ಶ್ರೀದುರ್ಗಾ ಮಕ್ಕಳ ಮೇಳಕ್ಕೆ ವಿಶ್ವೇಶತೀರ್ಥ ಪ್ರಶಸ್ತಿ 

Team Udayavani, Nov 16, 2018, 6:00 AM IST

16.jpg

ಯಕ್ಷಗಾನ ಕಲಾರಂಗ ಉಡುಪಿ ಇವರು ಯಕ್ಷಗಾನ ಸಂಘಟನೆಗೆ ನೀಡುವ ಪ್ರತಿಷ್ಠಿತ ಶ್ರೀ ವಿಶ್ವೇಶತೀರ್ಥ ಪ್ರಶಸ್ತಿಗೆ ಶ್ರೀದುರ್ಗಾ ಮಕ್ಕಳ ಮೇಳ ಕಟೀಲು ಆಯ್ಕೆಯಾಗಿದೆ.ನ.25 ರಂದು ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿಯನ್ನು ಪ್ರದಾನಿಸಲಾಗುವುದು. ಎಳೆಯರಿಗೆ ಯಕ್ಷಶಿಕ್ಷಣ ನೀಡುತ್ತಾ ನಿರಂತರ ಪ್ರದರ್ಶನಗಳೊಂದಿಗೆ ಅವರನ್ನು ಪ್ರೇರೇಪಿಸುತ್ತಾ ತೆಂಕುತಿಟ್ಟು ಯಕ್ಷಗಾನದಲ್ಲಿ ಹೊಸ ಸಂಚಲನ ಉಂಟುಮಾಡಿದ ಸಂಸ್ಥೆ ಶ್ರೀದುರ್ಗಾ ಮಕ್ಕಳ ಮೇಳ ಕಟೀಲು. ಈಗ ಮೊದಲಿನಂತೆ ಮೇಳದಲ್ಲಿ ಕಲಾವಿದರು ತಯಾರಾಗುತ್ತಿಲ್ಲ. ಶಾಲಾಶಿಕ್ಷಣದೊಂದಿಗೆ ಯಕ್ಷಶಿಕ್ಷಣ ಕೊಡಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ಕಟೀಲಿನ ಹರಿನಾರಾಯಣದಾಸ ಅಸ್ರಣ್ಣರು ಹತ್ತು ವರ್ಷಗಳ ಹಿಂದೆ ಶ್ರೀದುರ್ಗಾ ಮಕ್ಕಳ ಮೇಳ ಸ್ಥಾಪಿಸಿ ನಿರಂತರ ಕಲಿಕೆ ಪ್ರದರ್ಶಗಳ ಮೂಲಕ ಅವರು ಈ ಕ್ಷೇತ್ರದಲ್ಲಿ ಮಾಡಿದ ಸಾಧನೆ ಗಮನಾರ್ಹ. 

