Sandalwood; ಈ ವಾರ ತೆರೆಗೆ 6 ಸಿನಿಮಾಗಳು
Team Udayavani, Feb 23, 2024, 10:58 AM IST
ಕರಾವಳಿ ಸುತ್ತ ಮತ್ಸ್ಯಗಂಧ
ಕರ್ನಾಟಕದ ಕರಾವಳಿ ತೀರದ ಹಿನ್ನೆಲೆಯಲ್ಲಿ ನಡೆಯುವ, ಸಸ್ಪೆನ್ಸ್ ಕಂ ಕ್ರೈಂ-ಥ್ರಿಲ್ಲರ್ ಕಥಾಹಂದರ ಹೊಂದಿರುವ “ಮತ್ಸ್ಯಗಂಧ’ ಸಿನಿಮಾ ಈ ವಾರ ತೆರೆಗೆ ಬರುತ್ತಿದೆ. “ಸಹ್ಯಾದ್ರಿ ಪ್ರೊಡಕ್ಷನ್ಸ್’ ಬ್ಯಾನರ್‌ನಡಿಯಲ್ಲಿ ಬಿ. ಎಸ್ ವಿಶ್ವನಾಥ್ ನಿರ್ಮಾಣದಲ್ಲಿ ಮೂಡಿಬಂದಿರುವ “ಮತ್ಸ್ಯಗಂಧ’ ಸಿನಿಮಾಕ್ಕೆ ದೇವರಾಜ್ ಪೂಜಾರಿ ನಿರ್ದೇಶನವಿದೆ. ಸಿನಿಮಾಕ್ಕೆ ಪ್ರವೀಣ್ ಛಾಯಾಗ್ರಹಣವಿದ್ದು, ಪ್ರಶಾಂತ್ ಸಿದ್ದಿ ಸಂಗೀತ ಸಂಯೋಜಿಸಿದ್ದಾರೆ. ಪೃಥ್ವಿ ಅಂಬರ್, ಭಜರಂಗಿ ಲೋಕಿ, ನಾಗರಾಜ್ ಬೈಂದೂರ್, ಪ್ರಶಾಂತ್ ಸಿದ್ದಿ, ಶರತ್ ಲೋಹಿತಾಶ್ವ, ಮೈಮ್ ರಾಮದಾಸ್ ಮೊದಲಾದ ಕಲಾವಿದರು “ಮತ್ಸ್ಯಗಂಧ’ ಸಿನಿಮಾದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ “ಮತ್ಸ್ಯಗಂಧ’ ಸಿನಿಮಾದ ಹಾಡುಗಳು ಮತ್ತು ಟ್ರೇಲರ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಸಿನಿಮಾ ಕೂಡ ಥಿಯೇಟರ್‌ನಲ್ಲಿ ಪ್ರೇಕ್ಷಕರಿಗೆ ಇಷ್ಟವಾಗಲಿದೆ ಎಂಬ ನಿರೀಕ್ಷೆ ಯಲ್ಲಿದೆ ಚಿತ್ರತಂಡ. “ಶಾಲಿನಿ ಆರ್ಟ್ಸ್’ ಬ್ಯಾನರಿನಲ್ಲಿ ವಿತರಕ ಜಾಕ್ ಮಂಜು “ಮತ್ಸéಗಂಧ’ ಸಿನಿಮಾದ ವಿತರಣೆಯ ಹಕ್ಕುಗಳನ್ನು ಪಡೆದುಕೊಂಡಿದ್ದು, ರಾಜ್ಯಾದ್ಯಂತ ಸುಮಾರು 50ಕ್ಕೂ ಹೆಚ್ಚಿನ ಕೇಂದ್ರಗಳಲ್ಲಿ ಸಿನಿಮಾ ಬಿಡುಗಡೆಯಾಗುತ್ತಿದೆ.
ರಗಡ್ ಲುಕ್ನಲ್ಲಿ ತನುಶ್ ಎಂಟ್ರಿ
ಯುವನಟ ತನುಷ್ ಶಿವಣ್ಣ ಹಾಗೂ ಸೋನಾಲ್ ಮೊಂತೆರೊ ಜೋಡಿಯಾಗಿ ಅಭಿನಯಿಸಿರುವ ಲವ್ ಕಂ ಆ್ಯಕ್ಷನ್ ಕಥಾಹಂದರದ “ಮಿ. ನಟ್ವರ್‌ಲಾಲ್’ ಸಿನಿಮಾ ಈ ವಾರ ರಾಜ್ಯಾದ್ಯಂತ ಸುಮಾರು 50ಕ್ಕೂ ಹೆಚ್ಚಿನ ಕೇಂದ್ರಗಳಲ್ಲಿ ಬಿಡುಗಡೆಯಾಗುತ್ತಿದೆ.
