ನಿಸರ್ಗದತ್ತ ಕೀಟನಿಯಂತ್ರಕ ಚೆಂಡು ಹೂವು


Team Udayavani, Dec 2, 2019, 5:00 AM IST

flower

“ಬಲೆ ಬೆಳೆ’ ಎಂದರೆ ಮುಖ್ಯಬೆಳೆಯನ್ನು ಕೀಟಬಾಧೆಯಿಂದ ರಕ್ಷಿಸುವುದು. ಬಲೆ ಬೆಳೆಯಾಗಿ ಕೆಲವಾರು ಬೆಳೆಗಳನ್ನು ಬೆಳೆಯುತ್ತಾರೆ. ಈ ಎಲ್ಲ ಬೆಳೆಯನ್ನೂ ಒಟ್ಟಿಗೆ ಬೆಳೆಯುವ ಅವಶ್ಯಕತೆಯಿಲ್ಲ. ಯಾವುದಾದರೊಂದು ಅಥವಾ ಎರಡು ಬೆಳೆಯನ್ನು ಬಲೆ ಬೆಳೆಯಾಗಿ ಆಯ್ಕೆ ಮಾಡಬಹುದು. ಚೆಂಡು ಹೂವು ಸಹ ಪ್ರಮುಖ ಬಲೆ ಬೆಳೆ.

ಬೆಳೆಯನ್ನು ತೀವ್ರವಾಗಿ ಬಾಧಿಸುವ ಕೀಟಗಳಲ್ಲಿ ದುಂಡು ಹುಳು ಸಹ ಸೇರಿದೆ. ಈ ಮಾರಕ ಕೀಟ ರಾಸಾಯನಿಕ ಕೀಟನಾಶಕಗಳಿಗೂ ಬಗ್ಗುವುದಿಲ್ಲ. ಇದನ್ನು ನಿಯಂತ್ರಿಸಲು ಖರ್ಚು ಮಾಡುವ ಹಣ, ತೊಡಗಿಸುವ ಶ್ರಮ ಕೂಡ ವ್ಯರ್ಥವಾಗುತ್ತದೆ. ದುಂಡು ಹುಳುಗಳು ಜಮೀನಿನ ಮಣ್ಣಿನಲ್ಲಿ ವೃದ್ದಿಯಾಗುತ್ತವೆ. ಇವುಗಳನ್ನು ನಿಯಂತ್ರಿಸಲು ಕೆಲವು ಕ್ರಮಗಳಿವೆ. ಕೆಲ ಅವಧಿಯವರೆಗೆ ಜಮೀನನ್ನು ಬೇಸಾಯ ಮಾಡದೇ ಬಿಡುವುದು, ಜಮೀನಿನಲ್ಲಿ ಹುಲ್ಲು- ಸತ್ತೆ- ಸದೆ ಹಾಕಿ ಬೆಂಕಿ ಹಾಕಿ ಹುಳುಗಳನ್ನು ನಾಶ ಮಾಡುವುದು, ದುಂಡು ಹುಳು ಬಾಧೆ ನಿರೋಧಕ ತಳಿ ಬೆಳೆಸುವುದು, ದುಂಡು ಹುಳು ಆಕರ್ಷಿಸದ ಬೆಳೆ ಬೆಳೆಯುವುದು ಇತ್ಯಾದಿ ಕ್ರಮಗಳು. ಆದರೆ ಇವ್ಯಾವುವೂ ಪರಿಣಾಮಕಾರಿಯಲ್ಲ.

ವಿಶಿಷ್ಟ ದ್ರವದಿಂದ ಕೀಟ ನಾಶ
ಚೆಂಡು ಹೂ ಇರುವ ಜಮೀನುಗಳಲ್ಲಿ ದುಂಡುಹುಳು ನಿಯಂತ್ರಣದಲ್ಲಿರುವುದು ಕಂಡು ಬಂದಿದೆ. ಈ ಕೀಟಗಳನ್ನು ಹೆಚ್ಚಾಗಿ ಆಕರ್ಷಿಸುವ ಆಲೂಗೆಡ್ಡೆ, ಟೊಮೆಟೋ, ಸ್ಟ್ರಾಬೆರಿ, ಗುಲಾಬಿ ಇತ್ಯಾದಿ ಬೆಳೆಗಳಲ್ಲಿ ಚೆಂಡು ಹೂ ಅನ್ನು ಬಲೆ ಬೆಳೆಯಾಗಿ ಬೆಳೆಯುವುದು ಪರಿಣಾಮಕಾರಿ. ಈ ಹೂ ಬೆಳೆಯತೊಡಗಿದಂತೆ, ಇದರ ಬೇರು ವಿಶಿಷ್ಟ ಬಗೆಯ ದ್ರವ ಒಸರಿಸುತ್ತದೆ. ಇದು ಮಣ್ಣಿನಲ್ಲಿ ವೃದ್ಧಿಯಾದ ದುಂಡುಹುಳು ನಾಶಪಡಿಸಲು ಸಹಕಾರಿ.

