ಯಕ್ಷ ಶಿಕ್ಷಣದಿಂದ ಯಕ್ಷಗಾನಾಸಕ್ತ ಮಕ್ಕಳು

Team Udayavani, Dec 29, 2017, 11:28 AM IST

29-15.jpg

ಉಡುಪಿ ಜಿಲ್ಲೆಯ ಶಾಲೆಗಳಲ್ಲಿ ಯಕ್ಷಗಾನ ಗೆಜ್ಜೆ ಸದ್ದು ಮಾಡುತ್ತಿದೆ. ಯಕ್ಷಗಾನಕ್ಕೊಂದು ಹೊಸ ಭರವಸೆ ಮೂಡಿಸಿದ್ದು ಇಲ್ಲಿನ ಯಕ್ಷ ಶಿಕ್ಷಣ. ಉಡುಪಿ ಜಿಲ್ಲೆಯ ಹಲವು ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳಲ್ಲಿ ಬಿಡುವಿನ ಸಮಯದಲ್ಲಿ ಮಕ್ಕಳ ಯಕ್ಷಗಾನದ ಹೆಜ್ಜೆ ಹೊಸ ನಿರೀಕ್ಷೆಗಳೊಂದಿಗೆ ರಂಗೇರುತ್ತಿದೆ. ಸಾಂಪ್ರದಾಯಿಕ ಚೌಕಟ್ಟಿನೊಳಗೆ ಹಿರಿಯ ಯಕ್ಷಗಾನ ಗುರುಗಳಿಂದ 25 – 30ರಷ್ಟು ವಿದ್ಯಾರ್ಥಿಗಳು ಪ್ರತಿ ಶಾಲೆಗಳಲ್ಲಿ ಯಕ್ಷ ಶಿಕ್ಷಣ ಪಡೆಯುತ್ತಿದ್ದಾರೆ. ಪೌರಾಣಿಕ ಯಕ್ಷಗಾನ ಪ್ರಸಂಗಗಳ ಜತೆ ಪೌರಾಣಿಕ ಕಥಾಜ್ಞಾನವನ್ನು ಸಂಪಾದಿಸುತ್ತ ಆಧುನಿಕ ಮನೋರಂಜನಾ ಮಾಧ್ಯಮಗಳ ಭರಾಟೆಯ ನಡುವಿನಲ್ಲೂ ಯಕ್ಷಗಾನೀಯ ಸುಗಂಧ ತೇಲಿ ಬರುತ್ತಿದೆ. 

ಉಡುಪಿಯ ರಾಜಾಂಗಣ ದಲ್ಲಿ ಪರ್ಯಾಯ ಮಠ, ಶ್ರೀಕೃಷ್ಣ ಮಠ ಹಾಗೂ ಯಕ್ಷಗಾನ ಕಲಾರಂಗದ ಪ್ರೋತ್ಸಾಹದಲ್ಲಿ ಸುಮಾರು ಒಂದು ತಿಂಗಳ ಕಾಲ ನಡೆಯುವ ಮಕ್ಕಳ ಯಕ್ಷಗಾನ ಪ್ರದರ್ಶನ ಈ ಕ್ಷೇತ್ರಕ್ಕೊಂದು ಹೊಸ ಭರವಸೆ ಮೂಡಿಸಿದೆ. ಉಡುಪಿ ಸುತ್ತಮುತ್ತಲಿನ ವಿವಿಧ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಅದರಲ್ಲೂ ವಿದ್ಯಾರ್ಥಿನಿಯರು ಆಸಕ್ತಿಯಿಂದ ಭಾಗವಹಿಸುತ್ತಿದ್ದಾರೆ.  

ಎಳವೆಯಲ್ಲಿಯೇ ಮಕ್ಕಳಲ್ಲಿ ಯಕ್ಷಗಾನ ಆಸಕ್ತಿ ಹುಟ್ಟಿಸಿದರೆ ಮುಂದಿನ ಶಿಕ್ಷಣದ ಜತೆಗೆ ಪಠ್ಯೇತರ ವ್ಯಕ್ತಿತ್ವ ನಿರ್ಮಾಣಕ್ಕೆ ಹೆಚ್ಚು ಅನುಕೂಲ. ಅಲ್ಲದೆ ಇತ್ತೀಚಿನ ದಿನಗಳಲ್ಲಿ ಭರತನಾಟ್ಯ, ಫಿಲ್ಮ್ಡ್ಯಾನ್ಸ್‌, ಸಂಗೀತ ಕಲಿಕೆಯು ಹೆಚ್ಚು ಮಹತ್ವ ಪಡೆಯುತ್ತಿರುವಂತೆ ಆ ಸಾಲಿಗೆ ಯಕ್ಷಗಾನವೂ ಸೇರುತ್ತಿರುವುದು ಸಮಾಧಾನಕರ ಸಂಗತಿ. ಮಾಧ್ಯಮಿಕ ಶಾಲೆಗಳಲ್ಲಿ ಯಕ್ಷ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಕಾಲೇಜು ವಾರ್ಷಿಕೋತ್ಸವಗಳಲ್ಲಿ ಯಕ್ಷಗಾನಾಭಿನಯಕ್ಕೆ ಹೆಚ್ಚು ಆಸಕ್ತರಾಗುತ್ತಿದ್ದಾರೆ. ಇದು ಶೈಕ್ಷಣಿಕ ಪರಿಸರದಲ್ಲಿ ಹೊಸ ಸಂಚಲನ ಮೂಡಿಸುತ್ತಿದೆ.

