ಕನ್ನಡದ ಕುಲ ಪುರೋಹಿತ ಆಲೂರು ವೆಂಕಟರಾವ್
ಹತ್ತು ಪಾಯಿಂಟ್‌ಗಳಲ್ಲಿ ವ್ಯಕ್ತಿ ಪರಿಚಯ!
Team Udayavani, Oct 31, 2019, 4:16 AM IST
ಪ್ರಮುಖ ವ್ಯಕ್ತಿಗಳ ಪರಿಚಯವನ್ನು ಕೇವಲ ಹತ್ತೇ ಹತ್ತು ಪಾಯಿಂಟ್‌ಗಳಲ್ಲಿ ಕಟ್ಟಿ ಕೊಡುವ ಪ್ರಯತ್ನವಿದು…
1. ಹರಿದು ಹೋಗಲಿದ್ದ ಕರ್ನಾಟಕ ರಾಜ್ಯವನ್ನು ಏಕೀಕರಣ ಹೋರಾಟದ ಮೂಲಕ ಒಂದುಗೂಡಿಸುವಲ್ಲಿ ಅನೇಕ ಮಹನೀಯರು ಶ್ರಮಿಸಿದ್ದರು. ಅವರಲ್ಲಿ, ಆಲೂರು ವೆಂಕಟರಾವ್ ಅವರು ಮುಂಚೂಣಿಯಲ್ಲಿ ನಿಲ್ಲುತ್ತಾರೆ.
2. ಅವರು ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ, ಇತಿಹಾಸಕಾರ, ಬರಹಗಾರ ಮತ್ತು ಪತ್ರಕರ್ತ ಕೂಡಾ ಹೌದು.
3. ಆಲೂರು ವೆಂಕಟ ರಾವ್ ಅವರನ್ನು “ಕನ್ನಡದ ಕುಲ ಪುರೋಹಿತ’ ಎಂದೇ ಕರೆಯಲಾಗುತ್ತದೆ.
4. ಅವರು ಕನ್ನಡಿಗರನ್ನು ಒಂದುಗೂಡಿಸುವ ಸಲುವಾಗಿಯೇ “ಜಯ ಕರ್ನಾಟಕ’ ಎಂಬ ಪತ್ರಿಕೆಯನ್ನು ಹೊರ ತರುತ್ತಿದ್ದರು.
5. ಅವರು, ಈಗಿನ ವಿಜಯಪುರ ಜಿಲ್ಲೆಯಲ್ಲಿ ಜುಲೈ 12, 1880 ರಂದು ಜನಿಸಿದರು.
6. ಬಿ.ಎ. ಎಲ್.ಎಲ್.ಬಿ ವ್ಯಾಸಂಗ ಮಾಡಿದ ನಂತರ ಭಾರತದ ಹೆಸರಾಂತ ಕ್ರಾಂತಿಕಾರಿ ಸೇನಾನಿ ವಿ.ಡಿ. ಸಾವರ್ಕರ್, ಮತ್ತು ಲೋಕಮಾನ್ಯ ಬಾಲಗಂಗಾಧರ ತಿಲಕ್ ಅವರ ಸಂಪರ್ಕಕ್ಕೆ ಬಂದರು. ತಿಲಕರ ಆಪ್ತರಲ್ಲಿ ವೆಂಕಟ ರಾವ್‌ಅವರು ಒಬ್ಬರಾದರು.
7. ಆಲೂರರು, ಬಾಲಗಂಗಾಧರ ತಿಲಕರ “ಗೀತ ರಹಸ್ಯ’ ಪುಸ್ತಕವನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ.
8. ನವೆಂಬರ್ 1, 1956ರಲ್ಲಿ ಕರ್ನಾಟಕ ರಾಜ್ಯ ಸ್ಥಾಪನೆಯಾದಾಗ ವೆಂಕಟ ರಾಯರು ಹಂಪಿಯ ವಿರೂಪಾಕ್ಷ ದೇವಸ್ಥಾನಕ್ಕೆ ತೆರಳಿ ತಾಯಿ ಭುವನೇಶ್ವರಿಯ ಪೂಜೆ ಮಾಡಿದ್ದರು. ಅಲ್ಲಿಂದಲೇ ಅವರಿಗೆ “ಕನ್ನಡದ ಕುಲಪುರೋಹಿತ’ ಎಂಬ ಬಿರುದು ಬಂದಿದ್ದು.
9. ಕರ್ನಾಟಕ ರಾಜ್ಯ ಘೋಷಣೆಯಾದ ದಿನವನ್ನೇ ನಾವು “ಕರ್ನಾಟಕ ರಾಜ್ಯೋತ್ಸವ’ ಎಂದು ಪ್ರತಿವರ್ಷ ಆಚರಿಸುತ್ತಾ ಬಂದಿದ್ದೇವೆ.
10. ಆಲೂರು ವೆಂಕಟರಾಯರು, ಫೆಬ್ರವರಿ 24, 1964ರಂದು ವಿಧಿವಶರಾದರು.
ಸಂಗ್ರಹ: ಪ್ರಿಯಾಂಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sydney Test: ವೇಗಿಗಳ ಉರಿದಾಳಿಗೆ ನಲುಗಿದ ಆಸೀಸ್; ಭಾರತಕ್ಕೆ ಅಲ್ಪ ಮುನ್ನಡೆ
INDvAUS; ಕೊನೆಗೂ ನಿವೃತ್ತಿ ಸುದ್ದಿಯ ಬಗ್ಗೆ ಮೌನ ಮುರಿದ ರೋಹಿತ್ ಶರ್ಮಾ; ವಿಡಿಯೋ ನೋಡಿ
Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು
Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ
Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.