ಮನೆಯಂಗಳದಲ್ಲಿ ದ್ವಿಶತಕ
Team Udayavani, Jun 23, 2018, 11:01 AM IST
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಡೆಯುವ “ಮನೆಯಂಗಳದಲ್ಲಿ ಮಾತುಕತೆ’ ತಿಂಗಳ ಕಾರ್ಯಕ್ರಮ ದ್ವಿಶತಕ ಬಾರಿಸುತ್ತಿದೆ. ಸಂಭ್ರಮದ 200ನೇ ಕಾರ್ಯಕ್ರಮದ ಅತಿಥಿಯಾಗಿ ಭಾರತರತ್ನ ಪ್ರೊ.ಸಿ.ಎನ್.ಆರ್.ರಾವ್ ಅವರು ಪಾಲ್ಗೊಳ್ಳಲಿದ್ದಾರೆ.
ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ಉದ್ಘಾಟಿಸಲಿದ್ದು, ಉಪಮುಖ್ಯಮಂತ್ರಿ ಜಿ. ಪರಮೇಶ್ವರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಡಾ.ಜಯಮಾಲಾ ಹಾಗೂ ಚಿಕ್ಕಪೇಟೆ ಶಾಸಕ ಉದಯ ಗರುಡಾಚಾರ್ ಅವರು ಮುಖ್ಯಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಿಎನ್‌ಆರ್ ರಾವ್ ಜೀವನ ಸಾಧನೆ ಕುರಿತ ಛಾಯಾಚಿತ್ರ ಪ್ರದರ್ಶನ ಹಾಗೂ ಗಾಯಕಿ ಬಿ.ಆರ್.ಛಾಯಾ ಮತ್ತು ತಂಡದವರಿಂದ ಸುಗಮ ಸಂಗೀತ ನಡೆಯಲಿದೆ.
ಎಲ್ಲಿ?: ರವೀಂದ್ರ ಕಲಾಕ್ಷೇತ್ರ
ಯಾವಾಗ?: ಜೂ.23, ಶನಿವಾರ ಮಧ್ಯಾಹ್ನ 3.30
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.