ಹನಿದೊರೆ “ಡುಂಡಿ’ಗೆ ಅರವತ್ತರ ಅಭಿನಂದನೆ
Team Udayavani, May 6, 2017, 4:07 PM IST
ಹನಿಗವನಗಳ ರಾಜನೆಂದೇ ಖ್ಯಾತರಾಗಿರುವವರು ಡುಂಡಿರಾಜ್. ಅವರಿಗೆ ಈಗ ಅರುವತ್ತರ ಸಡಗರ. ಈ ಸಂದರ್ಭದಲ್ಲಿ ಉಪಾಸನಾ ಟ್ರಸ್ಟ್ ಹಾಗು ಶ್ರೀ ಎಚ್. ಡುಂಡಿರಾಜ್ ಅಭಿನಂದನಾ ಸಮಿತಿ ಮೇ 7, ಭಾನುವಾರ ಸಂಜೆ 4.30 ಕ್ಕೆ ಡುಂಡಿರಾಜರ ಎರಡು ಪುಸ್ತಕಗಳ ಬಿಡುಗಡೆ, ಗೀತಗಾಯನ ಮತ್ತು ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ನಡೆಯಲಿರುವ ಈ ಸಮಾರಂಭದಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ. ಚಂದ್ರಶೇಖರ ಕಂಬಾರ ಪುಸ್ತಕ ಲೋಕಾರ್ಪಣೆ ಮಾಡಲಿದ್ದಾರೆ. ಹಿರಿಯ ಕವಿ ಡಾ. ಎಚ್.ಎಸ್. ವೆಂಕಟೇಶಮೂರ್ತಿಯವರು ಅಧ್ಯಕ್ಷತೆ ವಹಿಸುತ್ತಿದ್ದು, ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯ ಅಭಿನಂದನಾ ಭಾಷಣವನ್ನೂ, ಕವಿ ಬಿ.ಆರ್. ಲಕ್ಷ¾ಣ ರಾವ್ ಪ್ರಾಸ್ತಾವಿಕ ಭಾಷಣವನ್ನೂ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಉಪಾಸನಾ ಮೋಹನ್, ಪಂಚಮ್ ಹಳಿಬಂಡಿ, ನಾಗಚಂದ್ರಿಕಾ ಭಟ್, ಮೇಘನಾ ಭಟ್ ಮತ್ತು ಉಪಾಸನಾ ವಿದ್ಯಾರ್ಥಿಗಳಿಂದ ಗೀತಗಾಯನ ನಡೆಯಲಿದೆ.
ಎಲ್ಲಿ?: ಕನ್ನಡ ಸಾಹಿತ್ಯ ಪರಿಷತ್, ಚಾಮರಾಜಪೇಟೆ
ಯಾವಾಗ?: ಮೇ 7, ಸಂಜೆ 4.30
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.