“ತನುಷ್ ಸಿನಿಮಾಸ್’ ಲಾಂಛನದಲ್ಲಿ ತನುಷ್ ಶಿವಣ್ಣ ನಿರ್ಮಿಸಿರುವ “ಮಿ. ನಟ್ವರ್‌ಲಾಲ್’ ಸಿನಿಮಾಕ್ಕೆ ವಿ. ಲವ ನಿರ್ದೇಶನ ಮಾಡಿದ್ದಾರೆ. ಕಳೆದ ಕೆಲ ದಿನಗಳಿಂದ ಟೀಸರ್, ಟ್ರೇಲರ್ ಹಾಗೂ ಹಾಡುಗಳನ್ನು ಬಿಡುಗಡೆ ಮಾಡಿ ಭರದಿಂದ ಸಿನಿಮಾದ ಪ್ರಚಾರ ಕಾರ್ಯಗಳನ್ನು ನಡೆಸುತ್ತಿರುವ “ಮಿ. ನಟ್ವರ್ ಲಾಲ್’ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. “ಮಿ. ನಟ್ವರ್ ಲಾಲ್’ ಸಿನಿಮಾಕ್ಕೆ ಧರ್ಮವಿಶ್ ಸಂಗೀತ ಸಂಯೋಜಿಸಿದ್ದು, ವಿಲಿಯಂ ಡೇವಿಡ್ ಛಾಯಾಗ್ರಹಣ, ಕೆ. ಎಂ. ಪ್ರಕಾಶ್ ಸಂಕಲನವಿದೆ. ತನುಷ್ ಶಿವಣ್ಣ, ಸೋನಾಲ್ ಮೊಂತೆರೊ ಜೊತೆಗೆ ನಾಗಭೂಷಣ, ಕಾಕ್ರೋಜ್ ಸುಧಿ, ಯಶ್ ಶೆಟ್ಟಿ, ರಾಜೇಶ್ ನಟರಂಗ, ರಘು ರಾಮನಕೊಪ್ಪ, ಹರಿಣಿ ಶ್ರೀಕಾಂತ್, ಸುಂದರರಾಜ್, ಕಾಂತರಾಜು ಮತ್ತಿತರರು “ಮಿ. ನಟ್ವರ್‌ಲಾಲ್’ ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಕಪ್ಪು ಬಿಳುಪಿನ ನಡುವಿನ ಆಟ
ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸಿರುವ ಕನ್ನಡ ಮತ್ತು ತಮಿಳಿನಲ್ಲಿ ಏಕಕಾಲದಲ್ಲಿ ನಿರ್ಮಾಣವಾಗಿರುವ ಹಾರಾರ್ ಶೈಲಿಯ “ಕಪ್ಪು ಬಿಳುಪಿನ ನಡುವೆ’ ಸಿನಿಮಾ ಇಂದು ರಾಜ್ಯಾದ್ಯಂತ ಸುಮಾರು 30ಕ್ಕೂ ಹೆಚ್ಚಿನ ಕೇಂದ್ರಗಳಲ್ಲಿ ಬಿಡುಗಡೆಯಾಗುತ್ತಿದೆ. ಯುವ ಪ್ರತಿಭೆ ವಸಂತ್ ವಿಷ್ಣು ಈ ಸಿನಿಮಾವನ್ನು ನಿರ್ದೇಶಿಸುವುದರ ಜೊತೆಗೆ ತೆರೆಮೇಲೆ ನಾಯಕನಾಗಿಯೂ ಅಭಿನಯಿಸಿದ್ದಾರೆ.
