ಕತ್ತಲಲ್ಲಿ ಧಿಗ್ಗನೆ ಅರಳುವ ಬ್ರಹ್ಮ ಕಮಲ..


Team Udayavani, Jun 1, 2017, 10:01 AM IST

vismaya4.jpg

ಬ್ರಹ್ಮ ಕಮಲ ರಾತ್ರಿ 11 ಗಂಟೆಯ ಬಳಿಕ ಅರಳಿ ಬೆಳಗಾಗುವುದರ ಒಳಗೆ ಕಮರಿಹೋಗುತ್ತದೆ. ರಾತ್ರಿ ರಾಣಿ ಎನ್ನುವ ಹೂವಿನ ಗಿಡದ ಎಲೆ ಇದು. ಕಾಂಡವೇ ಎಲೆಯಾಗಿ, ಎಲೆಯೇ ಹೂವಾಗಿ ಅರಳುವ ಈ ಬ್ರಹ್ಮಕಮಲದ ಬಳ್ಳಿಯನ್ನು ಹೆಚ್ಚಾಗಿ ಮನೆಯ ಅಂಗಳದಲ್ಲಿ ಬೆಳೆಸುತ್ತಾರೆ. ಸೌಂದರ್ಯಕ್ಕಿಂತಲೂ ಧಾರ್ಮಿಕ  ಕಾರಣಕ್ಕಾಗಿ ಇದನ್ನು ಬೆಳೆಸುವುದೇ ಹೆಚ್ಚು. ಮಹಿಳೆಯರಿಗೆ ಈ ಹೂವು ಪೂಜ್ಯನೀಯ. ರಾತ್ರಿಯ ವೇಳೆ ಈ ಹೂವು ಬಿಟ್ಟಾಗ ಮನೆಯವರೆಲ್ಲ ಸೇರಿ ಪೂಜೆ ಮಾಡುತ್ತಾರೆ. ಬ್ರಹ್ಮಕಮಲ ಯಾರ ಮನೆಯಲ್ಲಿ ಅರಳುತ್ತದೆಯೋ, ಆ ಮನೆಯ ಒಡೆಯರು ಸಂಪದ್ಭರಿತರಾಗುತ್ತಾರೆ ಎನ್ನುವ ನಂಬಿಕೆ ಇದೆ. 

ಕಮಲನಾಭನಾದ ವಿಷ್ಣುವು ತನ್ನ ದೇಹದಿಂದ ಒಂದು ಬೃಹತ್‌ ಕಮಲದ ಹೂವನ್ನು ಹೊರಚಾಚಿದಾಗ ಅದರ ಮೇಲೆ ಕಮಲಭವ ಅಂದರೆ, ಸೃಷ್ಟಿಕರ್ತನಾದ ಬ್ರಹ್ಮ ಕುಳಿತಿರುತ್ತಾನೆ ಎನ್ನುವ ನಂಬಿಕೆ ಪುರಾಣದಲ್ಲಿದೆ. ಹೀಗಾಗಿ ಈ ಹೂವಿಗೆ ಬ್ರಹ್ಮಕಮಲ ಎನ್ನುವ ಹೆಸರು ಬಂದಿದೆ. ಕೇವಲ ವರ್ಷಕೊಮ್ಮೆ ಅರಳುವ ಈ ಹೂವು ರಾತ್ರಿ ವೇಳೆ ಅರಳಿ ರಾತ್ರಿಯೇ ಬಾಡಿಹೋಗುತ್ತೆ. ಹೂವುಗಳಲ್ಲೇ ಈ ಥರದ ಸ್ವಭಾವವನ್ನು ತೋರಿಸುವ ಹೂವು ಇದೊಂದೇ.

