ಅನಂತು-ನುಸ್ರತ್ ಪ್ರೇಮ್ ಕಹಾನಿ
Team Udayavani, Dec 28, 2018, 6:00 AM IST
ತಮ್ಮ ಹಿಂದಿನ ಎರಡು ಚಿತ್ರಗಳಲ್ಲಿ ಯಂಗ್ ಆ್ಯಂಡ್ ಎನರ್ಜಿಟಿಕ್ ಕಾಲೇಜ್ ಹುಡುಗನಾಗಿ ಕಾಣಿಸಿಕೊಂಡಿದ್ದ ವಿನಯ್ ರಾಜಕುಮಾರ್, ಈ ಚಿತ್ರದಲ್ಲಿ ಕೊಂಚ ಸೀರಿಯಸ್ ರೋಲ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅದು “ಅನಂತು ವರ್ಸಸ್ ನುಸ್ರತ್’ ಚಿತ್ರದಲ್ಲಿ. ಚಿತ್ರ ಇಂದು ತೆರೆಕಾಣುತ್ತಿದೆ. ಅನಂತ ಕೃಷ್ಣ ಕ್ರಮಧಾರಿತ್ತಾಯ ಎನ್ನುವ ಹೆಸರಿನ ಸಂಪ್ರದಾಯಸ್ಥ ಬ್ರಾಹ್ಮಣ ಕುಟುಂಬದ ಹುಡುಗನಾಗಿ, ವಕೀಲನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದಲ್ಲಿ ಬಹುತೇಕ ಸನ್ನಿವೇಶಗಳು ಭಾವನಾತ್ಮಕವಾಗಿ ಸಾಗುವುದರಿಂದ, ವಿನಯ್ ತಮ್ಮ ಮೈಂಡ್ ಗೇಮ್‌ನಲ್ಲಿ ಪ್ರೇಕ್ಷಕರನ್ನು ಹಿಡಿದು ಕೂರಿಸುತ್ತಾರಂತೆ.
“ಅನಂತು ವರ್ಸಸ್ ನುಸ್ರತ್’ ಚಿತ್ರದಲ್ಲಿ ನಾಯಕಿಯಾಗಿ ಅನಿವಾಸಿ ಕನ್ನಡತಿ ಲತಾ ಹೆಗಡೆ, ವಿನಯ್ ರಾಜಕುಮಾರ್ ಅವರಿಗೆ ಜೋಡಿಯಾಗಿದ್ದರೆ. ಈ ಹಿಂದೆ “ಅತಿರಥ’ ಚಿತ್ರದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದ ಲತಾಗೆ ಇದು ಎರಡನೇ ಕನ್ನಡದ ಚಿತ್ರ. ಈ ಚಿತ್ರದಲ್ಲಿ ಲತಾ ಹೆಗಡೆ ನುಸ್ರತ್ ಎನ್ನುವ ಹೆಸರಿನ ಸಂಪ್ರದಾಯಸ್ಥ ಮುಸ್ಲಿಂ ಹುಡುಗಿಯಾಗಿ ಜೊತೆಗೆ ಜಡ್ಜ್ ಆಗಿ ಕಾಣಿಸಿಕೊಂಡಿದ್ದಾರೆ. ಇಲ್ಲಿಯವರೆಗೆ ಕೇವಲ ಬೋಲ್ಡ್ ಆ್ಯಂಡ್ ಗ್ಲಾಮರಸ್ ಪಾತ್ರಗಳಲ್ಲಿ ಮಿಂಚಿದ್ದ ಲತಾಗೆ ಈ ಚಿತ್ರದಲ್ಲಿ ಅಭಿನಯಕ್ಕೂ ಸಾಕಷ್ಟು ಸ್ಕೋಪ್ ಇದೆಯಂತೆ.
