ಆಸಿಡಿಟಿಯನ್ನು ಉಪಶಮನಗೊಳಿಸಲು ಆಹಾರಕ್ರಮ


Team Udayavani, Sep 13, 2020, 8:13 PM IST

ಆಸಿಡಿಟಿಯನ್ನು ಉಪಶಮನಗೊಳಿಸಲು ಆಹಾರಕ್ರಮ

ಹೊಟ್ಟೆಯಲ್ಲಿನ ಗ್ರಂಥಿಗಳಲ್ಲಿ ಅಧಿಕ ಆಮ್ಲ ಉತ್ಪತ್ತಿಯಾಗುವಾಗ ಅಸಿಡಿಟಿ ಉಂಟಾಗುತ್ತದೆ. ಜಠರಾಮ್ಲದ ಸ್ರಾವವು ಮಾಮೂಲಿಗಿಂತಲೂ ಹೆಚ್ಚಾಗಿದ್ದಾಗ ನಾವು ಸಾಮಾನ್ಯವಾಗಿ ಎದೆ ಉರಿಯುವುದು ಎಂದು ಏನು ಹೇಳುತ್ತೇವೋ ಆ ಲಕ್ಷಣ ಕಾಣಿಸಿಕೊಳ್ಳುತ್ತದೆ ಇದೇ ಅಸಿಡಿಟಿ. ಆಹಾರ ಸೇವನೆಯ ಅಭ್ಯಾಸ ಸರಿಯಾಗಿಲ್ಲದ ವ್ಯಕ್ತಿಯಲ್ಲಿ ಈ ಸಮಸ್ಯೆ ತೀವ್ರ ರೂಪದಲ್ಲಿ ಇರಬಹುದು.

ನಿಮ್ಮ ಹೊಟ್ಟೆಯಲ್ಲಿ ಆಮ್ಲದ ಪ್ರಮಾಣವು ಹೆಚ್ಚುವುದರಿಂದ ಹೊಟ್ಟೆಯಲ್ಲಿ ಅಸಹನೀಯವಾಗಿ ಉರಿಯುವ ಸಂವೇದನೆ ಉಂಟಾಗಬಹುದು. ಈ ಕಾರಣದಿಂದಾಗಿ ಎದೆ ಉರಿ, ಹೊಟ್ಟೆ ಉಬ್ಬರಿಸುವುದು, ಅಜೀರ್ಣ, ಹೊಟ್ಟೆಯಲ್ಲಿರುವ ಆಹಾರಾಂಶಗಳ ಹಿಮ್ಮುಖ ಹರಿವು ಬಾಯಿಯ ಮೂಲಕ ಹೊರಬರುವುದು, ವಾಕರಿಕೆ ಮತ್ತು ಬಾಯಿ ಹುಳಿ-ಹುಳಿಯಾವುದು ಇತ್ಯಾದಿ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಆನುವಂಶಿಕತೆ, ಆಹಾರಕ್ರಮ, ಅಧಿಕ ಮದ್ಯಪಾನ ಮತ್ತು ಅಸಹಜವಾಗಿ ಅಧಿಕ ಆಮ್ಲ ಉತ್ಪತ್ತಿಯಾಗುವುದು ಇತ್ಯಾದಿ ಅನೇಕ ಕಾರಣಗಳಿಂದಾಗಿ ಹೊಟ್ಟೆಯಲ್ಲಿ ಅಧಿಕ ಆಮ್ಲವು ಸಂಗ್ರಹಣೆ ಆಗಬಹುದು. ಈ ರೋಗ ಲಕ್ಷಣಕ್ಕೆ ಚಿಕಿತ್ಸೆ ನೀಡದೆ ಹಾಗೆಯೇ ಬಿಟ್ಟರೆ, ಹೊಟ್ಟೆಯಲ್ಲಿನ ಆಮ್ಲದ ಹೆಚ್ಚಳದಿಂದ ಅಲ್ಸರ್‌ ಆಗಬಹುದು.