ಇಂಥ ಅಪರೂಪದ ಹೂವು ಬ್ರಹ್ಮ ಕಮಲದ ಹೂವು ಅರಳ್ಳೋದೂ ಅದೃಷ್ಟದ ಸಂಕೇತ ಎಂಬ ನಂಬಿಕೆ ಜನರಲ್ಲಿದೆ. ಹೀಗಾಗಿ ಈ ಹೂವು ಮೊದಲ ಬಾರಿಗೆ ಅರಳಿದಾಗ 5 ಜನ ಮುತ್ತೆ„ದೆಯರಿಗೆ ಉಡಿತುಂಬಿ ಸತ್ಕರಿಸುವ ಸಂಪ್ರದಾಯ ಕೂಡ ಉತ್ತರ ಕರ್ನಾಟಕದಲ್ಲಿದೆ. ಸಾಮಾನ್ಯವಾಗಿ ಯಾವುದೇ ಗಿಡ ಹೂ ಬಿಡಬೇಕಾದರೆ ಮೊದಲು ಬೇರು, ನಂತರ ಕಾಂಡ ಬೆಳೆದು ಆಮೇಲೆ ಎಲೆ, ಹೂವು ಬಿಡುತ್ತೆ. ಎಲ್ಲ ಗಿಡಗಳು ಬೇರು, ಕಾಂಡ ಅಥವಾ ಬೀಜದಿಂದ ಬೆಳೆದರೆ ಬ್ರಹ್ಮ ಕಮಲ ಎಲೆಯಿಂದಲೇ ದೊಡ್ಡದಾಗುತ್ತದೆ. ಗಿಡದ ಎಲೆಯನ್ನು ನೆಟ್ಟರೆ ಗಿಡವಾಗಿ ಬೆಳೆಯುತ್ತದೆ! ಒಂದೂವರೆ ವರ್ಷದಲ್ಲಿ ಹೂವು ಬಿಡಲು ಆರಂಭವಾಗುತ್ತದೆ. ಬ್ರಹ್ಮ ಕಮಲ ಹೂವು ಬಿಡುವುದು ಜೂನ್‌- ಜುಲೈ ತಿಂಗಳಿನಲ್ಲಿ. ಒಂದೇ ಒಂದು ಎಲೆಯಿಂದ ಗಿಡವಾಗಿ ಬೆಳೆಯುತ್ತಾ ತನ್ನ ಮೈ ತುಂಬೆಲ್ಲಾ ಹೂವುಗಳನ್ನು ಬಿಡುತ್ತದೆ. ಒಮ್ಮಲೆ ಹತ್ತು ಹದಿನೈದು ಮೊಗ್ಗುಗಳು ಹೂವಾಗಿ ಅರಳುವುದೇ ವಿಸ್ಮಯ. ಈ ಹೂವಿನ ಸೌಂದರ್ಯ ಒಂದು ರಾತ್ರಿಗೆ ಮಾತ್ರ ಸೀಮಿತ. ಆದರೆ, ಅಪರಿಮಿತ ಪರಿಮಳವನ್ನು ಸುತ್ತಮುತ್ತಲೂ ಪಸರಿಸುತ್ತದೆ. ಈ ಹೂವಿನ ಸೌಂದರ್ಯ ಸವಿಯಬೇಕಾದರೆ, ಹೂವು ಬಿಟ್ಟು ನಾಲ್ಕೈದು ದಿನಗಳವರೆಗೆ ಕಾದು ಜಾಗರಣೆ ಮಾಡಬೇಕು.

ಹಿಮಾಲಯದ ಆಸುಪಾಸಿನಲ್ಲಿ ಈ ಗಿಡ ಹೆಚ್ಚಾಗಿ ಬೆಳೆಯುತ್ತದೆ. ಇದು ಪೊದೆಯಂತೆ ಎತ್ತರಕ್ಕೆ ಹೋದಂತೆ ಕಾಂಡ ಕೂಡ ದಪ್ಪದಾಗುತ್ತಾ ಹೋಗುತ್ತದೆ. ಬೆಳ್ಳನೆಯ ಹೂವಿನ ದಳಗಳು ದಪ್ಪವಾಗಿರುತ್ತವೆ. ಅದೇರೀತಿ ಗಿಡದ ಎಲೆಗಳು ದಪ್ಪದಾಗಿದ್ದು, ಹಸಿರಾಗಿ ಎರಡರಿಂದ ಮೂರು ಅಡಿ ಉದ್ದಕ್ಕೆ ಬೆಳೆಯುತ್ತವೆ. ಇದರ ಎಲೆ, ಹೂವು, ಕಾಂಡ ಬೇರು ಎಲ್ಲವೂ ಆಯುರ್ವೇದದ ಔಷಧಗಳಲ್ಲಿ ಬಳಕೆಯಾಗುತ್ತವೆ. ಬೇರನ್ನು ತೇಯುವ ಮೂಲಕ ಗಾಯಗಳಿಗೆ ಲೇಪನ ಮಾಡಿದರೆ, ಬೇಗ ಗುಣವಾಗುತ್ತದೆಯಂತೆ. ಪುಷ್ಪದ ದಳದಿಂದ ಸಿದ್ಧಪಡಿಸಿದ ತೈಲವನ್ನು ಮಾನಸಿಕ ಕಾಯಿಲೆಗಳಿಗೆ ಔಷಧಿಯಾಗಿ ಬಳಸುತ್ತಾರೆ. 

