ಒಂದು ಕಥೆ, ನಾಲ್ಕು ಉಪಕಥೆ


Team Udayavani, Feb 1, 2019, 12:30 AM IST

x-20.jpg

ಕನ್ನಡ ಚಿತ್ರರಂಗದ ಮೇರು ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರು ಒಂದೇ ಚಿತ್ರದಲ್ಲಿ ಸುಮಾರು ನಾಲ್ಕು ಕಥೆಗಳನ್ನು ಇಟ್ಟುಕೊಂಡು 1974ರಲ್ಲಿ “ಕಥಾ ಸಂಗಮ’ ಎನ್ನುವ ಹೆಸರಿನಲ್ಲಿ ಚಿತ್ರ ನಿರ್ದೇಶಿಸಿ ತೆರೆಗೆ ತಂದಿದ್ದರು. ಆಗಿನ ಕಾಲದಲ್ಲಿ ಹೊಸಥರದ ಪ್ರಯೋಗವಾಗಿದ್ದ “ಕಥಾ ಸಂಗಮ’ ಚಿತ್ರಕ್ಕೆ ವಿಮರ್ಶಕರಿಂದ, ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಈಗ “ಒಂದ್‌ ಕಥೆ ಹೇಳಾ’ ಎಂಬ ಹೆಸರಿನಲ್ಲಿ ಅಂಥದ್ದೆ ಚಿತ್ರವೊಂದು ತೆರೆಗೆ ಬರೋದಕ್ಕೆ ಸಿದ್ಧವಾಗುತ್ತಿದೆ.

ಬಹುತೇಕ ಹೊಸ ಪ್ರತಿಭೆಗಳೆ ಸೇರಿ ನಿರ್ಮಿಸಿರುವ ಹಾರರ್‌ ಶೈಲಿಯ “ಒಂದ್‌ ಕಥೆ ಹೇಳ್ಳಾ’ ಚಿತ್ರದಲ್ಲಿ ಒಟ್ಟು ಐದು ಕಥೆಗಳನ್ನು ಚಿತ್ರದಲ್ಲಿ ತೆರೆದಿಡಲಾಗುತ್ತಿದೆ. “ಒಂದ್‌ ಕಥೆ ಹೇಳಾ’ ಚಿತ್ರದ ಟ್ರೇಲರ್‌ನ್ನು ನಿರ್ದೇಶಕ ಕಂ ನಟ ರಿಷಭ್‌ ಶೆಟ್ಟಿ ಇತ್ತೀಚೆಗೆ ಬಿಡುಗಡೆ ಮಾಡಿದರು.

ಈ ವೇಳೆ ಮಾತನಾಡಿದ ರಿಷಭ್‌ ಶೆಟ್ಟಿ, “ನಮ್ಮ ಪ್ರೇಕ್ಷಕರು ಅನ್ನ ಸಾಂಬರ್‌ ಅಲ್ಲದೆ ಬಿರಿಯಾನಿ ಕೂಡ ಇಷ್ಟಪಡುತ್ತಾರೆ. ಅದಕ್ಕಾಗಿ ಹಲವು ಹೊಸಬಗೆಯ ಚಿತ್ರಗಳನ್ನು ಕೊಡಬೇಕಾಗಿದೆ. ನಾನು ಸಹ ಹಲವು  ಕಿರು ಕಥೆಗಳನ್ನು ಹೆಕ್ಕಿಕೊಂಡು “ಕಥಾ ಸಂಗಮ’ ಚಿತ್ರ ಮಾಡಿದ್ದು, ಸದ್ಯದಲ್ಲೇ ಅದು ಕೂಡ ತೆರೆಗೆ ಬರಲಿದೆ. ಚಿತ್ರಗಳಿಗೆ ಹೊಸಬರು ಬಂಡವಾಳ ಹೂಡುತ್ತಿರುವುದು ಚಿತ್ರರಂಗದ ಮಟ್ಟಿಗೆ ಒಳ್ಳೆಯ ಬೆಳವಣಿಗೆ. ತುಂಬ ಜನರು ಸಕಾರಾತ್ಮಕ ಉದ್ದೇಶ, ಯೋಚನೆ ಇಟ್ಟುಕೊಂಡು ಸಿನಿಮಾರಂಗಕ್ಕೆ ಬರುತ್ತಿದ್ದಾರೆ. ಇವತ್ತು ಸಿನಿಮಾ ಮಾಡೋದಕ್ಕಿಂತ ಅದನ್ನು ಜನರಿಗೆ ತಲುಪಿಸುವುದು ಕಷ್ಟದ ಕೆಲಸ. ಹೊಸಬರೆ ಸೇರಿಕೊಂಡು ಒಳ್ಳೆಯ ಸಿನಿಮಾ ಮಾಡಿದ್ದಾರೆ ಅವರಿಗೆ ಒಳ್ಳೆಯದಾಗಲಿ’ ಎಂದು ಚಿತ್ರತಂಡಕ್ಕೆ ಶುಭ ಹಾರೈಸಿದರು.

