ಫೆಬ್ರವರಿಯಲ್ಲಿ ಅಗೋಳಿ ಮಂಜಣ್ಣ ಟೀಸರ್
ಚಿತ್ರೀಕರಣಕ್ಕೆ ತುಳು ಚಿತ್ರ ರೆಡಿ...
Team Udayavani, Jan 17, 2020, 5:10 AM IST
“ಅಗೋಳಿ ಮಂಜಣ್ಣ’- ತುಳು ಚಿತ್ರರಂಗದಲ್ಲಿ ಹೀಗೊಂದು ಸಿನಿಮಾ ಬರುತ್ತಿರುವ ವಿಚಾರ ನಿಮಗೆ ಗೊತ್ತಿರಬಹುದು. ಅಂತಾರಾಷ್ಟ್ರೀಯ ಕ್ರೀಡಾಪಟು ರೋಹಿತ್‌ಕುಮಾರ್ ಕಟೀಲು ಈ ಚಿತ್ರದಲ್ಲಿ ನಾಯಕರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸುಧೀರ್ ಅತ್ತಾವರ್ ಈ ಚಿತ್ರದ ನಿರ್ದೇಶಕರು. ಈಗ ಚಿತ್ರದ ಟೀಸರ್ ಬಿಡುಗಡೆಗೆ ಚಿತ್ರತಂಡ ಸಿದ್ಧತೆ ಮಾಡಿಕೊಳ್ಳುತ್ತಿದೆ. ಫೆಬ್ರವರಿ ಎರಡನೇ ವಾರದಲ್ಲಿ ಅದ್ಧೂರಿಯಾಗಿ ಚಿತ್ರದ ಟೀಸರ್ ಬಿಡುಗಡೆ ಮಾಡುವ ಯೋಚನೆ ಚಿತ್ರತಂಡಕ್ಕಿದೆ. ಈ ಚಿತ್ರದ ಶೀರ್ಷಿಕೆಗೆ “ಸೂಪರ್ ಮ್ಯಾನ್ ಆಫ್ ತುಳುನಾಡು’ ಎಂಬ ಅಡಿಬರಹವೂ ಇದೆ.
“ತುಳುನಾಡಿನ ವೀರಪುರುಷ ಎಂದೇ ಹೆಸರಾದ “ಅಗೋಳಿ ಮಂಜಣ್ಣ’ ಒಬ್ಬ ಅಸಾಧ್ಯ ಧೈರ್ಯ ಶಾಲಿ. ಅದು ಎಷ್ಟರಮಟ್ಟಿಗೆ ಅಂದರೆ, ಒಂದೇ ಬಾರಿಗೆ ಹತ್ತು ಮೂಟೆ ಅಕ್ಕಿ ಎತ್ತಬಲ್ಲಂತಹ ಬಲಶಾಲಿ. ಮಂಗಳೂರಿನ ಮುಲ್ಕಿ ಸೀಮೆಯ ಅಧಿಪತಿ ಎನಿಸಿಕೊಂಡಿದ್ದ “ಅಗೋಳಿ ಮಂಜಣ್ಣ’, ಸುಮಾರು 200 ವರ್ಷಗಳ ಹಿಂದೆ ಮಂಗಳೂರಿನ ಸುರತ್ಕಲ್ ಸಮೀಪದ ಚೇಳಾರ್ ಗುತ್ತಿನಲ್ಲಿ ಬದುಕು ಸವೆಸಿದ್ದರು. ಅವರ ರೋಚಕವಾದ ಸಾಹಸಮಯ ಜನಪದ ಕಥೆ ಚಿತ್ರದ ಜೀವಾಳ ಎಂಬುದು ಚಿತ್ರತಂಡದ ಮಾತು. 200 ವರ್ಷಗಳ ಹಿಂದೆ ಬದುಕಿ, ಹೆಸರು ಮಾಡಿದ್ದ ಶಕ್ತಿಶಾಲಿ ಅಗೋಳಿ ಮಂಜಣ್ಣ ಅವರ ಬಗ್ಗೆ ಸಮಗ್ರವಾಗಿ ಹೇಳುವ ಪ್ರಯತ್ನ ಇಲ್ಲಿ ಮಾಡಲಾಗುತ್ತಿದೆ.
ಚಿತ್ರಕ್ಕೆ ಬಾಲಿವುಡ್‌ನ ಶಫಿಖಾನ್ ಛಾಯಾಗ್ರಹಣ ಮಾಡಿದರೆ, ಚಂದ್ರಕಾಂತ್ ಅವರು ಸಂಗೀತ ನೀಡುತ್ತಿದ್ದಾರೆ. ವಿದ್ಯಾಧರ್ ಅವರ ಸಂಕಲನವಿದೆ. ಮಾಸ್ ಮಾದ ಸಾಹಸ ನಿರ್ದೇಶನ ಮಾಡುತ್ತಿದ್ದಾರೆ. ಇನ್ನು, ನಿರ್ದೇಶಕ ಸುಧೀರ್ ಅತ್ತಾವರ್ ನಿರ್ದೇಶನದ ಜೊತೆಗೆ ಸಾಹಿತ್ಯ ಮತ್ತ ಸಂಭಾಷಣೆಯ ಜವಾಬ್ದಾರಿಯನ್ನೂ ವಹಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.