ಜೇಡ ಇರಲೇಬೇಕು ನೋಡ

Team Udayavani, Jun 3, 2019, 6:00 AM IST

z-2

ಜೇಡವನ್ನು ಬಳಸಿ ಅನೇಕ ರೋಗಗಳನ್ನು ನಿವಾರಣೆ ಮಾಡಿಕೊಳ್ಳುವ ತಂತ್ರವನ್ನು ನಮ್ಮ ಆದಿವಾಸಿಗಳು ಅನುಸರಿಸುತ್ತಿದ್ದರು. ಈಗ ಇದು ಆಫ್ರಿಕಾದಲ್ಲಿ ಚಾಲ್ತಿಯಲ್ಲಿದೆ. ಇದನ್ನು ಎಲ್ಲ ರೈತರೂ ಜಾರಿ ಮಾಡಿದರೆ ರೋಗ ಬಾಧೆಯ ಪರಿತಾಪ ಕಡಿಮೆಯಾಗುತ್ತದೆ ಅನ್ನೋದಕ್ಕೆ ಹಿರಿಯ ವಿಜ್ಞಾನಿ
ಡಾ. ಪಿ.ವಿ ಹೆಗಡೆ ತಮ್ಮ ತೋಟದಲ್ಲಿ ಪ್ರಯೋಗ ಮಾಡಿ ಗೆದ್ದಿದ್ದೇ ಉದಾಹರಣೆ.

ಪ್ರಾಚೀನ ಭಾರತೀಯರು ಉಪಕಾರಿ-ಅಪಕಾರಿ ಕೀಟ, ಪ್ರಾಣಿಗಳ ಬಗ್ಗೆ ಅನೇಕ ಜಾನಪದ ಕಥೆಗಳನ್ನು ಸೃಷ್ಟಿಸಿದ್ದಾರೆ. ಪ್ರಾಚೀನ ಗ್ರೀಕ್‌ ಸಮುದಾಯದವರೂ ಇದಕ್ಕೆ ಹೊರತಲ್ಲ. ಇದೆಲ್ಲ ಬಿಡಿ, ಜೇಡದಿಂದ ಕೃಷಿಕಾರ್ಯಕ್ಕೆ ಅಪಾರ ಅನುಕೂಲಗಳಿವೆ. ಇದನ್ನು ಅರ್ಥಮಾಡಿಕೊಂಡಿದ್ದ ಪ್ರಾಚೀನ ಏಷಿಯನ್ನರು ಹೊಲ-ಗದ್ದೆ-ತೋಟಗಳಲ್ಲಿರುವ ಜೇಡಗಳನ್ನು ಕೊಲ್ಲುತ್ತಿರಲಿಲ್ಲ. ಇವುಗಳ ಚಟುವಟಿಕೆಗೆ ಯಾವುದೇ ಅಡ್ಡಿಯುಂಟಾಗದಂತೆ ಎಚ್ಚರ ವಹಿಸುತ್ತಿದ್ದರು. ಏಕೆಂದರೆ, ಇವುಗಳು ಬೆಳೆಗಳಿಗೆ ತೀವ್ರ ಹಾನಿಯುಂಟು ಮಾಡುವ ಕೀಟಗಳನ್ನು ಭಕ್ಷಿಸಿ, ಬೆಳೆಗಳನ್ನು ಸಂರಕ್ಷಿಸುತ್ತಿದ್ದವು. ಇದರಿಂದ ಕೃಷಿಕರು ಸಮೃದ್ಧವಾಗಿ ಬೆಳೆದ ಬೆಳೆಯನ್ನು ಕೊಯ್ಲುಮಾಡಿ ನೆಮ್ಮದಿಯಿಂದ ಮನೆಗೆ ಸಾಗಿಸಲು ಅನುಕೂಲವಾಗುತ್ತಿತ್ತು.

