ಬಾಲಕೃಷ್ಣನ ಸನ್ನಿಧಿಯಲ್ಲಿ ಚಿಣ್ಣರ ಕಲರವ ಮಾಸ

Team Udayavani, Dec 28, 2018, 6:00 AM IST

45.jpg

ಶ್ರೀಕೃಷ್ಣಮಠದಲ್ಲಿ ಶ್ರೀಕೃಷ್ಣಾಷ್ಟಮಿ ಸಮಯದಲ್ಲಿ ಒಂದೇ ದಿನ ಕೃಷ್ಣವೇಷಧಾರಿಗಳು ಸೇರಿದಾಗ ಚಿಣ್ಣರ ಲರವಕಂಡುಬಂದರೆ ಅದೇ ಕೃಷ್ಣ ನಾಡಿನಲ್ಲಿ ಈಗ ನಿತ್ಯ ಚಿಣ್ಣರ ಕಲರವ ಕಂಡುಬರುತ್ತಿದೆ. 

2002ರಲ್ಲಿ ಪರ್ಯಾಯದ ಅವಧಿ ಶ್ರೀಕೃಷ್ಣಮಠದಿಂದ ಶಾಲಾ ಮಕ್ಕಳಿಗೆ ಮಧ್ಯಾಹ್ನದೂಟ ಯೋಜನೆಯನ್ನು ಶ್ರೀಪಲಿಮಾರು ಮಠದ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು  ಆರಂಭಿಸಿದಾಗ ಅದೇ ವರ್ಷ ಗ್ರಾಮೀಣ ಭಾಗದ ಮಕ್ಕಳಿಗೆ ಸಾಂಸ್ಕೃತಿಕ ಪ್ರತಿಭೆ ತೋರಿಸಲು ಅವಕಾಶ ಸಿಗಬೇಕೆಂದು ಚಿಣ್ಣರ ಸಂತರ್ಪಣೆ ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ “ಚಿಣ್ಣರ ಮಾಸ’ವನ್ನು ಆರಂಭಿಸಿದರು. ಅಂದಿನಿಂದ ಪ್ರತಿವರ್ಷ ಚಿಣ್ಣರ ಮಾಸಾಚರಣೆ ನಡೆಯುತ್ತಿದ್ದು ಈಗ ಅದೇ ಪಲಿಮಾರು ಶ್ರೀಪಾದರ ಎರಡನೆಯ ಪರ್ಯಾಯದಲ್ಲಿ ಮತ್ತೆ ಚಿಣ್ಣರ ಮಾಸಾಚರಣೆ ನಡೆಯುತ್ತಿದೆ. 

ಒಟ್ಟು 130 ಶಾಲೆಗಳು ಯೋಜನೆಯಲ್ಲಿದ್ದರೂ ಅದರಲ್ಲಿರುವ ಹಾಸ್ಟೆಲ್‌ಗ‌ಳು, ವಿಶೇಷ ಶಾಲೆ, ಕಡಿಮೆ ಸಂಖ್ಯೆಯ ಶಾಲೆಗಳನ್ನು ಹೊರತುಪಡಿಸಿ 70 ಶಾಲೆಗಳ ಮಕ್ಕಳು ಚಿಣ್ಣರ ಮಾಸಾಚರಣೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. 

