ವಿಜ್ಞಾನ ಕಂಡಂತೆ ಯುಗಾದಿ
Team Udayavani, Mar 21, 2020, 6:03 AM IST
ಪ್ರಕೃತಿಯಲ್ಲಿ, ಬ್ರಹ್ಮಾಂಡದಲ್ಲಿ ಒಂದು ನಿರ್ದಿಷ್ಟ ಬದಲಾವಣೆ ಉಂಟಾಗುತ್ತದೆ. ಗ್ರಹ, ತಿಥಿ, ಮಾಸ, ರಾಶಿ, ಋತುಗಳಲ್ಲಿ ಒಂದು ಯೋಗ ಉಂಟಾಗುತ್ತದೆ. ಅದನ್ನು ಪ್ರಮಾಣಿಸಿಯೂ ನೋಡಬಹುದು. ಅದೇ ಬದಲಾವಣೆ, ನಮ್ಮ ಪಿಂಡಾಂಡದಲ್ಲಿ (ದೇಹ)ಯೂ ಉಂಟಾಗುತ್ತದೆ. ಇದು ಋಷಿ ಮಹರ್ಷಿಗಳು ತಮ್ಮ ಅನುಭವದಿಂದ ನಮಗೆ ತಿಳಿಸಿಕೊಟ್ಟಿರುವ ವೈಜ್ಞಾನಿಕ ಸತ್ಯ…
ವರ್ಷವಿಡೀ ಸಿಹಿ, ಕಹಿಯನ್ನು ಸಮವಾಗಿ ಕಾಣುತ್ತೇನೆ ಎಂಬ ಮನಸ್ಸಿನಲ್ಲಿ ವರ್ಷವನ್ನು ಆರಂಭಮಾಡುವ ದಿನವೇ ಯುಗಾದಿ. ಇಂದು ಹೊಸ ಸಂಕಲ್ಪಗಳನ್ನು ಪ್ರಾರಂಭಿಸಲು ಯೋಗ್ಯವಾದ ದಿನ. ನಮ್ಮ ಮನೆಯಲ್ಲಿ ಹಿರಿಯರು ಹೇಳುವುದನ್ನು ಕೇಳಿರುತ್ತೇವೆ, “ಇವತ್ತು ಬೇಗನೆ ಏಳು. ತಡವಾಗಿ ಎದ್ದರೆ ವರ್ಷವಿಡೀ ತಡವಾಗಿ ಏಳುತ್ತೀಯ’ ಎಂದು, “ಇವತ್ತು ಕೋಪ, ಹಠ ಮಾಡಬಾರದು, ಅಳಬಾರದು, ನಗುನಗುತ್ತಾ ಸಂತೋಷದಿಂದಿರು. ಆಗ ವರ್ಷವಿಡೀ ಸಂತೋಷದಿಂದ, ಸಮಾಧಾನದಿಂದ ಇರುತ್ತೀಯ’ ಎಂದು. ಈ ವಿಚಾರಗಳು ಮನೆಮನೆಗಳಲ್ಲಿ, ಸಂಸ್ಕಾರ ರೂಪದಲ್ಲಿ ಬಂದಿರುವುದು
ಎಲ್ಲರಿಗೂ ತಿಳಿದಿರುವ ವಿಚಾರಗಳು: ಬೆಂಗಳೂರಿನಂಥ ಮಹಾನಗರದಲ್ಲಿ ನಿಂತು ನೋಡಿದಾಗ, ಇವೆಲ್ಲವೂ ಕಾಲಬಾಹಿರ ವಿಷಯಗಳು ಎನ್ನಿಸಬಹುದು. ವರ್ಷದ ಮೊದಲ ರಜೆಯಂದು ಹೊಸತಿಂಡಿ, ಮನೆಕೆಲಸ ಅಂತ ಮತ್ತೆ ಮತ್ತೆ ಆಯಾಸ ಮಾಡಿಕೊಳ್ಳುವುದಕ್ಕಿಂತ, ಹಾಯಾಗಿ ಸ್ವಿಗ್ಗಿಯಲ್ಲಿ ಸುಗ್ಗಿಯ ಅಡುಗೆ ಆರ್ಡರ್ ಮಾಡಬಹುದಲ್ಲ? ಎಂಬ ಯೋಚನೆ ಬರಬಹುದು. ಅಥವಾ ಫ್ಯಾಮಿಲಿ ಔಟಿಂಗ್ ಪ್ರವಾಸಕ್ಕೆ ಹೋಗಿ ಶ್ರಮವನ್ನು ಕಳೆದುಕೊಂಡು ಬರಬಹುದಲ್ಲ ಎಂಬ ಚಿಂತನೆಗಳೂ ಈಗ ಸಹಜವಾಗಿವೆ. ಈ ಹಬ್ಬದ ಪರಿಪೂರ್ಣ ಉಪಯೋಗ ಏನು? ಪ್ರಯೋಜನ ಏನು? ಎಂಬ ಶಿಕ್ಷಣ ಇಲ್ಲದಿರುವುದರಿಂದ, ಈ ರೀತಿಯಾದ ಬಗೆ ಬಗೆ ಯೋಚನೆಗಳು ಸಹಜ.
