ರಕ್ಷಣಾ ವಲಯ ಉತ್ಪನ್ನಗಳ ತಯಾರಿಕಾ ಕ್ಲಸ್ಟರ್
Team Udayavani, Mar 3, 2019, 7:25 AM IST
ಕರ್ನಾಟಕ ಸರಕಾರ ಈಗಾಗಲೇ ವಿವಿಧ ಜಿಲ್ಲೆಗಳಲ್ಲಿ ಕೈಗಾರಿಕಾ ಕ್ಲಸ್ಟರ್‌ಗಳನ್ನು ಸ್ಥಾಪಿಸಿ ಜಿಲ್ಲೆಗಳನ್ನು ಚೀನ ಮಾದರಿಯಲ್ಲಿ ಕೈಗಾರಿಕೆಗಳಿಗೆ ಉತ್ತೇಜಿಸಲು ಕ್ರಮ ಕೈಗೊಂಡಿದೆ. ಸ್ಮಾರ್ಟ್ ನಗರಿಯಾಗಿರುವ ಮಂಗಳೂರಿನಲ್ಲಿ ರಕ್ಷಣಾ ವಲಯ ಉತ್ಪನ್ನಗಳ ತಯಾರಿಕಾ ಕ್ಲಸ್ಟರ್ ಸ್ಥಾಪನೆಗೆ ಬೇಕಾದಂಥ ಅವಾಕಶ ಇರುವುದರಿಂದ ಇದು ಇಲ್ಲಿನ ಅಭಿವೃದ್ಧಿಗೂ ಇದು ಪೂರಕವಾಗಲಿದೆ. ಅಲ್ಲದೇ ಕರಾವಳಿಯಲ್ಲಿ ಉದ್ಯೋಗಾವಕಾಶಗಳ ಸೃಷ್ಟಿಗೆ ಇದರಿಂದ ಉತ್ತೇಜನ ಸಿಗಲಿದೆ.
ಮಂಗಳೂರಿನಲ್ಲಿ ರಕ್ಷಣಾ ವಲಯದ ಉತ್ಪನ್ನಗಳ ಮುಖ್ಯವಾಗಿ ವೈಮಾನಿಕ ಕ್ಷೇತ್ರದ ಉತ್ಪನ್ನಗಳ ತಯಾರಿಕಾ ಘಟಕವನ್ನು ಸ್ಥಾಪಿಸುವುದಾಗಿ ಸರಕಾರ ಘೋಷಣೆ ಮಾಡಿದೆ. ಇದು ಮಂಗಳೂರಿನ ಪಾಲಿಗೆ ಒಂದು ಆಶಾದಾಯಕ ಬೆಳವಣಿಗೆಯಾಗಿದ್ದು, ಕರಾವಳಿಯಲ್ಲಿ ಉದ್ಯೋಗಾವಕಾಶಗಳ ಸೃಷ್ಟಿಗೆ ಪೂರಕವಾಗಲಿದೆ.
ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ವೈಮಾನಿಕ ಪ್ರದರ್ಶನ ಏರೋ ಇಂಡಿಯಾ ಶೋ- 2019ರ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಅವರು ಶೀಘ್ರದಲ್ಲೇ ಮಂಗಳೂರಿನಲ್ಲಿ ರಕ್ಷಣಾ ವಲಯದ ಉತ್ಪನ್ನಗಳ ಕ್ಲಸ್ಟರ್ ಹಾಗೂ ಮೈಸೂರಿನಲ್ಲಿ ಎಂಆರ್‌ಒ ( ನಿರ್ವಹಣೆ, ದುರಸ್ತಿ, ಕೂಲಂಕಷ ಪರೀಕ್ಷಾ ಕೇಂದ್ರ) ಸ್ಥಾಪನೆಯಾಗಲಿದೆ ಎಂದು ಘೋಷಣೆ ಮಾಡಿದ್ದಾರೆ. ರಕ್ಷಣಾ ವಲಯದಲ್ಲಿ ಅದರಲ್ಲೂ ವೈಮಾನಿಕ ಕ್ಷೇತ್ರದ ಬೆಳವಣಿಗೆಯಲ್ಲಿ ಕರ್ನಾಟಕ ಮುಂಂಚೂಣಿಯಲ್ಲಿದೆ. ದೇಶದಲ್ಲಿ ಮೊದಲ ವೈಮಾಂತರಿಕ್ಷ ವಿಶೇಷ ಆರ್ಥಿಕ ವಲಯ ಬೆಳಗಾವಿಯಲ್ಲಿ ನಿರ್ಮಿಸಲಾಗಿದೆ.