ಹೊಟ್ಟೆಯ ಹುಣ್ಣು ಅಥವಾ ಅಲ್ಸರ್‌ ಸಾಮಾನ್ಯವಾಗಿ ಅನಾರೋಗ್ಯಕರ ಆಹಾರ ಅಭ್ಯಾಸದ ಕಾರಣದಿಂದ ಉಂಟಾಗುತ್ತದೆ. ಹೆಚ್ಚಿನ ಜನರಿಗೆ ಭರ್ಜರಿ ಊಟ ಮಾಡಿದ ನಂತರ ಅಥವಾ ಮಸಾಲೆಭರಿತ ಆಹಾರ ಸೇವಿಸಿದ ನಂತರ ಬಾಯಿಯ ಮೂಲಕ ಆಮ್ಲವು ಹೊರಬರುವ ಅಥವಾ ಹೊಟ್ಟೆಯಲ್ಲಿ ಜಠರಾಮ್ಲವು ಹೆಚ್ಚಾಗುವ ಲಕ್ಷಣವು ಕಾಣಿಸಿಕೊಳ್ಳುತ್ತದೆ. ಹೊಟ್ಟೆಯ ಆಮ್ಲವನ್ನು ನಿಯಂತ್ರಣಕ್ಕೆ ತರುವಲ್ಲಿ ಆಹಾರವು ಬಹುಮುಖ್ಯ ಪಾತ್ರವನ್ನು ವಹಿಸುತ್ತದೆ. ಕೆಲವು ಆಹಾರಗಳ ಸೇವನೆಯು ಹೊಟ್ಟೆಯಲ್ಲಿನ ಆಮ್ಲದ ಮಟ್ಟವನ್ನು ನಿಯಂತ್ರಣಕ್ಕೆ ತರುವಲ್ಲಿ ಬಹುಮಟ್ಟಿಗೆ ಸಹಾಯ ಮಾಡುತ್ತವೆ. ಎದೆ ಉರಿ ಅಥವಾ ಹುಳಿತೇಗು ಬರುವ ತೊಂದರೆಯು ಧೂಮಪಾನ ಮಾಡುವವರಲ್ಲಿ, ಗರ್ಭಿಣಿ ಮಹಿಳೆಯರಲ್ಲಿ, ಅತಿಯಾಗಿ ಮದ್ಯಪಾನ ಮಾಡುವವರಲ್ಲಿ, ಬೊಜ್ಜು ದೇಹಿಗಳಲ್ಲಿ ಮತ್ತು 34ರಿಂದ 64 ರ ನಡುವಿನ ವಯಸ್ಸಿನ ಮಹಿಳೆಯರಲ್ಲಿ ಹೆಚ್ಚು ಕಂಡು ಬರುತ್ತದೆ.

ಅಸಿಡಿಟಿ ನಿವಾರಣೆಗಾಗಿ ಕೆಲವು ಸಲಹೆಗಳು :

  • ತಂಪು ಪಾನೀಯ ಮತು ಕೇನ್‌ಯುಕ್ತ ಪಾನೀಯಗಳನ್ನು ಸೇವಿಸಬೇಡಿ.
  • ಪ್ರತಿದಿನ ಒಂದು ಗ್ಲಾಸ್‌ ಉಗುರು ಬೆಚ್ಚಗಿನ ನೀರನ್ನು ಕುಡಿಯಿರಿ. ಪ್ರತಿದಿನ 10-12 ಗ್ಲಾಸ್‌ನಷ್ಟು ನೀರನ್ನು ಕುಡಿಯುವ ಅಭ್ಯಾಸ ಬೆಳೆಸಿಕೊಳ್ಳುವುದರಿಂದ ವಾಯು ಮತ್ತು ಆಸಿಡಿಟಿಯಂತಹ ರೋಗ ಲಕ್ಷಣಗಳು ನಿಯಂತ್ರಣಕ್ಕೆ ಬರುತ್ತವೆ.
  • ನೀವು ಅಸಿಡಿಟಿಯಿಂದ ಬಳಲುತ್ತಿದ್ದರೆ ಎಳನೀರು ಕುಡಿಯಿರಿ ಅದು ಅಸಿಡಿಟಿಯನ್ನು ಶಮನಗೊಳಿಸಿ, ಜೀರ್ಣಾಂಗವ್ಯೂಹವನ್ನು ಶಾಂತಗೊಳಿಸುತ್ತದೆ.
  • ರಾತ್ರಿಯ ಊಟವನ್ನು ನೀವು ನಿದ್ದೆ ಹೋಗುವುದಕ್ಕೆ 2 ರಿಂದ 3 ಗಂಟೆ ಮೊದಲು ಮುಗಿಸಿಬಿಡಿ. ಎರಡು ಊಟಗಳ ನಡುವೆ ದೀರ್ಘ‌ ಅಂತರವಿರುವುದು ಅಸಿಡಿಟಿ ಕಾಣಿಸಿಕೊಳ್ಳಲು ಇರುವ ಮತ್ತೂಂದು ಕಾರಣ. ಮಧ್ಯೆ ಮಧ್ಯೆ ಸಣ್ಣ ಸಣ್ಣ ಪ್ರಮಾಣದಲ್ಲಿ ನಿಯುತವಾಗಿ ಊಟ ಸೇವಿಸಿ.
  • ಉಪ್ಪಿನಕಾಯಿ, ಮಸಾಲೆ ಚಟ್ನಿ, ವಿನೇಗರ್‌ ಇತ್ಯಾದಿಗಳನ್ನು ಸೇವಿಸಬೇಡಿ
  • ಯೋಗ ಅಥವಾ ಇತರ ಒತ್ತಡ- ನಿವಾರಕ ಚಟುವಟಿಕೆಗಳು ಅಸಿಡಿಟಿಯನ್ನು ಹತೋಟಿಯಲ್ಲಿ ಇಟ್ಟುಕೊಳ್ಳಲು ಬಹಳ ಸಹಕಾರಿ ಆಗಬಹುದು.
  • ಕರಿದ ಪದಾರ್ಥ, ಕೊಬ್ಬುಯುಕ್ತ ಆಹಾರ, ಹಾಳುಮೂಳು ಆಹಾರ ಮತ್ತು ಚಾಕೊಲೇಟ್‌ ಗಳನ್ನು ಸೇವಿಸಬಾರದು.
  • ಕಾರ್ಬೂಹೈಡ್ರೇಟ್‌ ಸಮೃದ್ಧವಾಗಿರುವ ಆಹಾರವನ್ನು ಹೆಚ್ಚು ಸೇವಿಸಿ – ಉದಾ: ಅನ್ನ – ಇಂತಹ ಆಹಾರಗಳಲ್ಲಿ ಆಮ್ಲವು ಬಹಳ ಕಡಿಮೆ ಪ್ರಮಾಣದಲ್ಲಿ ಉತ್ಪತ್ತಿ ಆಗುತ್ತದೆ.
  • ಮನೆಯಲ್ಲೆ ತಯಾರಿಸಿದ ಆಹಾರ ಪದಾರ್ಥಗಳನ್ನು ಹೆಚ್ಚು ಸೇವಿಸಿ ಮತ್ತು ಹೊರಗಡೆ ಆಹಾರ ಸೇವಿಸುವುದನ್ನು ತಪ್ಪಿಸಿಕೊಳ್ಳಿ.
  • ಸಿಗರೇಟು, ಆಲ್ಕೋಹಾಲ್‌ ಮತ್ತು ಗ್ಯಾಸ್‌ ತುಂಬಿಸಿರುವ ಪಾನೀಯಗಳನ್ನು ದೂರ ಇಡಿ.

