ಭಕ್ತರ ಸಲಹುವ ವಡಗೆರೆ ಬಿದ್ದಾಂಜನೇಯ


Team Udayavani, Jan 19, 2019, 12:30 AM IST

97.jpg

ಹಿಂದಿನ ಸಂಚಿಕೆಯಲ್ಲಿ ತುಮಕೂರಿನ ಬಳಿಯಿರುವ ಬಿದ್ದಾಂಜನೇಯನ ಕುರಿತು ಓದಿದಿರಿ. ಅದೇ ಹೆಸರಿನ ಹನುಮನ ದೇವಾಲಯವೊಂದು ಚಾಮರಾಜನಗರ ಜಿಲ್ಲೆಯ ಬಿಳಿಗಿರಿ ರಂಗನ ಬೆಟ್ಟದ ಬಳಿಯೂ ಇದೆ. ಈ ದೇಗುಲಕ್ಕೆ ಸಂಬಂಧಿಸಿದ ಸ್ಥಳ ಪುರಾಣ ಮತ್ತು ಇತಿಹಾಸ ಸ್ವಾರಸ್ಯದಿಂದಲೂ, ಮಾಹಿತಿಗಳಿಂದಲೂ ಕೂಡಿದೆ…

 ಚಾಮರಾಜನಗರ ಜಿಲ್ಲೆಯ ಪ್ರಸಿದ್ಧ ಗಿರಿಧಾಮ ಬಿಳಿಗಿರಿರಂಗನಬೆಟ್ಟ. ಈ ಬೆಟ್ಟದ ತಪ್ಪಲಿನಲ್ಲಿರುವ ವಡಗೆರೆ ಗ್ರಾಮದ ಗುಡ್ಡದ ಬಳಿಯೂ ಬಿದ್ದಾಂಜನೇಯ ಸ್ವಾಮಿ ಹೆಸರಿನ ದೇಗುಲವಿದೆ. ಇದು ಅನಾದಿ ಕಾಲದಿಂದಲೂ ಹನುಮ ಭಕ್ತರ ಪಾಲಿನ ಮೆಚ್ಚಿನ ದೇಗುಲವಾಗಿ ಖ್ಯಾತಿ ಗಳಿಸಿದೆ.

ಮುತ್ತುಗದ ಮರದ ಕೆಳಗೆ ಇದ್ದ ಉದ್ಭವಮೂರ್ತಿಗೆ ಕ್ರಿ.ಶ.1842 ರಲ್ಲಿ ಮೈಸೂರು ಅರಸರು ದೇಗುಲ ನಿರ್ಮಿಸಿಕೊಟ್ಟರು ಎನ್ನುವ ಐತಿಹ್ಯವಿದೆ. ಇಲ್ಲಿನ ಮೂರ್ತಿ ಕೆತ್ತನೆ ಮಾಡಿದ್ದಲ್ಲ. ಇದು ತನ್ನ ಉಬ್ಬುತಗ್ಗುಗಳಿಂದಲೇ ಆಂಜನೇಯನ ಮುಖ ಹಾಗೂ ದೇಹವನ್ನು ಹೋಲುತ್ತದೆ. ಮಲಗಿರುವ ಕಾಯಹೊಂದಿರುವ ಈ ಮೂರ್ತಿಗೆ  ರಾಜ್ಯ ಹಾಗೂ ಹೊರ ರಾಜ್ಯಗಳಿಂದಲೂ ಭಕ್ತರು ಆಗಮಿಸಿ ಪೂಜೆ ಸಲ್ಲಿಸುವ ವಾಡಿಕೆ ಇದೆ.