ಬೆಂಗಳೂರಿನಲ್ಲಿ ಏರೋಸ್ಪೆಸ್ ಪಾರ್ಕ್ ಕಾರ್ಯನಿರ್ವಹಿಸುತ್ತಿದೆ. ಮಂಗಳೂರಿಗೆ ಇದು ವಿಸ್ತರಣೆಗೊಳ್ಳುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಮಂಗಳೂರಿನಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಯಮಿತ ( ಬಿಐಎಎಲ್) ವತಿಯಿಂದ ರಕ್ಷಣಾ ಕ್ಷೇತ್ರಕ್ಕೆ ಸಂಬಂಧಿಸಿದ ಉತ್ಪನ್ನಗಳ ತಯಾರಿಕಾ ಕ್ಲಸ್ಟರ್ ಸ್ಥಾಪಿಸುವುದು ಸರಕಾರದ ಉದ್ದೇಶವಾಗಿದೆ. ಇದು ಸ್ಥಳೀಯವಾಗಿ ವಿಪುಲ ಉದ್ಯೋಗಾವಕಾಶಗಳ ಸೃಷ್ಟಿ ಹಾಗೂ ಅರ್ಥಿಕ ಅಭಿವೃದ್ಧಿಗೂ ನೆರವಾಗಲಿದೆ.
ಮಹಾರಾಷ್ಟ್ರದಲ್ಲಿ ಹೊಸ 5 ಕ್ಲಸ್ಟರ್
ಮಹಾರಾಷ್ಟದಲ್ಲಿ ಈಗಾಗಲೇ ಅಲ್ಲಿನ ಸರಕಾರ ರಕ್ಷಣಾ ಉತ್ಪನ್ನಗಳು ಹಾಗೂ ವೈಮಾನಿಕ ಸಾಮಗ್ರಿಗಳ ಉತ್ಪಾದನೆಗೆ ಹೊಸದಾಗಿ 5 ಕ್ಲಸ್ಟರ್ ಗಳನ್ನು ಸ್ಥಾಪಿಸಲು ಮುಂದಾಗಿದೆ. ಪ್ರಥಮ ಹಂತದಲ್ಲಿ ಇದಕ್ಕಾಗಿ 15,000 ಕೋಟಿ ರೂ. ವಿನಿಯೋಗಿಸಲು ರೂಪುರೇಷೆ ಸಿದ್ಧಪಡಿಸಿದೆ. 5 ಕ್ಲಸ್ಟರ್‌ಗಳ ಸ್ಥಾಪನೆಯಿಂದ ಹೊಸದಾಗಿ ಸುಮಾರು 1 ಲಕ್ಷ ಉದ್ಯೋಗ ಸ್ಥಾಪನೆಯಾಗಲಿವೆ ಎಂದು ನಿರೀಕ್ಷಿಸಲಾಗಿದೆ.
ಪ್ರಸ್ತುತ ಭಾರತದ ರಕ್ಷಣಾ ವಲಯದ ಅವಶ್ಯಕತೆಗಳಲ್ಲಿನ ಶೇ. 60ರಷ್ಟು ಹಾರ್ಡ್ವೇರ್‌ಗಳನ್ನು ವಿದೇಶಗಳಿಂದ ಆಮದು ಮಾಡಿಕೊಳ್ಳಲಾಗುತ್ತಿದೆ. ಕೇಂದ್ರ ಸರಕಾರ ರಕ್ಷಣಾ ವಲಯದ ಸಾಮಗ್ರಿಗಳ ಆಮದು ಪ್ರಮಾಣವನ್ನು ಕನಿಷ್ಠ ಮಟ್ಟಕ್ಕಿಳಿಸಲು ಕಾರ್ಯೋನ್ಮುಖವಾಗಿದೆ. ಈ ನಿಟ್ಟಿನಲ್ಲಿ ಮೇಕ್ ಇಂಡಿಯಾಕ್ಕೆ ಉತ್ತೇಜನ ನೀಡಿ ಭಾರತದಲ್ಲೇ ಇವುಗಳನ್ನು ಉತ್ಪಾದಿಸಲು ಉತ್ತೇಜನ ನೀಡಲಾಗುತ್ತಿದೆ. ಕೇಂದ್ರ ಸರಕಾರ ಈಗಾಗಲೇ ಕರ್ನಾಟಕ, ಆಂಧ್ರ ಪ್ರದೇಶ, ಮಧ್ಯಪ್ರದೇಶ , ಮಹಾರಾಷ್ಟ್ರ ಹಾಗೂ ಛತ್ತೀಸ್‌ಘಡದಲ್ಲಿ ರಕ್ಷಣಾ ವಲಯದ ಉತ್ಪನ್ನಗಳ ಉತ್ಪಾದನಾ ಘಟಕಗಳನ್ನು ಮುಂದಿನ 5 ವರ್ಷಗಳಲ್ಲಿ ಸ್ಥಾಪಿಸಲು ಉದ್ದೇಶಿಸಿದ್ದು ಈ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಉದ್ದೇಶಿಸಿದೆ.