 ಪ್ರತಿ ಶನಿವಾರ, ಭಾನುವಾರ ಮಕ್ಕಳಿಗೆ ಯಕ್ಷಗಾನ ತರಬೇತಿ ನೀಡಲಾಗುತ್ತಿದೆ. ಲೀಲಾವತಿ ಬೈಪಡಿತ್ತಾಯ, ಹರಿನಾರಾಯಣ ಬೈಪಡಿತ್ತಾಯ, ಸರ್ಪಂಗಳ ಈಶ್ವರ ಭಟ್‌, ರಾಜೇಶ್‌ ಐ. ಗುರುಗಳಾಗಿ ನಾಲ್ಕು ವಿಭಾಗಗಳಲ್ಲಿ ಭಾಗವತಿಕೆ, ಚಂಡೆ-ಮದ್ದಲೆ, ಮಾತುಗಾರಿಕೆ, ಯಕ್ಷನಾಟ್ಯ ಕಲಿಸಿಕೊಡುತ್ತಿದ್ದಾರೆ. ದಿವಾಣ ಶಂಕರ ಭಟ್ಟರಿಂದ ಮುಖವರ್ಣಿಕೆ ಶಿಬಿರ, ಕೆ. ಗೋವಿಂದ ಭಟ್ಟರಿಂದ ವಿಶೇಷ ನಾಟ್ಯ ತರಗತಿ ನಡೆಸಲಾಗುತ್ತಿದೆ. ಈ ಹತ್ತು ವರ್ಷಗಳಲ್ಲಿ 275 ಪ್ರದರ್ಶನಗಳನ್ನು ನೀಡಿದ್ದಾರೆ. ಇದರಲ್ಲಿ ಒಟ್ಟು 272 ವಿದ್ಯಾರ್ಥಿಗಳು ಭಾಗವಹಿಸಿರುತ್ತಾರೆ. ಕೃಷ್ಣಲೀಲೆ-ಕಂಸವಧೆ, ಇಂದ್ರಜಿತು ಕಾಳಗ, ವೀರಮಣಿ ಕಾಳಗ, ಸುದರ್ಶನ ವಿಜಯ, ಪಾಂಚಜನ್ಯ, ವೀರ ಬಭುವಾಹನ, ಮಹಿಷ ಮರ್ದಿನಿ, ಜಾಂಬವತಿ ಕಲ್ಯಾಣ, ಪಂಚವಟಿ, ಮಾಯಾತಿಲೋತ್ತಮೆ, ದûಾಧರ, ಗಿರಿಜಾ ಕಲ್ಯಾಣ ಮೊದಲಾದ ಇಪ್ಪತ್ತಕ್ಕೂ ಹೆಚ್ಚು ಪೌರಾಣಿಕ ಪ್ರಸಂಗಗಳು ಅಡಕವಾಗಿರುವುದು ಇನ್ನೊಂದು ವೈಶಿಷ್ಟ. ಈಗ ಯಕ್ಷಗಾನದಿಂದ ಮರೆಯಾಗುತ್ತಿರುವ ಪೂರ್ವರಂಗವನ್ನು ಮಕ್ಕಳಿಗೆ ಕಲಿಸಿಕೊಟ್ಟು ಪ್ರದರ್ಶಿಸಲಾಗುತ್ತಿದೆ. ಕೋಡಂಗಿ, ಬಾಲಗೋಪಾಲ, ಪೀಠಿಕಾ ಸ್ತ್ರೀವೇಷ, ಮುಖ್ಯ ಸ್ತ್ರೀವೇಷ, ಚಂದ ಭಾಮ, ಷಣ್ಮುಖ ಸುಬ್ರಾಯ, ರಂಗ-ರಂಗಿ, ಅರೆಪಾವಿನಾಟ, ಚಪ್ಪರಮಂಚ ಮತ್ತು ಕೋಲಾಟ ಇವುಗಳೆಲ್ಲಾ ಪೂರ್ವ ರಂಗ ಪ್ರದರ್ಶನದಲ್ಲಿ ಒಳಗೊಂಡಿದೆ. ಕೃಷ್ಣನ ಒಡ್ಡೋಲಗ, ರಾಮನ ಒಡ್ಡೋಲಗ, ಪಾಂಡವರ ಒಡ್ಡೋಲಗ, ಹನುಮಂತನ ಒಡ್ಡೋಲಗ, ಬಣ್ಣದ ಒಡ್ಡೋಲಗವೂ ಸೇರಿದಂತೆ ಹತ್ತು ಒಡ್ಡೋಲಗಗಳನ್ನು ಪ್ರದರ್ಶಿಸಲು ಇಲ್ಲಿಯ ಮಕ್ಕಳು ಸಮರ್ಥರಾಗಿದ್ದಾರೆ. ನಾಡಿನಾದ್ಯಂತ ಪ್ರದರ್ಶನ ನೀಡಿದ ಹಿರಿಮೆ ಸಂಸ್ಥೆಗಿದೆ. 

ಕಟೀಲು ಶ್ರೀದುರ್ಗಾ ಪರಮೇಶ್ವರಿ ದೇವಳದ ಆಶ್ರಯ, ದಾನಿಗಳ ಸಹಕಾರದಿಂದ ಟ್ರಸ್ಟ್‌ ದೂರಗಾಮಿ ಯೋಜನೆಗಳೊಂದಿಗೆ ಕಾರ್ಯಪ್ರವೃತ್ತವಾಗಿದೆ. ಬೆಳೆಯ ಸಿರಿ ಮೊಳಕೆಯಲ್ಲಿ ಎಂಬಂತೆ ಸಂಸ್ಥೆ ಭದ್ರ ಭವಿಷ್ಯದ ಮುನ್ಸೂಚನೆಯನ್ನು ಶೈಶವದಲ್ಲೇ ತೋರಿಸಿದೆ. 

