ ನಿವಾರಣೆ, ರಸ್ತೆಗಳ ದುರಸ್ತಿ ಮತ್ತು ಅಭಿವೃದ್ಧಿ, ಮೇಲ್ಸೇತುವೆಗಳ ನಿರ್ಮಾಣ, ಮೆಟ್ರೋ 3ನೇ ಹಂತದ ವಿಸ್ತರಣೆ ಯೋಜನೆ, ಎಲಿವೇಟೇಡ್‌ ಕಾರಿಡಾರ್‌ ನಿರ್ಮಾಣ ಹೀಗೆ ಇನ್ನೂ ಹಲವಾರು ಯೋಜನೆಗಳನ್ನು ಬ್ರ್ಯಾಂಡ್‌ ಬೆಂಗಳೂರಲ್ಲಿ ಸೇರಿಸಲಾಗಿದೆ. ಕಾಲ ಮಿತಿಯೊಳಗೆ ಕಾಮಗಾರಿಗಳು ನಡೆಯಬೇಕಿರುವುದರಿಂದ ಎಲ್ಲ ಪ್ರಕ್ರಿಯೆಗಳಿಗೂ ಶೀಘ್ರದಲ್ಲೇ ಚಾಲನೆ ದೊರಕಿದೆ. ಇದೇ ಮಾದರಿ ಸ್ಮಾರ್ಟ್‌ ಸಿಟಿಯಾಗಿ ಆಯ್ಕೆಯಾಗಿರುವ ಮಂಗಳೂರಿನಲ್ಲೂ ರೂಪುಗೊಂಡರೆ ಮಂಗಳೂರು ನಗರದ ಸಮಗ್ರ ಅಭಿವೃದ್ಧಿ ಶೀಘ್ರವೇ ನಡೆಸಬಹುದು. 

ಬ್ರ್ಯಾಂಡ್   ಬೆಂಗಳೂರು ಪರಿಕಲ್ಪನೆ ಬೆಂಗಳೂರು ನಗರದಲ್ಲಿ ಅನುಷ್ಠಾನಗೊಳ್ಳುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯ ಸರಕಾರ ವಿವಿಧ ಯೋಜನೆಗಳನ್ನು ರೂಪಿಸಿದೆ. ಇತ್ತೀಚೆಗೆ ಮುಕ್ತಾಯಗೊಂಡ ವಿಧಾನ ಮಂಡಲದ ಅಧಿವೇಶನದಲ್ಲಿ ಬೆಂಗಳೂರು ನಗರದ ಮೂಲಸೌಕರ್ಯ ಅಭಿವೃದ್ಧಿಗೆ ಸುಮಾರು 10,000 ಕೋಟಿ ರೂಪಾಯಿಯನ್ನು ಮೀಸಲಿಟ್ಟಿದೆ. ಇದಕ್ಕೆ ಪೂರಕವಾಗಿ ಒಂದಷ್ಟು ಯೋಜನೆಗಳನ್ನು ಸಿದ್ಧಪಡಿಸಲಾಗುತ್ತಿದೆ. ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಾ| ಜಿ. ಪರಮೇಶ್ವರ್‌ ಬ್ರ್ಯಾಂಡ್ ಬೆಂಗಳೂರು ನಗರ ಸಾಕಾರಕ್ಕೆ ವಿಶೇಷ ಮುತುವರ್ಜಿ ವಹಿಸಿ ಕಾರ್ಯೋನ್ಮುಖವಾಗಿದ್ದಾರೆ. ಕರ್ನಾಟಕದ ಹೆಬ್ಟಾಗಿಲು ಎಂದು ಪರಿಗಣಿಸಲ್ಪಟ್ಟಿರುವ, ರಾಜ್ಯದಲ್ಲಿ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಮಂಗಳೂರು ನಗರಕ್ಕೂ ಬ್ರ್ಯಾಂಡ್ ಬೆಂಗಳೂರು ಮಾದರಿಯ ಯೋಜನೆಯೊಂದು ಸಿದ್ಧಪಡಿಸುವುದು ಅಪೇಕ್ಷಣೀಯವಾಗಿದೆ.

