ಬೆಳುವಾಯಿಂದ ಅಮೆರಿಕಕ್ಕೆ ಯಕ್ಷಗಾನ‌ ರಿಂಗಣ 

Team Udayavani, Aug 24, 2018, 5:47 PM IST

5.jpg

 ಬೆಳುವಾಯಿ ಶ್ರೀ ಯಕ್ಷದೇವ ಮಿತ್ರ ಕಲಾ ಮಂಡಳಿಯ ಸ್ಥಾಪಕ ಎಮ್ ದೇವಾನಂದ್‌ ಭಟ್‌ ಯಕ್ಷಗಾನ ಕಲೆ ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳಗಬೇಕು ಎಂಬ ಆಶಯದಿಂದ ಪೂರ್ಣ ಪ್ರಮಾಣದ ಯಕ್ಷಗಾನ ತಂಡವನ್ನು ಕಟ್ಟಿಕೊಂಡು ಅಮೆರಿಕದ ಹಲವೆಡೆ ಪ್ರದರ್ಶನ ನೀಡಿ ವಿದೇಶದ ಮಣ್ಣಿನಲ್ಲಿ ಕರುನಾಡ ಕಲೆಯ ಕಂಪು ಹರಡಿದ್ದಾರೆ. 

 ಮೊದಲು ನ್ಯೂಯಾರ್ಕ್‌ ಎಡಿಸನ್‌ನಲ್ಲಿರುವ ಪುತ್ತಿಗೆ ಮಠಕ್ಕೆ ಆಗಮಿಸಿದ ತಂಡ ಪ್ರದರ್ಶಿಸಿದ “ಮಹಿಷ ವಧೆ’ ಪ್ರಸಂಗ ಪ್ರಶಂಸೆಗೆ ಪಾತ್ರವಾಯಿತು. ಅಲ್ಲಿಂದ ಮುಂದೆ ಪೆನ್ಸಿಲ್ವೆನಿಯ ಶೃಂಗೇರಿ ಮಠದಲ್ಲಿ ಭಗವತಾರಾಧನೆ ಪಟ್ಲ ಭಾಗವತ ಬಳಗದಿಂದ ಸೇವಾರೂಪವಾಗಿ ಗೈದು ಮುಂದೆ ಬೋಸ್ಟನ್‌ನಲ್ಲಿ “ಮಹಿಷ ವಧೆ’ ಪ್ರದರ್ಶಿಸಿತು. ರಾಲೆಯಲ್ಲಿ “ಕೃಷ್ಣಲೀಲೆ – ಕಂಸವಧೆ’ಯಾದ ಬಳಿಕ ತಂಡವನ್ನು ಅಮೆರಿಕಕ್ಕೆ ಬರಿಸುವಲ್ಲಿ ಪ್ರಯತ್ನ ಪಟ್ಟ ಬಾಲಕೃಷ್ಣ ಭಟ್‌ ಅವರ ಮೇರಿಲ್ಯಾಂಡ್‌ ಭಕ್ತಾಂಜನೇಯ ದೇವಸ್ಥಾನದಲ್ಲಿ ಸ್ಥಳೀಯ ಕಲಾವಿದರನ್ನೊಳಗೊಂಡ “ಸಂಪೂರ್ಣ ಶ್ರೀದೇವಿ ಮಹಾತ್ಮೆ ಯಶಸ್ವಿಯಾಗಿ ಪ್ರದರ್ಶಿಸಲ್ಪಟ್ಟು ಜನಮನತಟ್ಟಿತು. 

