ಕೂಲಿಯಿಂದ ಸ್ಕೂಲಿಗೆ


Team Udayavani, Sep 22, 2018, 3:57 PM IST

diaya.jpg

ಬೆಳಗ್ಗೆ ಸರಿಯಾಗಿ ಗಂಟೆ 8.30. ಎಲ್ಲ ಮಕ್ಕಳು ಕಾನ್ವೆಂಟಿಗೆ ಹೊರಡುವ ಟೈಮು. ಅದೇ ಹೊತ್ತಿನಲ್ಲಿ ಸಿಲ್ವರ್‌ ಕಲರಿನ ಓಮ್ನಿಯೊಂದು ಹೊರಮಾವಿನ ರಸ್ತೆಯ ಗಲ್ಲಿಗಳಲ್ಲಿ ನುಗ್ಗುತ್ತಿರುತ್ತದೆ. ಅದು ಕೂಡ ಸ್ಕೂಲ್‌ ವ್ಯಾನ್‌. ಆದರೆ, ಅದು ಬ್ರೇಕ್‌ ಒತ್ತಿ ನಿಲ್ಲುವುದು ಗೇಟಿನ ಮುಂದೆ ಟೈ ಕಟ್ಟಿ, ಶೂ ಬಿಗಿದು, ಟಿಪ್‌ಟಾಪ್‌ ಆಗಿ ಹೊರಟು ನಿಂತ, ಅಮ್ಮನಿಗೆ ಪಪ್ಪಿ ಕೊಟ್ಟು ಹೊರಡುವ ಮೇಲ್ವರ್ಗದ ಮಕ್ಕಳ ಮನೆ ಮುಂದೆ ಅಲ್ಲ. ಅದರ ನಿಲ್ದಾಣಗಳೇ ಬೇರೆ. ಜಲ್ಲಿ, ಗಾರೆಗಳಿಂದ ಕಟ್ಟಲ್ಪಡುತ್ತಿರುವ ಕಟ್ಟಡಗಳು, ಎಲ್ಲೋ ಮೂಲೆಯಲ್ಲಿ ಕೊಳಚೆಯ ನಡುವೆ ಟೆಂಟ್‌ ಹಾಕಿ ಕುಳಿತ ಅಲೆಮಾರಿಗಳ ಗುಡಿಸಲಿನ ಮುಂದೆ ಹೋಗಿ ಆ ವ್ಯಾನ್‌ ಗಕ್ಕನೆ ಬ್ರೇಕ್‌ ಒತ್ತಿ, “ಕೀಂಕ್‌’ ಎನ್ನುತ್ತದೆ.

  ಆ ಸದ್ದು ಕಿವಿಗೆ ಬಿದ್ದ ಕೂಡಲೇ ಕಲ್ಲು, ಮರಳಿನಲ್ಲಿ ಅರೆಬರೆ ಬಟ್ಟೆ ಧರಿಸಿ ಆಡುತ್ತಿರುವ ಮಕ್ಕಳು ಕೇಕೆ ಹಾಕುತ್ತಾ ಓಡೋಡಿ ಬರುತ್ತವೆ. ಅವುಗಳಿಗೆ ಪಪ್ಪಿ ಕೊಟ್ಟು, ಬಾಯ್‌ ಹೇಳಲು ಅಲ್ಲಿ ಅಮ್ಮಂದಿರಾಗಲೀ, ಅಪ್ಪಂದಿರಾಗಲೀ ಇರುವುದಿಲ್ಲ. ಅವರೆಲ್ಲ ಅದಾಗಲೇ ಖಾಲಿ ಹೊಟ್ಟೆಯಲ್ಲಿ ಕೂಲಿ ಮಾಡಲು ಹೋಗಿರುತ್ತಾರೆ. ಒಂದೊಂದು ಅವತಾರದಲ್ಲಿರುವ ಆ ಮಕ್ಕಳು, ಓಮ್ನಿಯಲ್ಲಿ ಶಿಸ್ತಾಗಿ ಕುಳಿತ ಮೇಲೆ, ಅದು ಅವರನ್ನೆಲ್ಲ ಕರೆದೊಯ್ಯುವುದು “ದಿಯಾ ಘರ್‌’ಗೆ.

