ಯಾವ್ದಾದ್ರೂ ಹತ್ತಕ್ಕೆ ಮಾರ್ಕ್ಸ್ ಕೊಡಿ!
Team Udayavani, Jan 14, 2020, 5:19 AM IST
ತ್ಯಾಗರಾಜ ಪರಮಶಿವ ಕೈಲಾಸಂ ಅಂದರೆ ಹೆಚ್ಚಿನವರಿಗೆ ತಕ್ಷಣ ಅರ್ಥವಾಗುವುದಿಲ್ಲ . ಆದರೆ, ಟಿ ಪಿ ಕೈಲಾಸಂ ಅಂದರೆ- “ಓಹ್, ಅವರಾ? ಅವರು ಕನ್ನಡ ಸಾಹಿತ್ಯದ ಮುಖ್ಯ ಲೇಖಕರು, ಮಹಾನ್ ನಾಟಕಕಾರರು’ ಅನ್ನುವ ವಿವರ ದೊರಕುತ್ತದೆ. ಕೈಲಾಸಂ ಅವರ ತಂದೆ, ಆ ಕಾಲಕ್ಕೇ ನ್ಯಾಯಾಧೀಶರಾಗಿದ್ದರು. ಅಂಥವರ ಪುತ್ರ ಕೈಲಾಸಂ ಕುರಿತು ಇರುವ ಕತೆಗಳಿಗೆ ಲೆಕ್ಕವಿಲ್ಲ. ಆ ಪೈಕಿ ಸ್ವಾರಸ್ಯಕರ ಎಂಬಂಥ ಒಂದು ಪ್ರಸಂಗ ಹೀಗಿದೆ.
ಕೈಲಾಸಂ, ಗಣಿತದಲ್ಲಿ ವಿಪರೀತ ಬುದ್ಧಿವಂತರಾಗಿದ್ದರಂತೆ. ಅವರು ಹಾಸನದಲ್ಲಿ ಪ್ರೌಢಶಾಲೆಯಲ್ಲಿ ಓದುತ್ತಿದ್ದ ಸಂದರ್ಭದಲ್ಲಿ, ಪರೀಕ್ಷೆಯಲ್ಲಿ ಹದಿನೈದು ಪ್ರಶ್ನೆಗಳನ್ನು ನೀಡಿ, ಯಾವುದಾದರೂ ಹತ್ತಕ್ಕೆ ಮಾತ್ರ ಉತ್ತರಿಸಿ ಎಂದು ಸೂಚನೆ ನೀಡಲಾಗಿತ್ತಂತೆ.
ಈ ಕೈಲಾಸಂ ಸಾಹೇಬರು, ಎಲ್ಲ ಹದಿನೈದು ಲೆಕ್ಕಗಳನ್ನೂ ಸರಿಯಾಗಿ ಬಿಡಿಸಿ-ಉತ್ತರ ಪತ್ರಿಕೆಯ ಕೆಳಗೆ- ಮಾನ್ಯ ಪರೀಕ್ಷಕರೆ, ನಿಮಗೆ ಇಷ್ಟವಾದ ಯಾವುದಾದರೂ ಹತ್ತು ಉತ್ತರಗಳನ್ನು ನೀವೇ ಆಯ್ಕೆ ಮಾಡಿಕೊಂಡು. ಅಷ್ಟಕ್ಕೇ ಮಾರ್ಕ್ಸ್ ಕೊಡಿ’ ಎಂದು ಬರೆದಿದ್ದರಂತೆ!
ಇದನ್ನು ಓದಿದ ಪರಿವೀಕ್ಷಕರಿಗೆ ಹೇಗೆ ಆಗಿರಬೇಡ. ಪರೀಕ್ಷೆ ಬರೆಯುವುದು ಅಂದರೆ ಹೀಗಲ್ವಾ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.