ಈಗ ನಿನಗೂ ಹಾಗೇ ಅನ್ನಿಸ್ತಾ ಇದೆಯಾ?

Team Udayavani, Aug 4, 2020, 12:24 PM IST

ಈಗ ನಿನಗೂ ಹಾಗೇ ಅನ್ನಿಸ್ತಾ ಇದೆಯಾ?

ಸಾಂದರ್ಭಿಕ ಚಿತ್ರ ಬಳಸಲಾಗಿದೆ

ಆ ದಿನ ನಾನು ನನ್ನ ಮನೆಗೆ, ನೀನು ನಿನ್ನೂರಿಗೆ ಹೋದದ್ದು ಈ ರೀತಿ ದೀರ್ಘ‌ ಬೇರ್ಪಡಿಸುವಿಕೆಗೆ ನಾಂದಿ ಹಾಡುತ್ತದೆ ಅಂತ ಗೊತ್ತೇ ಆಗಲಿಲ್ಲ. ಮರೆಯಲಿ ಹೇಗೆ ಆ ದಿನವನ್ನ? ಸಾಧ್ಯವಿಲ್ಲ. ಆ ದಿನವೇ ಮೊದಲು ಮತ್ತೆ ಕೊನೆ ಎನ್ನಬಹುದು. ಮುಂದೆ ಜೀವನದಲ್ಲಿ ಹಾಗೆ ಎಂದೂ ಆಗಲಿಲ್ಲ. ಹೀಗಾದದ್ದು ವಿಚಿತ್ರ ಅಂದ್ರೂ ನಿಜ. ಯಾರ್ಯಾರ್‌ ಜೀವನದಲ್ಲಿ ಘಟನೆಗಳು ಹೇಗೆ ಘಟಿಸುತ್ತವೆ ಅಂತ ಹೇಳಲು ತುಂಬಾ ಕಷ್ಟ. ಅಂದು ನೀ ವಾರ್ಷಿಕ ಪರೀಕ್ಷೆಯ ನಂತರ ನಮ್ಮ ಮನೆಗೆ ಬಂದಿದ್ದೆ . ಮೇಲಿಂದ ಮೇಲೆ ಬರೋದು ನಿನಗೆ ರೂಢಿ.

ಬೆಳ್ಳಂಬೆಳಿಗ್ಗೆ ದುಂಡು ಮಲ್ಲಿಗೆಯ ಮೊಗ್ಗಿನ ಮಾಲೆಯನ್ನು ಮನೆಯವರಿಗೆಲ್ಲ ಸಾಲುವಂತೆ, ಮಾರುಗಟ್ಟಲೆ ತಂದುಕೊಟ್ಟಿದ್ದೆ. ಮನೆಯವರೆಲ್ಲರೂ ಪರಿಚಯ ನಿನಗೆ. ಅವರ ಕಣ್ಣಲ್ಲಿ ಒಳ್ಳೆಯ ಹುಡುಗ ಎಂಬ ಮುದ್ರೆ ಆಗಲೇ ಬಿದ್ದಾಗಿತ್ತು. ಅಭ್ಯಾಸದ ವಿಷಯಕ್ಕೆ ಸಂಬಂಧಿಸಿದ ಬುಕ್ಸ್, ನೋಟ್ಸ್ ಗಳನ್ನು, ನಾ ಕೇಳದಿದ್ದರೂ ತಂದುಕೊಟ್ಟು ಓದು, ಚೆನ್ನಾಗಿ ಬರೆ ಎಂದಿದ್ದೆ. ಅವತ್ತು, ಹಾಗೆಯೇ ತುಸುಹೊತ್ತು ನಿನ್ನ ಜೊತೆ ನಡೆದರಾಯ್ತು ಎಂದು, ಅಲ್ಲೇ ಸಮೀಪದಲ್ಲಿದ್ದ ರಾಘವೇಂದ್ರರ ದೇವಾಲಯವನ್ನು ಹೊಕ್ಕಿದ್ದಾಯ್ತು. ಗಂಟೆ ಬಾರಿಸಿ, ಕೈಮುಗಿದು, ತೀರ್ಥ ಸ್ವೀಕರಿಸಿ, ಎರಡು ಸುತ್ತು ಪ್ರದಕ್ಷಿಣೆ ಹಾಕಿ ಕುಂತಾಗ, ಅಲ್ಲೇ ಗಿಡದಲ್ಲಿ ಆಟವಾಡುತ್ತಿದ್ದ ಗುಬ್ಬಚ್ಚಿಗಳ ಕಲರವ ಮನಸೂರೆಗೊಂಡಿತ್ತು.