ವಿಸ್ಮಯಕಾರಿ ಬ್ರಹ್ಮ ಕಮಲವನ್ನು ಹೆಂಗೆಳೆಯರು ಮುಡಿಯುವುದಿರಲಿ, ಬ್ರಹ್ಮ ಕಮಲ ಎಂದು ಉಚ್ಚರಿಸಿದರೆ ಸಾಕು ಅದು ಮುನಿಸಿಕೊಳ್ಳುತ್ತದಂತೆ! ಹಾಗಂತ ನೀವು ಈ ಹೂವು ಅರಳುವ ಅವಕಾಶ ಸಿಕ್ಕರೆ ನೋಡಲು ಮಾತ್ರ ನೋಡದೆ ಬಿಡಬೇಡಿ. 

– ಹನುಮಂತ

ಟಾಪ್ ನ್ಯೂಸ್

Rajanna-CM-DCM

Congress Talk Fight: ಡಿಸಿಎಂ ಡಿ.ಕೆ.ಶಿವಕುಮಾರ್‌ಗೇ ಸಚಿವ ಕೆ.ಎನ್‌.ರಾಜಣ್ಣ ಸಡ್ಡು!

Madhu-Bangarappa1

ನಾವು ಕಾನ್ವೆಂಟ್‌ನಲ್ಲಿ ಓದಿದವರು ಕನ್ನಡದ ಬಗ್ಗೆ ತಿಳಿವಳಿಕೆ ಇಲ್ಲ: ಶಿಕ್ಷಣ ಸಚಿವ ಮಧು

GM-ShruthiS-Suside

Tragedy: ಡೆತ್‌ನೋಟ್‌ ಬರೆದಿಟ್ಟು ಪುತ್ರಿಯ ಕೊಂದು ಗ್ರಾ.ಪಂ.ಅಧ್ಯಕ್ಷೆಯೂ ಆತ್ಮಹ*ತ್ಯೆ!

Chikki

Govt School: ಶಾಲಾ ಮಕ್ಕಳಿಗೆ ಚಿಕ್ಕಿ ವಿತರಣೆ ಸ್ಥಗಿತಗೊಳಿಸಿದ ಶಿಕ್ಷಣ ಇಲಾಖೆ!

Sathish-jarakhoili

Udupi: ಗ್ರಾಮೀಣ ಭಾಗದ ಕಾಲುಸಂಕ 3 ವರ್ಷಗಳಲ್ಲಿ ಪೂರ್ಣ: ಸಚಿವ ಸತೀಶ್‌ ಜಾರಕಿಹೊಳಿ

Chalavadi1

ಗ್ಯಾರಂಟಿ ಯೋಜನೆಗೆ ಮೀಸಲಿಟ್ಟ 52,000 ಕೋಟಿ ರೂ.ಎಲ್ಲಿ ಹೋಗುತ್ತೆ?: ಛಲವಾದಿ ನಾರಾಯಣಸ್ವಾಮಿ

CM-Sid-Meet

Congress Govt: ಗೃಹಲಕ್ಷ್ಮಿ ಹಣ ಬಂದೇ ಬರುತ್ತೆ, ಯಾವ ಗ್ಯಾರಂಟಿಯೂ ನಿಲ್ಲಿಸಲ್ಲ: ಸಿಎಂ ಅಭಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Rajanna-CM-DCM

Congress Talk Fight: ಡಿಸಿಎಂ ಡಿ.ಕೆ.ಶಿವಕುಮಾರ್‌ಗೇ ಸಚಿವ ಕೆ.ಎನ್‌.ರಾಜಣ್ಣ ಸಡ್ಡು!

Madhu-Bangarappa1

ನಾವು ಕಾನ್ವೆಂಟ್‌ನಲ್ಲಿ ಓದಿದವರು ಕನ್ನಡದ ಬಗ್ಗೆ ತಿಳಿವಳಿಕೆ ಇಲ್ಲ: ಶಿಕ್ಷಣ ಸಚಿವ ಮಧು

GM-ShruthiS-Suside

Tragedy: ಡೆತ್‌ನೋಟ್‌ ಬರೆದಿಟ್ಟು ಪುತ್ರಿಯ ಕೊಂದು ಗ್ರಾ.ಪಂ.ಅಧ್ಯಕ್ಷೆಯೂ ಆತ್ಮಹ*ತ್ಯೆ!

Chikki

Govt School: ಶಾಲಾ ಮಕ್ಕಳಿಗೆ ಚಿಕ್ಕಿ ವಿತರಣೆ ಸ್ಥಗಿತಗೊಳಿಸಿದ ಶಿಕ್ಷಣ ಇಲಾಖೆ!

Sathish-jarakhoili

Udupi: ಗ್ರಾಮೀಣ ಭಾಗದ ಕಾಲುಸಂಕ 3 ವರ್ಷಗಳಲ್ಲಿ ಪೂರ್ಣ: ಸಚಿವ ಸತೀಶ್‌ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.