ಬ್ರಿಟಿಷರು ಕದಲಿಸಲೆತ್ನಿಸಿದ ಬಂಡೆ!


Team Udayavani, Jun 14, 2018, 6:00 AM IST

m-9.jpg

ಮಾನವನ ವಾಸವಿರುವ ಈ ಭೂಮಿಯು ಅತ್ಯಾಕರ್ಷಕ ಪ್ರಕೃತಿಯನ್ನು ಹೊಂದಿದೆ. ಅದರಂತೆ ಪ್ರಕೃತಿಯು ಅದೆಷ್ಟೊ ಅಗಾಧವಾದ ವಿಸ್ಮಯಗಳನ್ನು ತನ್ನ ಒಡಲಿನಲ್ಲಿ ಇಟ್ಟುಕೊಂಡಿದೆ. ಜಗತ್ತಿನೆಲ್ಲೆಡೆ ಕಂಡುಬರುವಂತೆ ಭಾರತದಲ್ಲೂ ಸಹ ಕೆಲವು ನಯನ ಮನೋಹರವಾದ ಪ್ರಾಕೃತಿಕ ವಿಸ್ಮಯ ತಾಣಗಳಿವೆ. ಅಂಥ ಕೆಲ ನಿಸರ್ಗ ನಿರ್ಮಿತ ಆಕರ್ಷಣೆಗಳಲ್ಲಿ ತಮಿಳುನಾಡಿನ ಕಾಂಚಿಪುರಂ ಜಿಲ್ಲೆಯಲ್ಲಿರುವ ಮಹಾಬಲಿಪುರಂ ಅಥವಾ ಮಾಮಲ್ಲಪುರಂನ ಕೃಷ್ಣನ ಬೆಣ್ಣೆಯ ಚೆಂಡು ಎಂಬ ಬೃಹತ್‌ ಬಂಡೆಯೂ ಒಂದು. ರಾಜಧಾನಿ ಚೆನ್ನೆಗೆ ಹತ್ತಿರವಿರುವ ಸಮುದ್ರ ತಟದ ಮಾಮಲ್ಲಪುರಂ ಅಥವಾ ಮಹಾಬಲಿಪುರಂ ತನ್ನಲ್ಲಿರುವ ಕಡಲ ತೀರ ತಟದ ದೇವಾಲಯಕ್ಕಾಗಿ ಸಾಕಷ್ಟು ಪ್ರಸಿದ್ಧಿ ಪಡೆದಿರುವ ತಾಣ. ಆದರೆ ಇಲ್ಲಿ ಒಂದು ವಿಶೇಷವಿದೆ. ಅದುವೇ ಸಮತೋಲನದ ಬಂಡೆ. ಇದಕ್ಕೆ “ಕೃಷ್ಣನ ಬೆಣ್ಣೆಯ ಚೆಂಡು’ ಎಂದು ಕರೆಯುತ್ತಾರೆ. ಈ ಬಂಡೆಯು ಸುಮಾರು 1200 ವರ್ಷಗಳ ಇತಿಹಾಸವನ್ನು ಹೊಂದಿದ್ದು ಇಳಿಜಾರಿನ ಕಲ್ಲು ಹಾಸಿಗೆಯ ಮೇಲೆ ಉರುಳದೆ ಚಿಕ್ಕದಾದ ಸ್ಥಳದಲ್ಲಿ ಹಾಗೆ ತನ್ನ ಸಮತೋಲನವನ್ನು ಕಾಯ್ದುಕೊಂಡು ನಿಂತಿರುವುದನ್ನು ನೋಡಿದಾಗ ಅಚ್ಚರಿಯಾಗದೆ ಇರಲಾರದು. ಸುಮಾರು 20 ಅಡಿ ಎತ್ತರ, 5 ಮೀಟರ್‌ ಅಗಲವಿರುವ ಈ ಬಂಡೆಯು 250 ಟನ್‌ ತೂಕವಿದೆಯೆಂದು ಅಂದಾಜಿಸಲಾಗಿದೆ. ಈ ಬಂಡೆ ಕೇವಲ 4 ಅಡಿಗಿಂತ ಕಡಿಮೆ ಜಾಗದಲ್ಲಿ ಇಳಿಜಾರಿನ ಪ್ರದೇಶದಲ್ಲಿ ಭದ್ರವಾಗಿ ನಿಂತಿರುವುದು ಎಲ್ಲರ ಅಚ್ಚರಿಗೆ ಕಾರಣ. 1908ರಲ್ಲಿ ಬ್ರಿಟಿಷ್‌ ಅಧಿಕಾರಿಯೊಬ್ಬರು ಈ ಬಂಡೆಯನ್ನು ಅಲ್ಲಿಂದ ತೆಗೆದುಹಾಕಲು ನಿರ್ಧರಿಸಿ ಸುಮಾರು 7 ಆನೆಗಳನ್ನು ಬಳಸಿ ಈ ಬೃಹತ್‌ ಬಂಡೆಯನ್ನು ಉರುಳಿಸಲು ಪ್ರಯತ್ನ ಪಟ್ಟಿದ್ದರು. ಆದರೆ ಬಂಡೆ ಒಂದು ಇಂಚೂ ಕದಲಲಿಲ್ಲವಂತೆ. ಹಾಗಾಗಿ ತಮ್ಮ ಪ್ರಯತ್ನವನ್ನು ಅಲ್ಲಿಗೇ ನಿಲ್ಲಿಸುತ್ತಾರೆ. ಇತಿಹಾಸದಲ್ಲಿ ಎಷ್ಟೋ ಜನರು ಈ ಬಂಡೆಯನ್ನು ಕದಲಿಸಲು ತಮ್ಮ ಶಕ್ತಿ ಮೀರಿ ಪ್ರಯತ್ನಿಸಿದ್ದಾರೆ, ಆದರೆ ಆಗಿಲ್ಲ. ಈ ಬಂಡೆಯು ಪ್ರವಾಸಿಗರ ಮೆಚ್ಚಿನ ತಾಣಗಳಲ್ಲಿ ಒಂದಾಗಿದೆ.

ಪುರುಷೋತ್ತಮ್‌

ಟಾಪ್ ನ್ಯೂಸ್

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

19

Hockey: ಚೀನ ವಿರುದ್ಧ ಜಯಭೇರಿ; ಸೆಮಿಫೈನಲ್‌ಗೆ ಭಾರತ

18

Men’s Senior Hockey Nationals: ಒಡಿಶಾ ಚಾಂಪಿಯನ್‌

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.