ನಗರದ ಸಂಚಾರ ವ್ಯವಸ್ಥೆಗೆ ಪೂರಕ ಲಿಫ್ಟ್ ಪಾರ್ಕಿಂಗ್‌


Team Udayavani, Feb 16, 2020, 4:59 AM IST

rav-17

ದೇಶದಲ್ಲಿ ಸಂಚಾರ ವ್ಯವಸ್ಥೆ ಬಹುವಾಗಿ ಅಭಿವೃದ್ಧಿಯಾಗಿದೆ. ಈ ಹಿನ್ನೆಲೆಯಲ್ಲಿ ಸಂಚಾರ ವ್ಯವಸ್ಥೆಯನ್ನು ಬಲಪಡಿಸಲು ಉತ್ತಮ ರಸ್ತೆಗಳು, ಫ್ಲೈಓವರ್‌ಗಳನ್ನು ನಿರ್ಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತದೆ. ಆದರೆ ದೇಶದ ಮುಖ್ಯ ನಗರಗಳಲ್ಲಿ ಆಗಾಗ ಟ್ರಾಫಿಕ್‌ ಜಾಮ್‌ ಸೃಷ್ಟಿಯಾಗಿ ಇಡೀ ಸಂಚಾರ ವ್ಯವಸ್ಥೆಯನ್ನು ಹಾಳು ಮಾಡಿಬಿಡುತ್ತದೆ. ಇತ್ತೀಚಿನ ವರದಿ ಪ್ರಕಾರ ಬೆಂಗಳೂರು ನಗರದಲ್ಲಿ ಹೆಚ್ಚಿನ ಕಾಲ ಟ್ರಾಫಿಕ್‌ ಜಾಮ್‌ನಲ್ಲಿ ಜನ ತಮ್ಮ ದಿನವನ್ನು ಕಳೆಯುತ್ತಾರೆ ಎಂಬ ವರದಿ ಕೂಡ ಗಮನಿಸಿದಾಗ ಸಂಚಾರ ವ್ಯವಸ್ಥೆಯನ್ನು ಅತ್ಯಾಧುನಿಕವಾಗಿ ಅಭಿವೃದ್ಧಿಪಡಿಸಬೇಕು ಎಂಬ ವಾದ ಕೇಳಿಬರುತ್ತದೆ.

