ಯಕ್ಷ ಬಾಂಧವ್ಯ ಪ್ರಶಸ್ತಿಗೆ ಸುರೇಶ ಬಂಗೇರ
Team Udayavani, Nov 16, 2018, 6:00 AM IST
ಸಾಲಿಗ್ರಾಮ ಮೇಳದ ವತಿಯಿಂದ ನೀಡುವ ಪುರುಷ ವೇಷದಾರಿ ಶಿರಿಯಾರ ಮಂಜು ನಾಯ್ಕರ ನೆನಪಿನ “ಯಕ್ಷ ಬಾಂಧವ್ಯ’ ಪ್ರಶಸ್ತಿಯನ್ನು ಈ ಬಾರಿ ನಡುತಿಟ್ಟಿನ ಪ್ರಾತಿನಿಧಿಕ ಪುರುಷ ವೇಷದಾರಿಯಾಗಿರುವ ಕೋಟ ಸುರೇಶ ಬಂಗೇರ ಇವರಿಗೆ ನೀಡಲಾಗುತ್ತದೆ. ಪ್ರಶಸ್ತಿ ಪ್ರದಾನ ಸಾಲಿಗ್ರಾಮ ಮೇಳದ ಪ್ರಥಮ ಡೇರೆ ಆಟ ಲಾಗಾಯ್ತಿನಿಂದಲೂ ನೆಡೆದುಕೊಂಡು ಬಂದ ಶಿರಿಯಾರದಲ್ಲಿ ನ. 16ರಂದು ನೆರವೇರಲಿದೆ.
ಶಿರಿಯಾರ ಮಂಜು ನಾಯ್ಕರ ಲಾಲಿತ್ಯಪೂರ್ಣ ಶ್ರುತಿಬದ್ದ ಮಾತುಗಾರಿಕೆ, ವೀರಭದ್ರ ನಾಯ್ಕರ ಹೆಜ್ಜೆಗಾರಿಕೆ, ಮೊಳಹಳ್ಳಿ ಹೆರಿಯ ನಾಯ್ಕರ ರಂಗತಂತ್ರ ಮತ್ತು ಕಿರು ಹೆಜ್ಜೆ ಈ ಮೂರನು °ಒಮ್ಮೆಗೆ ನೋಡಬೇಕಾದರೆ ಸುರೇಶ ಬಂಗೇರರ ವೇಷಗಾರಿಕೆಯ ಸೊಗಸನ್ನು ನೋಡಬೇಕು.ಕನಕಾಂಗಿ ಕಲ್ಯಾಣ,ಜಾಂಬವತಿ ಕಲ್ಯಾಣ, ಕೃಷ್ಣಾರ್ಜುನ-ಸುಭದ್ರ ಕಲ್ಯಾಣ ಸಹಿತ ಯಾವುದೇ ಪ್ರಸಂಗದ ಕೃಷ್ಣನಿರಲಿ ಅಲ್ಲಿ ಮಂಜುನಾಯ್ಕರ ನಿರಾತಂಕ ನಿರರ್ಗಳವಾದ ಮಾತುಗಾರಿಕೆ,ಕರ್ಣಾರ್ಜುನದ ಅರ್ಜುನ,ವೀರಮಣಿ ಕಾಳಗದ ಪುಷ್ಕಳ,ತಾಮ್ರದ್ವಜ ಮುಂತಾದ ವೇಷಗಳಲ್ಲಿ ಹೆರಿಯನಾಯ್ಕರ ರಂಗ ನಿರ್ವಹಣೆ,ಹೆಜ್ಜೆಗಾರಿಕೆ,ಅತಿಕಾಯನಂಥ ಪಾತ್ರಗಳಲ್ಲಿ ವೀರಭದ್ರ ನಾಯ್ಕರ ಮಟಾ³ಡಿ ಶೈಲಿಯನ್ನು ಗುರುತಿಸಬಹುದಾದ ಬಡಗುತಿಟ್ಟಿನ ಅಪರೂಪದ ಕಲಾವಿದರಲ್ಲಿ ಇವರೂ ಒಬ್ಬರು. ಎಲ್ಲಿಯೂ ಯಕ್ಷಗಾನದ ಆವರಣ ಭಂಗ ಮಾಡದೆ ಪಾತ್ರಗಳ ಔಚಿತ್ಯ ಕೆಡಿಸದೆ,ಎದುರು ಪಾತ್ರದಾರಿಗಳಿಗೆ ಅನಗತ್ಯ ಸವಾಲು ಹಾಕದೇ ಹಿರಿಯರು ಹಾಕಿಕೊಟ್ಟ ಚೌಕಟ್ಟಿನೊಳಗೆ ಕಡೆದು ನಿಲ್ಲಿಸಿದ ಬಿಂಬದ ಹಾಗೆ ಅವರ ಪಾತ್ರಚಿತ್ರಣ. ಮಂದಾರ್ತಿ ಮೇಳದಲ್ಲಿ ಗೆಜ್ಜೆಕಟ್ಟಿ ನಂತರ ದೀರ್ಘಕಾಲ 17 ವರ್ಷ ಸೌಕೂರು,ಸಾಲಿಗ್ರಾಮ,ಪೆರ್ಡೂರು ಕಮಲಶಿಲೆ ಮೇಳದಲ್ಲಿ ಸೇವೆ ಸಲ್ಲಿಸಿ ಸದ್ಯಅಮೃತೇಶ್ವರಿ ಮೇಳದ ಪುರುಷ ವೇಷದಾರಿ ಜೊತೆಗೆ ಮೇಳದ ಪ್ರಬಂಧಕರಾಗಿ ಸೇವೆ ಸಲ್ಲಿಸುತಿದ್ದಾರೆ.
ಉದಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪಾಡ್ದನದೆಡೆಗೆ ನಿರಾಸಕ್ತಿ- ಜಾನಪದ ಆಕಾಡೆಮಿ ರಾಜ್ಯಪ್ರಶಸ್ತಿ ಪುರಸ್ಕೃತೆ ಅಪ್ಪಿ ಪಾಣಾರ ಕಳವಳ
ಸಂಪ್ರದಾಯಬದ್ಧವಾಗಿ ರಂಗಶಿಸ್ತಿನೊಂದಿಗೆ ಹೊಸತನ ಅಳವಡಿಸಿಕೊಂಡರೆ ತಪ್ಪಿಲ್ಲ
Ropesh Shetty: ಹಳ್ಳಿಯ ಸೊಗಡಿನಲ್ಲಿ ರೂಪೇಶ್ ಜೈಕಾರ !
Yakshagana: ತೆಂಕುತಿಟ್ಟಿನ “ರಂಗಸ್ಥಳದ ರಾಜ’ʼ ಅರುವ ಕೊರಗಪ್ಪ ಶೆಟ್ಟಿ
Idu Entha Lokavayya: “ಕೋಸ್ಟಲ್” ನಿಂದ ಕರುನಾಡು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Clown Kohli: ವಿರಾಟ್ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್ ಮಾಧ್ಯಮಗಳು!
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.