ಪುರಾಣ ಐತಿಹ್ಯ
 ದೇಗುಲದ ಅನತಿ ದೂರದಲ್ಲೇ ಒಂದು ಗುಡ್ಡವಿದೆ. ಅದರಲ್ಲಿರುವ ಗುಹೆಯಲ್ಲಿ ಕಿವಿಮೂಲ ಎಂಬ ರಾಕ್ಷಸನಿದ್ದನಂತೆ. ಅಲ್ಲಿದ್ದ ಮತ್ತೂಂದು ಗುಹೆಯಲ್ಲಿ ವಸಿಷ್ಠ ಮುನಿಗಳು  ತಪಸ್ಸು ಮಾಡುತ್ತಿದ್ದರಂತೆ.  ಈ ರಾಕ್ಷಸನಿಂದ ಸದಾ ಕಿರುಕುಳ ಅನುಭಸುತ್ತಿದ್ದ ವಸಿಷ್ಠರು ಇದರಿಂದ ತಪ್ಪಿಸಿಕೊಳ್ಳಲು ಹೆಣಗಾಡುತ್ತಿದ್ದರು. ಈ ಸಂದರ್ಭದಲ್ಲಿ ತಿರುಪತಿಯಿಂದ ಗಿಡಮೂಲಿಕೆಗಳನ್ನು ಹುಡುಕಿಕೊಂಡು ವೆಂಕಟೇಶ್ವರ ಸ್ವಾಮಿ, ತನ್ನ ವಾಹನವಾದ ಗರುಡ ಪಕ್ಷಿಯನ್ನು ಬಿಟ್ಟು ಹನುಮಂತನ ಹೆಗಲೇರಿ ಬರುತ್ತಿದ್ದನಂತೆ.

 ಈ ವೇಳೆ ವಸಿಷ್ಠರು ಇವರನ್ನು ತಡೆದು, ತಮಗೆ ಕಿವಿಮೂಲ ರಾಕ್ಷಸನಿಂದ ಆಗುತ್ತಿರುವ ಕಿರುಕುಳದ ಬಗ್ಗೆ ಮನವರಿಕೆ ಮಾಡಿಕೊಟ್ಟರಂತೆ. ಆಗ ತನಗೆ ಮತ್ತೂಂದು ತುರ್ತಿನ ಕೆಲಸ ಇರುವುದಾಗಿ ಋಷಿಗಳಿಗೆ ಹೇಳಿ ವಿಷ್ಣು, ಆಂಜನೇಯನನ್ನು ರಾಕ್ಷಸ ಸಂಹಾರಕ್ಕೆ ಬಿಟ್ಟು ತಾನು ಬರುವವರೆಗೂ ಇಲ್ಲೇ ಇರುವಂತೆ ಆದೇಶ ನೀಡಿದನಂತೆ.  ನಂತರ ಆಂಜನೇಯನು ವಿಷ್ಣುದೇವರ ಆದೇಶವನ್ನು ಶಿರಸಾವಹಿಸಿ ಪಾಲಿಸಲು ಮೂರೇ ಹೆಜ್ಜೆಗೇ ಬಿಳಿಗಿರಿ ರಂಗನಬೆಟ್ಟಕ್ಕೆ ತೆರಳಿದರಂತೆ. 
ಇಲ್ಲೇ ಇದ್ದ ರಾಕ್ಷಸನನ್ನು ಸಂಹಾರ ಮಾಡಿದ ಹನುಮಂತ ವಸಿಷ್ಠರ ಮೆಚ್ಚುಗೆಗೆ ಪಾತ್ರನಾದರಂತೆ. 
ಆದರೆ, ವೆಂಕಟೇಶ್ವರ ಸ್ವಾಮಿ ಎಷ್ಟು ಹೊತ್ತು ಕಾದರು ಬರಲಿಲ್ಲ.  ಅವರಿಗಾಗಿ ಕಾದು ಕಾದು ಸಾಕಾಗಿ ಗುಡ್ಡದ ಕೆಳಗಿರುವ ಸ್ಥಳಕ್ಕೆ ಬಂದು ಹನುಮ ಮಲಗುತ್ತಾನೆ.  ಆ ಸ್ಥಳವೇ ಆಂಜನೇಯ ಬಿದ್ದ ಸ್ಥಳವಾಯಿತು ಎನ್ನುತ್ತದೆ ಪುರಾಣ. 