  ದಿಯಾ ಘರ್‌! ಅದು ಕಟ್ಟಡ ಕೂಲಿ ಕಾರ್ಮಿಕರ ಮಕ್ಕಳಿಗಾಗಿಯೇ ತೆರೆದುಕೊಂಡಿರುವ, ಮಾಂಟೆಸೊರಿ ಮಾದರಿಯ ಪುಟ್ಟ ಶಾಲೆ. ಅಲ್ಲಿಗೆ ಬಂದ ಮಕ್ಕಳಿಗೆ ಮೊದಲು ಜಳಕಾಭಿಷೇಕ. ಎಲ್ಲರಿಗೂ ಯೂನಿಫಾರಂ ಕೊಟ್ಟು, ತಲೆಬಾಚಿ, ಜಡೆ ಹಾಕಿ, ಅಲಂಕಾರ ಮಾಡಿ, ಕನ್ನಡಿಯೆದುರು ನಿಲ್ಲಿಸಿದಾಗ, ಅವರ ಅಂದವನ್ನು ಕಂಡು ಅಲ್ಲಿನ ಟೀಚರ್‌ಗಳಿಗೆ ದೃಷ್ಟಿ ತೆಗೆಯಬೇಕೆನಿಸುತ್ತೆ. ಹಸಿದ ಕಂದಮ್ಮಗಳಿಗೆ ಉಪಾಹಾರ ಕೊಟ್ಟು, ಅಆಇಈ, ಎಬಿಸಿಡಿ ಕಲಿಯುವ ಪ್ರಕ್ರಿಯೆಗಳು ಶುರುವಾಗುತ್ತವೆ. 

  ಬೆಂಗಳೂರು ನೋಡಲು ಬಲು ಚೆಂದ. ಇಲ್ಲಿ ಗಗನಚುಂಬಿ ಕಟ್ಟಡಗಳ ಗತ್ತಿದೆ. ಲಕ್ಷುರಿ ಅಪಾರ್ಟ್‌ಮೆಂಟುಗಳು, ಚಿತ್ತಾಕರ್ಷಕ ಮನೆಗಳ ಚರಿಷ್ಮಾವಿದೆ. ಆದರೆ, ಬೆಂಗಳೂರಿನ ರೂಪಸಿರಿಯನ್ನು ಹೀಗೆಲ್ಲ ಬದಲಿಸಿದ, ಕಟ್ಟಡ ಕಾರ್ಮಿಕರ ಅಲೆಮಾರಿ ಬದುಕಿಗೆ ಚೆಂದದ ರೂಪವೇ ಸಿಕ್ಕಿಲ್ಲ. ಅವರಿಗೊಂದು ವಿಳಾಸವಿಲ್ಲ. ಗುಡಿಸಲೋ, ಕಟ್ಟಲ್ಪಡುತ್ತಿರುವ ಕಟ್ಟಡಗಳಲ್ಲೋ ತಾತ್ಕಾಲಿಕ ನೆಲೆಯಷ್ಟೇ. ಬೆಳಗ್ಗೆ ಆರಾದರೆ, ಮೇಸಿŒ ಬಂದು ಎಬ್ಬಿಸುತ್ತಾನೆ. ಮಕ್ಕಳನ್ನು ಉಪವಾಸ ಉಳಿಸಿಯೋ, ಜತೆಗೇ ಕಟ್ಟಿಕೊಂಡೋ ಹೊರಟರೆ, ಮತ್ತೆ ಗುಡಿಸಲಿಗೆ ಬರುವುದು ಕೆಂಪುದೀಪಗಳು ಉರಿಯುವ ಹೊತ್ತಿಗೆ. ಮುಂದೆ ಅಕ್ಷರ ಕಲಿಯದ ಆ ಮಕ್ಕಳೂ ತಮ್ಮ ಕುಲಕಸುಬಿಗೇ ಜೋತು ಬೀಳುತ್ತವೆ. ಈ ಅಪಾಯವನ್ನು ತಪ್ಪಿಸಲೆಂದೇ, ಅವರನ್ನು ಅಕ್ಷರಸ್ಥರನ್ನಾಗಿಸಲೆಂದೇ “ದಿಯಾ ಘರ್‌’ ಶಾಲೆ ಹುಟ್ಟಿಕೊಂಡಿದೆ. ಇದು ಸರಸ್ವತಿ ಪದ್ಮನಾಭನ್‌ ಮತ್ತು ಅವರ ಪತಿ ಶ್ಯಾಮಲ್‌ ಕುಮಾರ್‌ ಅವರ ಸೃಷ್ಟಿ.