ರಕ್ಷಣಾ ಇಲಾಖೆಗೆ ಸಂಬಂಧಿಸಿದ ಉತ್ಪಾದನೆಯಲ್ಲಿ ಗಣನೀಯವ ಪ್ರಮಾಣದಲ್ಲಿ ಏರಿಕೆಯಾಗಿದ್ದು, 2017- 18ರಲ್ಲಿ 58,163 ಕೋಟಿ ರೂ. ಮೊತ್ತದ ಉತ್ಪನ್ನಗಳನ್ನು ತಯಾರಿಸಲಾಗಿದೆ. ಇದರಲ್ಲಿ ಶೇ. 40ರಷ್ಟು ಉತ್ಪನ್ನಗಳ ತಯಾರಿಕೆಯನ್ನು ಖಾಸಗಿ ಕಂಪೆನಿಗಳಿಗೆ ಹೊರಗುತ್ತಿಗೆ ನೀಡಲಾಗಿದೆ. ಉತ್ತರ ಪ್ರದೇಶ ಹಾಗೂ ತಮಿಳುನಾಡಿನಲ್ಲಿ ಎರಡು ರಕ್ಷಣಾ ಕೈಗಾರಿಕಾ ಕಾರಿಡಾರ್‌ಗಳನ್ನು ನಿರ್ಮಿಸಲಾಗಿದೆ. ತಮಿಳುನಾಡಿನ ತಿರುಚಿನಾಪಳ್ಳಿಯಲ್ಲಿ ಇತ್ತೀಚೆಗೆ ಮತ್ತೂಂದು ಕಾರಿಡಾರ್ ಸೇರ್ಪಡೆಗೊಂಡಿದೆ. ಇದರಿಂದ ರಕ್ಷಣ ಉದ್ಯಮಕ್ಕೆ 3,200 ಕೋಟಿ ರೂ. ಹರಿದು ಬರುವ ನಿರೀಕ್ಷೆ ಇದೆ ಎಂದು ಅಂದಾಜಿಸಲಾಗಿದೆ.
ಕರ್ನಾಟಕ ಸರಕಾರ ಈಗಾಗಲೇ ವಿವಿಧ ಜಿಲ್ಲೆಗಳಲ್ಲಿ ಕೈಗಾರಿಕಾ ಕ್ಲಸ್ಟರ್ ಗಳನ್ನು ಸ್ಥಾಪಿಸಿ ಜಿಲ್ಲೆಗಳನ್ನು ಚೀನ ಮಾದರಿಯಲ್ಲಿ ಕೈಗಾರಿಕೆಗಳಿಗೆ ಉತ್ತೇಜಿಸಲು ಕ್ರಮ ಕೈಗೊಂಡಿದೆ. ರಾಜ್ಯದ ಒಂಭತ್ತು ಜಿಲ್ಲೆಗಳಲ್ಲಿ ಚೀನ ಮಾದರಿಯಲ್ಲಿ ಕೈಗಾರಿಕಾ ಕ್ಲಸ್ಟರ್‌ಗಳು ಬರುತ್ತಿವೆ. ಕೊಪ್ಪಳದಲ್ಲಿ ಟಾಯ್ಸ ಕ್ಲಸ್ಟರ್ ಹಾಗೂ ಬಳ್ಳಾರಿಯಲ್ಲಿ ಜವಳಿ ಕ್ಲಸ್ಟರ್ ಗಳು ಇತ್ತೀಚೆಗೆ ಉದ್ಘಾಟನೆಗೊಂಡಿವೆ. ಚಿಕ್ಕಬಳ್ಳಾಪುರದಲ್ಲಿ ಮೊಬೈಲ್ ಫೋನ್, ಮೈಸೂರಿನಲ್ಲಿ ಪ್ರಿಂಟೆಡ್ ಸರ್ಕ್ನೂಟ್ ಬೋರ್ಡ್ಸ್, ಹಾಸನದಲ್ಲಿ ಟೈಲ್ಸ್, ಕಲಬುರಗಿಯಲ್ಲಿ ಸೋಲಾರ್ ಪ್ಯಾನಲ್ಸ್, ಚಿತ್ರದುರ್ಗದಲ್ಲಿ ಎಲ್‌ಇಡಿ ಲೈಟ್ಸ್, ಬೀದರ್‌ನಲ್ಲಿ ಕೃಷಿ ಉಪಕರಣಗಳು ಹಾಗೂ ತುಮಕೂರಿನಲ್ಲಿ ಸ್ಪೋರ್ಟ್ಸ್ ಗೂಡ್ಸ್ ಕ್ಲಸ್ಟರ್‌ಗಳು ಸ್ಥಾಪಿಸಲು ಸರಕಾರ ಕಾರ್ಯಯೋಜನೆ ರೂಪಿಸಿದೆ. ಇದರಿಂದ 9 ಲಕ್ಷ ಮಂದಿಗೆ ಉದ್ಯೋಗ ಲಭಿಸಲಿದೆ ನಿರೀಕ್ಷಿಸಲಾಗಿದೆ. ಇದೇ ಮಾದರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ವಿಶೇಷ ಕೈಗಾರಿಕಾ ಕ್ಲಸ್ಟರ್‌ವೊಂದರ ಸ್ಥಾಪನೆಯಾಗಬೇಕು ಎಂಬುದು ಜಿಲ್ಲೆಯ ಜನರ ನಿರೀಕ್ಷೆಯಾಗಿತು.