ದೇಶದ ಪ್ರಮುಖ ನಗರಗಳಲ್ಲಿ ಹೆಚ್ಚಿನ ಜನಸಂಖ್ಯೆ ಇರುವುದರಿಂದಾಗಿ ರಸ್ತೆಗಳಲ್ಲಿ ದಿನಂಪ್ರತಿ ಅಧಿಕ ವಾಹನಗಳು ಓಡಾಡುತ್ತವೆ. ಇನ್ನು ಟ್ರಾಫಿಕ್‌ ಜಾಮ್‌ ಉಂಟಾಗಲು ಕಾರಣಗಳನ್ನು ಹುಡುಕುತ್ತ ಹೋದರೆ ಹಲವು ಕಾರಣಗಳು ಮೇಲ್ನೋಟಕ್ಕೆ ಕಾಣಬಹುದು. ದುರಸ್ತಿಗೊಂಡ ರಸ್ತೆಗಳು, ಸರಿಯಾದ ಮಾರ್ಗಸೂಚಿಗಳು ಇಲ್ಲದಿರುವುದು ಮುಖ್ಯವಾಗಿ ಪಾರ್ಕಿಂಗ್‌ ವ್ಯವಸ್ಥೆ ಸರಿಯಾಗಿ ಇಲ್ಲದಿರುವುದು. ನಗರಗಳಲ್ಲಿ ಟ್ರಾಫಿಕ್‌ ಜಾಮ್‌ ಉಂಟಾಗಲು ಪ್ರಮುಖ ಕಾರಣವೆಂದರೆ ನಗರದ ವಿವಿಧೆಡೆ ಸರಿಯಾದ ಪಾರ್ಕಿಂಗ್‌ ವ್ಯವಸ್ಥೆ ಇಲ್ಲದಿರುವುದು. ಇದರಿಂದ ಸಾರ್ವಜನಿಕರು ಎಲ್ಲೆಂದರಲ್ಲಿ ಮತ್ತು ರಸ್ತೆಗಳ ಬದಿಯಲ್ಲಿ ವಾಹನಗಳನ್ನು ಪಾರ್ಕಿಂಗ್‌ ಮಾಡುವುದರಿಂದಾಗಿ ಸಂಚಾರದಲ್ಲಿ ವ್ಯತ್ಯಯಗೊಂಡು ಟ್ರಾಫಿಕ್‌ ಸಮಸ್ಯೆ ಉದ್ಭವಿಸುತ್ತದೆ. ಎಲ್ಲೆಂದರಲ್ಲಿ ಪಾರ್ಕಿಂಗ್‌ ಮಾಡುವವರ ವಿರುದ್ಧ ಕಠಿನ ಕಾನೂನು ಆದೇಶವನ್ನು ರವಾನಿಸಿದರು ಕೂಡ ಸಾರ್ವಜನಿಕರು ಇದಕ್ಕೆ ಯಾವುದೇ ರೀತಿಯಾಗಿ ಸ್ಪಂದಿಸದಿರುವುದು ಕೂಡ ಪ್ರಮುಖ ಕಾರಣವಾಗಿದೆ. ಇದಕ್ಕೆ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಹೊಸ ಮಾದರಿಯ ಪ್ರಯೋಗ ಇಂದು ಮಾಡಬೇಕಿದೆ. ಈ ನಿಟ್ಟಿನಲ್ಲಿ ಲಿಫ್ಟ್ ಪಾರ್ಕಿಂಗ್‌ ನಗರದ ಸಂಚಾರ ವ್ಯವಸ್ಥೆಗೆ ಪೂರಕವಾಗಬಲ್ಲದು.

ಉಪಯೋಗವೇನು?
ಲಿಫ್ಟ್ ಪಾರ್ಕಿಂಗ್‌ ಮಾದರಿಯನ್ನು ನಮ್ಮ ನಗರ ಸಂಚಾರದಲ್ಲಿ ರೂಢಿಸಿಕೊಂಡಾಗ ಹಲವು ಉಪಯೋಗಗಳನ್ನು ಪಡೆಯಬಹುದಾಗಿದೆ. ಮೊದಲು ಟ್ರಾಫಿಕ್‌ ಸಮಸ್ಯೆಗೆ ಉತ್ತರ ಕಂಡುಕೊಳ್ಳಬಹುದಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ನಮ್ಮ ವಾಹನಗಳಿಗೆ ಭದ್ರತೆ ಸಿಕ್ಕಂತಾಗುತ್ತದೆ. ಈ ಮಾದರಿಯನ್ನು ಅಳವಡಿಸಿಕೊಳ್ಳುವುದರಿಂದ ನಗರದ ಸಂಚಾರ ವ್ಯವಸ್ಥೆಗೆ ಪೂರಕವಾಗಲಿದೆ. ಲಿಫ್ಟ್ ಪಾರ್ಕಿಂಗ್‌ ಮಾದರಿಯಾದ ಯೋಜನೆಯಾಗಿದ್ದು ಇದನ್ನು ಸ್ಮಾರ್ಟ್‌ ಸಿಟಿ ಪಟ್ಟಿಯಲ್ಲಿರುವ ಮಂಗಳೂರಿಗೂ ಸಾರ್ವಜನಿಕರ ಸಂಚಾರ ವ್ಯವಸ್ಥೆಯಲ್ಲಿ ಅಳವಡಿಸಿಕೊಂಡಾಗ ಇದು ನಗರದ ಸುಗಮ ಸಂಚಾರ ವ್ಯವಸ್ಥೆಗೆ ಪೂರಕವಾಗಬಲ್ಲದು.