ಸೋಲಿಗರ ಕತೆಯೇ ಬೇರೆ
 ಬಿಳಿಗಿರಿರಂಗನಬೆಟ್ಟದ ಮೂಲನಿವಾಸಿಗಳಾದ ಸೋಲಿಗರ ಪ್ರಕಾರ ಬಿದ್ದಾಂಜನೇಯನನ್ನು ಕುರಿತು, ಇನ್ನೊಂದು ರೀತಿಯ ಕತೆ ಇದೆ.  ಬಿಳಿಗಿರಿರಂಗನಾಥಸ್ವಾಮಿ ಆಹಾರಕ್ಕೆ ಬಂದಾಗ ಆತನೊಂದಿಗೆ ಬರುವ ಹನುಮಂತನು ತನ್ನ ಚೇಷ್ಟೆಗಳಿಂದ ಸ್ವಾಮಿಯ ಕೋಪಕ್ಕೆ ತುತ್ತಾದನಂತೆ. ಈ ಸಂದರ್ಭದಲ್ಲಿ ಸಿಟ್ಟಾದ ರಂಗನಾಥಸ್ವಾಮಿ ಹನುಮಂತನ ಕೆನ್ನೆಗೆ ಜೋರಾಗಿ ಹೊಡೆದದ್ದರಿಂದ ಆತ ಈ ಸ್ಥಳದಲ್ಲಿ ಬಿದ್ದನು ಎನ್ನುತ್ತಾರೆ ಸೋಲಿಗರು. ಇವೆರಡು ಕತೆಗಳಿಗೆ ಪೂರಕವೆಂಬಂತೆ ಬಿಳಿಗಿರಿರಂಗನಾಥಸ್ವಾಮಿಯ ದೊಡ್ಡ ರಥೋತ್ಸವ ಆದ ಮೂರನೇ ದಿನ ಇಲ್ಲೂ ಕೂಡ ತೇರು ನಡೆಯುವ ವಾಡಿಕೆ ಇದೆ. ಪ್ರತಿ ಶನಿವಾರದಂದು ಈ ದೇಗುಲದಲ್ಲಿ ವಿಶೇಷ ಪೂಜೆ ನಡೆಯುತ್ತದೆ. 

ದೇಗುಲದ ಅಭಿವೃದ್ಧಿ ಕಂಡಿಲ್ಲ
 ಈ ದೇವಸ್ಥಾನಕ್ಕೆ ಸಾವಿರಾರು ಭಕ್ತರಿದ್ದರೂ ಇದು ಅಭಿವೃದ್ಧಿ ಕಂಡಿಲ್ಲ. ಇದು ಶಕ್ತಿ ದೇಗುಲವಾಗಿದೆ. ಇಲ್ಲಿನ ಮೂರ್ತಿಯ ದರ್ಶನ ಮಾಡಿದರೆ, ಕಷ್ಟಗಳು ದೂರವಾಗುತ್ತವೆ.  ರೋಗಗಳು ವಾಸಿಯಾಗುತ್ತವೆ ಎಂಬುದು ಭಕ್ತರ ನಂಬಿಕೆ.

ಒಂದೂ ಮುಕ್ಕಾಲು ಶತಮಾನ ಕಂಡಿರುವ ಹಳೆ ಕಟ್ಟಡದಲ್ಲೇ ದೇವಸ್ಥಾನವಿದೆ. ಸಣ್ಣ ದೇಗುಲದಲ್ಲೇ ಇನ್ನೂ ಪೂಜೆ ನಡೆದುಕೊಂಡು ಬರುತ್ತಿದೆ. ಎಡಭಾಗದಲ್ಲಿ ಸಮುದಾಯ ಭವನ ನಿರ್ಮಾಣಗೊಂಡಿದ್ದರೂ ಇದರ ನಿರ್ವಹಣೆ ಸರಿಯಾಗಿಲ್ಲ. ದೇಗುಲದ ಮುಂದಿರುವ ಬೃಹತ್‌ ಆಲದ ಮರ ದೇವಸ್ಥಾನಕ್ಕೆ ಮೆರುಗು ತಂದು ಕೊಟ್ಟರೆ ಅದರ ಪಕ್ಕದಲ್ಲಿರುವ ರಥದ ಶೆಡ್‌ ಕೂಡ ಶಿಥಿಲವಾಗಿದೆ. 

ಕೊರತೆಗಳು ಏನೇ ಇದ್ದರೂ ಬಿದ್ದ ಆಂಜನೇಯ ಜನರ ಬದುಕನ್ನು ಹಸನು ಮಾಡುತ್ತಿದ್ದಾನೆ ಅನ್ನೋ ನಂಬಿಕೆ ಭಕ್ತರಲ್ಲಿ ಮನೆ ಮಾಡಿದೆ. 

ಫೈರೋಜ್‌ಖಾನ್‌

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.