ಒಂದು ಕೋಟಿ ಕಳೆದುಕೊಂಡು ನಂತರ …ಹಾರರ್‌ 19

Team Udayavani, Nov 23, 2018, 6:00 AM IST

29.jpg

ಮೋಹನ್‌ ಗೌಡ ನಟರಾಗಬೇಕೆಂಬ ಆಸೆಯಿಂದ ಚಿತ್ರರಂಗಕ್ಕೆ ಬಂದವರಂತೆ. ಹಾಗೆ ಸಿನಿಮಾ ಮಾಡಬೇಕೆಂದು ಗಾಂಧಿನಗರ ತುಂಬಾ ಓಡಾಡಿದ್ದಾರೆ. ಕೊನೆಗೆ ಅವರಿಗೆ ಗೊತ್ತಾಗಿದೆ, ತಾನು ಬೇರೆಯವರನ್ನು ನಂಬಿಕೊಂಡರೆ ಸಿನಿಮಾ ಮಾಡಲು ಸಾಧ್ಯವಿಲ್ಲ ಎಂದು. ಅದು ಗೊತ್ತಾಗುವ ಹೊತ್ತಿಗೆ ಅವರು ಒಂದು ಕೋಟಿ ರೂಪಾಯಿಯನ್ನು ಕಳೆದುಕೊಂಡಾಗಿದೆ. ಹೀಗೆ ಬೇಸರಿಸಿಕೊಂಡು ಚಿತ್ರರಂಗದಿಂದ ವಾಪಾಸ್‌ ಹೋಗಿ ಬಿಝಿನೆಸ್‌ ಸೇರಿದಂತೆ ತನ್ನದೇ ಕೆಲಸ ಕಾರ್ಯಗಳಲ್ಲಿ ಬಿಝಿಯಾಗಿದ್ದ ಮೋಹನ್‌, ಒಂದು ನಿರ್ಧಾರದೊಂದಿಗೆ ಚಿತ್ರರಂಗಕ್ಕೆ ಮರಳಿದ್ದಾರೆ. ನಟನೆಯ ಆಸೆ ಬಿಟ್ಟು ನಿರ್ದೇಶನ ಮಾಡಬೇಕೆಂದು. ಅದರಂತೆ ಈಗ ಅವರ ಚೊಚ್ಚಲ ಚಿತ್ರ ಸಿದ್ಧವಾಗಿದೆ. ಅದು “19′. 

ಮೋಹನ್‌ ಗೌಡ ಅವರು ನಿರ್ದೇಶಿಸಿರುವ “19′ ಚಿತ್ರ ಚಿತ್ರೀಕರಣ ಪೂರೈಸಿದ್ದು, ಇತ್ತೀಚೆಗೆ ಆಡಿಯೋ ಬಿಡುಗಡೆಯಾಗಿದೆ. ಎಲ್ಲಾ ಓಕೆ, “19′ ಎಂದರೇನು ಎಂದು ನೀವು ಕೇಳಬಹುದು. ನಿರ್ದೇಶಕ ಮೋಹನ್‌ ಹೇಳುವಂತೆ, ಇದೊಂದು ಹಾರರ್‌ ಸಿನಿಮಾವಾಗಿದ್ದು, ಮೂರು ದಿನಗಳಲ್ಲಿ ಈ ಕಥೆ ನಡೆಯುತ್ತದೆಯಂತೆ. ಅದರಲ್ಲಿ 19 ಪ್ರಮುಖ ದಿನವಾಗಿದ್ದರಿಂದ ಚಿತ್ರಕ್ಕೆ “19′ ಎಂದು ಇಡಲಾಗಿದೆ ಎಂಬುದು ಮೋಹನ್‌ ಮಾತು. ಅಂದಹಾಗೆ, ಈ ಚಿತ್ರದ ನಿರ್ಮಾಪಕರು ಕೂಡಾ ಅವರೇ.

“ನನಗೆ ಯಾವುದೇ ನಿರ್ದೇಶಕರ ಜೊತೆ ಕೆಲಸ ಮಾಡಿದ ಅನುಭವಿಲ್ಲ. ಒಂದಷ್ಟು ಕೆಟ್ಟ ಜನರನ್ನು ನಂಬಿ 1 ಕೋಟಿ ರೂಪಾಯಿ ಕಳೆದುಕೊಂಡೆ. ಈಗ ನಾನೇ ಸಿನಿಮಾ ಮಾಡಿದ್ದೇನೆ. ಕಥೆಗೆ ಸುಮಾರು 13 ತಿಂಗಳು ತೆಗೆದುಕೊಂಡಿದ್ದೇನೆ. ಟ್ರಯಲ್‌ ಅಂಡ್‌ ಎರರ್‌ ಮೆಥಡ್‌ನ‌ಲ್ಲಿ ಈ ಸಿನಿಮಾ ಮಾಡಿದ್ದೇನೆ. ಇದೊಂದು ಹಾರರ್‌ ಚಿತ್ರವಾಗಿದ್ದು, ಪ್ರಯೋಗಾತ್ಮಕ ಅಂಶಗಳೊಂದಿಗೆ ಮೂಡಿಬಂದಿದೆ’ ಎನ್ನುವುದು ಮೋಹನ್‌ ಗೌಡ ಮಾತು. ಸ್ಮಿತಾ ಉಚ್ಚಿಲ್‌ ಚಿತ್ರದ ಮೇಕಪ್‌ ವಿಭಾಗದಲ್ಲಿ ಕೆಲಸ ಮಾಡಿದ್ದು, ಮೇಕಪ್‌ ಭಿನ್ನವಾಗಿದೆಯಂತೆ. ಚಿತ್ರದಲ್ಲಿ ಕೃಷ್ಣ ಪ್ರಮುಖ ಪಾತ್ರ ಮಾಡಿದ್ದು, ಚಿತ್ರದಲ್ಲಿ ನಾಯಕಿನಾ ಚೆನ್ನಾಗಿ ಲವ್‌ ಮಾಡು ಎಂದಷ್ಟೇ ಹೇಳಿದರಂತೆ. ಚಿತ್ರದ ಹಾಡೊಂದರಲ್ಲಿ ಆದಿ ಲೋಕೇಶ್‌ ಕಾಣಿಸಿಕೊಂಡಿದ್ದಾರೆ.

ಉಳಿದಂತೆ ಕಥೆ ಬಗ್ಗೆ ಕೇಳಿದರೆ ಸಸ್ಪೆನ್ಸ್‌ ಎಂಬ ಉತ್ತರ ಅವರಿಂದ ಬರುತ್ತದೆ. ಚಿತ್ರಕ್ಕೆ ಸಂಗೀತ ನೀಡಿದ ಮಿಥು, ಸಾಹಿತ್ಯ ಬರೆದ ವಿಜಯ್‌  ಸೇರಿದಂತೆ ಚಿತ್ರತಂಡ ತಮ್ಮ ಅನುಭವ ಹಂಚಿಕೊಂಡಿತು. 

ಟಾಪ್ ನ್ಯೂಸ್

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

Sandalwood: ಸ್ಟಾರ್‌ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್‌. ನರಸಿಂಹಲು

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.