ಬ್ರ್ಯಾಂಡ್ ಬೆಂಗಳೂರು ಯೋಜನೆಯಲ್ಲಿ ಬೆಂಗಳೂರು ನಗರದ ಸಂಚಾರ ದಟ್ಟನೆ, ಮಾಲಿನ್ಯ ನಿವಾರಣೆ, ರಸ್ತೆಗಳ ದುರಸ್ತಿ ಮತ್ತು ಅಭಿವೃದ್ಧಿ, ಮೇಲ್ಸೇತುವೆಗಳ ನಿರ್ಮಾಣ, ಮೆಟ್ರೋ 3ನೇ ಹಂತದ ವಿಸ್ತರಣೆ ಯೋಜನೆ, ಎಲಿವೇಟೇಡ್‌ ಕಾರಿಡಾರ್‌ಗಳ ನಿರ್ಮಾಣ ಮುಂತಾದ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಸುಗಮ ಸಂಚಾರಕ್ಕಾಗಿ ಮೆಟ್ರೊ ವಿಸ್ತರಣೆ, ಪೆರಿಫೆರಲ್‌ ರಿಂಗ್‌ ರೋಡ್‌, ಕಾರಿಡಾರ್‌, ಸಬರ್ಬನ್‌ ರೈಲು ಯೋಜನೆ, ಸಮರ್ಪಕ ತ್ಯಾಜ್ಯ ವಿಲೇವಾರಿಗೆ ಪೂರಕ ಯೋಜನೆಗಳು ಇದರಲ್ಲಿ ಸೇರಿವೆ. ಸಬರ್ಬನ್‌ ರೈಲು ಯೋಜನೆಗೆ 36,000 ಕೋಟಿ ರೂ. ವೆಚ್ಚ ಅಂದಾಜಿಸಲಾಗಿದೆ.

540 ಕೋಟಿ ರೂ. ವೆಚ್ಚದಲ್ಲಿ 102 ಕಿ.ಮೀ. ಉದ್ದದ ಆರು ಕಾರಿಡಾರ್‌ ಯೋಜನೆಗಳನ್ನು ಕಾರ್ಯಗತಗೊಳಿಸಲು ಉದ್ದೇಶಿಸಲಾಗಿದೆ. ಈ ಯೋಜನೆಯಿಂದ ಇಂಧನ ಹಾಗೂ ಸಂಚಾರ ಸಮಯ ಉಳಿತಾಯದ ಮೂಲಕ ವಾರ್ಷಿಕ 9,397 ಕೋಟಿ ರೂ. ಉಳಿತಾಯವಾಗಬಹುದು ಎಂದು ಅಂದಾಜಿಸಲಾಗಿದೆ. 6,500 ಕೋಟಿ ರೂ. ವೆಚ್ಚದಲ್ಲಿ ಫೆರಿಫೆರಲ್‌ ರಿಂಗ್‌ ರೋಡ್‌ ನಿರ್ಮಿಸಲು ಉದ್ದೇಶಿಸಲಾಗಿದ್ದು ಮೂರು ವರ್ಷದೊಳಗೆ ಯೋಜನೆ ಪೂರ್ಣಗೊಳಿಸಲು ಕಾಲಮಿತಿ ಹಾಕಿಕೊಳ್ಳಲಾಗಿದೆ. ಈ ಯೋಜನೆಗೆ ಹೈಬ್ರಿಡ್‌ಆನ್ಯುಟಿ ಮಾದರಿಯಲ್ಲಿ ಸಂಪನ್ಮೂಲ ಕ್ರೋಡೀಕರಣ ಮಾಡಲು ಉದ್ದೇಶಿಲಾಗಿದೆ.1,299 ಕೋಟಿ ರೂ. ವೆಚ್ಚದಲ್ಲಿ ವೈಟ್‌ ಟಾಪಿಂಗ್‌, 2481.19 ಕೋಟಿ ರೂ. ವೆಚ್ಚದಲ್ಲಿ ರಸ್ತೆಗಳ ಅಭಿವೃದ್ಧಿ, 335 ಕೋಟಿ ರೂ. ವೆಚ್ಚದಲ್ಲಿ ಕೆರೆಗಳ ಅಭಿವೃದ್ಧಿ ಕಾಮಗಾರಿ ಕ್ರಿಯಾಯೋಜನೆಗಳಿಗೆ ಅನುಮೋದನೆ ಕೋರಲಾಗಿದೆ.

