ನಾಗದೋಷ ನಿವಾರಣೆಗೆ ನಾಗರನವಿಲೆಗೆ ಬನ್ನಿ

ಪ್ರದಕ್ಷಿಣೆ

Team Udayavani, Apr 27, 2019, 6:05 AM IST

Bahu-Nagara-726

ನವಿಲು ಹಾಗೂ ಹಾವುಗಳು ಒಂದೇ ಕಡೆ ಇರುವದಿಲ್ಲ. ಆದರೆ, ಈ ಕ್ಷೇತ್ರದಲ್ಲಿ ಹಿಂದೊಮ್ಮೆ ಹಾವು ಮತ್ತು ನವಿಲು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿದ್ದವಂತೆ. ಅದೇ ಕಾರಣಕ್ಕೆ ಈ ಸ್ಥಳಕ್ಕೆ ನಾಗರ ನವಿಲೆ ಎಂಬ ಹೆಸರು ಬಂದಿದೆ ಎಂಬ ಮಾತುಗಳಿವೆ…

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಬಾಗೂರು ಬಳಿ ಶ್ರೀಕ್ಷೇತ್ರ ನಾಗರನವಿಲೆ ಇದೆ. ಸರ್ಪ ಸಂಬಂಧಕ್ಕೆ ಕುರಿತಂತೆ ಏನೇ ಸಮಸ್ಯೆಗಳಿದ್ದರೂ ನಾಗರನವಿಲೆಗೆ ಕಾಲಿಟ್ಟರೆ ಎಲ್ಲವೂ ನಿವಾರಣೆಯಾಗುತ್ತದೆ ಎನ್ನುವುದು ಭಕ್ತರ ನಂಬಿಕೆ. ಹೀಗಾಗಿ, ಪ್ರತಿನಿತ್ಯವೂ ಇಲ್ಲಿಗೆ ಸಾವಿರಾರು ಭಕ್ತರು ಆಗಮಿಸುತ್ತಾರೆ.

ಸೋಮವಾರ, ದೇವಸ್ಥಾನದಲ್ಲಿ ಕಾಲಿಡಲೂ ಸ್ಥಳವಿರುವುದಿಲ್ಲ. ಅಷ್ಟು ಮಂದಿ ಭಕ್ತರು, ತುಮಕೂರು, ಚಿತ್ರದುರ್ಗ, ಮಂಡ್ಯ, ಬೆಂಗಳೂರು ಹಾಗೂ ಹಾಸನ ಜಿಲ್ಲೆಯಿಂದ ಆಗಮಿಸಿ ಸರ್ಪದೋಷ, ಕಂಕಣ ಭಾಗ್ಯ, ಪುತ್ರ ಸಂತಾನ ಭಾಗ್ಯಕ್ಕಾಗಿ ವಿಶೇಷ ಪೂಜೆ ಸಲ್ಲಿಸುತ್ತಾರೆ. ಇಲ್ಲಿ ಪೂಜೆ ಸಲ್ಲಿಸಿ ಹರಕೆ ಹೊತ್ತರೆ ಅಂದುಕೊಂಡಿದ್ದು ಆಗುತ್ತದೆ ಎಂಬುದು ಭಕ್ತರ ನಂಬಿಕೆ.

ಪುರಾಣಗಳ ಪ್ರಕಾರ ಈ ಸ್ಥಳವನ್ನು ಮೊದಲು, ಉರಗ ಮಯೂರಪುರ ಎಂಬ ಹೆಸರಿನಿಂದ ಕರೆಯಲಾಗುತ್ತಿತ್ತಂತೆ. ಕಾಲಾಂತರದಲ್ಲಿ ಈ ಪ್ರದೇಶದಲ್ಲಿ ನಾಗರ ಹಾವು ಮತ್ತು ನವಿಲು ಹೆಚ್ಚು ವಾಸ ಮಾಡುತ್ತಿದ್ದರಿಂದ ನಾಗರನವಿಲೆ ಎಂಬ ಹೆಸರು ಬಂತು. ನವಿಲು ಹೆಚ್ಚು ವಾಸವಾಗಿರುವ ಕಡೆ ಹಾವುಗಳು ಇರುವುದಿಲ್ಲ. ಆದರೆ ನವಿಲು ಮತ್ತು ಹಾವು ಒಟ್ಟಿಗೆ ವಾಸ ಮಾಡುತ್ತಿದ್ದುದರಿಂದ ಇದೊಂದು ಪುಣ್ಯ ಕ್ಷೇತ್ರವಾಗಿ ಬದಲಾಗಿದೆ ಎನ್ನುತ್ತದೆ ಇತಿಹಾಸ.

