ಸಾವಯವ ಮತ್ತು ಸಿರಿಧಾನ್ಯ ಮೇಳ
Team Udayavani, Mar 25, 2017, 3:52 PM IST
ಸಾವಯವ ಉತ್ಪನ್ನಗಳ ಹಾಗೂ ಸಣ್ಣ ಸಿರಿಧಾನ್ಯಗಳ ಬಗ್ಗೆ ಗ್ರಾಹಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಕೃಷಿ ಇಲಾಖೆ, ಜೈವಿಕ್ ಕೃಷಿಕ್ ಸೊಸೈಟಿ ಸಹಯೋಗದಲ್ಲಿ ಸಾವಯವ ಮತ್ತು ಸಿರಿಧಾನ್ಯ ಮೇಳವನ್ನು ಆಯೋಜಿಸಿದೆ. ರೈತರು ತಾವು ಬೆಳೆದ ಗುಣಮಟ್ಟದ ಸಾವಯವ ಮತ್ತು ಸಿರಿಧಾನ್ಯ ಉತ್ಪನ್ನಗಳನ್ನು ನೋಂದಾಯಿತ ಸಂಘಗಳ ಮೂಲಕ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲು ಈ ಮೇಳ ಅನುವು ಮಾಡಿಕೊಡಲಿದೆ. ಇದರಿಂದ ಗ್ರಾಹಕರು ವಿವಿಧ ರೀತಿಯ ಸಾವಯವ ಮತ್ತು ಸಿರಿಧಾನ್ಯ ಪದಾರ್ಥಗಳನ್ನು ಒಂದೇ ಸ್ಥಳದಲ್ಲಿ ಖರೀದಿಸಬಹುದಾಗಿದೆ.
ಮೇಳದ ಉದ್ಘಾಟನಾ ಸಮಾರಂಭದಲ್ಲಿ ಮಾನ್ಯ ಸಾಂಖೀಕ ಮತ್ತು ಕಾರ್ಯಕ್ರಮದಲ್ಲಿ ಅನುಷ್ಠಾನ ಸಚಿವರಾದ ಡಿ. ವಿ. ಸದಾನಂದ ಗೌಡ, ಮಾನ್ಯ ಕೃಷಿ ಸಚಿವ ಕೃಷ್ಣ ಭೈರೇಗೌಡ ಮತ್ತಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಮೇಳದಲ್ಲಿ ಉದಲು ಪಿಜ್ಜಾ, ರಾಗಿ ಕೇಕ್, ಬರಗು ಸಮೋಸ, ಸಾಮೆ ಅಣಬೆ ಬಿರಿಯಾನಿ, ನವಣೆ ಕಟ್‌ಲೆಟ್, ನವಣೆ ಬ್ರೆಡ್, ಜೋಳದ ಜೀರಾ ಲಸ್ಸಿ, ನವಣೆ ಪೊಂಗಲ್, ಹಾರಕ ಬಿಸಿಬೇಳೆಬಾತ್, ಸಾಮೆ ಪಾಯಸ, ಸಜ್ಜೆ ರೊಟ್ಟಿ, ಸಾಮೆ ಚೌಚೌ ಬಾತ್ ಸೇರಿದಂತೆ ಹಲವು ಖಾದ್ಯಗಳನ್ನು ಸವಿಯಬಹುದಾಗಿದೆ. ಇದರ ಜೊತೆಗೆ ಸಿರಿಧಾನ್ಯಗಳ ಖಾದ್ಯ ತಯಾರಿಕಾ ಪ್ರಾತ್ಯಕ್ಷಿಕೆ ಮತ್ತು ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆಯೂ ಏರ್ಪಾಡಾಗಿದೆ.
ಎಲ್ಲಿ?: ಮಲ್ಲೇಶ್ವರಂ ಆಟದ ಮೈದಾನ(ಸರಕಾರಿ ಮಾದರಿ ಪ್ರಾಥಮಿಕ ಶಾಲೆ)
ಯಾವಾಗ?: ಮಾರ್ಚ್ 25 ಮತ್ತು 26, ಬೆಳಗ್ಗೆ 9ರಿಂದ ಸಂಜೆ 6. 30
ಪ್ರವೇಶ: ಉಚಿತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
M. Chinnaswamy ಸ್ಟಾಂಡ್‌ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?
Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್
Mangaluru: ಸಹಬಾಳ್ವೆ ಬೆಸೆಯುತ್ತಿದೆ ‘ಕುಸ್ವಾರ್’
iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ
Kumbra ಜಂಕ್ಷನ್‌ನಲ್ಲಿ ಈಗ ಸೆಲ್ಫಿ ಪಾಯಿಂಟ್ ಆಕರ್ಷಣೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.