ಯೂ-ಟ್ಯೂಬರ್‌ಗಳ ಲೈಫ್ ಮತ್ತು ಪಾಸಿಟಿವ್-ನೆಗಟಿವ್ ಎನರ್ಜಿ ಸುತ್ತ ನಡೆಯುವ ಕಥಾಹಂದರದ ಈ ಸಿನಿಮಾದಲ್ಲಿ ನಾಯಕ ವಸಂತ್ ವಿಷ್ಣುಗೆ ನಾಯಕಿಯಾಗಿ ವಿದ್ಯಾಶ್ರೀ ಗೌಡ ಜೋಡಿಯಾಗಿ ನಟಿಸಿದ್ದಾರೆ. ಉಳಿದಂತೆ ಬಿರಾದಾರ್, ಶರತ್ ಲೋಹಿತಾಶ್ವ, ಹರೀಶ್, ನವೀನ್ ರಘು, ಮಾಹೀನ್ ಭಾರದ್ವಾಜ್, ತೇಜಸ್ವಿನಿ ಮುಂತಾದವರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಪ್ರೇತ ಸಂಚಾರ
ಹರೀಶ್ ರಾಜ್ ನಟಿಸಿ, ನಿರ್ದೇಶಿಸಿ ಮತ್ತು ನಿರ್ಮಿಸಿರುವ “ಪ್ರೇತ’ ಸಿನಿಮಾ ಈ ವಾರ ರಾಜ್ಯಾದ್ಯಂತ ಸುಮಾರು 30ಕ್ಕೂ ಹೆಚ್ಚಿನ ಕೇಂದ್ರಗಳಲ್ಲಿ ತೆರೆಗೆ ಬರುತ್ತಿದೆ. ಔಟ್ ಆ್ಯಂಡ್ ಔಟ್ ಹಾರರ್-ಥ್ರಿಲ್ಲರ್ ಕಥಾಹಂದರ ಹೊಂದಿರುವ “ಪ್ರೇತ’ ಸಿನಿಮಾದಲ್ಲಿ ಹರೀಶ್ ರಾಜ್ ಅವರೊಂದಿಗೆ ಅಮೂಲ್ಯ ಭಾರದ್ವಾಜ್, ಅಹಿರಾ ಶೆಟ್ಟಿ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಬಿ. ಎಂ. ವೆಂಕಟೇಶ್, ಅಮಿತ್ ಮತ್ತಿತರರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಹರೀಶ್ ರಾಜ್ ಪ್ರೊಡಕ್ಷನ್’ ಬ್ಯಾನರ್ನಲ್ಲಿ ಪ್ರೇತ’ ಸಿನಿಮಾ ನಿರ್ಮಾಣವಾಗಿದೆ.
ಹೊಸಬರ ಧೈರ್ಯಂ ಸರ್ವತ್ರ ಸಾಧನಂ
ಎ. ಆರ್. ಸಾಯಿರಾಮ್ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ನಿರ್ದೇಶನ ಮಾಡಿರುವ ಆ್ಯಕ್ಷನ್-ಥ್ರಿಲ್ಲರ್ ಶೈಲಿಯ “ಧೈರ್ಯಂ ಸರ್ವತ್ರ ಸಾಧನಂ’ ಸಿನಿಮಾ ಈ ವಾರ ರಾಜ್ಯಾದ್ಯಂತ ತೆರೆಗೆ ಬರುತ್ತಿದೆ. “ಎ. ಪಿ. ಪೊ›ಡಕ್ಷನ್ಸ್’ ಬ್ಯಾನರ್‌ನಲ್ಲಿ ಆನಂದ್ ಬಾಬು. ಜಿ ನಿರ್ಮಾಣದಲ್ಲಿ ಮೂಡಿಬಂದಿರುವ “ಧೈರ್ಯಂ ಸರ್ವತ್ರ ಸಾಧನಂ’ ಸಿನಿಮಾದಲ್ಲಿ ವಿವಾನ್ ಕೆ. ಕೆ ನಾಯಕನಾಗಿದ್ದು, ಅನುಷಾ ರೈ ನಾಯಕಿಯಾಗಿ ಅಭಿನಯಿಸಿದ್ದಾರೆ. ಉಳಿದಂತೆ ಯಶ್ ಶೆಟ್ಟಿ, ಬಲರಾಜವಾಡಿ, ಚಕ್ರವರ್ತಿ ಚಂದ್ರಚೂಡ್, ವರ್ಧನ್ ತೀರ್ಥಹಳ್ಳಿ, ಪ್ರದೀಪ್ ಪೂಜಾರಿ ಮತ್ತಿತರರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ “ಧೈರ್ಯಂ ಸರ್ವತ್ರ ಸಾಧನಂ’ ಸಿನಿಮಾದ ಟೈಟಲ್ ಪೋಸ್ಟರ್, ಟೀಸರ್, ಟ್ರೇಲರ್ ಮತ್ತು ಹಾಡುಗಳು ಒಂದಷ್ಟು ಸಿನಿ ಪ್ರಿಯರ ಗಮನ ಸೆಳೆಯಲು ಯಶಸ್ವಿಯಾಗಿದ್ದು, ಸಿನಿಮಾ ಥಿಯೇಟರಿನಲ್ಲೂ ಪ್ರೇಕ್ಷಕರಿಗೆ ಇಷ್ಟವಾಗ ಲಿದೆ ಎಂಬ ವಿಶ್ವಾಸದಲ್ಲಿದೆ ಚಿತ್ರತಂಡ.