 ಮಾಧ್ಯಮಿಕ ಶಾಲೆಗಳಲ್ಲಿರುವ ಯಕ್ಷ ಶಿಕ್ಷಣವನ್ನು ಕಾಲೇಜುಗಳಿಗೂ ವಿಸ್ತರಿಸಿದರೆ ಕಲಾ ಪರಂಪರೆಯ ಮಹತ್ವವನ್ನು ಜೀವಂತವಾಗಿಡಲು ಸಾಧ್ಯ. ವಾರ್ಷಿಕೋತ್ಸವ ಮತ್ತು ವಿಶೇಷ ಸಂದರ್ಭಗಳಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ಶಿಕ್ಷಣ ಸಂಸ್ಥೆಗಳು ಇನ್ನಷ್ಟು ಪ್ರೋತ್ಸಾಹ ನೀಡುವ ಅಗತ್ಯವಿದೆ. 

ಉಡುಪಿ ಅದಮಾರು ಮಠದ ಹಿರಿಯ ಯತಿ ಶ್ರೀ ವಿಶ್ವಪ್ರಿಯತೀರ್ಥರ ಅನುಗ್ರಹದಲ್ಲಿ ಪೂರ್ಣಪ್ರಜ್ಞ ಪ.ಪೂ. ಕಾಲೇಜಿನಲ್ಲಿ ಇತ್ತೀಚಿಗೆ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರ ಸಹ ಯೋಗದಲ್ಲಿ “ಶ್ವೇತಕುಮಾರ ಚರಿತ್ರೆ’ ಎಂಬ ಯಕ್ಷಗಾನ ಪ್ರದರ್ಶನಗೊಂಡಿತು. ಬಹುಮಂದಿ ವಿದ್ಯಾರ್ಥಿಗಳೇ ಪ್ರಮುಖ ಪಾತ್ರ ನಿರ್ವಹಿಸಿ ಪ್ರೇಕ್ಷಕರಿಂದ ಸೈ ಎನಿಸಿಕೊಂಡರು. ಪಾರಂಪರಿಕ ಶೈಲಿಯ ಯಕ್ಷಗಾನವನ್ನು ಉಳಿಸಿ ಬೆಳೆಸಿ ಪ್ರೋತ್ಸಾಹಿ ಸುವ ಅದಮಾರು ಮಠ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಈ ಗುಣ ಇತರರಿಗೂ ಮಾದರಿಯಾಗಲಿ.

ಅಶ್ವತ್ಥ್ ಭಾರದ್ವಾಜ್‌ ಕೆ.

ಟಾಪ್ ನ್ಯೂಸ್

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

purushotham-bilimale

Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!

Naxals-CM-Office

Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-1

ಪಾಡ್ದನದೆಡೆಗೆ ನಿರಾಸಕ್ತಿ- ಜಾನಪದ ಆಕಾಡೆಮಿ ರಾಜ್ಯಪ್ರಶಸ್ತಿ ಪುರಸ್ಕೃತೆ ಅಪ್ಪಿ ಪಾಣಾರ ಕಳವಳ

19

ಸಂಪ್ರದಾಯಬದ್ಧವಾಗಿ ರಂಗಶಿಸ್ತಿನೊಂದಿಗೆ ಹೊಸತನ ಅಳವಡಿಸಿಕೊಂಡರೆ ತಪ್ಪಿಲ್ಲ

Ropesh Shetty: ಹಳ್ಳಿಯ ಸೊಗಡಿನಲ್ಲಿ ರೂಪೇಶ್‌ ಜೈಕಾರ !

Ropesh Shetty: ಹಳ್ಳಿಯ ಸೊಗಡಿನಲ್ಲಿ ರೂಪೇಶ್‌ ಜೈಕಾರ !

1-trrr

Yakshagana: ತೆಂಕುತಿಟ್ಟಿನ “ರಂಗಸ್ಥಳದ ರಾಜ’ʼ ಅರುವ ಕೊರಗಪ್ಪ ಶೆಟ್ಟಿ

Idu Entha Lokavayya: “ಕೋಸ್ಟಲ್‌” ನಿಂದ ಕರುನಾಡು!

Idu Entha Lokavayya: “ಕೋಸ್ಟಲ್‌” ನಿಂದ ಕರುನಾಡು!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.