ಶೀಘ್ರ ಅನುಷ್ಠಾನಕ್ಕೆ ಬರಲಿ
ಮುಖ್ಯಮಂತ್ರಿ ಕುಮಾರಸ್ವಾಮಿಯವರು ಮಂಗಳೂರಿನಲ್ಲಿ ರಕ್ಷಣಾ ಉತ್ಪನ್ನಗಳ ಘಟಕವೊಂದನ್ನು ಸ್ಥಾಪಿಸುವುದಾಗಿ ಮಾಡಿರುವ ಘೋಷಣೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ. ಮಂಗಳೂರಿನಲ್ಲಿ ಈಗಾಗಲೇ ಕೋಸ್ಟ್‌ಗಾರ್ಡ್ ನ ತರಬೇತಿ ಕೇಂದ್ರ ಮಂಜೂರುಗೊಂಡಿದೆ. ಮಂಗಳೂರಿನಲ್ಲಿ ರಕ್ಷಣಾ ಉತ್ಪನ್ನಗಳ ಘಟಕ ಸ್ಥಾಪನೆಗೆ ಪೂರಕ ವಾತಾವರಣವಿದೆ. ತಾಂತ್ರಿಕ ಮಾನವ ಸಂಪನ್ಮೂಲವೂ ಲಭ್ಯವಿದೆ. ಉದ್ಯಮ ಸ್ಥಾಪನೆಗೆ ಪೂರಕವಾದ ವಾತಾವರಣವೂ ಇದೆ. ಜಿಲ್ಲೆಯಲ್ಲಿ ಈ ಹಿಂದೆ ಐಟಿ, ಆಹಾರ ಸಂಸ್ಕರಣೆ, ವಸ್ತ್ರೋದ್ಯಮ, ಪ್ಲಾಸ್ಟಿಕ್ ಪಾರ್ಕ್, ಜವುಳಿ ( ಆ್ಯಪೆರಾಲ್) ಪಾರ್ಕ್, ಐಟಿ ಪಾರ್ಕ್, ಕೊಕೊನಟ್ ಪಾರ್ಕ್, ಜಾಷಧ ತಯಾರಿ ಪಾರ್ಕ್, ಆಟೋಮೊಬೈಲ್ ಪಾರ್ಕ್ ಮುಂತಾದ ಯೋಜನೆಗಳನ್ನು ಪ್ರಸ್ತಾವನೆ ಮಾಡಲಾಗಿತ್ತು. ಆದರೆ ಇದ್ಯಾವುದು ಸದ್ಯಕ್ಕೆ ಸ್ಥಾಪನೆಗೊಳ್ಳುವ ಲಕ್ಷಣಗಳು ಗೋಚರಿಸುತ್ತಿಲ್ಲ. ಈಗ ರಕ್ಷಣಾ ಉತ್ಪನ್ನಗಳ ಘಟಕ ಸ್ಥಾಪಿಸುವ ಪ್ರಸ್ತಾವವೂ ಸಾಲಿನ ಸೇರದೆ ಶೀಘ್ರ ಅನುಷ್ಠಾನಕ್ಕೆ ಬರುವ ನಿಟ್ಟಿನಲ್ಲಿ ಪ್ರಕ್ರಿಯೆಗಳು ಆರಂಭಗೊಳ್ಳಬೇಕಾಗಿದೆ. ನಮ್ಮ ಜಿಲ್ಲೆಯಿಂದಲೂ ಪ್ರಯತ್ನಗಳು ನಡೆಯಬೇಕಾಗಿದೆ.
ಕೇಶವ ಕುಂದರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.