ಆ ಮೂವರು ಪುಟಾಣಿಗಳೇ ಪ್ರೇರಣೆ
ಅದು ರಾಮಮೂರ್ತಿ ನಗರದಲ್ಲಿ ಕಂಡಂಥ ದೃಶ್ಯ. ಅಲ್ಲಿ ಅಪ್ಪ- ಅಮ್ಮ ಇದ್ದಿರಲಿಲ್ಲ. ಶ್ವೇತಾ, ವೀರೇಶ್‌ ಮತ್ತು ಗಾಯತ್ರಿ ಮೂವರು ಪುಟಾಣಿಗಳು ಮರಳಿನ ರಾಶಿ ಮೇಲೆ ಉರುಳಾಡುತ್ತಿದ್ದರು. ಅಲ್ಲಿ ತಮ್ಮ ಮತ್ತು ತಂಗಿಯನ್ನು ಜತನದಿಂದ ಕಾಯುತ್ತಿದ್ದವಳು ಶ್ವೇತಾ ಎಂಬ ನಾಲ್ಕೂವರೆ ವರುಷದ ಬಾಲೆ. ವೀರೇಶನಿಗೆ 3 ವರುಷ, ಗಾಯತ್ರಿಗೆ ಇನ್ನೂ ಒಂದೇ ವರುಷ. ಮುದ್ದುಮುದ್ದಾಗಿ, ನೋಡಲೂ ಆರೋಗ್ಯವಾಗಿಯೇ ಕಾಣಿಸುತ್ತಿದ್ದ ರಾಯಚೂರು ಮೂಲದ ಈ ಮೂವರು ಪುಟಾಣಿಗಳೆದುರು, ಕಾನ್ವೆಂಟಿಗೆ ಹೊರಟಿದ್ದಂಥ ಸಿರಿವಂತರ ಮಕ್ಕಳು ವ್ಯಾನ್‌ಗಾಗಿ ಕಾಯುತ್ತಿದ್ದರು… ಈ ದೃಶ್ಯವನ್ನು ಕಂಡ ಸರಸ್ವತಿ ದಂಪತಿಯ ಮನ ಕರಗಿತಂತೆ. ತಡಮಾಡಲಿಲ್ಲ. ಆ ಮೂವರು ಮಕ್ಕಳನ್ನು ಇಟ್ಟುಕೊಂಡೇ “ದಿಯಾ ಘರ್‌’ ಶಾಲೆ ಆರಂಭಿಸಿದರು, ಸರಸ್ವತಿ. 3 ವರ್ಷದಿಂದ ನಡೆಯುತ್ತಿರುವ ಈ ಶಾಲೆಯಲ್ಲಿ ಕಲಿಯುತ್ತಿರುವುದು 60 ಮಕ್ಕಳು. ಅವೆಲ್ಲವೂ 6 ವರುಷದೊಳಗಿನ ಪುಟಾಣಿಗಳು. ಅಂದಹಾಗೆ, ಪುಟಾಣಿ ಶ್ವೇತಾ ಈಗ 1ನೇ ತರಗತಿಗೆ ಹೋಗುತ್ತಿದ್ದಾಳೆ. “ಆರಂಭದಲ್ಲಿ ಮಕ್ಕಳನ್ನು ಶಾಲೆ ಗಳಿಸಲು ಪೋಷಕರು ಒಪ್ಪುತ್ತಿರಲಿಲ್ಲ. ಮೊದಲು ಆ ಪೋಷಕರನ್ನು ಶಿಕ್ಷಣದ ಮಹತ್ವ ತಿಳಿಸಿದೆವು’ ಎನ್ನುತ್ತಾರೆ ಸರಸ್ವತಿ. 