ಟೊಮೆಟೋ, ಮೆಣಸಿನಕಾಯಿ, ಸ್ಟ್ರಾಬೆರಿ, ಇತ್ಯಾದಿ ಬೆಳೆ ಬೆಳೆಯುವ ರೈತರು ಇವುಗಳನ್ನು ನಾಟಿ ಮಾಡುವಾಗ ಪ್ರತಿ ಎಂಟು ಸಾಲುಗಳ ನಂತರ ಒಂದು ಸಾಲು ಚೆಂಡು ಹೂ ಸಸ್ಯಗಳನ್ನು ನಾಟಿ ಮಾಡಬೇಕು. ಇದಕ್ಕಾಗಿಯೇ ಪ್ರತ್ಯೇಕ ಸಸಿ ಮಡಿಯಲ್ಲಿ ಚೆಂಡು ಹೂ ಸಸಿ ಬೆಳೆಸಿಕೊಂಡಿರಬೇಕು.

ಹುಳುಗಳ ನಿಯಂತ್ರಣ
ಕಪ್ಪು ಮಣ್ಣಿನಲ್ಲಿ ನೀರಾವರಿಯಲ್ಲಿ ಹತ್ತಿ ಬೆಳೆದಾಗ ಕಂದುಕಾಯಿ ಕೊರಕ, ಅಮೆರಿಕನ್‌ ಕಾಯಿಕೊರಕ ಬಾಧೆ ಸಾಮಾನ್ಯವೆನ್ನಿಸಿದೆ. ಇವುಗಳನ್ನು ನಿಯಂತ್ರಿಸಲು ಚೆಂಡು ಹೂ ಬೆಳೆಯನ್ನು ಪೂರಕವಾಗಿ ಬೆಳೆಯಬೇಕು. ಹತ್ತಿಗಿಡಗಳ ನಡುವೆ ಚದುರಿದಂತೆ ಚೆಂಡು ಹೂ ಸಸಿಗಳನ್ನು ನೆಡಬೇಕು. ಆಗ ಕಾಯಿಕೊರಕಗಳು ಚೆಂಡುಹೂವಿನತ್ತ ಆಕರ್ಷಿತವಾಗುತ್ತವೆ. ಅಲ್ಲೇ ಮೊಟ್ಟೆಗಳನ್ನು ಇಡುತ್ತವೆ. ಇದರಿಂದ ಹತ್ತಿಗೆ ಇವುಗಳ ಬಾಧೆ ಗಣನೀಯವಾಗಿ ಕಡಿಮೆಯಾಗುತ್ತದೆ.

ದುಂಡು ಹುಳುಗಳಿರುವ ಮಣ್ಣಿನಲ್ಲಿ ಬಾಳೆಕೃಷಿ ಮಾಡಿದಾಗ ಬಾಳೆಬೇರುಗಳಲ್ಲಿ ಕಪ್ಪುಚುಕ್ಕೆಗಳಾಗುತ್ತವೆ. ಹುಳುಗಳ ಮೊಟ್ಟೆಗಳಿಂದ ಹೊರಬರುವ ಮರಿಕೀಟಗಳು ಬೇರನ್ನು ಸಂಪೂರ್ಣವಾಗಿ ಕೊಳೆಯುವಂತೆ ಮಾಡುತ್ತವೆ. ಇದರಿಂದ ಗಿಡಗಳು ಸೊರಗಿ ಗೊನೆಗಳ ಗಾತ್ರ ಕ್ಷೀಣಿಸುತ್ತದೆ. ಶಿಲೀಂಧ್ರ ರೋಗಗಳು ಹರಡಿ ಬಾಳೆಗಿಡಗಳು ಸೊರಗುತ್ತವೆ. ಫ‌ಸಲು ನಷ್ಟವಾಗುತ್ತದೆ. ಇಂಥ ತೊಂದರೆಗಳನ್ನು ತಪ್ಪಿಸಲು, ಬಾಳೆಗಿಡಗಳ ಸಾಲಿನ ನಡುವೆ ಮತ್ತು ತೋಟದ ಸುತ್ತಲೂ ಚೆಂಡು ಹೂ ಸಸಿಗಳನ್ನು ಬೆಳೆಸುವುದರಿಂದ ದುಂಡು ಹುಳುಗಳ ನಿಯಂತ್ರಣ ಮಾಡಬಹುದು.
ಹಚ್ಚಿನ ಮಾಹಿತಿಗೆ: 7406768999