“ಒಂದ್‌ ಕಥೆ ಹೇಳಾ’ ಚಿತ್ರಕ್ಕೆ ಮೆಕಾನಿಕಲ್‌ ಇಂಜಿನಿಯರ್‌ ಆಗಿರುವ ಗಿರೀಶ್‌.ಜಿ ನಿರ್ದೇಶನ ಮಾಡಿದ್ದಾರೆ. ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಗಿರೀಶ್‌, “ಈಗಿನ ಪ್ರೇಕ್ಷಕರು ಹಾರರ್‌ ಕಥೆಗಳನ್ನು ಇಷ್ಟಪಡುತ್ತಿದ್ದಾರೆ. ಚಿತ್ರದಲ್ಲಿ ಮೂವರು ಹುಡುಗರು, ಇಬ್ಬರು ಹುಡುಗಿಯರು ಬೆಂಗಳೂರಿನಿಂದ ಸಕಲೇಶಪುರಕ್ಕೆ ಪ್ರಯಾಣ ಮಾಡುವಾಗ ಅವರುಗಳಲ್ಲೆ ಒಂದೊಂದು ಕಥೆಗಳು ಹುಟ್ಟಿಕೊಳ್ಳುತ್ತವೆ. ಆ ಎಲ್ಲಾ ಕಥೆಗಳಲ್ಲೂ ಶೇಕಡಾ 60ರಷ್ಟು ಹಾರರ್‌ ಅಂಶಗಳು ಬರುತ್ತವೆ. ಒಂದು ಕಥೆಯಲ್ಲಿ ಭಕ್ತಪ್ರಹ್ಲಾದ ನಾಟಕವನ್ನು ಯಾಕಾಗಿ ಮಾಡುವುದಿಲ್ಲವೆಂದು ಹೇಳಲಾಗಿದೆ. ಹೋಂ ಸ್ಟೇಗಳಲ್ಲಿ ನಡೆದ ಕೆಲವು ಘಟನೆಗಳನ್ನು ಆಧರಿಸಿ ಈ ಚಿತ್ರದ ಕಥೆ ಮಾಡಲಾಗಿದೆ. ಚಿತ್ರದಲ್ಲಿ ಕೋಳಿಯೊಂದು ಮುಖ್ಯ ಪಾತ್ರವಹಿಸಿದ್ದು, ಅದೇನು ಎಂಬುದನ್ನು ತೆರೆಮೇಲೆ ನೋಡಬೇಕು’ ಎಂಬುದು ಅವರ ಮಾತು.

“ಒಂದ್‌ ಕಥೆ ಹೇಳಾ’ ಚಿತ್ರದಲ್ಲಿ ಪ್ರತೀಕ್‌, ದೀಪಕ್‌, ತಾರಾ, ತಾಂಡವ್‌, ಸೌಮ್ಯಾ, ರಮಾಕಾಂತ್‌ ಮೊದಲಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಸಕಲೇಶಪುರ, ರಾಮನಗರ, ಕುಣಿಗಲ್‌ ಮೊದಲಾದ ಕಡೆಗಳಲ್ಲಿ ಸುಮಾರು 30 ದಿನಗಳ ಕಾಲ ಚಿತ್ರದ ಚಿತ್ರೀಕರಣ ನಡೆಸಲಾಗಿದೆ.

ಸುಮಾರು 22 ಜನ ಸಿನಿಮಾಸಕ್ತರು ಸೇರಿಕೊಂಡು ಕ್ರೌಡ್‌ ಫ‌ಂಡಿಂಗ್‌ ಮೂಲಕ ಈ ಚಿತ್ರವನ್ನು ನಿರ್ಮಿಸಿರುವುದು ವಿಶೇಷ. ಸದ್ಯ ಬಿಡುಗಡೆಯಾಗಿರುವ ಚಿತ್ರದ ಟ್ರೇಲರ್‌ಗಳಿಗೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದ್ದು, ಇದೇ ಖುಷಿಯಲ್ಲಿರುವ ಚಿತ್ರತಂಡ, ಫೆಬ್ರವರಿ ಅಂತ್ಯಕ್ಕೆ ಚಿತ್ರವನ್ನು ತೆರೆಗೆ ತರಲು ಪ್ಲಾನ್‌ ಮಾಡಿಕೊಂಡಿದೆ.

ಟಾಪ್ ನ್ಯೂಸ್

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

siddanna-2

NABARD ಕಡಿತ ರೈತರಿಗೆ ಮಾಡಿದ ಅನ್ಯಾಯ: ಸಿದ್ದರಾಮಯ್ಯ ಆಕ್ರೋಶ

vidhana-soudha

Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

priyanka upendra in life is beautiful movie

Priyanka Upendra: ಬ್ಯೂಟಿಫುಲ್‌ ಲೈಫ್‌ ನಲ್ಲಿ ಪ್ರಿಯಾಂಕಾ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.