ಇಂದಿನಿಂದ ರಿಜಿಸ್ಟ್ರೇಶನ್ ಶುರು
ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ನಾಯಕ – ನಾಯಕಿಯಾಗಿ ನಟಿಸಿರುವ ಫಾರ್ ರಿಜಿಸ್ಟೇಶ ನ್ ಚಿತ್ರ ಇಂದು ಬಿಡುಗಡೆಯಾಗುತ್ತಿದೆ. ಈ ಚಿತ್ರದಲ್ಲಿ ಆರು ಹಾಡುಗಳಿದ್ದು, ಬಹದ್ದೂರ್ ಚೇತನ್ ಕುಮಾರ್, ಕವಿರಾಜ್ ಹಾಗೂ ನಾಗಾರ್ಜುನ ಶರ್ಮ ಬರೆದಿರುವ ಹಾಡುಗಳಿಗೆ ವಿಜಯ್ ಪ್ರಕಾಶ್, ಚಂದನ್ ಶೆಟ್ಟಿ ಹಾಗೂ ವಾಸುಕಿ ವೈಭವ್ ಧ್ವನಿಯಾಗಿದ್ದಾರೆ. ಆರ್. ಕೆ.ಹರೀಶ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.
ಬೆಂಗಳೂರು, ಉಡುಪಿ, ಮಂಗಳೂರು ಹಾಗೂ ಸಕಲೇಶಪುರದಲ್ಲಿ ಚಿತ್ರೀಕರಣ ನಡೆದಿದೆ. ದಿಯಾ ಹಾಗೂ ಲವ್ ಮಾಕ್ಟೇಲ್ ಚಿತ್ರಗಳ ಮೂಲಕ ಸಿನಿರಸಿಕರ ಮನಗೆದ್ದಿರುವ ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ಈ ಚಿತ್ರದಲ್ಲಿ ಜೋಡಿಯಾಗಿ ಕಾಣಿಸಿಕೊಳ್ಳುತ್ತಿರುವುದು ಅಭಿಮಾನಿಗಳಲ್ಲಿ ಸಾಕಷ್ಟು ನಿರೀಕ್ಷೆಯಿದೆ.
ರವಿಶಂಕರ್, ಬಾಬು ಹಿರಣ್ಣಯ್ಯ, ಸ್ವಾತಿ, ಸುಧಾ ಬೆಳವಾಡಿ, ತಬಲನಾಣಿ, ರಮೇಶ್ ಭಟ್, ಸಿಹಿಕಹಿ ಚಂದ್ರು ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ನಿಶ್ಚಲ್ ಫಿಲಂಸ್ ಮೂಲಕ ಎನ್ . ನವೀನ್ ರಾವ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ನವೀನ್ ದ್ವಾರಕನಾಥ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಚಿತ್ರಕ್ಕೆ ಕಥೆ, ಚಿತ್ರಕಥೆಯನ್ನು ನಿರ್ದೇಶಕರೆ ಬರೆದಿದ್ದಾರೆ. ಅಭಿಷೇಕ್ ಕಲ್ಲತ್ತಿ- ಅಭಿಷೇಕ್ ಕಾಸರಗೋಡು ಛಾಯಾಗ್ರಹಣ ಹಾಗೂ ಮನು ಶೆಡ್ಗಾರ್ ಅವರ ಸಂಕಲನವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ
Max movie review: ಮಾಸ್ ಮನಸುಗಳಿಗೆ ʼಮ್ಯಾಕ್ಸ್ʼ ಅಭಿಷೇಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.