ಇಪಿಎಫ್ ಎಂದರೇನು ಗೊತ್ತಾ?


Team Udayavani, Mar 12, 2018, 3:45 PM IST

epf.jpg

ಖಾಸಗಿ ಕ್ಷೇತ್ರದಲ್ಲಿ ಕೆಲಸ ಮಾಡುವವರು ಹಣ ಉಳಿಸುವ ದಾರಿ ಯಾವುದು ಅಂತ ಯೋಚಿರುತಾರೆ. ಆರ್‌ಡಿ, ಎಫ್ಡಿಗಿಂತ ಮೇಲು ಎನ್ನಬಹುದಾದದ್ದು ಈ ಇಪಿಎಫ್ (Employees Provident Fund)

ಇದಕ್ಕೆ ಇಪಿಎಫ್ ಆ್ಯಕ್ಟ್ 1952 ಎನ್ನುವ ಪ್ರತ್ಯೇಕ ಶಾಸನವಿದೆ.  ಇದರನ್ವಯ ಸರಕಾರವು ಎಂಪ್ಲಾಯೀಸ್‌ ಪ್ರಾವಿಡೆಂಟ್‌ ಫ‌ಂಡ್‌ ಎಂಬ ನಿಧಿಯನ್ನು ನೌಕರವರ್ಗದ ಭವಿಷ್ಯ ಕಲ್ಯಾಣಕ್ಕಾಗಿ ಸ್ಥಾಪಿಸಿತು. ಇದು ಸರಕಾರಿ ಹಾಗೂ ಖಾಸಗಿ ಕ್ಷೇತ್ರದ ನೌಕರರಿಗೆ ಸಮಾನವಾಗಿ ಅನ್ವಯಿಸುವ ಸೌಲಭ್ಯ. ಇದು ನಿಮ್ಮ ಕಂಪೆನಿಯೊಳಗೆ ಸಂಬಳದಿಂದ ಕಡಿತಗೊಂಡು ವೃದ್ಧಿಯಾಗುವ ಫ‌ಂಡು. ಹೊರಗೆ ಸ್ಟೇಟ್‌ ಬ್ಯಾಂಕ್‌/ಪೋಸ್ಟಾಫೀಸಿನಲ್ಲಿ ಸಾರ್ವಜನಿಕರಿಗಾಗಿ ದೊರಕುವ ಪಬ್ಲಿಕ್‌ ಪ್ರಾವಿಡೆಂಟ್‌ ಫ‌ಂಡ್‌ಗಿಂತ ಭಿನ್ನ.   

ಯಾರ ಹಣ ಹೂಡಬಹುದು?
 ಒಂದು ಸಂಸ್ಥೆಯಲ್ಲಿ ಪಿ.ಎಫ್ ಕಡಿತ ಮಾಡಬೇಕಾದರೆ 20ಕ್ಕೂ ಹೆಚ್ಚು ಉದ್ಯೋಗಿಗಳು ಇರಬೇಕಾದದ್ದು ಕಡ್ಡಾಯ. ಅದರಿಂದ ಕಡಿಮೆ ಉದ್ಯೋಗಿಗಳಿರುವ ಸಂಸ್ಥೆಗಳಿಗೆ ಪಿ.ಎಫ್ ನಿಧಿ ಅನುಷ್ಠಾನ ಕಡ್ಡಾಯವಲ್ಲ. ಅಲ್ಲದೆ, ಮಾಸಿಕ ಸಂಬಳ ರೂ 15,000 (ಬೇಸಿಕ್‌+ಡಿ.ಎ) ಗಿಂತ ಜಾಸ್ತಿ ಇರುವ ಉದ್ಯೋಗಿಗಳ ಮೇಲೆ ಕೂಡಾ ಈ ಸ್ಕೀಮು ಕಡ್ಡಾಯವಲ್ಲ. ಈ ಮಿತಿಯ ಒಳಗೆ ವೇತನ ಪಡೆಯುವ ವರ್ಗಕ್ಕೆ ಮಾತ್ರ ಈ ಸ್ಕೀಮು ಕಡ್ಡಾಯ. ಸರಕಾರದ ಕಾನೂನುಗಳು ದುರ್ಬಲ ವರ್ಗದವರನ್ನು ರಕ್ಷಿಸುವ ದೃಷ್ಟಿಯಿಂದ ಮಾಡಿದ್ದಾಗಿರುತ್ತದೆ. ಆದರೂ ಬಹುತೇಕ ಉತ್ತಮ ಕಂಪೆನಿಗಳು ತಮ್ಮ ಎಲ್ಲಾ ಉದ್ಯೋಗಿಗಳಿಗೂ ಪಿ.ಎಫ್ ಕಡಿತವನ್ನು ಐಚ್ಛಿಕವಾಗಿಯಾದರೂ ಮಾಡುತ್ತಿವೆ. ಇದು ಏಕೆಂದರೆ, ಪ್ರಾವಿಡೆಂಟ್‌ ಫ‌ಂಡ್‌ ಎಂಬುದು ಭವಿಷ್ಯಕ್ಕಾಗಿ ಮಾಡುವಂತಹ ಒಂದು ಉತ್ತಮವಾದ ಉಳಿತಾಯ ಯೋಜನೆ. ನಿಗದಿತ, ಕರಮುಕ್ತ ಆದಾಯಕ್ಕೆ ಪಿ.ಎಫ್ನಷ್ಟು ಪ್ರಶಸ್ತವಾದ ಹೂಡಿಕೆ ಇನ್ನೊಂದಿಲ್ಲ.