 

 

ದಕ್ಷ ಕುಮಾರಿ

ಆಹಾರತಜ್ಞರು, ಪಥ್ಯಾಹಾರ ವಿಭಾಗ,

ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ.

ಟಾಪ್ ನ್ಯೂಸ್

10

Poonch; ಸೇನಾ ವಾಹನ ದುರಂತ: ಕೊಡಗಿನ ಯೋಧ ಚಿಂತಾಜನಕ

1-man-mohan

Manmohan Singh; ಭಾರತದ ಮೊದಲ ಸಿಖ್ ಪ್ರಧಾನಿ ಈ ವಿಚಾರಕ್ಕಾಗಿ ಕ್ಷಮೆಯಾಚಿಸಿದ್ದರು

Video: ಮನಮೋಹನ್ ಸಿಂಗ್ ನಿಧನ ಹೇಳುವ ಬದಲು ಮೋದಿ ನಿಧನರಾಗಿದ್ದಾರೆ ಎಂದ ನ್ಯೂಸ್ ಆ್ಯಂಕರ್

Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!

allu arjun

Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

1-osamu

Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

3(1

Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ

1

Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು

5–jaundice

Jaundice: ಜಾಂಡಿಸ್‌ ಅಥವಾ ಅರಶಿನ ಕಾಮಾಲೆ

4-oral-cancer-2

Oral cancer: ನಿಶ್ಶಬ್ದ ಅಪಾಯ; ಬಾಯಿಯ ಕ್ಯಾನ್ಸರ್‌ ವಿರುದ್ಧ ಹೋರಾಟ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

10

Poonch; ಸೇನಾ ವಾಹನ ದುರಂತ: ಕೊಡಗಿನ ಯೋಧ ಚಿಂತಾಜನಕ

1-man-mohan

Manmohan Singh; ಭಾರತದ ಮೊದಲ ಸಿಖ್ ಪ್ರಧಾನಿ ಈ ವಿಚಾರಕ್ಕಾಗಿ ಕ್ಷಮೆಯಾಚಿಸಿದ್ದರು

Video: ಮನಮೋಹನ್ ಸಿಂಗ್ ನಿಧನ ಹೇಳುವ ಬದಲು ಮೋದಿ ನಿಧನರಾಗಿದ್ದಾರೆ ಎಂದ ನ್ಯೂಸ್ ಆ್ಯಂಕರ್

Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!

allu arjun

Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.