ಕಂಗೀಲು ನೃತ್ಯ, ಕೋಲಾಟ, ಜನಪದ ನೃತ್ಯ, ಯಕ್ಷಗಾನ, ನಾಟಕ ಮೊದಲಾದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಚಿಕ್ಕ ಚಿಕ್ಕ ಮಕ್ಕಳು ಆಡಿ ತೋರಿಸುತ್ತಿದ್ದಾರೆ. ಡಿ. 1ರಂದು ಆರಂಭಗೊಂಡ ಮಾಸಾಚರಣೆ ಡಿ. 24ರವರೆಗೆ ಚಿಣ್ಣರ ಮಾಸಾಚರಣೆ ನಡೆಯಿತು.  ಪ್ರತಿನಿತ್ಯ ಸಂಜೆ 4 ಗಂಟೆಯಿಂದ ಆರಂಭವಾಗುತ್ತದೆ. ಸುಮಾರು 40 ನಿಮಿಷಗಳವರೆಗೆ ಒಂದೊಂದು ಶಾಲೆಗಳಂತೆ ನಿತ್ಯ ಮೂರು ಶಾಲೆಗಳ ಮಕ್ಕಳು ನಲಿದು ತಮ್ಮ ಪ್ರತಿಭೆಗಳನ್ನು ತೋರಿಸುತ್ತಿದ್ದಾರೆ. ದೂರದೂರದ ಸುಮಾರು 2,500 ಮಕ್ಕಳು ಈ ಕಾರ್ಯಕ್ರಮದ ಮೂಲಕ ತಮ್ಮ ಸಾಮರ್ಥ್ಯವನ್ನು ಕೃಷ್ಣಾರ್ಪಣಗೊಳಿಸುತ್ತಿದ್ದಾರೆ. ಪ್ರತಿಯೊಂದು ಶಾಲೆಗಳ ವಿದ್ಯಾರ್ಥಿಗಳಿಗೆ ಬಂದು ಹೋಗುವ ಖರ್ಚು, ಪ್ರಸಾದ, ಪ್ರಮಾಣಪತ್ರ ನೀಡಲಾಗುತ್ತಿದೆ.  ಉತ್ತಮ ಪ್ರದರ್ಶನ ನೀಡಿದ ಶಾಲೆಗಳಿಗೆ ವಿಶೇಷ ಬಹುಮಾನವನ್ನೂ ನೀಡಲಾಗುತ್ತಿದೆ. ಕಲಾವಿದರಾದ ನಾರಾಯಣ ಮತ್ತು ಅಜಿತ್‌ ಅವರು ತೀರ್ಪುಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

 ಪ್ರತಿಯೊಬ್ಬ ವಿದ್ಯಾರ್ಥಿಯೂ ಶ್ರೀಕೃಷ್ಣಮಠದೊಂದಿಗೆ ಅವಿಭಾಜ್ಯ ಅಂಗವೆಂಬ ಂತೆ ಚಿಣ್ಣರ ಮಾಸಾಚರಣೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
       – ಶ್ರೀನಿವಾಸ ರಾವ್‌ ,ಕಾರ್ಯದರ್ಶಿ, ಚಿಣ್ಣರ ಸಂತರ್ಪಣೆ ಯೋಜನೆ, ಶ್ರೀಕೃಷ್ಣಮಠ 

ಮಟಪಾಡಿ ಕುಮಾರಸ್ವಾಮಿ

ಟಾಪ್ ನ್ಯೂಸ್

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

Jarkahnad–CM-Soren

Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ನ.28ಕ್ಕೆ ಪದಗ್ರಹಣ

120

Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

IPL Mega Auction: Here is the auction information for the third set of players

IPL Mega Auction: ಮೂರನೇ ಸೆಟ್‌ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

ಸಂಪ್ರದಾಯಬದ್ಧವಾಗಿ ರಂಗಶಿಸ್ತಿನೊಂದಿಗೆ ಹೊಸತನ ಅಳವಡಿಸಿಕೊಂಡರೆ ತಪ್ಪಿಲ್ಲ

Ropesh Shetty: ಹಳ್ಳಿಯ ಸೊಗಡಿನಲ್ಲಿ ರೂಪೇಶ್‌ ಜೈಕಾರ !

Ropesh Shetty: ಹಳ್ಳಿಯ ಸೊಗಡಿನಲ್ಲಿ ರೂಪೇಶ್‌ ಜೈಕಾರ !

1-trrr

Yakshagana: ತೆಂಕುತಿಟ್ಟಿನ “ರಂಗಸ್ಥಳದ ರಾಜ’ʼ ಅರುವ ಕೊರಗಪ್ಪ ಶೆಟ್ಟಿ

Idu Entha Lokavayya: “ಕೋಸ್ಟಲ್‌” ನಿಂದ ಕರುನಾಡು!

Idu Entha Lokavayya: “ಕೋಸ್ಟಲ್‌” ನಿಂದ ಕರುನಾಡು!

3

Yakshagana: ಚಪ್ಪಾಳೆಗಾಗಿ ರಸಾಭಾಸ ಮಾಡಬಾರದು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ

Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು

Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

Jarkahnad–CM-Soren

Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ನ.28ಕ್ಕೆ ಪದಗ್ರಹಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.