ಬದಲಾವಣೆಗಳ ಕಾಲ: ಪ್ರಕೃತಿಯಲ್ಲಿ, ಬ್ರಹ್ಮಾಂಡದಲ್ಲಿ ಒಂದು ನಿರ್ದಿಷ್ಟ ಬದಲಾವಣೆ ಉಂಟಾಗುತ್ತದೆ. ಗ್ರಹ, ತಿಥಿ, ಮಾಸ, ರಾಶಿ, ಋತುಗಳಲ್ಲಿ ಒಂದು ಯೋಗ ಉಂಟಾಗುತ್ತದೆ. ಅದನ್ನು ಪ್ರಮಾಣಿಸಿಯೂ ನೋಡಬಹುದು. ಅದೇ ಬದಲಾವಣೆ, ನಮ್ಮ ಪಿಂಡಾಂಡದಲ್ಲಿ (ದೇಹ)ಯೂ ಉಂಟಾಗುತ್ತದೆ. ಇದು ಋಷಿ ಮಹರ್ಷಿಗಳು ತಮ್ಮ ಅನುಭವದಿಂದ ನಮಗೆ ತಿಳಿಸಿಕೊಟ್ಟಿರುವ ವೈಜ್ಞಾನಿಕ ಸತ್ಯ. ಯುಗಾದಿ ಹಬ್ಬದಂದು ಪ್ರಕೃತಿಯಲ್ಲಿ ಹೊಸತನ- ಹೊಸ ಚಿಗುರುಗಳು ಮೊಳೆಯುವ ಕಾಲ. ಹೂವು ಬಿರಿಯುವ ಕಾಲ. ಎಲ್ಲಾ ಜೀವ ಜಂತುಗಳಲ್ಲಿಯೂ ನವನವೀನತೆಯು ಮೊಳೆಯುವ ಕಾಲ.
ಅಭ್ಯಂಗದ ಲಾಭ: ಯುಗಾದಿಯ ಆಚರಣೆ- ಪ್ರಾತಃಕಾಲದಲ್ಲಿ ಎಳ್ಳೆಣ್ಣೆಯಿಂದ ಅಭ್ಯಂಗ ಮಾಡಿಕೊಳ್ಳಬೇಕು. “ಅಭ್ಯಂಗವು ಮುಪ್ಪು, ಆಯಾಸ, ವಾತದ ದೋಷಗಳನ್ನು ನಿವಾರಣೆ ಮಾಡುವುದು. ದೃಷ್ಟಿಪಾಟವನ್ನು ಕೂಡುವುದು. ಭೋಗಪ್ರದವಾದ ಆಚರಣೆಯಾದರೂ ಯೋಗಕ್ಕೆ ಅನುಕೂಲಕರ ಈ ಅಭ್ಯಂಗ. ದೇಹ, ಇಂದ್ರಿಯ, ಮನಸ್ಸನ್ನು ಹಗುರಗೊಳಿಸಿ, ಪುಷ್ಟಿ ಆಯುಸ್ಸು, ನಿದ್ರೆಯ ಸೌಖ್ಯವನ್ನುಂಟುಮಾಡುವುದು’ ಎಂದು ಆಯುರ್ವೇದವು ಹೇಳುತ್ತದೆ. ಯುಗಾದಿ ದಿನದಂದು ಸಂಕಲ್ಪಪೂರ್ವಕವಾಗಿ ಈ ಆಭ್ಯಂಗವನ್ನು ಕೈಗೊಂಡರೆ, ನಿತ್ಯವೂ ಅಭ್ಯಂಗವನ್ನು ಆಚರಿಸುವಂತಾಗುತ್ತದೆ.
ಯುಗಾದಿ ದಾನ: ಯುಗಾದಿಯ ಪರ್ವದಲ್ಲಿ ಸಾಮಾನ್ಯವಾದ ಅನ್ನದಾನಗಳ ಜೊತೆಗೆ, ವಿಶೇಷವಾಗಿ ಪಂಚಾಂಗ ಮತ್ತು ವಸ್ತ್ರಭೂಷಣಗಳನ್ನು ದಾನಮಾಡುತ್ತಾರೆ. ವಸಂತ ಋತುವಿನಲ್ಲಿ ಉಷ್ಣತೆ ಹೆಚ್ಚು ಇರುವುದರಿಂದ ಅಂದು ನೀರಿನ ಪಾತ್ರೆಗಳನ್ನು, ದೇವಸ್ಥಾನಾದಿ ಜಾಗಗಳಲ್ಲಿ ಸಿಹಿನೀರು, ಮಜ್ಜಿಗೆ, ಪಾನಕ ಮುಂದಾದವುಗಳನ್ನು ದಾನ ಮಾಡುವುದು ಕಾಲೋಚಿತವಾದ ದಾನವೇ ಆಗುತ್ತದೆ.
ಕಫ ಕರಗಿಸುವ ಬೇವು: ಯುಗಾದಿಯಂದು ದೇವರಿಗೆ ಸಮರ್ಪಿಸಿ, ಸೇವಿಸುವ ನೈವೇದ್ಯ- ಬೇವು- ಬೆಲ್ಲ. ಹೂವಿನೊಡನೆ ಕೂಡಿದ ಚಿಗುರಬೇವು, ಕಫ ಮತ್ತು ಪಿತ್ತವನ್ನು ಕಡಿಮೆ ಮಾಡುತ್ತದೆ. ಕಹಿ ಬೇವು ತಿನ್ನುವುದರಿಂದ, ಹೃದಯಕ್ಕೆ ಖನ್ನತೆ ಸಹಜ. ಹಾಗಾಗಿ, ಧಾತುಗಳಲ್ಲಿ ವೈಷಮ್ಯತೆ ಉಂಟುಮಾಡದಿರಲೆಂದು ಬೇವಿನೊಂದಿಗೆ ಬೆಲ್ಲ ಸೇರಿಸಿ ಭಕ್ಷಿಸುವ ಕ್ರಮವಿದೆ.
* ಡಾ. ಯಶಸ್ವಿನಿ, ಆಯುರ್ವೇದ ತಜ್ಞೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.