ಪ್ರೊ| ನಾರಾಯಣ ಎಂ. ಹೆಗಡೆ 

ಟಾಪ್ ನ್ಯೂಸ್

Karnataka ಪಠ್ಯಪುಸ್ತಕ ಬೇಡಿಕೆ: ಜ.10ರೊಳಗೆ ದೃಢೀಕರಣ ರಾಜ್ಯಹಂತಕ್ಕೆ ಕಳುಹಿಸಿ

Karnataka ಪಠ್ಯಪುಸ್ತಕ ಬೇಡಿಕೆ: ಜ.10ರೊಳಗೆ ದೃಢೀಕರಣ ರಾಜ್ಯಹಂತಕ್ಕೆ ಕಳುಹಿಸಿ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Bowling Ranking: 907 ರೇಟಿಂಗ್‌ ಅಂಕ ಬುಮ್ರಾ ದಾಖಲೆ

Bowling Ranking: 907 ರೇಟಿಂಗ್‌ ಅಂಕ ಬುಮ್ರಾ ದಾಖಲೆ

Laxmi Hebbalkar  ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Test Cricket: ವರ್ಷದ ಮೊದಲ ಟೆಸ್ಟ್‌… ಕೆಲವರಿಗೆ ಅಂತಿಮ ಟೆಸ್ಟ್‌?

Test Cricket: ವರ್ಷದ ಮೊದಲ ಟೆಸ್ಟ್‌… ಕೆಲವರಿಗೆ ಅಂತಿಮ ಟೆಸ್ಟ್‌?

Minister ಸೋಮಣ್ಣ, ಸಿ.ಎಸ್‌. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್‌: ಬಂಧನ

Minister ಸೋಮಣ್ಣ, ಸಿ.ಎಸ್‌. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್‌: ಬಂಧನ

Sydney Test: ಕ್ರಿಕೆಟಿಗರನ್ನು ಭೇಟಿಯಾದ ಆಸೀಸ್‌ ಪ್ರಧಾನಿ

Sydney Test: ಕ್ರಿಕೆಟಿಗರನ್ನು ಭೇಟಿಯಾದ ಆಸೀಸ್‌ ಪ್ರಧಾನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-1

ಪಾಡ್ದನದೆಡೆಗೆ ನಿರಾಸಕ್ತಿ- ಜಾನಪದ ಆಕಾಡೆಮಿ ರಾಜ್ಯಪ್ರಶಸ್ತಿ ಪುರಸ್ಕೃತೆ ಅಪ್ಪಿ ಪಾಣಾರ ಕಳವಳ

19

ಸಂಪ್ರದಾಯಬದ್ಧವಾಗಿ ರಂಗಶಿಸ್ತಿನೊಂದಿಗೆ ಹೊಸತನ ಅಳವಡಿಸಿಕೊಂಡರೆ ತಪ್ಪಿಲ್ಲ

Ropesh Shetty: ಹಳ್ಳಿಯ ಸೊಗಡಿನಲ್ಲಿ ರೂಪೇಶ್‌ ಜೈಕಾರ !

Ropesh Shetty: ಹಳ್ಳಿಯ ಸೊಗಡಿನಲ್ಲಿ ರೂಪೇಶ್‌ ಜೈಕಾರ !

1-trrr

Yakshagana: ತೆಂಕುತಿಟ್ಟಿನ “ರಂಗಸ್ಥಳದ ರಾಜ’ʼ ಅರುವ ಕೊರಗಪ್ಪ ಶೆಟ್ಟಿ

Idu Entha Lokavayya: “ಕೋಸ್ಟಲ್‌” ನಿಂದ ಕರುನಾಡು!

Idu Entha Lokavayya: “ಕೋಸ್ಟಲ್‌” ನಿಂದ ಕರುನಾಡು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Karnataka ಪಠ್ಯಪುಸ್ತಕ ಬೇಡಿಕೆ: ಜ.10ರೊಳಗೆ ದೃಢೀಕರಣ ರಾಜ್ಯಹಂತಕ್ಕೆ ಕಳುಹಿಸಿ

Karnataka ಪಠ್ಯಪುಸ್ತಕ ಬೇಡಿಕೆ: ಜ.10ರೊಳಗೆ ದೃಢೀಕರಣ ರಾಜ್ಯಹಂತಕ್ಕೆ ಕಳುಹಿಸಿ

byndoor

Siddapura: ಬೈಕಿಗೆ ಕಾರು ಡಿಕ್ಕಿ; ಬೈಕ್‌ ಸವಾರ ಗಂಭೀರ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ

Bowling Ranking: 907 ರೇಟಿಂಗ್‌ ಅಂಕ ಬುಮ್ರಾ ದಾಖಲೆ

Bowling Ranking: 907 ರೇಟಿಂಗ್‌ ಅಂಕ ಬುಮ್ರಾ ದಾಖಲೆ

POlice

Udupi: 9 ಲೀಟರ್ ಗೋವಾ ಮದ್ಯ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.