ಬೀದಿಯಲ್ಲಿದ್ದಾರೆ, 4 ಲಕ್ಷ ಮಕ್ಕಳು!
“ಬೇರೆ ಊರಿನಿಂದ ಬಂದು, ಇಲ್ಲಿ ಕಟ್ಟಡ ಕಟ್ಟುವ ಕೆಲಸದಲ್ಲಿ ನಿರತರಾದವರ ಮಕ್ಕಳ ಸಂಖ್ಯೆಯೇ ಬರೋಬ್ಬರಿ 4 ಲಕ್ಷ ಇದೆ. ಅವರೆಲ್ಲರ ಭವಿಷ್ಯವೂ ಚಿಂತಾಜನಕ’ ಎನ್ನುವುದು ಸರಸ್ವತಿ ಅವರ ಕಳವಳ. ಈ ಮಕ್ಕಳು ಆಡುವುದನ್ನು ಹಾದಿಬೀದಿಯಲ್ಲಿ ಹೋಗುವ ರಾಜಕಾರಣಿಗಳು, ಧನಿಕರು ನೋಡುತ್ತಿರುತ್ತಾರೆ. ಎಷ್ಟೋ ಸಲ ಆ ಕಟ್ಟಡಗಳ ಗೃಹಪ್ರವೇಶವಿದ್ದಾಗಲೂ, ಅದಕ್ಕಾಗಿ ದುಡಿದ ಕಾರ್ಮಿಕರಿಗೆ, ಅವರ ಮಕ್ಕಳಿಗೆ ಕರೆದು ಊಟ ಹಾಕುವ ಮಾನವೀಯತೆಯನ್ನು ಶ್ರೀಮಂತರು ತೋರುವುದಿಲ್ಲ ಎನ್ನುವ ಬೇಸರವೂ ಇವರದ್ದು.

 ಈ ಶಾಲೆಯಲ್ಲಿ ಅಕ್ಷರಾಭ್ಯಾಸ ನಡೆಯುತ್ತೆ. ಮಾಂಟೆಸೊರಿ ಕಲಿಸುವಂಥ ಆಟಗಳು, ಚಟುವಟಿಕೆಗಳನ್ನೂ ಇಲ್ಲೂ ಹೇಳಿಕೊಡುತ್ತಾರೆ. ಚೆಂದದ ಕತೆಗಳು ಮಕ್ಕಳ ಮನಸ್ಸನ್ನು ಅರಳಿಸುತ್ತವೆ. ಹೊತ್ತು ಹೊತ್ತಿಗೆ ಹಣ್ಣು- ಹಂಪಲು ಕೊಡುತ್ತಾರೆ. ಮಧ್ಯಾಹ್ನದ ವೇಳೆಗೆ ಯುವಲೋಕ ಫೌಂಡೇಶ್‌ನ ಎಂಬ ಎನ್‌ಜಿಒದಿಂದ ಈ ಮಕ್ಕಳಿಗೆ ಬಿಸಿಯೂಟ ಹಾಕುತ್ತಾರೆ. ಸಂಜೆ ಇವರೆಲ್ಲರೂ ಹೊರಡುವಾಗ, ಹಾಲು- ಬಿಸ್ಕತ್ತನ್ನು ಕೊಡುತ್ತಾರೆ. ಅಪ್ಪ- ಅಮ್ಮ ಕಲ್ಲು- ಮಣ್ಣು ಹೊತ್ತು ಸುಸ್ತಾಗಿ, ಬರುವ ಹೊತ್ತಿಗೆ ಈ ಮಕ್ಕಳು ನಗುತ್ತಾ, “ಅಮ್ಮಾ ಟಿಂಕಲ್‌ ಟಿಂಕಲ್‌ ಹೇಳಾ?’ ಅಂತ ಕೇಳುತ್ತಾರೆ. ಹಾಗೆಂದರೇನೆಂದು ಅಪ್ಪ- ಅಮ್ಮನಿಗೆ ಅರ್ಥವಾಗುವುದಿಲ್ಲ. ಆಗ ಆ ಮಕ್ಕಳು, ಮೇಲಿನ ಆಗಸದಲ್ಲಿ ಹೊಳೆಯುವ ನಕ್ಷತ್ರಗಳತ್ತ ಬೆರಳು ತೋರುತ್ತವೆ..! ಆ ಬೆಳಕೇ “ದಿಯಾ ಘರ್‌’ನ ಸಾರ್ಥಕತೆ.