-ಕುಮಾರ ರೈತ

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-163: ದ್ವಂದ್ವ ಇದ್ದಾಗ ಅನುಭವವೇ ಉತ್ತರ

Udupi: ಗೀತಾರ್ಥ ಚಿಂತನೆ-163: ದ್ವಂದ್ವ ಇದ್ದಾಗ ಅನುಭವವೇ ಉತ್ತರ

KSD-

Kasaragodu: ಆದೂರು ಶ್ರೀಭಗವತಿ ದೈವಸ್ಥಾನ: 351 ವರ್ಷ ಬಳಿಕ ಪೆರುಂಕಳಿಯಾಟ ಸಂಭ್ರಮ

Police

Kodagu: ಬ್ಯಾಂಕ್‌ ಅಧಿಕಾರಿಗಳು, ಜುವೆಲರಿ ಮಾಲಕರ ಜೊತೆ ಎಸ್‌ಪಿ ಸಭೆ

cOurt

Mangaluru: ಪೋಕ್ಸೋ ಪ್ರಕರಣದ ಆರೋಪಿ ದೋಷಮುಕ್ತ

ಹೆಬ್ಬಾಳ್ಕರ್‌ಗೆ ರವಿ ಅಶ್ಲೀಲ ಪದ ಬಳಸಿದ್ದು ನಿಜ: ಯತೀಂದ್ರ ಹೇಳಿಕೆ

ಹೆಬ್ಬಾಳ್ಕರ್‌ಗೆ ರವಿ ಅಶ್ಲೀಲ ಪದ ಬಳಸಿದ್ದು ನಿಜ: ಯತೀಂದ್ರ ಹೇಳಿಕೆ

MLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣMLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣ

MLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣ

ಸಮಾಜಘಾತಕ ಶಕ್ತಿಗಳ ವಿರುದ್ಧ ಗಂಭೀರ ಕ್ರಮ: ಸಿದ್ದರಾಮಯ್ಯ ಎಚ್ಚರಿಕೆ

ಸಮಾಜಘಾತಕ ಶಕ್ತಿಗಳ ವಿರುದ್ಧ ಗಂಭೀರ ಕ್ರಮ: ಸಿದ್ದರಾಮಯ್ಯ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ಕಡಿಮೆ ಜಾಗದಲ್ಲಿ ಉತ್ತಮ ಅನಾನಸ್ ಕೃಷಿ ಮಾಡಲು ಇಲ್ಲಿದೆ ಮಾಹಿತಿ

udayavani youtube

ಮಂಗಳೂರು | ಸ್ಥಳೀಯ ಮನೆಯಂಗಳಕ್ಕೆ ಹರಿಯುತ್ತಿರುವ ಡ್ರೈನೇಜ್ ಕೊಳಚೆ

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

ಹೊಸ ಸೇರ್ಪಡೆ

Suside-Boy

Manipal: ಪಶ್ಚಿಮ ಬಂಗಾಲದ ವ್ಯಕ್ತಿಯ ಶವ ಪತ್ತೆ

Udupi: ಗೀತಾರ್ಥ ಚಿಂತನೆ-163: ದ್ವಂದ್ವ ಇದ್ದಾಗ ಅನುಭವವೇ ಉತ್ತರ

Udupi: ಗೀತಾರ್ಥ ಚಿಂತನೆ-163: ದ್ವಂದ್ವ ಇದ್ದಾಗ ಅನುಭವವೇ ಉತ್ತರ

Frud

Udupi: ಷೇರು ಮಾರುಕಟ್ಟೆಯಲ್ಲಿ 21ಲಕ್ಷ ರೂ. ಹೂಡಿಕೆ: ವಂಚನೆ

balaparadha

Kumbale: ಮೊಬೈಲ್‌ ಫೋನ್‌ ಕಳವು: ಆರೋಪಿ ಸೆರೆ

Suside-Boy

Vitla: ಅನಂತಾಡಿ: ಸೀರೆಗೆ ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.