ಪ್ರತಿದಿನದಂತೆ ಆ ದಿನವೂ ಇದ್ದರೂ, ಹೇಳಲಾಗದ ಏನೋ ವಿಶೇಷವಿದೆ ಅನಿಸುತ್ತಿತ್ತು. ಅವತ್ತು ನಾವಿಬ್ಬರೂ ಮುಂಬರುವ ಪರೀಕ್ಷೆಯ ಫ‌ಲಿತಾಂಶದ ಬಗ್ಗೆ
ಮಾತನಾಡಿದೆವೇ ಹೊರತು ಬೇರೇನೂ ಇಲ್ಲ. ಕ್ಲಾಸ್‌ನಲ್ಲಿ ಸಹಪಾಠಿಯಾದ ನಿನ್ನ ಜೊತೆ, ಹೆಸರಿಸಲಾಗದ ಬಂಧ. ಮುಂದಿನ ವಿದ್ಯಾಭ್ಯಾಸ ಮತ್ತು ಕೆಲಸಕ್ಕೆ ನೀನು ಬೆಂಗಳೂರಿಗೆ ಹೋಗು ವುದು ಪಕ್ಕಾ ಆಗಿತ್ತು. ಕ್ಷಣಕಾಲ ದೇವಾಲಯದಲ್ಲಿ ಕಳೆದು ಮತ್ತೆ ಮನೆಗೆ ಬರುವಾಗ ಮತ್ತೆ ಮೌನ. ಕಾಲ ಹೆಜ್ಜೆಗಳಿಗೆ ಗಿಡಮರಗಳೇ ಸಾಥ್‌ ನೀಡಿದ್ದವು. ನಿನ್ನಲ್ಲಿರುವ ಎಲ್ಲಾ ಭಾವನೆಗಳಿಗೆ ನಾನು ಸಾಕ್ಷಿಯಾಗಿದ್ದೆ. ಮುಂದೆ ಇಬ್ಬರೂ ಮುಂದಿನ ಅಭ್ಯಾಸ, ವೃತ್ತಿ ಎಂದು ಬಿಜಿಯಾಗಿ, ನಮ್ಮ ನಮ್ಮ ಲೋಕದಲ್ಲಿ ಕಳೆದುಹೋದೆವು.

ಆಗೊಮ್ಮೆ ಈಗೊಮ್ಮೆ ಉಭಯ ಕುಶಲೋಪರಿಯ ಪತ್ರಗಳು ಸಂದಾಯವಾಗುತ್ತಿದ್ದವು. ಕಾಲಚಕ್ರದ ಉರುಳುವಿಕೆಯಲ್ಲಿ, ಮುಂದಿನ ದಿನಗಳಲ್ಲಿ ಆಶ್ಚರ್ಯ ಎನ್ನುವಂತೆ ಪತ್ರಗಳೂ ದೀರ್ಘ‌ ವೇಳೆಯ ಬೇರ್ಪಡಿಸುವಿಕೆ ಡಿಟ್ಯಾರ್ಜೆಂಟನ್ನು ಹುಟ್ಟಿಸಿತ್ತು. ಜೀವನದಲ್ಲಿ ಏನು ನಡೀತಾ ಇದೆ ಎಂದು ಕೇಳುವ ಉತ್ಸುಕತೆಯೂ ಆಗ ಇರಲಿಲ್ಲ. ದಿನಗಳು ಉರುಳುತ್ತಾ ಹೋದವು. ನಾನು ವೃತ್ತಿ, ಮದುವೆ- ಮಕ್ಕಳೆಂದು ನಿರತಳಾದರೆ, ನಿನ್ನದು ಏನೂ ಗೊತ್ತಾಗಲಿಲ್ಲ. ಆ ದಿನ ನಾನು ನನ್ನ ಮನೆಗೆ, ನೀನು ನಿನ್ನೂರಿಗೆ ಹೋದದ್ದು ಈ ರೀತಿ ದೀರ್ಘ‌ ಬೇರ್ಪಡಿಸುವಿಕೆಗೆ ನಾಂದಿ ಹಾಡುತ್ತದೆ ಅಂತ ಗೊತ್ತೇ ಆಗಲಿಲ್ಲ. ಮಾತುಗಳು ಎಷ್ಟೊಂದು ಆಡದೇ ಉಳಿದವು. ಭಾವನೆಗಳು ಒಳಗೇನೇ ಖುದ್ದು, ನಂದಿ ಹೋದವು.

ಉಸಿರಾಡಲೂ ಪುರಸೊತ್ತಿಲ್ಲ ಎನ್ನುವ ಘಳಿಗೆ ಸ್ವಲ್ಪ ವೇಳೆ ಕೊಟ್ಟಾಗ ನೀನು ನೆನಪಾಗುತ್ತೀಯಾ. ಈಗ ಅನಿಸ್ತಿದೆ ಕಣೋ; ಅಂದು ನೀನಾದರೂ ಮಾತನಾಡಬೇಕಿತ್ತು. ಇಬ್ಬರಲ್ಲಿಯೂ ವೈರುಧ್ಯಕ್ಕಿಂತ ಸಾಮ್ಯತೆಯೇ ಹೆಚ್ಚಾಗಿತ್ತು. ಪ್ರೀತಿ ಅಂತಾ ಹೆಸರಿಸಲಾಗದಿದ್ದರೂ, ಆತ್ಮೀಯತೆ ಇತ್ತು. ಈ ಆತ್ಮೀಯತೆಯಿಂದ, ನಮ್ಮಿಬ್ಬರದು ಸಖತ್‌ ಜೋಡಿ ಆಗುತ್ತಿತ್ತೇನೋ? ಇದು ಬರೀ ನನ್ನ ಕಲ್ಪನೆ ಆಗಿರಬಹುದು ಅಥವಾ, ಈಗ ನಿನಗೂ ಹಾಗೇ ಅನಿಸುತ್ತಾ?

ಮಾಲಾ ಮ. ಅಕ್ಕಿಶೆಟ್ಟಿ

ಟಾಪ್ ನ್ಯೂಸ್

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.