ಅಲ್ಲಿಂದ ಡಲ್ಲಾಸ್‌ಗೆ ಬಂದು “ಸುಧನ್ವಾರ್ಜುನ’ ಯಕ್ಷ ರಸದೌತಣವನ್ನು ಉಣಬಡಿಸಿತು. ಮುಂದೆ ಹೂಸ್ಟನ್‌ ಕಡೆ ಸಾಗಿ ಕೃಷ್ಣ ವೃಂದಾವನದ ಬಯಲು ಪ್ರದೇಶದಲ್ಲಿ ಪಣಂಬೂರಿನ ವಾಸು ಐತಾಳ್‌ ಬಳಗದ ಸಾರಥ್ಯದಲ್ಲಿ ಆಮೆರಿಕದಲ್ಲಿ ಮೊದಲ ಬಾರಿಗೆ ಎಂಬಂತೆ ಊರಿನ ರಂಗಸ್ಥಳವನ್ನೇ ತಯಾರಿಸಿ “ಮಹಿಷ ವಧೆ’ ಪ್ರದರ್ಶಿಸಿದರು. ಇದೊಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ದಾಖಲಾರ್ಹ ವಿಷಯವಾಗಿತ್ತು. ಕನ್ನಡಿಗರು ಮಾತ್ರವಲ್ಲದೆ ಅನ್ಯರಾಜ್ಯಗಳ ಜನರು ಮತ್ತು ವಿದೇಶಿಯರು ಯಕ್ಷಗಾನವನ್ನು ಆಸ್ವಾದಿಸಿದ್ದು ವಿಶೇಷವಾಗಿತ್ತು. 

 ಭಾಗವತರಾಗಿ ಪಟ್ಲ ಸತೀಶ ಶೆಟ್ಟಿ, ಮದ್ದಳೆಯಲ್ಲಿ ಪದ್ಮನಾಭ ಉಪಾಧ್ಯ, ಚೆಂಡೆಯಲ್ಲಿ ಎಮ್‌. ದೇವಾನಂದ ಭಟ್‌ ಮೆಚ್ಚುಗೆಗೆ ಪಾತ್ರರಾದರು. ಮುಮ್ಮೇಳದಲ್ಲಿ ಮಲ್ಪೆ ಲಕ್ಷ್ಮೀನಾರಾಯಣ ಸಾಮಗ, ಚಂದ್ರಶೇಖರ ಧರ್ಮಸ್ಥಳ, ಮಹೇಶ್‌ ಮಣಿಯಾಣಿ, ಪ್ರಶಾಂತ ಶೆಟ್ಟಿ ನೆಲ್ಯಾಡಿ, ಮೋಹನ ಬೆಳ್ಳಿಪ್ಪಾಡಿ ಹೀಗೆ ಮತ್ತಿತರರು ಹೊರನಾಡ ಕನ್ನಡಿಗರನ್ನು ರಂಜಿಸಿದರು.ಆಮೆರಿಕದಂತಹ ದೇಶದಲ್ಲಿ ಯಕ್ಷಗಾನದ ಕಂಪು ಹರಡಿದ ತಂಡ ಅಭಿನಂದನೀಯ. 

ಸುಬ್ರಮಣ್ಯ ಶಾನುಭಾಗ್‌ 

ಟಾಪ್ ನ್ಯೂಸ್

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

purushotham-bilimale

Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!

Naxals-CM-Office

Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ

Sathish-jarakhoili

Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್‌ ಜಾರಕಿಹೊಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-1

ಪಾಡ್ದನದೆಡೆಗೆ ನಿರಾಸಕ್ತಿ- ಜಾನಪದ ಆಕಾಡೆಮಿ ರಾಜ್ಯಪ್ರಶಸ್ತಿ ಪುರಸ್ಕೃತೆ ಅಪ್ಪಿ ಪಾಣಾರ ಕಳವಳ

19

ಸಂಪ್ರದಾಯಬದ್ಧವಾಗಿ ರಂಗಶಿಸ್ತಿನೊಂದಿಗೆ ಹೊಸತನ ಅಳವಡಿಸಿಕೊಂಡರೆ ತಪ್ಪಿಲ್ಲ

Ropesh Shetty: ಹಳ್ಳಿಯ ಸೊಗಡಿನಲ್ಲಿ ರೂಪೇಶ್‌ ಜೈಕಾರ !

Ropesh Shetty: ಹಳ್ಳಿಯ ಸೊಗಡಿನಲ್ಲಿ ರೂಪೇಶ್‌ ಜೈಕಾರ !

1-trrr

Yakshagana: ತೆಂಕುತಿಟ್ಟಿನ “ರಂಗಸ್ಥಳದ ರಾಜ’ʼ ಅರುವ ಕೊರಗಪ್ಪ ಶೆಟ್ಟಿ

Idu Entha Lokavayya: “ಕೋಸ್ಟಲ್‌” ನಿಂದ ಕರುನಾಡು!

Idu Entha Lokavayya: “ಕೋಸ್ಟಲ್‌” ನಿಂದ ಕರುನಾಡು!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

purushotham-bilimale

Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.