ಕ್ಷೇತ್ರದ ಇತಿಹಾಸ
ಈ ಊರಿಗೂ ರಾಮಾಯಣಕ್ಕೂ ನಂಟಿದೆ ಎಂಬ ನಂಬಿಕೆ ಇದೆ. ತ್ರೇತಾಯುಗದಲ್ಲಿ ಶ್ರೀರಾಮ ಇಲ್ಲಿಗೆ ಬಂದು ಹೋಗಿರುವುದಕ್ಕೆ ಕುರುಹುಗಳು ಇವೆ. ದ್ವಾಪರಯುಗದಲ್ಲಿ ಪಾಂಡವರು ಅಜ್ಞಾತವಾಸ ಮಾಡಿದ ಪುಣ್ಯ ಕ್ಷೇತ್ರವೂ ಇದೆಂದು ಹೇಳಲಾಗುತ್ತಿದೆ. ವಿಷ್ಣು ಭಕ್ತನಾದ ಚಂದ್ರಹಾಸನು ಈ ಕ್ಷೇತ್ರದಲ್ಲಿ ನೆಲೆಸಿದ್ದರಂತೆ ಎಂಬ ವಿಚಾರ ಸ್ಥಳ ಪುರಾಣದಲ್ಲಿದೆ.

ಜಮದಗ್ನಿ ಋಷಿ ಈ ಕ್ಷೇತ್ರಕ್ಕೆ ಎರಡು ಕಿ.ಮೀ ದೂರದ ರೇಚಿನಹಳ್ಳಿಯಲ್ಲಿ ತನ್ನ ಮಡದಿ ರೇಣುಕೆ ಮತ್ತು ಪುತ್ರ ಪರಶುರಾಮನೊಂದಿಗೆ ಆಶ್ರಮವಾಸಿಯಾಗಿ ನೆಲೆಸಿದ್ದರಂತೆ. ಅವರು ಉರಗ ಮಯೂರಪುರದಲ್ಲಿನ ದೇವಾಲಯಕ್ಕೆ ಆಗಮಿಸಲು ಸುರಂಗ ಮಾರ್ಗವನ್ನು ಮಾಡಿಕೊಂಡಿದ್ದರಂತೆ. ಈಗಲೂ ದೇವಾಲಯದ ಗರ್ಭಗುಡಿಯೊಳಗೆ ಸುರಂಗ ಮಾರ್ಗವಿದೆ.

ಈ ಊರಿನ ಇನ್ನೊಂದು ವಿಶೇಷವೆಂದರೆ, ಇಲ್ಲಿ ಈಶ್ವರ ಹಾಗೂ ವಿಷ್ಣು ದೇವರು ಒಂದೇ ದೇವಾಲಯದಲ್ಲಿವೆ. ಈ ದೇವತೆಗಳು ಪ್ರತ್ಯೇಕ ಗರ್ಭಗುಡಿಯಲ್ಲಿ ನೆಲೆಸಿರುವುದು ಇಲ್ಲಿನ ವಿಶೇಷ‌. ಇಲ್ಲಿ ಪ್ರತಿ ಅಮಾವಾಸ್ಯೆ ಮತ್ತು ಹುಣ್ಣಿಮೆಯ ದಿವಸ ವಿಶೇಷ ಪೂಜೆ ನಡೆಯುತ್ತದೆ.
ಶ್ರೀಕ್ಷೇತ್ರದಲ್ಲಿ ನಾಗೇಶ್ವರ ಮೂರ್ತಿಯನ್ನು ಪ್ರತಿಷ್ಠಾಪಿಸಿಲ್ಲ. ಬದಲಾಗಿ ಅದು ಉದ್ಬವ ಮೂರ್ತಿಯಾಗಿದೆ. ಆನಂತರ ಈ ಕ್ಷೇತ್ರವನ್ನು ಪಂಚಲಿಂಗೇಶ್ವರ ಕ್ಷೇತ್ರವನ್ನಾಗಿ ಮಾಡಲಾಗಿದೆ. ಹೀಗಾಗಿ, ಸೋಮೇಶ್ವರ, ಚಂಡಿಕೇಶ್ವರ, ಬ್ರಹ್ಮಲಿಂಗೇಶ್ವರ, ಸಿದ್ದಲಿಂಗೇಶ್ವರ ಹಾಗೂ ನಾಗೇಶ್ವರ ಸ್ವಾಮಿ ದೇವಾಲಯಗಳಿವೆ. ಸ್ವಲ್ಪ ದೂರದಲ್ಲಿ ಪಾರ್ವತಮ್ಮನವರ ದೇವಾಲಯವೂ ಇದೆ.