ಅಮೆರಿಕ ಟು ಬೆಂಗಳೂರು… ಮಾನವೀಯ ಪಯಣ
ಸರಸ್ವತಿ ಅವರಿಗೆ ಇಂಥ ಮಕ್ಕಳ ಮೇಲೆ ಪ್ರೀತಿ ಹುಟ್ಟಲೂ ಕಾರಣವಿದೆ. ಇವರು ಚಿಕ್ಕಂದಿನಿಂದಲೂ ಬರ್ತ್‌ಡೇ ಆಚರಿಸಿಕೊಂಡಿ ಇಂಥ ಅಲೆಮಾರಿ ಮಕ್ಕಳ ನಡುವೆಯೇ ಅಂತೆ. ಈ ಕಾರಣದಿಂದ ಆ ಮಕ್ಕಳ ಸಂಕಟ, ನೋವುಗಳೆಲ್ಲ ಬಹಳ ಬೇಗ ಅರ್ಥವಾಯಿತು. ಇವರು ಮೊದಲು ಕೆಲಸ ಮಾಡಿದ್ದು, ಮುಂಬೈ ಬೀದಿಗಳಲ್ಲಿನ ಅಸಂಘಟಿತ ಕೂಲಿಕಾರ್ಮಿಕರ ಮಕ್ಕಳ ಜೊತೆ. ಕೆಲ ಕಾಲ ಅಮೆರಿಕದಲ್ಲಿದ್ದಾಗ, ಅಲ್ಲಿನ ಜೈಲಿನ ಮಕ್ಕಳಿಗೆ ವಿದ್ಯಾಭ್ಯಾಸ ಕಲಿಸುತ್ತಿದ್ದರಂತೆ.

ದಿಯಾ ಘರ್‌ಗೆ ಇತ್ತೀಚೆಗೆ ಬಾಡಿಗೆ ಕಟ್ಟಡವೊಂದಕ್ಕೆ ಶಿಫ್ಟ್ ಆಗಿ, ಶಾಲೆ ನಡೆಸುತ್ತಿದೆ. ಇಲ್ಲಿ ನಾಲ್ವರು ಶಿಕ್ಷಕರು, ಮಕ್ಕಳಿಗೆ ಪಾಠ ಹೇಳುತ್ತಾರೆ.
ಸರಸ್ವತಿ ಪದ್ಮನಾಭನ್‌, “ದಿಯಾ ಘರ್‌’ ಸ್ಥಾಪಕಿ

– ಕೀರ್ತಿ

ಟಾಪ್ ನ್ಯೂಸ್

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

20-

Burhan Wani; ಬುರ್ಹಾನ್‌ ವಾನಿ ಅನುಚರ ಸೇರಿ 5 ಉಗ್ರರ ಎನ್‌ಕೌಂಟರ್‌

19-

IED explodes: ನಕ್ಸಲರು ಇರಿಸಿದ್ದ ಐಇಡಿ ಸ್ಫೋಟ: ಮೂರು ಕರಡಿಗಳು ಸಾವು

18-

Formula E race; ಫಾರ್ಮುಲಾ-ಇ ರೇಸ್‌ ಪ್ರಕರಣ: ಕೆಟಿಆರ್‌ ಮೇಲೆ ಎಸಿಬಿ ಎಫ್ಐಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.