ಸಂಘಟಿತ ಉದ್ಯಮಗಳಿಗೆ ಈ ಕಾನೂನು ಕಟ್ಟುನಿಟ್ಟಾಗಿ ಅನ್ವಯಿಸುವುದಾದರೂ ಅಸಂಘಟಿತ ಕ್ಷೇತ್ರದ ಬಹುಪಾಲು ಕಾರ್ಮಿಕರಿಗೆ ಈ ಸೌಲಭ್ಯ ಇನ್ನೂ ದೊರಕುತ್ತಿಲ್ಲ ಎನ್ನುವುದು ದುಃಖದ ವಿಚಾರ. ಅಂತವರಿಗೆ ಬ್ಯಾಂಕ್‌/ಪೋಸ್ಟಾಫೀಸಿನ ಪಿಪಿಎಫ್ ಒಂದು ಪರ್ಯಾಯ.

ವೇತನದ (ಬೇಸಿಕ್‌ ಮತ್ತು ಡಿಎ) ಶೇ.12 ಉದ್ಯೋಗಿಯ ಸಂಬಳದಿಂದ ಕಡಿದು ಈ ನಿಧಿಗೆ ‘ಎಕೌಂಟ್‌ ಎ’ ಅಡಿಯಲ್ಲಿ ಸಂಪೂರ್ಣವಾಗಿ ಜಮೆ ಮಾಡಲಾಗುತ್ತದೆ. ಅದಲ್ಲದೆ ಉದ್ಯೋಗದಾತನ ವತಿಯಿಂದಲೂ ಕೂಡಾ ಪ್ರತ್ಯೇಕವಾಗಿ ಇನ್ನೊಂದು ಶೇ.12 ಕಡಿತಗೊಳಿಸಿ ‘ಎಕೌಂಟ್‌ ಬಿ’ ಅಡಿಯಲ್ಲಿ ಉದ್ಯೋಗಿಯ ಪಿಎಫ್ ಖಾತೆಗೆ ಸೇರಿಸಲಾಗುತ್ತದೆ.

ಹಾಗಾಗಿ ಒಟ್ಟು ಜಮೆ ಶೇ. 24 ನಿಜ ಹೇಳಬೇಕಾದರೆ, ನಾವು ಶೇ.24 ಎಂದು ಹೇಳುತ್ತೇವಾದರೂ ಅಸಲಿಗೆ ನಮ್ಮ ಪಿಎಫ್ ಖಾತೆಗೆ ಈ ಶೇ.24ರಷ್ಟು ಸಂಪೂರ್ಣವಾಗಿ ಜಮೆಯಾಗುವುದಿಲ್ಲ. ನಿಮ್ಮ ಶೇ.12 ಸಂಪೂರ್ಣವಾಗಿ ಪಿಎಫ್ ಖಾತೆಗೇನೇ ಜಮೆಯಾದರೂ ಕೂಡಾ ಉದ್ಯೋಗದಾತರ ಶೇ.12ರಲ್ಲಿ ಎರಡು ಭಾಗಗಳಿವೆ. ಮೊತ್ತಮೊದಲನೆಯ ಭಾಗ- ಸಂಬಳದ ಶೇ.8.33 (ಗರಿಷ್ಠ, ಸಂಬಳ ರೂ 15,000 ಮಿತಿಯೊಳಗೆ ಅಂದರೆ, ಗರಿಷ್ಠ ದೇಣಿಗೆ ರೂ 1250) ಇಪಿಎಫ್ಒ ಅಡಿಯಲ್ಲಿಯೇ ಬರುವ ಒಂದು ಪೆನÒನ್‌ ಉಪಖಾತೆಗೆ ಹೋಗುತ್ತದೆ.  ಎಂಪ್ಲಾಯ್‌ ಪೆನÒನ್‌ ಸ್ಕೀಮ್‌ ಅಥವಾ ‘ಇಪಿಎಸ್‌’ ಎನ್ನುವ ಈ ಸ್ಕೀಮು ನಿವೃತ್ತಿಯ ಬಳಿಕ ಸಿಗುವ ಪೆನÒನ್‌ಗಾಗಿ ಮೀಸಲಾಗಿದೆ. ಹಾಗಾಗಿ ಇಪಿಎಫ್ನಲ್ಲಿ ಪೆನÒನ್‌ ದೇಣಿಗೆಯಾದ ಶೇ.8.33 ಅಥವಾ ಗರಿಷ್ಠ ರೂ 1,250 ಕಳೆದು ಉಳಿದ ಮೊತ್ತ ಅಂದರೆ ಶೇ.3.67 (ಗರಿಷ್ಟ ಸಂಬಳ ರೂ 15,000 ಮಿತಿಯೊಳಗೆ ಅಂದರೆ ಗರಿಷ್ಟ ದೇಣಿಗೆ ರೂ 550) ಮಾತ್ರ ಪಿಎಫ್ನ ‘ಎಕೌಂಟ್‌ ಬಿ’ ಗೆ ಜಮೆಯಾಗುತ್ತದೆ.

ಟಾಪ್ ನ್ಯೂಸ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.