ನಾಗದೋಷ ನಿವಾರಣೆಯ ಪ್ರಸಿದ್ದ ಕ್ಷೇತ್ರವಾಗಿರುವ ಇಲ್ಲಿ ಮಜ್ಜನಬಾವಿ ಇದೆ. ಚರ್ಮರೋಗ ಇರುವವರು ಹರಕೆ ಹೊತ್ತು ಜನ್ಮನಕ್ಷತ್ರದ ಪ್ರಕಾರ ಪ್ರತಿವಾರ ಶ್ರೀಕ್ಷೇತ್ರಕ್ಕೆ ಆಗಮಿಸಿ ಮಜ್ಜನಬಾವಿಯಿಂದ ಮೂರು ಕೊಡ ನೀರನ್ನು ಮೈಮೇಲೆ ಹಾಕಿಸಿಕೊಂಡು ಉರುಳು ಸೇವೆ ಮಾಡುತ್ತಾರೆ.

ಇಲ್ಲವೆ ಹೆಜ್ಜೆ ಸೇವೆ ಮಾಡಿ ಹಣ್ಣು ಕಾಯಿ ಅರ್ಪಿಸಿ, ದೇವಾಲಯದಲ್ಲಿ ನೀಡುವ ಹುತ್ತದ ಮಣ್ಣು ಮತ್ತು ಗಂಧವನ್ನು ಲೇಪಿಸಿಕೊಂಡರೆ ಚರ್ಮರೋಗ ನಿವಾರಣೆಯಾಗುತ್ತದೆ ಎನ್ನುವ ನಂಬಿಕೆ ಭಕ್ತರಲ್ಲಿ ಇದೆ. ಕಳೆದ ಮೂರು ವರ್ಷದಿಂದ ಶ್ರೀಕ್ಷೇತ್ರಕ್ಕೆ ಆಗಮಿಸುವ ಭಕ್ತರಿಗೆ ನಿತ್ಯವೂ ಪ್ರಸಾದ ವಿತರಿಸಲಾಗುತ್ತಿದೆ.

ನಾಗರನವಿಲೆ ಕ್ಷೇತ್ರಕ್ಕೆ ದಾರಿ
ಚನ್ನರಾಯಪಟ್ಟಣದಿಂದ ನುಗ್ಗೇಹಳ್ಳಿ ಮಾರ್ಗವಾಗಿ ಸಾಗಿದರೆ 27 ಕಿ. ಮೀ. ಚನ್ನರಾಯಪಟ್ಟಣದಿಂದ ಬಾಗೂರು ಮಾರ್ಗವಾಗಿ 18 ಕಿ.ಮೀ, ಹಿರೀಸಾವೆ ಯಿಂದ 15 ಕಿ.ಮೀ, ತಿಪಟೂರಿನಿಂದ ಕಾರೆಹಳ್ಳಿ ಮಾರ್ಗವಾಗಿ 25 ಕಿ.ಮೀ. ಹಾಸನದಿಂದ ಕುಂದೂರು ಮಠದ ಮಾರ್ಗವಾಗಿ 62 ಕಿ.ಮೀ ತಿಪಟೂರು ತಾಲೂಕಿನ ದರಸಿಘಟ್ಟ ಚೌಡೇಶ್ವರಿ ಕ್ಷೇತ್ರದಿಂದ 21 ಕಿ.ಮೀ ಅರಸೀಕರೆ ಗಂಡಸಿ ಮಾರ್ಗ 42 ಕಿ.ಮೀ.

— ಶಾಮಸುಂದರ್‌ ಕೆ. ಅಣ್ಣೇನಹಳ್ಳಿ

ಟಾಪ್ ನ್ಯೂಸ್

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

FIR–Court

FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.