ಏನಿದು ಲಿಫ್ಟ್ ಪಾರ್ಕಿಂಗ್‌
ಲಿಫ್ಟ್ ಪಾರ್ಕಿಂಗ್‌ ಇದೊಂದು ಅತ್ಯಾಧುನಿಕವಾದ ಪಾರ್ಕಿಂಗ್‌ ಮಾರ್ಗ ಎಂದು ತಿಳಿಯಬಹುದು. ಕಾರುಗಳು, ಬೈಕ್‌ಗಳನ್ನು ಪಾರ್ಕಿಂಗ್‌ ಮಾಡುವಾಗ ಒಂದರ ಮೇಲೆ ಒಂದರಂತೆ ಪಾರ್ಕಿಂಗ್‌ ಮಾಡುವ ಪ್ರಕ್ರಿಯೆಯಾಗಿದೆ. ಈ ಲಿಫ್ಟ್ ಪಾರ್ಕಿಂಗ್‌ ಈಗಾಗಲೇ ಹಲವು ಗ್ಯಾರೇಜ್‌ಗಳಲ್ಲಿ ಈ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲಾಗಿದೆ. ಆದರೆ ಈ ಮಾರ್ಗವನ್ನು ಸಂಚಾರ ವ್ಯವಸ್ಥೆಯಲ್ಲಿ ಅತ್ಯಾಧುನಿಕವಾಗಿ ಬಳಸಿಕೊಂಡಾಗ ಇದರಿಂದ ಪಾರ್ಕಿಂಗ್‌ ಸಮಸ್ಯೆಗಳಿಗೆ ಮಾರ್ಗವನ್ನು ಕಂಡುಕೊಳ್ಳಬಹುದಾಗಿದೆ.

ಹೇಗೆ ಕಾರ್ಯ ನಿರ್ವಹಿಸುತ್ತದೆ?
ಕಾರು ಅಥವಾ ವಾಹನಗಳನ್ನು ಪಾರ್ಕಿಂಗ್‌ ಮಾಡಬೇಕಾದರೆ ನೇರವಾಗಿ ಪಾರ್ಕಿಂಗ್‌ ಸ್ಲಾಟ್‌ಗೆ ತೆರಳಿ ನಮ್ಮ ಕಾರನ್ನು ಅಲ್ಲಿ ಬಿಟ್ಟು, ನಾವು ಹೊರಗೆ ಬರಬೇಕು. ಅಲ್ಲಿ ಲಿಫ್ಟ್ ನಮ್ಮ ವಾಹನವನ್ನು ನೋಂದಾಯಿಸಿದ ಪಾರ್ಕಿಂಗ್‌ ಸ್ಲಾಟ್‌ಗೆ ಎವಿಲೇಟರ್‌ನ ಮೂಲಕ ಹೋಗಿ ಬಿಡುತ್ತದೆ. ಈ ಲಿಫ್ಟ್ ಪಾರ್ಕಿಂಗ್‌ನ್ನು ಈಗಾಗಲೇ ಚೀನ, ಅಮೆರಿಕ ದೇಶಗಳು ತಮ್ಮ ದೇಶಗಳಲ್ಲಿ ರೂಢಿಸಿಕೊಂಡು ದೇಶದ ಟ್ರಾಫಿಕ್‌ ಸಮಸ್ಯೆಗೆ ಪರಿಹಾರವನ್ನು ಕಂಡುಕೊಂಡಿವೆ.

– ಅಭಿನವ

ಟಾಪ್ ನ್ಯೂಸ್

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

arrested

BC Road; ಎರಡು ತಂಡಗಳ ಮಧ್ಯೆ ಮಾರಾಮಾರಿ: ಇಬ್ಬರ ಬಂಧನ

1-bhatru

Subrahmanya: ಅರ್ಚಕರ ಮನೆಯಿಂದ ನಗ-ನಗದು ಕಳವು

police crime

Gangolli, Ajekaru; ಮಹಿಳೆಯರಿಗೆ ಜೀವ ಬೆದರಿಕೆ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

death

Belthangady : ಸೊಪ್ಪು ತರಲು ಹೋಗಿದ್ದ ವ್ಯಕ್ತಿ ಆಕಸ್ಮಿಕ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.