“ತುಘಲಕ್’ ಎಂಬ ರಾಜಕೀಯ ನಾಟಕ
Team Udayavani, Apr 7, 2018, 2:40 PM IST
ಕಾರ್ನಾಡರ “ತುಘಲಕ್’ ಭಾರತದ ಅತ್ಯುತ್ತಮ ನಾಟಕಗಳಲ್ಲೊಂದು. ಐತಿಹಾಸಿಕ ಭಿತ್ತಿಯಲ್ಲಿ ಸಮಕಾಲೀನ ಧ್ವನಿಗಳನ್ನು ಹೊರಡಿಸುವ ಈ ನಾಟಕ ಹಲವು ವ್ಯಾಖ್ಯಾನಗಳ ಸಾಧ್ಯತೆಯನ್ನು ತನ್ನ ಓಡಲೊಳಗಿರಿಸಿಕೊಂಡಿದೆ. ಈ ನಾಟಕದ ಪ್ರಯೋಗಗಳನ್ನು ಕನ್ನಡವೂ ಸೇರಿದಂತೆ ನಾಡಿನ ಅನೇಕ ಭಾಷೆಗಳಲ್ಲಿ ಮಾಡಲಾಗಿದೆ. ಈ ನಾಟಕ ನಗರದಲ್ಲಿ ಪ್ರದರ್ಶನ ಕಾಣುತ್ತಿದೆ. ಸಮುದಾಯ ತಂಡ ಪ್ರಸ್ತುತ ಪಡಿಸುತ್ತಿರುವ ಆ ನಾಟಕ ಅಪಾರ ಜನಮನ್ನಣೆ ಮತ್ತು ಅಭಿಮಾನಿಗಳನ್ನು ಸಂಪಾದಿಸಿದೆ. ಸಂಗೀತ, ಅಭಿನಯ, ಬೆಳಕು ಹೀಗೆ ಎಲ್ಲಾ ವಿಭಾಗಗಳಲ್ಲೂ ನಾಟಕ ವೀಕ್ಷಕರ ಗಮನ ಸೆಳೆಯುತ್ತದೆ.
ಇನ್ನು ನಾಟಕದ ಕುರಿತು ಹೇಳುವುದಾದರೆ ತುಘಲಕ್ನ ಅವನತಿಯ ಕಥಾವಸ್ತು ನಾಟಕದ ಪ್ರಮುಖ ಅಂಶ. ತನ್ನ ರಾಜ್ಯದ ಕುರಿತು ಉಜ್ವಲ ಭವಿಷ್ಯದ ಕನಸು ಕಂಡವ ಅಂತಿಮ ದಿನಗಳಲ್ಲಿ ಎಂಥೆಂಥ ಸವಾಲುಗಳನ್ನು ಎದುರಿಸುತ್ತಾನೆ ಎನ್ನುವುದನ್ನು ನಾಟಕ ಹಿಡಿದಿಟ್ಟಿದೆ. ಆತನ ಸಾಮ್ರಾಜ್ಯದ ಅವನತಿಯ ರಾಜಕಾರಣ ಮತ್ತು ಧರ್ಮಕಾರಣಗಳನ್ನು ಎತ್ತಿ ಹಿಡಿವ ಈ ನಾಟಕ ಒಂದು ಅಪ್ಪಟ ರಾಜಕೀಯ ನಾಟಕವಾಗಿ ರೂಪುಗೊಡಿದೆ. ಆ ಮೂಲಕ ರಾಜಕಾರಣದ ಒಳಸುಳಿಗಳನ್ನು ನಾಟಕ ಪ್ರೇಕ್ಷಕರ ಮುಂದೆ ಬಿಚ್ಚಿಡುತ್ತದೆ. ಮೇಲ್ನೋಟಕ್ಕೆ ತುಘಲಕ್ ಐತಿಹಾಸಿಕ ನಾಟಕವೆನಿಸಿದರೂ ಇಂದಿನ ಕಾಲಕ್ಕೂ ಪ್ರಸ್ತುತತೆಯನ್ನು ಪಡೆಯುತ್ತದೆ. ಡಾ. ಸ್ಯಾಂ ಕುಟ್ಟಿ ಪಟ್ಟೋಮ್ಕರಿ ಈ ನಾಟಕವನ್ನು ನಿರ್ದೇಶಿಸಿದ್ದಾರೆ.
ಎಲ್ಲಿ?: ರಂಗಶಂಕರ, ಜೆ.ಪಿ. ನಗರ
ಯಾವಾಗ?: ಏಪ್ರಿಲ್ 8, ಸಂಜೆ 3.30 ಮತ್ತು 7.30
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bunts Hostel, ಕರಂಗಲ್ಪಾಡಿ ಜಂಕ್ಷನ್: ಶಾಶ್ವತ ಡಿವೈಡರ್ ನಿರ್ಮಾಣ ಕಾಮಗಾರಿ
Mangaluru: ರಾತ್ರಿ ಪ್ರಿಪೇಯ್ಡ್ ಆಟೋ ಇಲ್ಲದೆ ಪ್ರಯಾಣಿಕರ ಪರದಾಟ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.