ಮಂಗಳೂರಿಗೂ ಬ್ರ್ಯಾಂಡ್‌ ಬೆಂಗಳೂರು ಮಾದರಿ ಆವಶ್ಯಕ
ಮಂಗಳೂರು ನಗರ ಬೆಳೆಯುತ್ತಿದೆ. ಪ್ರಸ್ತುತ ಬೆಂಗಳೂರು ಎದುರಿಸುತ್ತಿರುವ ಸಂಚಾರ ದಟ್ಟನೆ, ಮಾಲಿನ್ಯ, ರಸ್ತೆ ಸೌಲಭ್ಯ ಸಹಿತ ಮೂಲಸೌಕರ್ಯಗಳ ಸಮಸ್ಯೆಗಳನ್ನು ಮಂಗಳೂರು ನಗರವೂ ಎದುರಿಸುತ್ತಿದೆ. ತ್ಯಾಜ್ಯ ನಿರ್ವಹಣೆಯೂ ಒಂದು ಸವಾಲು ಆಗಿ ಪರಿಣಮಿಸುತ್ತಿದೆ. ವೈಜ್ಞಾನಿಕ ವಿಲೇವಾರಿಯಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದೆ. ಅಸಮರ್ಪಕ ತ್ಯಾಜ್ಯ ವಿಂಗಡನೆ, ತ್ಯಾಜ್ಯ ಸಂಗ್ರಹಣೆಯಲ್ಲಿ ಅಸಮರ್ಪಕತೆ ಮುಂತಾದ ಸಮಸ್ಯೆಗಳು ಬೆಂಗಳೂರಿನಂತೆ ಮಂಗಳೂರಿನ ಲ್ಲೂ ಇವೆ. ನಗರದ ಮೂಲಸೌಕರ್ಯಗಳ ಅಭಿವೃದ್ಧಿಗೆ ಸ್ಮಾರ್ಟ್‌ ಸಿಟಿ ಯೋಜನೆಯಲ್ಲಿ ಒಂದಷ್ಟು ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ. ಆದರೆ ಇದು ಕೆಲವೊಂದು ಪ್ರದೇಶಕ್ಕೆ ಮಾತ್ರ ಸೀಮಿತಗೊಂಡಿದೆ. ಸಮಗ್ರ ನಗರ ವ್ಯಾಪ್ತಿಯನ್ನು ಹೊಂದಿಕೊಂಡು ನಗರದ ಬೆಳವಣಿಗೆ ಗತಿಯ ದೃಷ್ಟಿಯಲ್ಲಿಟ್ಟುಕೊಂಡು ಬ್ರ್ಯಾಂಡ್‌ ಬೆಂಗಳೂರು ಮಾದರಿಯಲ್ಲೇ ಮಂಗಳೂರು ನಗರಕ್ಕೂ ಕಾಲಮಿತಿಯನ್ನು ಹಾಕಿಕೊಂಡು ಸಮಗ್ರ ಯೋಜನೆಯನ್ನು ರೂಪಿಸುವುದು ಅತೀ ಅವಶ್ಯವಾಗಿದೆ.