“ಅನಂತು ವರ್ಸಸ್ ನುಸ್ರತ್’ ಚಿತ್ರ ಪಕ್ಕಾ ಇಂದಿನ ಕಾಲಮಾನಕ್ಕೆ ಹೊಂದಿಕೆಯಾಗುವ ಕಥೆ ಎನ್ನುವುದು ಚಿತ್ರತಂಡದ ಒಕ್ಕೊರಲ ಅಭಿಪ್ರಾಯ. ಮೂವತ್ತೈದು – ನಲವತ್ತು ವರ್ಷಗಳ ಹಿಂದೆ ಬೆಂಗಳೂರಿನಂತಹ ಮಹಾನಗರಗಳಲ್ಲಿ ವಿವಾಹ ವಿಚ್ಛೇದನ ಪ್ರಕರಣಗಳ ಸಂಖ್ಯೆ ಅತಿ ವಿರಳವಾಗಿತ್ತು. ಒಂದು ವರ್ಷಕ್ಕೆ ಹೆಚ್ಚೆಂದರೆ, ಐನೂರು ಪ್ರಕರಣಗಳು ಕೋರ್ಟ್‌ನಲ್ಲಿ ದಾಖಲಾಗುತ್ತಿದ್ದವು. ಆದರೆ ಇಂದು ದಿನವೊಂದಕ್ಕೆ ಇದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ವಿಚ್ಛೇದನ ಪ್ರಕರಣಗಳು ದಾಖಲಾಗುತ್ತಿವೆ. ವಿವಾಹ ವಿಚ್ಛೇದನ ಪ್ರಕರಣಗಳ ವಿಲೇವಾರಿಗಾಗಿಯೇ ಪ್ರತ್ಯೇಕ ಕೌಟುಂಬಿಕ ನ್ಯಾಯಾಲಯಗಳ ಸ್ಥಾಪನೆಯಾಗಿದೆ. ಇದು ಹೀಗೆ ಮುಂದುವರೆಯುತ್ತಾ ಹೋದರೆ ಭವಿಷ್ಯದಲ್ಲಿ ಏನಾಗಬಹುದು? ಇಂಥದ್ದೊಂದು ವಿಷಯವನ್ನು ಇಟ್ಟುಕೊಂಡು ಚಿತ್ರವನ್ನು ಪ್ರೇಕ್ಷಕರ ಮುಂದೆ ತರುತ್ತಿದೆ ಚಿತ್ರತಂಡ.
ಇತ್ತೀಚೆಗಷ್ಟೇ “ಅನಂತು ವರ್ಸಸ್ ನುಸ್ರತ್’ ಚಿತ್ರದ ಟ್ರೇಲರ್, ಆಡಿಯೋ ಹೊರಬಂದಿದ್ದು, ಪ್ರೇಕ್ಷಕರಿಂದ ಮತ್ತು ಚಿತ್ರರಂಗದಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇಲ್ಲಿಯವರೆಗೆ ಹಲವು ಚಿತ್ರಗಳಿಗೆ ಬರಹಗಾರನಾಗಿ ಕೆಲಸ ಮಾಡಿರುವ ಸುಧೀರ್ ಶ್ಯಾನುಭೋಗ್ ಮೊದಲ ಬಾರಿಗೆ ಅನಂತು ವರ್ಸಸ್ ನುಸ್ರತ್ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಇಂದಿನ ಸಾಮಾಜಿಕ ಮತ್ತು ಕೌಟುಂಬಿಕ ಕಥಾಹಂದರವನ್ನು ಇಟ್ಟುಕೊಂಡು ಅದನ್ನು ಮನರಂಜನಾತ್ಮಕವಾಗಿ ಈ ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ತರುತ್ತಿದ್ದೇವೆ ಎನ್ನುವ ನಿರ್ದೇಶಕ ಸುಧೀರ್ ಶ್ಯಾನುಭೋಗ್, ಚಿತ್ರದ ಮೇಲುನೋಟ ಮತ್ತು ಒಳನೋಟ ಪ್ರೇಕ್ಷಕರನ್ನು ಚಿಂತನೆಗೆ ಹಚ್ಚುತ್ತವೆ ಎನ್ನುತ್ತವೆ ಎನ್ನುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಸ್ಟಾರ್ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್. ನರಸಿಂಹಲು
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್ ಅನಿಸಿತು…
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.