ಈ ಹಿನ್ನೆಲೆಯನ್ನೆಲ್ಲ ಅರ್ಥಮಾಡಿಕೊಂಡ ಜಪಾನಿನ ಕೃಷಿಋಷಿ ಮಸನೋಬ ಪುಕವೋಕ ಅವರು, ಜೇಡಗಳ ಮಹತ್ವವನ್ನು ಬಹುಮಹತ್ವದ ಕೃತಿ “ಒನ್‌ ಸ್ಟ್ರಾ ರೆವಲ್ಯೂಷನ್‌’ನಲ್ಲಿ ಪ್ರಸ್ತಾಪಿಸಿದ್ದಾರೆ. ಅವುಗಳ ಉಳಿಯುವಿಕೆ, ಬೆಳೆಯುವಿಕೆಯಿಂದ ಕೃಷಿಕಾರ್ಯಕ್ಕೆ ಅಪಾರ ಅನುಕೂಲವಾಗುತ್ತದೆ ಎಂದು ವಿವರಿಸಿದ್ದಾರೆ. ಭಾರತದಲ್ಲಿಯೂ ಪ್ರಜ್ಞಾವಂತ ಕೃಷಿಕರು, ಆದಿವಾಸಿಗಳು ಬೆಳೆಗಳನ್ನು ಕೀಟಗಳಿಂದ, ರೋಗಗಳಿಂದ ರಕ್ಷಿಸುವ ನಿಟ್ಟಿನಲ್ಲಿ ಜೇಡಗಳ ಕಾರ್ಯಗಳಿಗೆ ಅಡ್ಡಿಯುಂಟಾಗದಂತೆ ಮುಂಜಾಗ್ರತೆ ವಹಿಸುತ್ತಿದ್ದಾರೆ.

ಆಂಧ್ರಪ್ರದೇಶ, ಒಡಿಸ್ಸಾ ರಾಜ್ಯಗಳ ಉತ್ತರ ಘಟ್ಟ ಪ್ರದೇಶಗಳಲ್ಲಿ ಸಾಕಷ್ಟು ಮಂದಿ ಆದಿವಾಸಿಗಳಿದ್ದಾರೆ. ಇವರು ತಮ್ಮ ಬದುಕಿಗೆ ಅರಣ್ಯ ಉತ್ಪನ್ನಗಳ ಜೊತೆಗೆ ವ್ಯವಸಾಯವನ್ನೂ ಅವಲಂಬಿಸಿದ್ದಾರೆ. ವಿವಿಧ ಹಣ್ಣಿನ ಬೆಳೆಗಳ ತೋಟಗಾರಿಕೆ ಮಾಡುವ ಇವರು ಭತ್ತವನ್ನೂ ಬೆಳೆಯುತ್ತಾರೆ. ಭತ್ತಕ್ಕೆ ಕಾಂಡಕೊರಕ, ಸುಳಿಕೊರಕಗಳ ಹಾವಳಿ ಹೆಚ್ಚು. ಇಂಥ ಕೀಟಗಳನ್ನು ನಿಯಂತ್ರಣ ಮಾಡುವಲ್ಲಿ ಜೇಡಗಳು ಮಹತ್ವದ ಪಾತ್ರ ವಹಿಸುತ್ತವೆ. ಈ ಜೇಡಗಳನ್ನು ಒರಿಯಾ ಆದಿವಾಸಿಗಳು ಪಟಕಿಡಿ ಎನ್ನುತ್ತಾರೆ. ಆಂಧ್ರದ ಆದಿವಾಸಿಗಳು ಸಲೆಪುರುಗು ಎಂದು ಕರೆಯುತ್ತಾರೆ.

ನಮ್ಮ ನೆಲದ ಹಿರಿಯ ವಿಜ್ಞಾನಿ ಡಾ. ವಿ.ಪಿ. ಹೆಗ್ಡೆ, ಈ ಬಗ್ಗೆ ಸಂಶೋಧನೆ ನಡೆಸಿದ್ದಾರೆ. ಅವರು, ತಮ್ಮ ವೃತ್ತೀಯ ಅನುಭವದಲ್ಲಿ ಜೇಡದ ಮೇಲೆ ಒಂದು ಕಣ್ಣು ಇಟ್ಟಿದ್ದರು. ಜೊತೆಗೆ, ಸಕಲೇಶಪುರದ ಹರಿಹಳ್ಳಿಯಲ್ಲಿರುವ ತಮ್ಮ ಕಾಫಿ ತೋಟದಲ್ಲಿ ಜೇಡವನ್ನು ಬಳಸಿ ಏನೇನು ಉಪಯೋಗ ಎನ್ನುವುದರ ಬಗ್ಗೆ ಪ್ರಯೋಗ ಕೂಡ ನಡೆಸಿ ಯಶಸ್ವಿ ಗಳಿಸಿದ್ದಾರೆ.