ಮಂಗಳೂರು ನಗರದ ಬೆಳವಣಿಗೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಮಹಾಯೋಜನೆ ರೂಪಿಸುವ ಪ್ರಯತ್ನಗಳು ಈ ಹಿಂದೆ ಹಲವಾರು ಬಾರಿ ನಡೆದಿವೆ. ಆದರೆ ಇವುಗಳು ಮೂರ್ತ ಸ್ವರೂಪವನ್ನು ಪಡೆದುಕೊಳ್ಳವಲ್ಲಿ ಯಶಸ್ವಿಯಾಗಿಲ್ಲ. ದಶಕಗಳ ಹಿಂದೆ ರೂಪಿಸಿರುವ ಆನೇಕ ಪ್ರಸ್ತಾವನೆಗಳು ವಿವಿಧ ಇಲಾಖೆಗಳಲ್ಲಿ ಈಗಲೂ ಬಾಕಿಯುಳಿದಿವೆ. ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ 2009ರಲ್ಲಿ ರೂಪಿಸಿದ ಮಹಾಯೋಜನೆಯಲ್ಲಿ ಕೂಡ ಕೆಲವು ಪ್ರಸ್ತಾವನೆಗಳನ್ನು ಮಾಡಲಾಗಿತ್ತು. ಇದರಲ್ಲಿ ಮುಖ್ಯವಾಗಿ ನಗರದ 66 ರಸ್ತೆಗಳ ಅಗಲೀಕರಣ ಪ್ರಸ್ತಾವನೆ ಮಾಡಲಾಗಿತ್ತು. ಬೆಂಗಳೂರು ಮಾದರಿಯಲ್ಲೇ ರಿಂಗ್‌ರೋಡ್‌ ವೊಂದನ್ನು 2009ರ ಯೋಜನೆಯಲ್ಲಿ ಪ್ರಸ್ತಾವನೆ ಮಾಡಲಾಗಿತ್ತು. ಇದು ಕೋಟೆಕಾರು, ದೇರಳಕಟ್ಟೆ, ಬೆಳ್ಮ, ಅಡ್ಯಾರು, ನೀರುಮಾರ್ಗ, ಮೂಡುಶೆಡ್ಡೆ, ಮರಕಡ, ಕೆಂಜಾರು, ತೋಕೂರು, ಬಾಳ, ಇಡ್ಯಾ, ಸುರತ್ಕಲ್‌ ಸಂಪರ್ಕ ಕಲ್ಪಿಸುವ ಉದ್ದೇಶ ಹೊಂದಿತ್ತು. ಕಣ್ಣೂರು, ಬಜಪೆ, ಹೊಸಬೆಟ್ಟು , ಪಣಂಬೂರುಗಳಲ್ಲಿ ಟ್ರಕ್‌ ಟರ್ಮಿನಲ್‌ ಪ್ರಸ್ತಾವನೆಗಳು ಇದರಲ್ಲಿ ಒಳಗೊಂಡಿತ್ತು.

ಯೋಜನೆಗಳು ಸಿದ್ಧವಿವೆ
ಮಂಗಳೂರು ನಗರದ ಸಂಚಾರ ಸಮಸ್ಯೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಮೋನೋ ರೈಲು, ಸ್ಕೈಬಸ್‌ ಯೋಜನೆಗಳನ್ನು ಪ್ರಸ್ತಾವನೆ ಮಾಡಲಾಗಿತ್ತು. ಬೆಂಗಳೂರಿನ ಕಾರಿಡಾರ್‌ ಯೋಜನೆಗಳ ಸ್ವರೂಪದಂತೆಯೇ ವರ್ತುಲ ರಸ್ತೆ ಪ್ರಸ್ತಾವನೆಗಳನ್ನು ರೂಪಿಸಲಾಗಿದೆ. ನಾಲ್ಕು ಕಡೆಗಳಲ್ಲಿ ಮೇಲ್ಸೇತುವೆ ನಿರ್ಮಾಣ ಯೋಜನೆಗಳಿವೆ. ಕರಾವಳಿಯಲ್ಲಿ ವಿಪುಲ ಅವಕಾಶವಿರುವ ಸಾಗರ ಪ್ರವಾಸೋದ್ಯಮ ಅಭಿವೃದ್ಧಿಗೆ ಒಂದಷ್ಟು ಯೋಜನೆಗಳನ್ನು ಪ್ರಸ್ತಾವನೆ ಮಾಡಲಾಗಿದೆ. ಪ್ರಸ್ತುತ ಪ್ರಸ್ತಾವನೆಯಲ್ಲಿರುವ ಎಲ್ಲ ಯೋಜನೆಗಳನ್ನು ಕ್ರೋಡೀಕರಿಸಿ ಬ್ರ್ಯಾಂಡ್  ಬೆಂಗಳೂರು ಮಾದರಿಯಲ್ಲಿ ಬ್ರ್ಯಾಂಡ್  ಮಂಗಳೂರು ಯೋಜನೆ ರೂಪಿಸಬೇಕಾಗಿದೆ. ಇದಕ್ಕೆ ರಾಜ್ಯ ಹಾಗೂ ಕೇಂದ್ರ ಸರಕಾರದ ವಿವಿಧ ಯೋಜನೆಗಳ ಅನುದಾನಗಳನ್ನು ಹೊಂದಿಸಿಕೊಳ್ಳುವ ನಿಟ್ಟಿನಲ್ಲಿ ಸಮನ್ವಯತೆ ಏರ್ಪಡಬೇಕಾಗಿದೆ. 

 ಕೇಶವ ಕುಂದರ್‌

ಟಾಪ್ ನ್ಯೂಸ್

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

Ullala: ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

1

Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.