ಇತಿಹಾಸ ಕೆದಕಿದರೆ ಬೆಳೆಗಳಿಗೆ ಹಾನಿಯುಂಟು ಮಾಡುವ ಕೀಟಗಳನ್ನು ನಿಯಂತ್ರಿಸುವ ಕಾರ್ಯದಲ್ಲಿ ಜೇಡಗಳನ್ನು ಅವಲಂಬಿಸುವಿಕೆ ತಲೆತಲೆಮಾರುಗಳಿಂದಲೂ ಜಾರಿಯಲ್ಲಿದೆ ಎಂಬ ಸಂಗತಿ ಅರಿವಾಗುತ್ತದೆ. ಜೇಡಗಳ ಚಟುವಟಿಕೆ ಎಷ್ಟು ವಿಪುಲವಾಗಿದೆ ಎಂದರೆ, ಕಾಂಡಕೊರಕ, ಸುಳಿಕೊರಕಗಳ ಬಾಧೆಗೆ ತುತ್ತಾದ ಒಂದೇ ಒಂದು ಭತ್ತದ ಪೈರೂ ಅಲ್ಲಿ ಕಾಣಸಿಗುವುದಿಲ್ಲ. ಆಫ್ರಿಕಾದ ತೋಟಗಾರರು ವಿವಿಧ ಹಣ್ಣಿನ ಬೆಳೆಗಳನ್ನು ಬಾಧಿಸುವ ಹಾನಿಕಾರಕ ಕೀಟಗಳ ನಿಯಂತ್ರಣಕ್ಕೆ ಜೇಡಗಳ ಚಟುವಟಿಕೆಗಳನ್ನೆಲ್ಲ ಅವಲಂಬಿಸಿದ್ದಾರೆ. ಸಹಜವಾಗಿ ಇಲ್ಲೆಲ್ಲ ಬಹು ವಿಸ್ತಾರವಾದ ಜೇಡದ ಬಲೆಗಳು ಕಾಣುತ್ತವೆ. ಜೇಡಗಳು ನಿರಾತಂಕವಾಗಿ ಸಂಚರಿಸುತ್ತಿರುತ್ತವೆ. ಇಲ್ಲಿನ ಮಕ್ಕಳು ಹುಡುಗಾಟಿಕೆಯಿಂದ ಜೇಡಗಳ ಬಲೆಗೆ ಹಾನಿ ಉಂಟು ಮಾಡಿದರೆ ಹಿರಿಯರು ಕರೆದು ತಿಳಿವಳಿಕೆ ಹೇಳುತ್ತಾರೆ.

ನಮ್ಮ ಆದಿವಾಸಿಗಳೆಲ್ಲರೂ ತಾವು ಬೆಳೆಯುವ ಬೆಳೆಗಳಿಗೆ ರಾಸಾಯನಿಕ ಕೀಟನಾಶಕಗಳನ್ನು ಸಿಂಪಡಿಸುವುದಿಲ್ಲ. ಹಾಗೆ ಮಾಡಿದರೆ ಭೂತಾಯಿ ಸಿಟ್ಟಾಗುತ್ತಾಳೆ ಎಂಬ ನಂಬಿಕೆ ಅವರಲ್ಲಿದೆ. ಇಂಥ ನಂಬಿಕೆ ಉಳಿದ ಪ್ರದೇಶಗಳಲ್ಲಿ ಕಣ್ಮರೆಯಾಗಿರುವುದು ವಿಷಾದನೀಯವೇ. ಆದರೆ, ಹೆಗಡೆ ಅವರು ಹೇಳುವಂತೆ ಇದನ್ನು ಎಲ್ಲ ರೈತರೂ ಪ್ರಯೋಗ ಮಾಡಿದರೆ ಸಮಸ್ಯೆಯ ತೀವ್ರತೆ ಕಡಿಮೆ ಆಗುತ್ತದಂತೆ.

– ಕುಮಾರ ರೈತ

ಟಾಪ್ ನ್ಯೂಸ್

BBMP-ED

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕಚೇರಿ ಮೇಲೆ ಇ.ಡಿ. ದಾಳಿ

Bjp-Rijiju

Waqf Report: ಅಮಿತ್‌ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್‌ ರಿಜಿಜು ಮೂಲಕ ಸಲ್ಲಿಕೆ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Train; ಗೋಮಟೇಶ್ವರ ಎಕ್ಸ್‌ಪ್ರೆಸ್‌ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ

Train; ಗೋಮಟೇಶ್ವರ ಎಕ್ಸ್‌ಪ್ರೆಸ್‌ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ

Dakshina Kannada ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಐವರ ಹೆಸರು

Dakshina Kannada ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಐವರ ಹೆಸರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BBMP-ED

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕಚೇರಿ ಮೇಲೆ ಇ.ಡಿ. ದಾಳಿ

Bjp-Rijiju

Waqf Report: ಅಮಿತ್‌ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್‌ ರಿಜಿಜು ಮೂಲಕ ಸಲ್ಲಿಕೆ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.